Breaking News

ಯಡಿಯೂರಪ್ಪನವರನ್ನೇ ಕೆಳಗಿಳಿಸಲಾಯಿತು. ಹೀಗಿರುವಾಗ ನಿಮ್ಮ ಕಾಲೆಳೆಯುವವರೂ ಇದ್ದಾರೆ ಹುಶಾರ್.: ಸಿದ್ದು

ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದ ಬಿಎಸ್ ಯಡಿಯೂರಪ್ಪನವರನ್ನೇ ಕೆಳಗಿಳಿಸಲಾಯಿತು. ಹೀಗಿರುವಾಗ ನಿಮ್ಮ ಕಾಲೆಳೆಯುವವರೂ ಇದ್ದಾರೆ ಹುಶಾರ್. ಬೊಮ್ಮಾಯಿ ಪುತ್ರ ಬಸವರಾಜ ಬೊಮ್ಮಾಯಿ ಸರ್ಕಾರದ ಉಳಿದ ಅವಧಿ ಪೂರೈಸಲಿ ಎಂಬುದು ನನ್ನ ಆಶಯವೆಂದು ಸಿದ್ದರಾಮಯ್ಯ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ನನ್ನ ಪರವಾರಿಗೆ ಶಾಸಕರು ಹಾಗೂ ಇನ್ನಿತರರಿದ್ದಾರೆ. ಆದರೆ ತಮ್ಮನ್ನು ದೆಹಲಿಗೆ ಕಳುಹಿಸಲು ಹುನ್ನಾರ ನಡೆದಿದೆ. ಅದು ತಮಗೂ ತಿಳಿದಿದೆ. ಹೀಗಾಗಿ ಹುಶಾರಾಗಿರಿ. ನೀವು ವಿಧಾನಸಭೆಯಲ್ಲಿ ಇರುವುದು ನಿಮ್ಮಲ್ಲೇ ಕೆಲವರಿಗೆ …

Read More »

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಿ, ಸಾಕಾರಗೊಳಿಸಲು ರಾಜ್ಯ ಸರ್ಕಾರ ಬದ್ಧ: ಕಾರಜೋಳ

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಿ, ಸಾಕಾರಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಅದೇರೀತಿ ಅಂತರ ರಾಜ್ಯ ನದೀ ನೀರಿನ ಹಂಚಿಕೆಯಲ್ಲಿ ಕರ್ನಾಟಕದ ಪಾಲಿನ ನೀರನ್ನು ಬಳಕೆ ಮಾಡಿಕೊಳ್ಳಲು ಎಲ್ಲಾ ಕ್ರಮಕೈಗೊಳ್ಳುವುದಾಗಿ ಮಾನ್ಯ ಜಲ ಸಂಪನ್ಮೂಲ ಸಚಿವ ಶ್ರೀ ಗೋವಿಂದ ಎಂ. ಕಾರಜೋಳರವರು ಇಂದು ವಿಧಾನ ಪರಿಷತ್ತಿನಲ್ಲಿ ಘೋಷಿಸಿದರು. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಸಚಿವರು ವಿಧಾನಪರಿಷತ್ತಿನಲ್ಲಿ ಇಂದು ವಿರೋಧ ಪಕ್ಷದ ನಾಯಕ …

Read More »

ಫೋಟೋಗೆ ಪೋಸ್ ಕೊಡಲು ಹೋಗಿ ಸಮುದ್ರದ ಪಾಲಾದ ವ್ಯಕ್ತಿ

ಕಾರವಾರ: ಸಮುದ್ರದ ಅಲೆಗಳ ಮಧ್ಯೆ ಕಲ್ಲುಬಂಡೆಯ ಮೇಲೆ ಧ್ಯಾನದಲ್ಲಿ ಕುಳಿತಂತೆ ಫೋಟೊಗೆ ಪೋಸ್ ಕೊಡಲು ಹೋಗಿ ಪ್ರವಾಸಿಗನೋರ್ವ ಸಮುದ್ರ ಪಾಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದ ವನ್ನಳ್ಳಿ ಕಡಲ ತೀರದಲ್ಲಿ ದುರಂತ ನಡೆದಿದೆ. ಶಿರಸಿಯ ನಿವಾಸಿ 42 ವರ್ಷದ ಸುಬ್ಬುಗೌಡ ಮೃತ ಪ್ರವಾಸಿಗ. ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಸುಬ್ಬುಗೌಡ, ಕಡಲ ತೀರದ ಬಂಡೆ ಮೇಲೆ ಕುಳಿತು ಫೋಟೋಗೆ ಪೋಸ್ ಕೊಡುತ್ತಿದ್ದರು. ಈ ವೇಳೆ ರಭಸವಾಗಿ ಬಂದ ಅಲೆಯಲ್ಲಿ ಕೊಚ್ಚಿ …

Read More »

ಬೆಲೆ ಏರಿಕೆಯಿಂದ ಜನ ಕಷ್ಟ ಪಡುವುದನ್ನೇ ಅಚ್ಚೇ ದಿನ್ ಅನ್ನೋದಾ: ಸಿದ್ದರಾಮಯ್ಯ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಇಂದು ಗಗನ ಮುಟ್ಟಿದೆ. ಬೆಲೆ ಏರಿಕೆಯಿಂದ ಜನ ಕಷ್ಟ ಪಡುವುದನ್ನೇ ಅಚ್ಚೇ ದಿನ್ ಅನ್ನೋದಾ? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಡಳಿತ ಪಕ್ಷದ ವಿರುದ್ಧವಾಗಿ ಕಿಡಿಕಾರಿದ್ದಾರೆ. ಗ್ಯಾಸ್, ಪೆಟ್ರೋಲ್, ಡೀಸೆಲ್, ದಿನಸಿ, ಔಷಧ, ಪ್ರಯಾಣ ದರ ಹೀಗೆ ಎಲ್ಲಾ ಜೀವನಾವಶ್ಯಕ ವಸ್ತುಗಳ, ಸೇವೆಗಳ ಬೆಲೆ ಮಿತಿಮೀರಿದೆ. ಇದರಿಂದ ಬಡ, ಮಧ್ಯಮ ವರ್ಗದ ಜನರು ಜೀವನ ಮಾಡಲು ಕಷ್ಟಪಡಬೇಕಾಗಿದೆ. ಇದನ್ನೇ ನೀವು ಅಚ್ಚೇದಿನ್ ಎಂದು …

Read More »

ಸಿಸಿಟಿವಿ ಧ್ವಂಸಗೊಳಿಸಿ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ

ಬೀದರ್ : ಬ್ಯಾಂಕ್ ಎಟಿಎಂ ಹಾಗೂ ಸಿಸಿ ಟಿವಿ ಧ್ವಂಸ ಮಾಡಿ ದರೋಡೆಕೋರ ಕಳ್ಳತನಕ್ಕೆ ವಿಫಲ ಯತ್ನ ಮಾಡಿದ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೋಹಿನೂರ್ ಗ್ರಾಮದಲ್ಲಿ ಎಸ್.ಬಿಐ ಬ್ಯಾಂಕ್ ನ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ ಮಾಡಿ ಹಣ ಸಿಗದೆ ದರೋಡೆಕೋರ ಬರಿಗೈಯಲ್ಲಿ ತೆರಳಿದ್ದಾನೆ. ದರೋಡೆಕೋರ ಎಟಿಎಂ ಒಳಗಡೆ ನುಗ್ಗಿ ದರೋಡೆಗೆ ಯತ್ನ ಮಾಡಿದ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿವೆ. ಕಳ್ಳತನ ಮಾಡಲು …

Read More »

ಬೈಕ್ ಅಪಘಾತ- ಚಿಕಿತ್ಸೆ ಫಲಿಸದೆ ಸೈನಿಕ ಸಾವು

ಬಾಗಲಕೋಟೆ: ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸೈನಿಕನೊಬ್ಬ ಚಿಕಿತ್ಸೆ ಫಲಿಸದೇ ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.   ಜಿಲ್ಲೆಯ ಬಾದಾಮಿ ತಾಲೂಕಿನ ಸೂಳಿಕೇರಿ ಗ್ರಾಮದ ಹನಮಂತ ಸಿದ್ರಾಮಪ್ಪ ಹಡಪದ(33) ಮೃತಪಟ್ಟ ದುರ್ದೈವಿ. ಬಾದಾಮಿಯಿಂದ ಪಟ್ಟದಕಲ್ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ನಂದಿಕೇಶ್ವರ ಗ್ರಾಮದ ಹತ್ತಿರ ಪಲ್ಸರ್ ಬೈಕ್‍ನಲ್ಲಿ ವೇಗವಾಗಿ ಬಂದ ಮಂಜುನಾಥ ಮಾಗುಂಡಪ್ಪ ಜತ್ತಿ, ಸೈನಿಕ ತೆರಳುತ್ತಿದ್ದ ಬೈಕ್‍ಗೆ ಡಿಕ್ಕಿ ಹೊಡೆದಿದ್ದ. ಕಳೆದ ಸೆ.8 ರಂದು ಘಟನೆ …

Read More »

ಭಾರೀ ಮಳೆ- ನವಿಲು ತೀರ್ಥ ಡ್ಯಾಂನಿಂದ ಮಲಪ್ರಭಾ ನದಿಗೆ ನೀರು

ಬಾಗಲಕೋಟೆ: ಭಾರೀ ಮಳೆ ಹಿನ್ನೆಲೆಯಲ್ಲಿ ನವಿಲು ತೀರ್ಥ ಡ್ಯಾಂನಿಂದ ಮಲಪ್ರಭಾ ನದಿಗೆ ನೀರು ಬಿಟ್ಟಿರುವುದರಿಂದ ಜಿಲ್ಲೆಯ ಮಲಪ್ರಭಾ ನದಿ ತೀರದ ಗ್ರಾಮಸ್ಥರಲ್ಲಿ ಮತ್ತೆ ಪ್ರವಾಹ ಆತಂಕ ಶುರುವಾಗಿದೆ. ಜಿಲ್ಲೆಯ ಬಾದಾಮಿ ತಾಲೂಕಿನ ಗೋವನಕೊಪ್ಪ ಗ್ರಾಮದ ಕೆಳ ಸೇತುವೆ ಮುಳುಗಡೆ ಆಗಿದ್ದು, ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಪಕ್ಕದ ಗದಗ ಜಿಲ್ಲೆಯ ಕೊಣ್ಣೂರ ಹಾಗೂ ಬಾಗಲಕೋಟೆ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಕೆಳ ಸೇತುವೆ ಮುಳುಗಡೆಯಾಗಿದೆ. ಹುಬ್ಬಳ್ಳಿ-ಸೊಲ್ಲಾಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಹೊಸ …

Read More »

ಶ್ರೀಶೈಲ ಜಗದ್ಗುರುಗಳಿಂದ ವೀರಭದ್ರೇಶ್ವರ ಜಯಂತಿ

ಚಿಕ್ಕೋಡಿ: ಭಾದ್ರಪದ ಮಾಸದ ಪ್ರಥಮ ಮಂಗಳವಾರ ಪ್ರತಿ ವರ್ಷ ವೀರಭದ್ರೇಶ್ವರ ಜಯಂತಿಯನ್ನು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸುಕ್ಷೇತ್ರ ಯಡೂರ ಗ್ರಾಮದಲ್ಲಿ ಅತಿ ಸರಳವಾಗಿದೆ ಆಚರಣೆ ಮಾಡಿದರು.   ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರ ವೀರಭದ್ರ ದೇವಸ್ಥಾನದಲ್ಲಿ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ವೀರಭದ್ರೇಶ್ವರ ಮೂರ್ತಿಗೆ ವಿಶೇಷ ಅಭಿಷೇಕ ಹಾಗೂ ಪೂಜೆ ಮಾಡಿ ವಿಶ್ವ ಶಾಂತಿಗಾಗಿ ದೇವರಲ್ಲಿ ಆರಾಧಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಶೈಲ ಜಗದ್ಗುರುಗಳು, ಕೊರೊನಾ …

Read More »

ಗುಟ್ಕಾ ಸಾಲ ಕೊಡಲಿಲ್ಲ ಎಂಬ ಕಾರಣಕ್ಕೆ ಪಾನ್ ಶಾಪ್ ಮಾಲೀಕನನ್ನು ಬರ್ಬರವಾಗಿ ಹತ್ಯೆ

ಬೆಳಗಾವಿ: ಗುಟ್ಕಾ ಸಾಲ ಕೊಡಲಿಲ್ಲ ಎಂಬ ಕಾರಣಕ್ಕೆ ಪಾನ್ ಶಾಪ್ ಮಾಲೀಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಘಟನೆಯಿಂದ ಕುಂದಾನಗರಿ ಜನ ಬೆಚ್ಚಿಬಿದ್ದಿದ್ದಾರೆ.   ಮಂಗಳವಾರ ರಾತ್ರಿ ಬೆಳಗಾವಿಯ ವಡಗಾವಿ ಪ್ರದೇಶದ ಲಕ್ಷ್ಮೀ ನಗರದಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮ ಜೋರಾಗಿತ್ತು. ಜನರು ಗಣೇಶನ ವಿಸರ್ಜನೆಯಲ್ಲಿಯೇ ತಲ್ಲೀನರಾಗಿದ್ದರು. ಆದರೆ ಇತ್ತ ಆರೋಪಿ ದತ್ತಾತ್ರೇಯ ಶಿವಾನಂದ ಜತ್ತಿನಮಠ ಗುಟ್ಕಾ ಸಾಲ ಕೊಡು ಎಂದು ಬಂದಿದ್ದು, ಉದ್ರಿ ಕೊಡುವುದಿಲ್ಲ ಎಂದು ಪಾನ್ …

Read More »

ನಮಗೆ ಮನೆ ಕಟ್ಟಿಸಿ ಕೊಡಿ- ಘಟಪ್ರಭಾ ಪ್ರವಾಹದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಂದ ಪ್ರತಿಭಟನೆ

ಬೆಳಗಾವಿ: ಗೋಕಾಕ್ ತಾಲೂಕಿನ ಅರಭಾವಿ ಕ್ಷೇತ್ರದಲ್ಲಿ 2019ರಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಈವರೆಗೆ ಸರ್ಕಾರ ಮನೆ ಕಟ್ಟಿ ಕೊಟ್ಟಿಲ್ಲ. ಇದರಿಂದ ಆಕ್ರೋಶಗೊಂಡಿರುವ ಸಂತ್ರಸ್ತರು ಬುತ್ತಿ ಕಟ್ಟಿಕೊಂಡು ಬೆಳಗಾವಿ ಡಿಸಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ. ನಮಗೆ ಮನೆ ಕಟ್ಟಿಸಿಕೊಡುವ ಆದೇಶ ಬರುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ಅರಭಾವಿ ಕ್ಷೇತ್ರದ ಅಡಿಬಟ್ಟಿ, ಚಿಗಡೊಳ್ಳಿ, ಮೇಳವಂಕಿ, ಹಡಗಿನಾಳ, ಉದಗಟ್ಟಿ, ತಿಗಡಿ, ಮಸಗುಪ್ಪಿ, ಕಲಾರಕೊಪ್ಪ, ಅಳ್ಳಿಮಟ್ಟಿ, ಸುಣಧೋಳಿ, ಢವಳೇಶ್ವರ, ಮುನ್ಯಾಳ, ಕಮಲದಿನ್ನಿ, …

Read More »