ಹಾವೇರಿ: ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ತೀವ್ರ ಜಿದ್ದಾಜಿದ್ಧಿನಿಂದ ಕೂಡಿದ್ದ ಹಾನಗಲ್ ಉಪಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ತವರೂರಿನಲ್ಲಿಯೇ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ್ ಸೋಲನುಭವಿಸಿದ್ದಾರೆ. ಮತ ಎಣಿಕೆಯ ಮೊದಲ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ನ ಶ್ರೀನಿವಾಸ್ ಮನೆ ಭರ್ಜರಿ ಗೆಲುವು ಸಾಧಿಸಿದ್ದಾರೆ. 14ನೇ ಸುತ್ತಿನ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ ಶ್ರೀನಿವಾಸ್ …
Read More »ರಾಜ್ಯದ 2ನೇ ಮಲ ಸಂಸ್ಕರಣಾ ಘಟಕಕ್ಕೆ ಶಾಸಕ ದುರ್ಯೋಧನ ಐಹೊಳೆ ಚಾಲನೆ
ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ರಾಜ್ಯದ 2ನೇ ಮಲ ಸಂಸ್ಕರಣಾ ಘಟಕಕ್ಕೆ ಶಾಸಕ ದುರ್ಯೋಧನ ಐಹೊಳೆ ಚಾಲನೆ ನೀಡಿದರು. ಸುಮಾರು 4 ಎಕರೆ ಪ್ರದೇಶದಲ್ಲಿ 54 ಲಕ್ಷ ರೂ. ವೆಚ್ಚದಲ್ಲಿ ಮಲ ಸಂಸ್ಕರಣ ಘಟಕ ನಿರ್ಮಾಣವಾಗುತ್ತಿದೆ. ಈ ಸಂಸ್ಕರಣ ಘಟಕದಲ್ಲಿ ಸಂಗ್ರಹವಾಗುವ ಮಲದಿಂದ ಕಾಂಪೋಸ್ಟ್ ಗೊಬ್ಬರ ತಯಾರಿಸಿ ರೈತರಿಗೆ ಪೂರೈಕೆ ಮಾಡುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ’ ಎಂದು ಶಾಸಕ ಐಹೊಳೆ ತಿಳಿಸಿದರು. ಹೆಸ್ಕಾಂ ನಿರ್ದೇಶಕ ಮಹೇಶ್ ಭಾತೆ …
Read More »ಅಪ್ಪುಗೆ ಇಂದು ಹಾಲು ತುಪ್ಪ ವಿಧಿವಿಧಾನ ಕಾರ್ಯ
ಪುನೀತ್ ಸಮಾಧಿಯ ಬಳಿ ಹಾಲು ತುಪ್ಪ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮತ್ತೊಂದೆಡೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಸಮಾಧಿಗೆ ನಮಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಬೆಂಗಳೂರಿನ ನಗರ ಜಿಲ್ಲಾಧಿಕಾರಿ ಮಂಜುನಾಥ್ ಇಂದು ಹಾಲು ತುಪ್ಪ ಕಾರ್ಯಕ್ರಮ ಮುಗಿಯವರೆಗೂ ಅಭಿಮಾನಿಗಳಿಗೆ, ಇನ್ನೂ ಎರಡು ದಿನ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ. ಆದರೂ ರಾಜ್ಕುಮಾರ್ ಸಮಾಧಿ ಬಳಿ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದರು. ಹಾಗಾಗಿ ರಾಜ್ಕುಮಾರ್ ಸಮಾಧಿ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮಂಗಳವಾರ …
Read More »ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆಗೆ ಆರಂಭವಾಗಿದೆ.
ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆಗೆ ಕ್ಷ ಆರಂಭವಾಗಿದೆ. ಹಾವೇರಿ ಹೊರವಲಯದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ಈಗಾಗಲೇ ಮತ ಎಣಿಕೆ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಮತಎಣಿಕಾ ಕೇಂದ್ರಕ್ಕೆ ಆಗಮಿಸಿದ್ದು, ಮತಎಣಿಕೆಯ ಸಿದ್ಧತೆಯಲ್ಲಿದ್ದಾರೆ. ಸರಿಯಾಗಿ 7 ಗಂಟೆ 30 ನಿಮೀಷಕ್ಕೆ ಸ್ಟ್ರಾಂಗ್ ರೂಮ್ ತೆರೆಯಲಾಗುತ್ತದೆ. ಅದಾದ ನಂತರ 7 ಗಂಟೆ 45 ನಿಮಿಷಕ್ಕೆ ಅಂಚೆ ಮತ್ತು ಸೇವಾ ಮತ ಎಣಿಕೆ ನಡೆಸಲಾಗುತ್ತೆ. 8 ಗಂಟೆಯಿಂದ ಮತಯಂತ್ರಗಳ …
Read More »ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಮುನ್ನಡೆ
Sindgi, Hangal By Election Counting: ಸಿಂದಗಿ(Sindagi) ಹಾಗೂ ಹಾನಗಲ್(Hanagal) ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ (By Election Result) ಇಂದು ಹೊರ ಬೀಳಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಶುರುವಾಗಿದೆ. ಮತ ಎಣಿಕೆಗೆ ಚುನಾವಣಾ ಆಯೋಗ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ ಸಿಂದಗಿ ಹಾಗೂ ಹಾನಗಲ್ ಎರಡೂ ಕ್ಷೇತ್ರಗಳ ಸ್ಪಷ್ಟ ಚಿತ್ರಣ ಸಿಗಲಿದೆ. ಬಳಿಕ ಅಭ್ಯರ್ಥಿಗಳ …
Read More »ಪುನೀತ್ ಸಾವಿನಲ್ಲಿ ವಿಕೃತಿ ಮೆರೆದ ಕಿಡಿಗೇಡಿಗಳು: ಸುದೀಪ್ ಮಗಳು ಸಾನ್ವಿ ಹೇಳಿತ್ತು ಏನು ಗೊತ್ತಾ?
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ ಅವರ ಸಾವಿಗೆ ಇಡೀ ನಾಡಿಗೆ ನಾಡು ಕಣ್ಣೀರಿಡುತ್ತಿದೆ. ನಾಡಿನ ಜನತೆ ತಮ್ಮ ಮನೆ ಮಗನನ್ನೇ ಕಳೆದುಕೊಂಡ ರೀತಿಯಲ್ಲಿ ದುಖಃದಲ್ಲಿ ಮುಳುಗಿದ್ದು, ಪುನೀತ್ ಅವರ ಅಕಾಲಿಕ ನಿಧನಕ್ಕೆ ದೇವರಿಗೆ ಶಾಪ ಹಾಕುತ್ತಿದ್ದಾರೆ. ಈ ನಡುವೆ ಪುನೀತ್ ಅವರ ನಿಧನದಿಂದ ಬೆಂಗಳೂರು ನಗರದಲ್ಲಿ ಮದ್ಯಪಾನವನ್ನು ಮೂರು ದಿನ ಮಾರಾಟ ಮಾಡದಂತೆ ನಿಶೇಧಿಸಿ ಜಿಲ್ಲಾಧಿಕಾರಿ ಆದೇಶವನ್ನು ಹೊರಡಿಸಿದ್ದಾರೆ.ಆದರೆ ಉತ್ತರ ಭಾರತದ ಕೆಲವು ಮಂದಿ ಮದ್ಯಕ್ಕಾಗಿ ಬೀದಿ …
Read More »ಖಾಸಗಿ, ಸರ್ಕಾರಿ ಮತ್ತು ಅರೆ ಸರ್ಕಾರಿ ಕ್ಷೇತ್ರಗಳಲ್ಲಿ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಶೇಕಡ 75ರಷ್ಟ ಕನ್ನಡಿಗರಿಗೆ: ಬೊಮ್ಮಾಯಿ
ಬೆಂಗಳೂರು: ಖಾಸಗಿ, ಸರ್ಕಾರಿ ಮತ್ತು ಅರೆ ಸರ್ಕಾರಿ ಕ್ಷೇತ್ರಗಳಲ್ಲಿ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಶೇಕಡ 75ರಷ್ಟನ್ನು ಕನ್ನಡಿಗರಿಗೆ ಸಿಗುವಂತೆ ಮಾಡುವ ಮೂಲಕ ಕನ್ನಡಕ್ಕೆ ಶಕ್ತಿ ತುಂಬುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ 66ನೇ ಕರ್ನಾಟಕ ರಾಜ್ಯೋತ್ಸವದ ರಾಜ್ಯಮಟ್ಟದ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ‘ರಾಜ್ಯ ಔದ್ಯೋಗಿಕ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲಾಗುವುದು. ಅದರ ಮೂಲಕ ಕೌಶಲ ಮತ್ತು …
Read More »ನಾಲ್ವರಿಗೆ ಜಗದ ಬೆಳಕು ತೋರಿದ ರಾಜಕುಮಾರ್
ಬೆಂಗಳೂರು: ಅಕಾಲಿಕವಾಗಿ ನಿಧನರಾದ ನಟ ಪುನೀತ್ ರಾಜಕುಮಾರ್ ಅವರ ಕಣ್ಣು ನಾಲ್ವರಿಗೆ ಜಗದ ಬೆಳಕು ತೋರಿದೆ. ಸಾವಿನ ಬಳಿಕ ಮಣ್ಣಿನಲ್ಲಿ ಮಣ್ಣಾಗಲಿದ್ದ ಕಣ್ಣನ್ನು ಪುನೀತ್ ಕುಟುಂಬ ದಾನ ಮಾಡಿದ್ದರಿಂದಾಗಿ, ನಾಲ್ವರ ಬಾಳಿನಲ್ಲಿ ಇಲ್ಲಿಯವರೆಗಿದ್ದ ಅಂಧಕಾರ ದೂರವಾಗಿ ಹೊರಜಗತ್ತನ್ನು ನೋಡುವ ಸೌಭಾಗ್ಯ ದೊರಕಿದೆ. ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗ ಶೆಟ್ಟಿ ಅವರು, ‘ಪುನೀತ್ ಅವರ ಕಣ್ಣಿನ ಕಾರ್ನಿಯಾದ ಮುಂದಿನ ಮತ್ತು ಹಿಂದಿನ ಪದರಗಳನ್ನು ಬೇರ್ಪ ಡಿಸುವ …
Read More »ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬೆಳಿಗ್ಗೆ 8 ಗಂಟೆಗೆ ಆರಂಭ
ವಿಜಯಪುರ/ಹಾವೇರಿ: ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನ.2ರಂದು ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ. ವಿಜಯಪುರ ನಗರದ ಸೈನಿಕ ಶಾಲೆಯ ‘ಒಡೆಯರ ಹೌಸ್’ನಲ್ಲಿ ಸಿಂದಗಿ ಕ್ಷೇತ್ರದ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ವಿಜಯಪುರ ನಗರದ ಸೈನಿಕ ಶಾಲೆಯ ‘ಒಡೆಯರ ಹೌಸ್’ನಲ್ಲಿ ಸಿಂದಗಿ ಕ್ಷೇತ್ರದ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಒಟ್ಟು 22 ಸುತ್ತು ಮತ ಎಣಿಕೆ ನಡೆಯಲಿದೆ. …
Read More »ರಾಜ್ಯೋತ್ಸವ: ಪ್ರಶಸ್ತಿ ಮೊತ್ತ ₹ 1 ಲಕ್ಷದಿಂದ ₹5 ಲಕ್ಷಕ್ಕೆ ಏರಿಕೆ
ಬೆಂಗಳೂರು : ‘ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಆಯ್ಕೆಗೆ ಕನಿಷ್ಠ ವಯೋಮಿತಿ 60 ವರ್ಷ ಪೂರೈಸಬೇಕೆಂಬ ನಿಯಮವನ್ನು ಮುಂದಿನ ವರ್ಷದಿಂದ ಸಡಿಲಿಸುವ ಜೊತೆಗೆ, ಪ್ರಶಸ್ತಿ ಮೊತ್ತವನ್ನು ₹ 1 ಲಕ್ಷದಿಂದ ₹ 5 ಲಕ್ಷಕ್ಕೆ ಹೆಚ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ನಡೆದ 66ನೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ಇನ್ನು ಮುಂದೆ ಈ ಪ್ರಶಸ್ತಿಗೆ ಯಾರೂ ಅರ್ಜಿ ಸಲ್ಲಿಸುವ ಅಗತ್ಯ …
Read More »