ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಈ ಶೈಕ್ಷಣಿಕ ಸಾಲಿನಲ್ಲಿ 3552 ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. 2020 -21 ನೇ ಸಾಲಿನಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ನಾನಾ ಕಾರಣಗಳಿಂದ ಖಾಲಿಯಾದ 2832 ಉಪನ್ಯಾಸಕರಿಗೆ 1835 ಅತಿಥಿ ಉಪನ್ಯಾಸಕರನ್ನು 9 ಸಾವಿರ ರೂಪಾಯಿ ಗೌರವಧನದ ಆಧಾರದಲ್ಲಿ ಫೆಬ್ರವರಿಯಿಂದ ನೇಮಕ ಮಾಡಿಕೊಳ್ಳಲಾಗಿತ್ತು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಹುತೇಕ ಎಲ್ಲ ಮಕ್ಕಳು ಉತ್ತೀರ್ಣರಾಗಿ ಪಿಯು ಕಾಲೇಜ್ ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ …
Read More »ರಾಜಕೀಯ ಒತ್ತಡ; ಅಧಿಕಾರ ವಹಿಸಿಕೊಳ್ಳದ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ; ರಾಜ್ಯಪಾಲರ ಅಂಗಳ ತಲುಪಿದ ಮಂಡ್ಯ SP ನೇಮಕ ವಿವಾದ
ಮಂಡ್ಯ: ಮಂಡ್ಯ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ ನೇಮಕಾತಿ ವಿವಾದ ಒಂದು ವಾರ ಕಳೆದರೂ ಇನ್ನೂ ಬಗೆದಿಲ್ಲ. ರಾಜಕೀಯ ಒತ್ತಡಕ್ಕೆ ಮಣಿದು ನೂತನ ಎಸ್ ಪಿ ಅಧಿಕಾರ ವಹಿಸಿಕೊಳ್ಳದಂತೆ ಪೊಲೀಸ್ ಇಲಾಖೆ ಡಿಪಿಎಆರ್ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇದೀಗ ನೇಮಕಾತಿ ವಿವಾದ ರಾಜ್ಯಪಾಲರ ಅಂಗಳ ತಲುಪಿದೆ. ಮಂಡ್ಯ ಜಿಲ್ಲೆ ಎಸ್ ಪಿ ಯಾಗಿ ಅಕ್ಟೋಬರ್ 20ರಂದು ಸುಮನ್ ಡಿ ಪನ್ನೇಕರ್ ಅವರನ್ನು ನೇಮಕ ಮಾಡಲಾಗಿತ್ತು. ನಿರ್ಗಮಿತ ಎಸ್ ಪಿ ಡಾ.ಅಶ್ವಿನಿ ಎ ಎಸ್ ಪಿಗೆ …
Read More »ಬರೋಬ್ಬರಿ 35 ಲಕ್ಷ ರೂ. ಮೌಲ್ಯದ ಹಳೆ ನೋಟು ವಶ
ನೋಟು ಅಮಾನ್ಯೀಕರಣಗೊಂಡು ಬರೋಬ್ಬರಿ ಐದು ವರ್ಷಗಳೇ ಕಳೆದಿವೆ. ಆದರೆ ಗೋವಿಂದಪುರದಲ್ಲಿ ಅಮಾನ್ಯೀಕರಣಗೊಂಡ ನೋಟು ವಿನಿಮಯ ಹಾಗೂ ನಕಲಿ ಹಣವನ್ನು ಉತ್ಪಾದಿಸುತ್ತಿದ್ದ ಆರೋಪದ ಅಡಿಯಲ್ಲಿ ಪೊಲೀಸರು ಬಿಬಿಎಂಪಿ ಉಪ ಗುತ್ತಿಗೆದಾರ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಬಟ್ಟೆ ವ್ಯಾಪಾರಿಗಳಾದ ಸುರೇಶ್ ಕುಮಾರ್(32), ರಾಮಕೃಷ್ಣ(32), ವೆಂಕಟೇಶ್ ಎಂ(53), ಮಂಜುನಾಥ್(43), ಹಾಗೂ ದಯಾನಂದ ಎಂಬವರು ಹೆಚ್ಬಿಆರ್ ಲೇ ಔಟ್ ನಲ್ಲಿ ಬರೋಬ್ಬರಿ 35 ಲಕ್ಷ ರೂಪಾಯಿ ಮೌಲ್ಯದ ಅಮಾನ್ಯೀಕರಣಗೊಂಡ 500 ಹಾಗೂ 1000 ರೂಪಾಯಿ …
Read More »ಚಿತ್ರದುರ್ಗ: ಎಸಿಬಿ ಬಲೆಗೆ ಬಿದ್ದ ಪ್ರಭಾರಿ ಆಹಾರ ಸಂರಕ್ಷಣಾಧಿಕಾರಿ
ಚಿತ್ರದುರ್ಗ: ಲಂಚ ಸ್ವೀಕಾರ ವೇಳೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ಅವರು ಎಸಿಬಿ ಬಲೆಗೆ ಬಿದ್ದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಪ್ರಭಾರಿ ಆಹಾರ ಸಂರಕ್ಷಣಾಧಿಕಾರಿ ಆಗಿದ್ದ ತುಳಸಿ ರಂಗನಾಥ್, ಬೇಕರಿ ಪರವಾನಗಿ ನವೀಕರಣಕ್ಕಾಗಿ ‘ನಮ್ ಬೇಕರಿ’ ಮಾಲೀಕ ಮಂಜುನಾಥ್ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 8ಸಾವಿರ ರೂ. ಲಂಚ ಸ್ವೀಕಾರ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ಎಸಿಬಿ ಎಸ್ ಐ ಪ್ರವೀಣ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
Read More »ಡಿ.ಕೆ.ಶಿವಕುಮಾರ್ ಆಪ್ತನ ಮನೆ ಮೇಲೆ ಐಟಿ ದಿಢೀರ್ ದಾಳಿ
ಧಾರವಾಡ: ನಗರದ ಖ್ಯಾತ ಉದ್ಯಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪ್ತರಾಗಿರುವ ಯು. ಬಿ. ಶೆಟ್ಟಿ ಮನೆ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಧಾರವಾಡದ ದಾಸನಕೊಪ್ಪದ ಮನೆ ಮೇಲೆ ಗೋವಾದಿಂದ ಬಂದ 5 ಜನರ ಐಟಿ ತಂಡ ದಾಳಿ ನಡೆಸಿ ತಪಾಸಣೆಯಲ್ಲಿ ತೊಡಗಿದ್ದಾರೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೈಂದೂರ ತಾಲೂಕಿನ ಉಪ್ಪುಂದ ಮೂಲದ ಯು. ಬಿ. ಶೆಟ್ಟಿ ಕ್ಲಾಸ್ ಒನ್ ಕಾಂಟ್ರ್ಯಾಕ್ಟರ್ …
Read More »ಬೆಳಗಾವಿ ಜಿಲ್ಲೆಯ ವಿಧವೆಯರಿಗೆ 8 ಸಾವಿರ ಮನೆ ಮಂಜೂರು- ಕವಟಗಿಮಠ
ಚಿಕ್ಕೋಡಿ: ಸಮಾಜದಲ್ಲಿ ತುಳಿತಕ್ಕೆ ಒಳಗಾದ ವಿಧವೆಯರಿಗೆ ಬೆಳಗಾವಿ ಜಿಲ್ಲೆಗೆ 8 ಸಾವಿರ ಮನೆ ಮಂಜೂರು ಮಾಡಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ತಾಲೂಕಿನ 9 ಗ್ರಾಮ ಪಂಚಾಯತಿಯ 120 ಮನೆಗಳು ಮಂಜೂರಾಗಿವೆ ಎಂದು ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು. ಇಲ್ಲಿನ ಸಿಎಲ್ ಇ ಸಂಸ್ಥೆಯ ಸಭಾ ಭವನದಲ್ಲಿ ರಾಜೀವ ಗಾಂಧಿ ವಸತಿ ನಿಗಮ ಬೆಂಗಳೂರು ಇವರ ವತಿಯಿಂದ ದೇವರಾಜ ಅರಸು ವಿಶೇಷ ವಸತಿ ಯೋಜನೆಯಡಿ ಚಿಕ್ಕೋಡಿ ಸದಲಗಾ ಕ್ಷೇತ್ರದ ವಿವಿಧ ಗ್ರಾಮ …
Read More »ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿರುವ ಧಾರವಾಡ ಮೂಲದ ಪೈಲ್ವಾನ್ ರಫೀಕ್ ಹೊಳಿ
.ಧಾರವಾಡ: ಈ ಊರಿನ ಹೆಸರು ಕೇಳಿದ ಕೂಡಲೇ ಫೇಡಾ ನೆನಪಿಗೆ ಬರುತ್ತದೆ. ಅಷ್ಟೇ ಅಲ್ಲ ಧಾರವಾಡಕ್ಕೆ ವಿದ್ಯಾಕಾಶಿ ಅಂತಾನೂ ಕರೆಯುತ್ತಾರೆ. ಇದೀಗ ಇಂಥ ಧಾರವಾಡ ಬೇರೆ ಬೇರೆ ಕಾರಣಗಳಿಗೂ ಹೆಸರು ಪಡೆಯುತ್ತಿದೆ. ಅದರಲ್ಲೂ ಧಾರವಾಡ ಮೂಲದ ಕುಸ್ತಿಪಟುವೊಬ್ಬರು ರಾಷ್ಟ್ರ ಹಾಗೂ ಅಂತಾರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡುತ್ತಿದ್ದಾರೆ. ತೀರಾ ಬಡ ಮನೆತನದಲ್ಲಿ ಹುಟ್ಟಿ ಬೆಳೆದ ಆ ಕುಸ್ತಿಪಟುವಿನ ಹೆಸರು ರಫೀಕ್ ಹೊಳಿ. ಕೃಷಿ ಕೂಲಿಕಾರರ ಮನೆಯಲ್ಲಿ ಜನಿಸಿ, ಇಂದು ಇಡೀ ದೇಶದಲ್ಲಿಯೇ ಕುಸ್ತಿಯಲ್ಲಿ …
Read More »ತೀವ್ರ ಕಾಲು ನೋವಿನಿಂದ ಬಳಲುತ್ತಿದ್ದ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಚಿಕಿತ್ಸೆಗಾಗಿ ಮುಂಬೈ ಆಸ್ಪತ್ರೆಗೆ
ತೀವ್ರ ಕಾಲು ನೋವಿನಿಂದ ಬಳಲುತ್ತಿದ್ದ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಚಿಕಿತ್ಸೆಗಾಗಿ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿ ಖುದ್ದು ರೇಣುಕಾಚಾರ್ಯ ಅವರೇ ಸ್ಪಷ್ಟಪಡಿಸಿದ್ದಾರೆ. ಆತ್ಮೀಯ ಬಂಧುಗಳೇ, ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಂಭವಿಸಿದ್ದ ಅಪಘಾತದಿಂದಾಗಿ ಕಳೆದ ಕೆಲ ತಿಂಗಳಿಂದ ಕಾಲು ನೋವು ಕಾಣಿಸಿಕೊಂಡಿದೆ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಮುಂಬೈ ಆಸ್ಪತೆಯಲ್ಲಿ ಆಪರೇಷನ್ಗೆ ಒಳಗಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಆತ್ಮೀಯ ಬಂಧುಗಳೇ… ಕಳೆದ ವಿಧಾನ ಸಭಾ …
Read More »ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್ದಿಂದಾಗಿ ಬಿದ್ದಿದೆ ಪೆಟ್ಟು
ಕನ್ನಡದ ಶ್ರೀಮಂತಿಕೆ ಇರುವುದೇ ಸಾಹಿತ್ಯದಲ್ಲಿ…. ಸಾಹಿತ್ಯವೆಂದರೆ ಪುಸ್ತಕ… ಆದರೆ, ಕನ್ನಡವನ್ನು ಪೋಷಿಸಿ, ಬೆಳೆಸುವ ಪುಸ್ತಕೋದ್ಯಮಕ್ಕೆ ಕಳೆದ ಎರಡು ವರ್ಷಗಳಲ್ಲಿ ಕೋವಿಡ್ ನೀಡಿದ ಪೆಟ್ಟು ಮಾತ್ರ ಸಹಿಸಲು ಸಾಧ್ಯವೇ ಇಲ್ಲದಂಥದ್ದು! ಕೋವಿಡ್ ಮತ್ತು ಲಾಕ್ಡೌನ್ ಕಾಲದಲ್ಲಿ ಸಾಹಿತ್ಯ ಬರೆಯುವವವರಿಗೆ ಯಾವುದೇ ರೀತಿಯಲ್ಲೂ ಕೊರತೆಯಾಗಲಿಲ್ಲ. ಆದರೆ, ಬರೆದ ಮೇಲೆ ಪುಸ್ತಕ ರೂಪದಲ್ಲಿ ಪ್ರಿಂಟ್ ಮಾಡಿ ಮಾರಾಟ ಮಾಡುವ ಪ್ರಕ್ರಿಯೆಗೆ ಮಾತ್ರ ದೊಡ್ಡ ಪೆಟ್ಟು ಬಿದ್ದಿರುವುದು ಸತ್ಯ. ಕೋವಿಡ್ ಎರಡು ಬಾರಿಯ ಲಾಕ್ಡೌನ್ ಹಾಗೂ …
Read More »ರಾಜ್ಯೋತ್ಸವ ಪ್ರಶಸ್ತಿಗೆ ಲಾಬಿ ಒಂದೇ ಸಂಸ್ಥೆ ಪರ ಸಾವಿರ ಶಿಫಾರಸು!
ಬೆಂಗಳೂರು: ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯನ್ನು ಅರ್ಹರಿಗೆ ನೀಡುವ ಸಲುವಾಗಿ ರಾಜ್ಯ ಸರಕಾರ ಜನರಿಂದಲೇ ಶಿಫಾರಸು ಆಹ್ವಾನಿಸಿತ್ತು. ಆದರೆ ಒಂದೇ ಸಂಸ್ಥೆಯ ಪರವಾಗಿ 1 ಸಾವಿರಕ್ಕೂ ಹೆಚ್ಚು ಶಿಫಾರಸುಗಳು ಬಂದಿದ್ದು, ಸರಕಾರವೇ ಬೆಚ್ಚಿ ಬೀಳುವಂತೆ ಮಾಡಿದೆ. ಕೆಲವು ವ್ಯಕ್ತಿಗಳ ಪರವೂ ಭರಪೂರ ಶಿಫಾರಸುಗಳು ಬಂದಿವೆ. “ಇಂಥವರಿಗೆ’ ಪ್ರಶಸ್ತಿ ಕೊಡಿ ಎಂದು ದಾಖಲೆಗಳ ಸಮೇತ 200 – 300 ಶಿಫಾರಸುಗಳು ಸೇವಾ ಸಿಂಧು ಮೂಲಕ ಸಲ್ಲಿಕೆಯಾಗಿವೆ ಎಂಬ ಮಾಹಿತಿ ಲಭ್ಯವಾಗಿವೆ. ಈ ಬಾರಿ …
Read More »