ಬೆಂಗಳೂರು: ಬೆಲೆ ಏರಿಕೆ ವಿಚಾರ ವಿಧಾನಸಭೆಯಲ್ಲಿ ಮತ್ತೆ ಪ್ರತಿಧ್ವನಿಸಿದ್ದು, ಆಡಳಿ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಡುವೆ ಗದ್ದಲಕ್ಕೆ ಕಾರಣವಾಯಿತು. ವಿಧಾನಸಭೆಯಲ್ಲಿ ಬೆಲೆ ಏರಿಕೆ ಕುರಿತಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಉತ್ತರ ನೀಡುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಬಿಜೆಪಿಯವರದ್ದು ಲೂಟಿ ಸರ್ಕಾರ ಎಂದು ಘೋಷಣೆ ಕೂಗಲು ಆರಂಭಿಸಿದರು. ಈ ವೇಳೆ ಕಿಡಿಕಾರಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ನವರದ್ದು ಲೂಟ್ ಸರ್ಕಾರ. ಕಾಂಗ್ರೆಸ್ ಸರ್ಕಾರವನ್ನು ಕ್ರಿಮಿನಲ್ ಲೂಟ್ ಎಂದು ಕರೆಯಲಾಗಿತ್ತು. ಕ್ರಿಮಿನಲ್ …
Read More »ಕನ್ನಡಿಗರನ್ನು ಕೆಣಕುವ ಮಹಾರಾಷ್ಟ್ರ ಏಕೀಕರಣ ಸಮಿತಿ ಫುಡರಿಗೆ ಭಾನುವಾರ ಮಧ್ಯರಾತ್ರಿ ಮಹಾನಗರ ಪಾಲಿಕೆಯ ಅಧಿಕಾರಿಯೊಬ್ಬರು ಪಾಠ ಕಲಿಸಿದ್ದಾರೆ.
ಬೆಳಗಾವಿ – ಸದಾ ಕಿರಿಕ್ ಮಾಡುತ್ತ ಕನ್ನಡಿಗರನ್ನು ಕೆಣಕುವ ಮಹಾರಾಷ್ಟ್ರ ಏಕೀಕರಣ ಸಮಿತಿ ಫುಡರಿಗೆ ಭಾನುವಾರ ಮಧ್ಯರಾತ್ರಿ ಮಹಾನಗರ ಪಾಲಿಕೆಯ ಅಧಿಕಾರಿಯೊಬ್ಬರು ಪಾಠ ಕಲಿಸಿದ್ದಾರೆ. ಗಣೇಶ ವಿಸರ್ಜನೆ ಸ್ಥಳದಲ್ಲಿ ಕನ್ನಡದಲ್ಲಿ ಮಾತ್ರ ಬ್ಯಾನರ್ ಹಾಕಿದ್ದರಿಂದ ಎಇಎಸ್ ಫುಂಡರು ಗಲಾಟೆ ಶುರು ಮಾಡಿದರು. ಈ ವೇಳೆ ಅವರನ್ನು ಶಾಂತವಾಗಿಯೇ ಸಮಾಧಾನಪಡಿಸಲು ಪಾಲಿಕೆಯ ಉಪಾಯುಕ್ತೆ ಲಕ್ಷ್ಮಿ ನಿಪ್ಪಾಣಿಕರ್ (ಸುಳಗೆಕರ್) ಪ್ರಯತ್ನಿಸಿದರು. ಆದರೆ ಇದರಿಂದ ಅವರ ಪುಂಡಾಟಿಕೆ ನಿಲ್ಲುವ ಬದಲು ಮತ್ತಷ್ಟು ಜೋರಾಯಿತು. ಅಧಿಕಾರಿಗೆ ಬೆದರಿಕೆ …
Read More »ಬಿಜೆಪಿ ಉದ್ಯಮಿಗಳ ದಲ್ಲಾಳಿಯೇ ಹೊರತು, ಜನಸಾಮಾನ್ಯರ ಪರವಲ್ಲ: ಕಾಂಗ್ರೆಸ್ ಟೀಕೆ
ಬೆಂಗಳೂರು : ಬಿಜೆಪಿ ಉದ್ಯಮಿಗಳ ದಲ್ಲಾಳಿಯೇ ಹೊರತು, ಜನಸಾಮಾನ್ಯರ ಪರವಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಸೋಮವಾರ ವಾಗ್ದಾಳಿ ನಡೆಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಈಗಾಗಲೇ ಬೆಲೆ ಏರಿಕೆಯಿಂದ ಜನರ ಬದುಕು ಹೈರಾಣಾಗಿದೆ, ಇದರ ನಡುವೆಯೇ ಕೇಂದ್ರ ಸರ್ಕಾರ ಮತ್ತಷ್ಟು ವಸ್ತುಗಳ ಮೇಲಿನ ಜಿಎಸ್ಟಿ ಹೆಚ್ಚಿಸಿ ಜನರ ಬದುಕನ್ನು ಮತ್ತಷ್ಟು ದುಬಾರಿಯಾಗಿಸಿದೆ. ಕಾರ್ಪೊರೇಟ್ ತೆರಿಗೆ ಕಡಿತಗೊಳಿಸಿ ಸರ್ಕಾರ ಸಾಮಾನ್ಯರ ಮೇಲೆ ತೆರಿಗೆ ಬರೆ ಹಾಕುತ್ತಿದೆ. ಬಿಜೆಪಿ ಉದ್ಯಮಿಗಳ ದಲ್ಲಾಳಿಯೇ …
Read More »ತಹಶೀಲ್ದಾರ್ ಆದೇಶ ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ : ಸ್ಥಳೀಯರ ವಿರೋಧ
ಶಿವಮೊಗ್ಗ : ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನಿಷೇಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದರೂ ಅದನ್ನು ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನೀಡಲು ಬಂದ ಭಕ್ತರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಕ್ಷೇತ್ರದಲ್ಲಿ ನಡೆದಿದೆ. ಹಣಗೆರೆಕಟ್ಟೆಯಲ್ಲಿರುವ ಶ್ರೀ ಚೌಡೇಶ್ವರಿ ಭೂತರಾಯ ಹಾಗೂ ಸೈಯದ್ ಸಾದತ್ ದರ್ಗಾ ಇರುವ ಧಾರ್ಮಿಕ ಕ್ಷೇತ್ರದಲ್ಲಿ ಆದೇಶ ಉಲ್ಲಂಘನೆಯಾಗಿದ್ದು ಈ ಹಿಂದೆ ಧಾರ್ಮಿಕ ಸಹಿಷ್ಣುತೆಯ ಕ್ಷೇತ್ರದಲ್ಲಿ ಕುರಿ …
Read More »ವಿದೇಶಿ ಏಜೆನ್ಸಿಗಳಿಗೆ ರಕ್ಷಣಾ ಮಾಹಿತಿ ನೀಡುತ್ತಿದ್ದ ಬೆಂಗಳೂರಿನ ಬಟ್ಟೆ ವ್ಯಾಪಾರಿಯ ಬಂಧನ
ಬೆಂಗಳೂರು: ನಗರದ ಸಿಸಿಬಿ ಪೊಲೀಸರು ಮತ್ತು ಮಿಲಿಟರಿ ಗುಪ್ತಚರ ವಿಭಾಗದ ಅಧಿಕಾರಿಗಳ ಜಂಟಿ ಕಾರ್ಯಾಚಾರಣೆಯಲ್ಲಿ ವಿದೇಶಿ ಏಜೆನ್ಸಿಗಳಿಗೆ ಭಾರತದ ರಕ್ಷಣಾ ಮಾಹಿತಿ ನೀಡುತ್ತಿದ್ದ ಯುವಕನ್ನು ಬಂಧಿಸಲಾಗಿದೆ. ರಾಜಸ್ಥಾನ ಮೂಲದ ಈತ ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರಿಯಾಗಿದ್ದ ಎನ್ನಲಾಗಿದೆ. ಆರೋಪಿಯು ರಾಜಸ್ಥಾನದ ಬೆರ್ಮರ್ ಮೂಲದವನು. ಬೆಂಗಳೂರಿನ ಕಾಟನ್ ಪೇಟೆಯ ಜಾಲಿ ಮೊಹಲ್ಲಾದಲ್ಲಿ ಬಟ್ಟೆ ವ್ಯಾಪಾರಿಯಾಗಿದ್ದ. ಸೇನೆಯ ಕಮಾಂಡೋ ಸಮವಸ್ತ್ರ ಧರಿಸಿ ಬಾರ್ಮರ್ ನ ಮಿಲಿಟರಿ ಸ್ಟೇಶನ್ ಮಾಹಿತಿ, ಸೇನಾ ವಾಹನಗಳ ಓಡಾಟದ ಮಾಹಿತಿಯನ್ನು …
Read More »ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯ ಫಲಿತಾಂಶ ಪ್ರಕಟ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯ ಫಲಿತಾಂಶ ಪ್ರಕಟವಾಗಿದೆ. ಆಗಸ್ಟ್ 28 ಮತ್ತು 29ರಂದು ಸಿಇಟಿ ಪರೀಕ್ಷೆಗಳು ನಡೆದಿತ್ತು. ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ಮೈಸೂರಿನ ಪ್ರಮತಿ ಹಿಲ್ ವೀವ್ ಅಕಾಡೆಮಿಯ ಮೇಘನ್ ಎಚ್.ಕೆ. ಅವರು ಎಲ್ಲಾ ವಿಭಾಗದಲ್ಲೂ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಎಂಜಿನಿಯರಿಂಗ್, ಬಿ-ಫಾರ್ಮಾ, ಕೃಷಿ …
Read More »ದ್ವಿತೀಯ ಪಿಯು ಫಲಿತಾಂಶ: ಇಲಾಖೆ ಫಲಿತಾಂಶ ತಿರಸ್ಕರಿಸಿದ 36 ವಿದ್ಯಾರ್ಥಿಗಳು ಅನುತ್ತೀರ್ಣ!
ಬೆಂಗಳೂರು: ಕೋವಿಡ್ ಕಾರಣದಿಂದ ಈ ಬಾರಿ ದ್ವಿತೀಯ ಪಿಯುಸಿಯಲ್ಲಿ ಎಲ್ಲಾ ವಿದ್ಯಾರ್ಥಿಗಳನ್ನು ಹಿಂದಿನ ತರಗತಿಗಳ ಫಲಿತಾಂಶದಂತೆ ಉತ್ತೀರ್ಣ ಮಾಡಲಾಗಿತ್ತು. ಆದರೆ ಪಿಯು ಇಲಾಖೆ ನೀಡಿದ್ದ ಫಲಿತಾಂಶವನ್ನು ತಿರಸ್ಕರಿಸಿ, ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಫಲಿತಾಂಶ ಇಂದು ಪ್ರಕಟವಾಗಿದೆ. ಪಿಯು ಇಲಾಖೆ ನೀಡಿದ್ದ ಫಲಿತಾಂಶವನ್ನು ತಿರಸ್ಕರಿಸಿ, 592 ಹೊಸ ಅಭ್ಯರ್ಥಿಗಳು (ಫ್ರೇಶರ್) ಪರೀಕ್ಷೆ ಬರೆದಿದ್ದರು. ಅದರಲ್ಲಿ 556 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, 36 ಮಂದಿ ಅನುತ್ತೀರ್ಣರಾಗಿದ್ದಾರೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಹಿಂದಿನ ಫಲಿತಾಂಶ ಪುನಃ …
Read More »ಕೇರವಾಡದಲ್ಲಿ ಆತ್ಮಹತ್ಯೆಗೆ ಶರಣಾದ 4 ಮಕ್ಕಳ ತಾಯಿ
ದಾಂಡೇಲಿ : ನಗರದ ಸಮೀಪದ ಆಲೂರು ಗ್ರಾಮ ಪಂಚಾಯ್ತು ವ್ಯಾಪ್ತಿಯಲ್ಲಿ ಬರುವ ಕೇರವಾಡದ ಅಂಗನವಾಡಿ ಕೇಂದ್ರದ ಹತ್ತಿರದಲ್ಲಿರುವ ಗುಡಿಸಲು ಮನೆಯೊಂದರಲ್ಲಿ ನಾಲ್ಕು ಮಕ್ಕಳ ತಾಯಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ಬೆಳ್ಳಂಬೆಳಗ್ಗೆ ನಡೆದಿದೆ. ಕೇರವಾಡದ ಅಂಗನವಾಡಿ ಕೇಂದ್ರದ ಹತ್ತಿರದ ನಿವಾಸಿಯಾಗಿರುವ 35 ವರ್ಷ ವಯಸ್ಸಿನ ಲಲಿತಾ ಯಾನೆ ಅಶ್ವಿನಿ ಸಂಜು ಗಾವಡೆ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾಳೆ. ಈಕೆ ಕುಡಿತದ ಚಟಕ್ಕೆ ಅಂಟಿಕೊಂಡಿದ್ದಳೆಂದು ಹೇಳಲಾಗುತ್ತಿದೆ. ಕುಡಿದ ಅಮಲಿನಲ್ಲೆ ನೇಣಿಗೆ ಶರಣಾಗಿದ್ದಾಳೆಂದು ಮೇಲ್ನೋಟಕ್ಕೆ …
Read More »ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸೈಕಲ್ ಜಾಥಾ
ಸರ್ಕಾರದ ತೈಲ ಬೆಲೆ ಏರಿಕೆ ಖಂಡಿಸಿ, ಇಂದು ಕಾಂಗ್ರೆಸ್ ನಿಂದ ಬೃಹತ್ ಸೈಕಲ್ ಜಾಥಾ ನಡೆಸಲಾಯಿತು. ಮಾಜಿ ಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿಅನೇಕ ಕಾಂಗ್ರೆಸ್ ಮುಖಂಡರು ಸೈಕಲ್ ಏರಿ, ಕೇಂದ್ರ ಸರ್ಕಾರದ ತೈಲ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಿದರು. ಇನ್ನು ಕೇಂದ್ರ ಸರಕಾರದ ನಿರಂತರ ಇಂಧನ ಬೆಲೆ ಹೆಚ್ಚಳ ಹಾಗೂ ತತ್ಪರಿಣಾಮಾಗಿ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ …
Read More »ಬೆಂಗಳೂರಿನಲ್ಲಿ ಛತ್ತೀಸ್ಗಢದ ಬಿಜೆಪಿ ಮಾಜಿ MLA ನಿಧನ
ರಾಯ್ಪುರ್: ಛತ್ತೀಸ್ಗಢದ ಬಿಜೆಪಿ ಮಾಜಿ ಶಾಸಕ ಯುಧ್ವೀರ್ ಸಿಂಗ್ ಜುದೇವ್ ಸೋಮವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಯುಧ್ವೀರ್ ಸಿಂಗ್ ಜುದೇವ್(39) ಲಿವರ್ ಸಮಸ್ಯೆಯಿಂದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಯುಧ್ವೀರ್ ಸಿಂಗ್ ಜುದೇವ್ ಛತ್ತೀಸ್ಗಢದ ಜಶ್ಪುರದ ಹಿಂದಿನ ರಾಜಮನೆಯನಕ್ಕೆ ಸೇರಿದವರಾಗಿದ್ದು, 2013ರಲ್ಲಿ ನಿಧನರಾದ ಬಿಜೆಪಿಯ ಪ್ರಭಾವಿ ನಾಯಕ ದಿಲೀಪ್ ಸಿಂಗ್ ಜುದೇವ್ ಅವರ ಕಿರಿಯ ಪುತ್ರರಾಗಿದ್ದಾರೆ. ಯುಧ್ವೀರ್ ಸಿಂಗ್ರವರು ಬಹಳ ದಿನಗಳಿಂದ ಲಿವರ್ ಸಂಬಂಧಿತ …
Read More »