ಬೆಳಗಾವಿ: ಗಣೇಶೋತ್ಸವ ಆಚರಣೆ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಆಯುಕ್ತರು ಗುರುವಾರ ಬೆಳಿಗ್ಗೆ ನಗರ ಸಂಚಾರ ಮಾಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಇದಕ್ಕೂ ಮೊದಲು ಗಣಪತಿ ಮೂರ್ತಿಗಳನ್ನು ವಿಸರ್ಜಿಸುವ ಕಪಿಲೇಶ್ವರ ಹೊಂಡದ ಆವರಣದಲ್ಲಿ ಮೇಯರ್, ನಗರ ಸೇವಕರು ಹಾಗೂ ಆಯುಕ್ತರು ಪೂಜೆ ಸಲ್ಲಿಸಿ ಸಿದ್ಧತೆಗಳಿಗೆ ಚಾಲನೆ ನೀಡಿದರು. ನಂತರ ಗಣೇಶ ಮೂರ್ತಿಗಳು ಸಾಗುವ ಮೆರವಣಿಗೆ ಮಾರ್ಗಗಳಾದ ಚೆನ್ನಮ್ಮ ವೃತ್ತ, ಸಮಾದೇವಿ, ಮಾರುತಿ, ಗಣಪತಿ, ರಾಮಲಿಂಗ ಖಿಂಡ್ ಗಲ್ಲಿಗಳು, ಸಂಭಾಜಿ, ತಿಲಕ್, ಹೇಮು ಕಲಜಿ …
Read More »ಸೆ. 6 ರಂದು ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ
ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಸುವರ್ಣ ಸೌಧ ಉಪಕೇಂದ್ರದಲ್ಲಿ ಎರಡನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ದಿನಾಂಕ 06.09.2026 ರಂದು ಬೆಳಗ್ಗೆ 9. ಘಂಟೆಯಿಂದ ಸಂಜೆ 4, ಘಂಟೆಯವರೆಗೆ ಸದರಿ ಉಪಕೇಂದ್ರದಿಂದ ವಿತರಣೆಯಾಗುವ ಕೊಂಡಸಕೊಪ್ಪ, ಹಲಗಾ, ಬಸ್ತವಾಡ, ಶಗನಮಟ್ಟಿ, ಮಾಸ್ತಮರಡಿ, ಬಸರಿಕಟ್ಟಿ, ಶಿಂಧೋಳ್ಳಿ, ಮುತಗಾ, ಶ್ರೀರಾಮ ಕಾಲನಿ, ಸಾರಿಗೆ ನಗರ, ಮಹಾಲಕ್ಷ್ಮೀ ಪುರಂ, ಸಾಯಿ ನಗರ, ಭರತೇಶ ಕಾಲೇಜ, ಶಿಂಧೋಳ್ಳಿ ಕ್ರಾಸ್, ನಿಲಜಿ ಕ್ರಾಸ್, …
Read More »ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಅಭೂತಪೂರ್ವ ಸ್ಪಂದನೆ: ರಕ್ತದಾನ ಶಿಬಿರಕ್ಕೆ ಪ್ರಾದೇಶಿಕ ಆಯುಕ್ತರಿಂದ ಚಾಲನೆ
ಬೆಳಗಾವಿ: ಜಿಲ್ಲಾ ಪಂಚಾಯತ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾದ್ಯಂತ ಗುರುವಾರ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಸರ್ಕಾರಿ ನೌಕರರು, ಸಿಬ್ಬಂದಿ, ಸಂಘ-ಸಂಸ್ಥೆಗಳ ಸದಸ್ಯರು ಹಾಗೂ ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಬಂದು ರಕ್ತದಾನ ಮಾಡಿದರು. ಜಿಲ್ಲೆಯ ಎಲ್ಲ ತಾಲೂಕು ಸೇರಿದಂತೆ ಒಟ್ಟು 23 ಸ್ಥಳಗಳಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ವಿಶೇಷ ಚೇತನರು, ಪೌರಕಾರ್ಮಿಕರು, ವಿಬಿ-ಜಿ ರಾಮ್ ಜಿ ಯೋಜನೆಯಡಿ ಕೆಲಸ ಮಾಡುವ ಕೂಲಿಕಾರರು, ರೈತರು, …
Read More »ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಳಗಾವಿಯಲ್ಲಿ ವಿಶೇಷ ಕಾರ್ಯಕ್ರಮ
ಬೆಳಗಾವಿ: ಬೆಳಗಾವಿ ಆರ್‌ಪಿಡಿ ಕಾಲೇಜು ಎದುರಿನ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಧಾರ್ಮಿಕ ಹಾಗೂ ಸಾಂಸ್ಕೃತಿಕ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಸೆಪ್ಟೆಂಬರ್ 4 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಪವಾಸ ಆಚರಣೆ ನಡೆಯಲಿದೆ. ಬೆಳಗ್ಗೆ 8 ಕ್ಕೆ ಶ್ರೀ ಕೃಷ್ಣ ದೇವರಿಗೆ ಲಕ್ಷ ತುಳಸಿ ಅರ್ಚನೆ, 11:30ಕ್ಕೆ ಲಕ್ಷ ತುಳಸಿ ಅರ್ಚನೆ ಸಮಾಪ್ತಿ ಮುಂತಾದ ಕಾರ್ಯಕ್ರಮ ನಡೆಯಲಿವೆ. 12 ಗಂಟೆಯಿಂದ ವಿವಿಧ ಭಜನಾ ಮಂಡಳಿಗಳಿಂದ ಹರಿ …
Read More »ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಆರೋಪ ಮಾಡಿದ ಪೋಷಕರು
ದಾವಣಗೆರೆ: ಇಲ್ಲಿನ ಕಾಲೇಜೊಂದರ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹೂವಿನ ಹಡಗಲಿ ತಾಲೂಕಿನ ಕುರುವತ್ತಿ ಗ್ರಾಮದ ರಂಜಿತಾ (17) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ದಾವಣಗೆರೆಯ ಟೀಮ್ ಅಕಾಡೆಮಿಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಕಳೆದ ಒಂದುವರೆ ವರ್ಷದಿಂದ ಇಲ್ಲೇ ವಿದ್ಯಾಭ್ಯಾಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಸೆ.2ರ ರಾತ್ರಿ ಹಾಸ್ಟೆಲ್‌ನ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಪೋಷಕರು ಅಕಾಡೆಮಿ ವಿರುದ್ಧ ಹೊಡೆದು ಕೊಲೆ …
Read More »ಜಾಗಿಂಗ್ ಮಾಡ್ತಿದ್ದ ಮಹಿಳೆಯರ ವಿಡಿಯೋ ಮಾಡಿ ತಗ್ಲಾಕೊಂಡ ಕಾಮುಕ ಯುವಕ; ಸ್ಥಳೀಯರಿಂದ ತರಾಟೆ
ಬೆಂಗಳೂರು: ಬೆಳ್ಳಂಬೆಳಗ್ಗೆ ಜಾಗಿಂಗ್ ಮಾಡುತ್ತಿದ್ದ ಮಹಿಳೆಯರ ವಿಡಿಯೋ ಮಾಡಿ ಯುವಕನೊಬ್ಬ ಸಿಕ್ಕಿಬಿದ್ದಿರುವ ಘಟನೆ ಹೆಚ್.ಎಸ್.ಆರ್ ಬಡಾವಣೆಯ ಅರಗ ಕೆರೆ ಬಳಿ ನಡೆದಿದೆ. ಸರ್ಜಾಪುರದಲ್ಲಿ ವಾಸವಿರುವ ಗೋಲ್ಡನ್ ಕುಮಾರ್ ಎಂಬಾತ ಈ ಕೃತ್ಯವೆಸಗಿರುವುದು ಬೆಳಕಿಗೆ ಬಂದಿದೆ. ಕದ್ದು ಮುಚ್ಚಿ ಮಹಿಳೆಯರ ವಿಡಿಯೋ ಮಾಡುತ್ತಿದ್ದ ಯುವಕನನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ನಗರದ ಅರಗ ಕೆರೆ ಬಳಿ ಎಂದಿನಂತೆ ಮಹಿಳೆಯೊಬ್ಬರು ಜಾಗಿಂಗ್‌ಗೆ ಬಂದಿದ್ದರು. ಈ ವೇಳೆ ಯುವಕ ಆಕೆಯ ವಿಡಿಯೋ ರೆಕಾರ್ಡ್ ಮಾಡುವಾಗ ರೆಡ್‌ಹ್ಯಾಂಡ್ …
Read More »ಒಳಹರಿವಿಗಿಂತ 3 ಪಟ್ಟು ಅಧಿಕ ನೀರು ತಮಿಳುನಾಡಿಗೆ – ಕೆಆರ್‌ಎಸ್ ಡ್ಯಾಂ ಮಟ್ಟ 108 ಅಡಿಗೆ ಕುಸಿತ
ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಹೊರಹರಿವಿನ ಪ್ರಮಾಣ ದಿನೇ ದಿನೇ ಏರಿಕೆಯಾಗುತ್ತಿದ್ದು, ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ಕೆಆರ್‌ಎಸ್ ಡ್ಯಾಂನಿಂದ ನೀರು ಹರಿಸಲಾಗುತ್ತಿದೆ. ಇತ್ತ ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಕುಸಿದ ಪರಿಣಾಮ ನೀರಿನ ಮಟ್ಟದಲ್ಲಿ ಇಳಿಕೆ ಕಂಡುಬಂದಿದೆ. ಎರಡು ದಿನಗಳ ಹಿಂದೆ 7,697 ಕ್ಯೂಸೆಕ್ ಇದ್ದ ಹೊರಹರಿವು, ನಿನ್ನೆ 8,544 ಕ್ಯೂಸೆಕ್‌ಗೆ ಹೆಚ್ಚಳವಾಗಿತ್ತು. ಇಂದು ಹೊರಹರಿವಿನ ಪ್ರಮಾಣ ಬರೋಬ್ಬರಿ 9,253 ಕ್ಯೂಸೆಕ್‌ಗೆ ಏರಿಕೆಯಾಗಿದೆ. ಜಲಾನಯನ ಪ್ರದೇಶಗಳಲ್ಲಿ ಮಳೆ ತಗ್ಗಿದ ಹಿನ್ನೆಲೆಯಲ್ಲಿ ಡ್ಯಾಂಗೆ ನೀರಿನ …
Read More »ಕಲಬುರಗಿಯಲ್ಲಿ ಭೀಕರ ಅಪಘಾತ – ತಾಯಿಯೊಂದಿಗೆ 3 ತಿಂಗಳ ಮಗು ಸ್ಥಳದಲ್ಲೇ ಸಾವು
ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಹೊರವಲಯದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿಯೊಂದಿಗೆ ಮೂರು ತಿಂಗಳ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಆಟೋ – ಲಾರಿ ಮಧ್ಯೆ ಭೀಕರ ಅಪಘಾತ ನಡೆದು ಶರಣಮ್ಮ (30) ಎಂಬ ಮಹಿಳೆ ಮತ್ತು ಆಕೆಯ 3 ತಿಂಗಳ ಮಗು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ವಾಡಿ ಪಟ್ಟಣಕ್ಕೆ ಆಗಮಿಸುವ ವೇಳೆ ಆಟೋಗೆ ಲಾರಿ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ತಾಯಿ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಅತ್ತೆ …
Read More »ಮದ್ರಾಸ್ ಹೈಕೋರ್ಟ್‌ನಲ್ಲಿ ಸ್ಟಾಲಿನ್‌ಗೆ ಮುಖಭಂಗ
ಚೆನ್ನೈ: ತಾನು ಪ್ರತಿನಿಧಿಸುವ ಕೊಳತ್ತೂರು ಕ್ಷೇತ್ರದಲ್ಲಿ ಟಿವಿಕೆ ಶಾಸಕ ವಿ.ಎಸ್.ಬಾಬು ಅವರ ಗೆಲುವನ್ನು ಅಸಿಂಧುಗೊಳಿಸುವಂತೆ ಕೋರಿ ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್.ಎ. ಧರ್ಮಾಧಿಕಾರಿ ಮತ್ತು ನ್ಯಾಯಮೂರ್ತಿ ಜಿ. ಅರುಳ್ ಮುರುಗನ್ ಅವರಿದ್ದ ಪೀಠವು ಸ್ಟಾಲಿನ್ ಅವರ ಅರ್ಜಿಯನ್ನು ವಿಚಾರಣೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿತು. ಈಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಾಬು ಅವರು ಸ್ಟಾಲಿನ್ ಅವರನ್ನು 8,795 …
Read More »ದುನಿಯಾ ವಿಜಯ್ – ನಾಗರತ್ನ ವಿಚ್ಛೇದನಕ್ಕೆ ಹೈಕೋರ್ಟ್ ಅಸ್ತು; 2 ಕೋಟಿ ಜೀವನಾಂಶಕ್ಕೆ ಆದೇಶ
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ಅವರ ಮೊದಲ ಪತ್ನಿ ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ಕಾನೂನಾತ್ಮಕವಾಗಿ ತೆರೆಬಿದ್ದಿದೆ. ಹಲವು ವರ್ಷಗಳಿಂದ ಕೋರ್ಟ್ ಅಂಗಳದಲ್ಲಿದ್ದ ವಿಚ್ಛೇದನ ಪ್ರಕರಣವನ್ನ ಇತ್ಯರ್ಥಪಡಿಸಿರುವ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ, ದಂಪತಿಗೆ ಅಧಿಕೃತವಾಗಿ ವಿಚ್ಛೇದನ ಮಂಜೂರು ಮಾಡಿದೆ. ಕ್ರೌರ್ಯದ ಆಧಾರದ ಮೇಲೆ ನಟ ದುನಿಯಾ ವಿಜಯ್ ಹಾಗೂ ಪತ್ನಿ ನಾಗರತ್ನಾ ಅವರಿಗೆ ನ್ಯಾ. ಡಿಕೆ ಸಿಂಗ್ ಹಾಗು ಶಾಂತಿಭೂಷಣ್ ಅವರ …
Read More »
Laxmi News 24×7