ನಟಿ ಮೇಘನಾ ರಾಜ್ ಸರ್ಜಾ ಅವರ ಬದುಕಿನಲ್ಲಿ ಹಲವು ಏರಿಳಿತಗಳಾದವು. ಪತಿ ಚಿರಂಜೀವಿ ಸರ್ಜಾ ಅಗಲಿಕೆಯಿಂದ ಅವರು ಸಾಕಷ್ಟು ನೋವು ಅನುಭವಿಸಬೇಕಾಯಿತು. ಈಗ ಪುತ್ರ ರಾಯನ್ ರಾಜ್ ಸರ್ಜಾನ ಆರೈಕೆಯಲ್ಲಿ ಅವರು ನಗು ಕಂಡುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ನೋವು ನೀಡುವಂತಹ ಹಲವು ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಇತ್ತೀಚೆಗೆ ರಾಯನ್ ರಾಜ್ ಸರ್ಜಾ ನಾಮಕರಣದ ದಿನವೇ ಮೇಘನಾ ತಾಯಿ ಪ್ರಮೀಳಾ ಜೋಷಾಯ್ ಅವರು ಕೆಲವು ಸುದ್ದಿಗಳ ಬಗ್ಗೆ ಅಸಮಾಧಾನ …
Read More »ಪ್ರಧಾನಿ ಮೋದಿಗೆ ಒಂದೇ ವಾಕ್ಯದಲ್ಲಿ ವಿಶ್ ಮಾಡಿದ ರಾಹುಲ್ ಗಾಂಧಿ; ಇದು ಅವಮಾನ ಎಂದ ನೆಟ್ಟಿಗರು
ಪ್ರಧಾನಿ ನರೇಂದ್ರ ಮೋದಿಯವರ 71ನೇ ಹುಟ್ಟುಹಬ್ಬವಾದ (PM Modi Birthday) ಇಂದು ಬಿಜೆಪಿ ದೇಶಾದ್ಯಂತ ವಿವಿಧ ಸೇವಾ ಕಾರ್ಯಗಳನ್ನು ಹಮ್ಮಿಕೊಂಡಿದ್ದರೆ, ಅತ್ತ ಕಾಂಗ್ರೆಸ್ ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಣೆ ಮಾಡುತ್ತಿದೆ. ಈ ಮಧ್ಯೆ ರಾಹುಲ್ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಗೆ ಒಂದೇ ಸಾಲಿನಲ್ಲಿ ಹುಟ್ಟುಹಬ್ಬದ ವಿಶ್ ಮಾಡಿದ್ದಾರೆ. ಇಷ್ಟು ವರ್ಷ ಪ್ರಧಾನಿಗೆ ಜನ್ಮದಿನದ ಶುಭಾಶಯ ಕೋರುವಾಗ ನಾಲ್ಕು ಸಾಲು ಬರೆಯುತ್ತಿದ್ದರು. ವ್ಯಂಗ್ಯ ಮಾಡುತ್ತಿದ್ದರು. ಆದರೆ ಈ ಬಾರಿ ಹೆಚ್ಚೇನೂ ಬರೆಯದೇ …
Read More »ಪ್ರಧಾನಿ ಮೋದಿ ಜನ್ಮದಿನ: 71 ಅಡಿ ಉದ್ದದ ಸಿರಿಂಜ್ ಆಕಾರದ ಕೇಕ್ ಕತ್ತರಿಸಿ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಭೋಪಾಲ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು 71 ಅಡಿ ಉದ್ದದ ಸಿರಿಂಜ್ ಆಕಾರದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಮಧ್ಯಪ್ರದೇಶದ ಭೋಪಾಲ್ ನ ಲಾಲ್ ಘಾಟಿ ಚೌರಹಾದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದ್ದಾರೆ. ಈ ವೇಳೆ ಕೋವಿಡ್ -19 ಲಸಿಕೆ ಅಭಿಯಾನಕ್ಕಾಗಿ ಪಕ್ಷದ ಕಾರ್ಯಕರ್ತರು ಪ್ರಧಾನಿ ಮೋದಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಸಂಭ್ರಮಾಚರಣೆ ವೇಳೆ ಪಕ್ಷದ ಕಾರ್ಯಕರ್ತರು ಬಿಳಿ ಟೀ ಶರ್ಟ್ ಮತ್ತು ಮುಖವಾಡಗಳನ್ನು ಧರಿಸಿದ್ದರು. …
Read More »ಮೋದಿಜೀಯವರ ೭೧ನೇಯ ಜನ್ಮದಿನ ಅಂಗವಾಗಿ ವಿವಿಧ ಕಾರ್ಯಕ್ರಮಗಳಿಗೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ
ಗೋಕಾಕ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ೭೧ನೇಯ ಜನ್ಮದಿನದ ಅಂಗವಾಗಿ ಗೋಕಾಕ ಬಿಜೆಪಿ ವತಿಯಿಂದ ಶಾಸಕ ರಮೇಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಶಾಸಕರ ಗೃಹ ಕಚೇರಿಯಲ್ಲಿ ಮೋದಿಯವರ ಜನ್ಮದಿನದ ಆಚರಣೆ ನಡೆಸಿ ಸಿಹಿ ಹಂಚಿ ಸರಳವಾಗಿ ಆಚರಿಸಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಹಾಗೂ ನಗರದಲ್ಲಿರುವ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್ನ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ ಮಾಡಿದರು. …
Read More »ಇಲ್ಲಿನ ಎಲ್ಲ ವಿದ್ಯಾರ್ಥಿಗಳು 20 ಕಿ.ಮೀ. ದೂರ ಪ್ರಯಾಣ ಮಾಡಿದರಷ್ಟೇ ಶಾಲಾ ಕಾಲೇಜು ಗಳಿಗೆ ತಲುಪಲು ಸಾಧ್ಯ.
ಗೋಕಾಕ: ಸಾರಿಗೆ ಸಂಸ್ಥೆ ಬಸ್ ಸಕಾಲಕ್ಕೆ ಆಗಮಿಸದೇ ಇರುವುದರಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗೆ ಸಮಯಕ್ಕೆ ಸರಿಯಾಗಿ ತಲುಪಲಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಕೋವಿಡ್ ಮಾರ್ಗಸೂಚಿ ತೆರವಾದ ನಂತರ ಗ್ರಾಮೀಣ ಪ್ರದೇಶದಲ್ಲಿ ಬಸ್ಗಳ ಸೇವೆ ಅಪರೂಪವಾಗಿದೆ. ಮುಖ್ಯ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ಎಲ್ಲ ಕಡೆಯಲ್ಲೂ ಪೂರ್ಣ ಪ್ರಮಾಣದಲ್ಲಿ ಬಸ್ ಸೇವೆ ಆರಂಭಗೊಂಡಿಲ್ಲ. ಇದರಿಂದ ವಿದ್ಯಾರ್ಥಿಗಳು ಬಸ್ಗಳಿಗಾಗಿ ರಸ್ತೆ ಬದಿಯಲ್ಲಿ ಕಾದು ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ. ಗೋಕಾಕ …
Read More »ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಅಂಗೀಕಾರ: ಮೀಸಲಾತಿ ನಾಶದ ಹುನ್ನಾರ ಎಂದ ಸಿದ್ದರಾಮಯ್ಯ
ಬೆಂಗಳೂರು: ಕಾಂಗ್ರೆಸ್ ಸಭಾತ್ಯಾಗದ ಮಧ್ಯೆಯೂ ಇಂದು ವಿಧಾನಸಭೆಯಲ್ಲಿ ಇಂದು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯರ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರಗೊಂಡಿದೆ. ಈ ಹಿನ್ನೆಲೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಕೆರಳಿ ಕೆಂಡವಾಗಿದ್ದಾರೆ. ಸರಣಿ ಟ್ವೀಟ್ಗಳನ್ನು ಮಾಡುವ ಮೂಲಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿಯಾಗಿದೆ. ಈಗ ಕ್ಷೇತ್ರಗಳ ಪುನರ್ ವಿಂಗಡನೆಗೆ ಆಯೋಗ ರಚನೆ ಮಾಡಿ, ಮೀಸಲಾತಿಯನ್ನು ನಾಶಮಾಡುವ ಹುನ್ನಾರ ಮಾಡಿದೆ. ಇದು ಸಂವಿಧಾನದ ಮೇಲಿನ ದಾಳಿಯಾಗಿದೆ. ರಾಜ್ಯ …
Read More »ಮಾಧುಸ್ವಾಮಿ ಕೊಟ್ಟ CD ನೋಡಿ ಗಾಬರಿಯಾದೆ -ಪರಿಷತ್ ಕಲಾಪ
ಬೆಂಗಳೂರು: ಪರಿಷತ್ ಕಲಾಪದ ವೇಳೆ ಇಂದು CD ವಿಚಾರ ಪ್ರಸ್ತಾಪವಾಯಿತು. ಕಲಾಪದ ವೇಳೆ ಹಾಸ್ಯ ಚಟಾಕಿ ಹಾರಿಸಿದ ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ, ‘CD ನೋಡಿ ಗಾಬರಿಯಾದೆ’ ಅನ್ನೋ ಮೂಲಕ ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿದರು. ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿಗೆ ಶ್ರೀಕಂಠೇಗೌಡ ಪ್ರಶ್ನೆ ಕೇಳಿದ್ದರು. ಪ್ರಶ್ನೆಗೆ ಸಂಬಂಧಿಸಿದ ಮಾಹಿತಿಯನ್ನ ಸಚಿವರು ಸಿಡಿಯಲ್ಲಿ ನೀಡಿದ್ದರು. ಈ ಸಿಡಿ ನೋಡಿ ನನಗೆ ಗಾಬರಿ ಆಯ್ತು ಅಂತಾ ಶ್ರೀಕಂಠೇಗೌಡ ಹಾಸ್ಯ ಚಟಾಕಿ ಹಾರಿಸಿ, ಆ ಸಿಡಿಯನ್ನ …
Read More »ಮತ್ತೆ ಗಾಳಿಪಟ-2 ಹಾರಾಟ.. ಸೆ. 18ರಿಂದ ಚಿತ್ರೀಕರಣ
ನಟ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ನಿರ್ದೇಶಕ ಯೋಗರಾಜ ಭಟ್ ಕಾಂಬಿನೇಶನ್ ನಲ್ಲಿ ಮೂಡಿ ಬರುತ್ತಿರುವ “ಗಾಳಿಪಟ-2′ ಚಿತ್ರದ ಚಿತ್ರೀಕರಣಕ್ಕೆ ಮತ್ತೆ ಚಾಲನೆ ಸಿಕ್ಕಿದೆ. ಕೋವಿಡ್ ಎರಡನೇ ಅಲೆಯ ಲಾಕ್ಡೌನ್ನಿಂದ “ಗಾಳಿಪಟ-2′ ಚಿತ್ರದ ಚಿತ್ರೀಕರಣ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಈಗ ಪರಿಸ್ಥಿತಿ ನಿಧಾನವಾಗಿ ಸುಧಾರಿಸುತ್ತಿರುವುದರಿಂದ ಮತ್ತೆ ಶೂಟಿಂಗ್ ಶುರು ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. ಈ ಬಗ್ಗೆ ಮಾತನಾಡುವ ನಿರ್ದೇಶಕ ಯೋಗರಾಜ್ ಭಟ್, “ಈಗಾಗಲೇ ಮುಕ್ಕಾಲು ಭಾಗ ಶೂಟಿಂಗ್ ಪೂರ್ಣಗೊಂಡಿದೆ. …
Read More »ವಿಮಾನದ ಟಿಕೆಟ್ ಗಿಂತ ಈ ಬಸ್ ಗಳ ಟಿಕೆಟ್ ದರ ಜಾಸ್ತಿ: ಬೆಲೆ ಏರಿಕೆ ವಿರುದ್ಧ ಧ್ವನಿ ಎತ್ತಿದ ರಮೇಶ್ ಕುಮಾರ್
ಬೆಂಗಳೂರು : ಬಸ್ಗಳ ಟಿಕೆಟ್ ದರ ಹೆಚ್ಚಿಸುವವರಿಗೆ ಜನರ ಬವಣೆ ಗೊತ್ತಿಲ್ಲ. ವಿಮಾನದ ಟಿಕೆಟ್ಗಿಂತ ಈ ಬಸ್ಗಳ ಟಿಕೆಟ್ ದರ ಜಾಸ್ತಿ ಇದೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬೆಲೆ ಏರಿಕೆ ವಿರುದ್ಧ ಧ್ವನಿ ಎತ್ತಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ, ಸಿದ್ದರಾಮಯ್ಯ ಕಾಲದಿಂದಲೂ ಬಸ್ ಟಿಕೆಟ್ ದರ ಹೆಚ್ಚು ಮಾಡಿಕೊಂಡು ಬರುತ್ತಿದ್ದಾರೆ. ಟಿಕೆಟ್ ದರ ಹೆಚ್ಚಿಸೋರಿಗೆ ಜನರ ಬವಣೆ ಗೊತ್ತಿಲ್ಲ. ಹಬ್ಬದ ವೇಳೆ ಜನ ಊರುಗಳಿಗೆ …
Read More »ವಿಧಾನಸೌಧದ ಗೇಟ್ ನಂಬರ್ 2ರಲ್ಲಿ ರಸ್ತೆ ಕುಸಿತ
ಬೆಂಗಳೂರು : ವಿಧಾನಸೌಧದ ಗೇಟ್ ನಂಬರ್ 2ರಲ್ಲಿ ಡಾಂಬರು ಹಾಕಿದ ರಸ್ತೆಯಲ್ಲಿ ಕುಸಿತ ಉಂಟಾಗಿದೆ. ಬಸ್, ಕಾರು ಸೇರಿದಂತೆ ವಾಹನಗಳು ನಿರಂತರವಾಗಿ ಸಂಚರಿಸುವ ರಸ್ತೆಯಲ್ಲಿ ಸುಮಾರು 10 ಅಡಿ ಅಗಲ, 10 ಅಡಿ ಆಳದ ರಂಧ್ರ ಸೃಷ್ಟಿಯಾಗಿದೆ. ಭೂಮಿ ಕುಸಿಯುವಾಗಲೇ ಕಾರೊಂದು ಸ್ವಲ್ಪ ಅಂತರದಲ್ಲಿ ಭೂ ಕುಸಿತದ ಪ್ರಮಾದಿಂದ ಪಾರಾಗಿದೆ. ಡಾಬರು ರಸ್ತೆಯಲ್ಲಿ ಕುಸಿತ ಉಂಟಾಗಿರುವುದು ವಿಧಾನಸೌಧದ ಬಳಿ ನೆರೆದವರಲ್ಲಿ ಆತಂಕ ಮೂಡಿಸಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
Read More »