Breaking News

ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ’ : ಹೆಚ್. ಡಿ. ಕುಮಾರಸ್ವಾಮಿ :

ಬೆಂಗಳೂರು : ಇಂದು ದೇಶಾದ್ಯಂತ ಹಿಂದಿ ದಿವಸ್ ಆಚರಣೆ ಮಾಡಲಾಗುತ್ತಿದ್ದು, ‘ನಮ್ಮ ನೆಲದಲ್ಲಿ ನಮ್ಮ ಕನ್ನಡ ಭಾಷೆಯೇ ಮೊದಲು. ಹಿಂದಿ ದಿವಸ ಆಚರಣೆ ಅಸಮರ್ಪಕ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಭಾರತ ಒಕ್ಕೂಟರಾಷ್ಟ್ರ. ಬಹುಸಂಸ್ಕೃತಿ, ಬಹುಭಾಷೆ, ಬಹುಜನರ ಆಗರ. ಅನೇಕ ಭಾಷೆಗಳ ತೊಟ್ಟಿಲು. ಆದರೆ ಒಂದೇ ಭಾಷೆಯನ್ನು ವೈಭವೀಕರಿಸುವ, ಹೇರುವ ಹುಂಬ ಪ್ರಯತ್ನವೇಕೆ ? ಎಂದು ಪ್ರಶ್ನಿಸಿದ್ದಾರೆ. ಹಿಂದಿ …

Read More »

ಸಿ.ಎ. ಪರೀಕ್ಷೆಯಲ್ಲಿ ಮಂಗಳೂರಿನ ಯುವತಿ ದೇಶಕ್ಕೆ ಟಾಪರ್

ಮಂಗಳೂರು: ಸಿ.ಎ. ಪರೀಕ್ಷೆಯಲ್ಲಿ ಮಂಗಳೂರಿನ ರೂತ್ ಕ್ಲಾರಾ ಡಿಸಿಲ್ವಾ ದೇಶಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಇನ್ ಸ್ಟಿಟ್ಯೂಟ್ ವತಿಯಿಂದ 2021ರ ಸಾಲಿನ ಸಿಎ ಅಂತಿಮ ಪರೀಕ್ಷೆಯನ್ನು ನಡೆಸಲಾಗಿತ್ತು. ರಾಷ್ಟ್ರ ಮಟ್ಟದ ಈ ಸಿಎ ಪರೀಕ್ಷೆಯಲ್ಲಿ ರೂತ್ ಕ್ಲಾರಾ ಡಿಸಿಲ್ವಾ ಮೊದಲ ರ್ಯಾಂಕ್ ಪಡೆದಿದ್ದಾರೆ. ಪದವಿ ಶಿಕ್ಷಣದ ಜೊತೆಯಲ್ಲೇ ಸಿಎ ವ್ಯಾಸಂಗ ನಡೆಸಿದ್ದ ರೂತ್, ಗ್ರೂಪ್ ಒನ್ ಹಾಗೂ ಗ್ರೂಪ್ ಟು ಹೆಸರಿನ ಎರಡು ಪರೀಕ್ಷೆಗಳನ್ನೂ ಏಕಕಾಲದಲ್ಲಿ …

Read More »

ಹಿಂದಿ ಹೇರಿಕೆ ಖಂಡಿಸಿ ಟ್ವಿಟರ್ ಅಭಿಯಾನ, ಕನ್ನಡಿಗರು ಕೈ ಜೋಡಿಸಲು ಕರ್ನಾಟಕ ರಕ್ಷಣಾ ವೇದಿಕೆ ಮನವಿ

ಬೆಂಗಳೂರು: ಸೆಪ್ಟೆಂಬರ್ 14ರಂದು ದೇಶಾದ್ಯಂತ ಹಿಂದಿ ದಿವಸ್(Hindi Diwas) ಆಚರಣೆ ಮಾಡಲಾಗುತ್ತಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಟ್ವಿಟರ್ನಲ್ಲಿ ದೇಶದ ಜನತೆಗೆ ಹಿಂದಿ ದಿನದ ಶುಭಾಶಯ ಕೋರಿದ್ದಾರೆ. ಆದ್ರೆ ಹಿಂದಿ ದಿವಸ್ ಹಾಗೂ ಹಿಂದಿ ಹೇರಿಕೆ ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ದುರುದ್ದೇಶ ಖಂಡಿಸಿ ಕರ್ನಾಟಕ …

Read More »

ಅನಧಿಕೃತ ಪ್ರಾರ್ಥನಾ ಮಂದಿರಗಳ ತೆರವು; 80 ವರ್ಷಕ್ಕೂ ಹಿಂದಿನ ಆಂಜನೇಯ ದೇವಸ್ಥಾನದ ಮೇಲೂ ಕಣ್ಣು

ಬೆಳಗಾವಿ: ಅನಧಿಕೃತ ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸುವ ವಿಚಾರವಾಗಿ ರಾಜ್ಯದಲ್ಲಿ ಸದ್ಯ ಚರ್ಚೆ ಮತ್ತು ಗೊಂದಲ ಸೃಷ್ಟಿಯಾಗಿದೆ. ಅದರಂತೆ ಹಳೆ ಬೆಳಗಾವಿ ಹೊರ ವಲಯದಲ್ಲಿರುವ ಎಂಬತ್ತು ವರ್ಷಕ್ಕೂ ಹಿಂದಿನ ಆಂಜನೇಯ ದೇವಸ್ಥಾನವನ್ನು ಸುಪ್ರೀಂಕೋರ್ಟ್ ತೆರವುಗೊಳಿಸಲು ತಿಳಿಸಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಡಳಿತದ ಸಂದರ್ಭದಲ್ಲಿ ದೇವಸ್ಥಾನ ತೆರವು ಮಾಡಲು ಆದೇಶ ನೀಡಲಾಗಿತ್ತು. ಆದರೆ ಆದೇಶವಿದ್ದರೂ ಹೋರಾಟ ಮಾಡಿ ಸ್ಥಳೀಯರು ಮತ್ತು ಹಿಂದೂಪರ ಕಾರ್ಯಕರ್ತರು ಉಳಿಸಿಕೊಂಡಿದ್ದರು. ಎಂಟು ವರ್ಷದ ಹಿಂದೆ …

Read More »

ಮಹಿಳಾ ಪೇದೆ ಜೊತೆ ಸ್ವಿಮ್ಮಿಂಗ್ ಪೂಲಲ್ಲಿ ಹಿರಿಯ ಪೊಲೀಸ್ ಅಧಿಕಾರಿಯ ಮಿಲನ…..!

ಜೈಪುರ: 6 ವರ್ಷದ ಮಗುವಿನ ಮುಂದೆಯೇ ಹಿರಿಯ ಪೊಲೀಸ್ ಅಧಿಕಾರಿ ಜೊತೆ ಸ್ವಿಮ್ಮಿಂಗ್ ಪೂಲಲ್ಲಿ ಲೈಂಗಿಕ ಸಂಪರ್ಕ ನಡೆಸಿದ ಮಹಿಳಾ ಕಾನ್‍ಸ್ಟೇಬಲನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಮಧ್ಯಾಹ್ನ ಮಹಿಳಾ ಪೇದೆಯನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದು, ಸೆಪ್ಟೆಂಬರ್ 17ರವರೆಗೆ ಆಕೆಯನ್ನು ಪೊಲೀಸ್ ವಶಕ್ಕೆ ನೀಡಿದ್ದಾರೆ. ಮಹಿಳಾ ಪೇದೆ ಜೊತೆ ದೈಹಿಕ ಸಂಪರ್ಕ ನಡೆಸಿದ್ದ ಹಿರಿಯ ಅಧಿಕಾರಿಯನ್ನು ಇದಕ್ಕೂ ಮುನ್ನವೇ ಪೊಲೀಸರು ಬಂಧಿಸಿದ್ದಾರೆ. ಇಬ್ಬರ ಬಂಧನ ಬೆನ್ನಲ್ಲೇ ವೀಡಿಯೋದಲ್ಲಿದ್ದ ಅಜ್ಮಲ್ …

Read More »

ದ್ವಿಚಕ್ರವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಯೋರ್ವನನ್ನು ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ದ್ವಿಚಕ್ರವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಯೋರ್ವನನ್ನು ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು 25 ವರ್ಷದ ಮೊಹ್ಮದಶಾಯಿದ ಅಬ್ದುಲಹಮೀದ ಮುಲ್ಲಾ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದ ಆರೋಪಿ ಬೆಳಗಾವಿ ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ. ಬಂಧಿತನಿಂದ ನಾಲ್ಕು ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಎಪಿಎಂಸಿ ಠಾಣೆ ಇನ್ಸ್ ಪೆಕ್ಟರ್ ಮಂಜುನಾಥ ಹಿರೇಮಠ, ಪಿಎಸ್ ಐ ಮಂಜುನಾಥ ಭಜಂತ್ರಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು …

Read More »

ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದೆ ಜ್ವರ, ಕೆಮ್ಮು, ನೆಗಡಿ ಸಮಸ್ಯೆ; ಮಕ್ಕಳ ತಜ್ಞರ ಜೊತೆ ಸಭೆ

ಮಹಾಮಾರಿ ಕೊರೊನಾ ಮೂರನೇ ಅಲೆ ಭೀತಿ ನಡುವೆ ಹೇಗೋ ಶಾಲೆಗಳು ಆರಂಭವಾಗಿವೆ. ಮಕ್ಕಳೆಲ್ಲ ಮತ್ತೆ ಹೊರಗಡೆ ಕಾಲಿಡ್ತಿವೆ. ಆದ್ರೆ ಈಗ ಬೆಂಗಳೂರಿನ ಬಹುತೇಕ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಸಮಸ್ಯೆ ಕಂಡು ಬರುತ್ತಿದೆ. ಆಸ್ಪತ್ರೆಗೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ. ಸದ್ಯ ಜ್ವರ, ಕೆಮ್ಮು, ನೆಗಡಿ ಇರುವ ಮಕ್ಕಳಿಗೆ ಕೊರೊನಾ ಟೆಸ್ಟ್ ಮಾಡಿಸಿದರೆ ಕೊರೊನಾ ಲಕ್ಷಣಗಳಿದ್ದರೂ ಮಕ್ಕಳಿಗೆ ಕೊವಿಡ್ ನೆಗೆಟಿವ್ ವರದಿ ಬರುತ್ತಿದೆ. ಕೆಲವು ಮಕ್ಕಳ ರಕ್ತ ಪರೀಕ್ಷೆ ನಡೆಸಿದಾಗ …

Read More »

ಬೆಂಗಳೂರಿನಲ್ಲಿ ಡ್ರಗ್ಸ್​ ಮಾರುತ್ತಿದ್ದ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸ

ಬೆಂಗಳೂರು: ಬೆಂಗಳೂರಿನಲ್ಲಿ ಎಂಡಿಎಂಎ, ಎಕ್ಸ್‌ಟಸಿ ಮಾತ್ರೆಗಳನ್ನು ಡೀಲಿಂಗ್ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ಬಂಧನಕ್ಕೆ ಒಳಪಡಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ವಿದೇಶಿ ಪ್ರಜೆಗಳಾಗಿದ್ದು, ಓರ್ವ ನೆರೆಯ ಕೇರಳ ರಾಜ್ಯದವನಾಗಿದ್ದಾನೆ. ಆರೋಪಿಗಳು ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ಡ್ರಗ್ಸ್ ಮಾರಾಟ ಮಾಡಲು ಯತ್ನಿಸುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ, ಎಕ್ಸ್‌ಟಸಿ ಮಾತ್ರೆ ಜಪ್ತಿ ಮಾಡಲಾಗಿದ್ದು, ಆ …

Read More »

ಕರ್ನಾಟಕ ಟಿಇಟಿ ಫಲಿತಾಂಶ ಬಿಡುಗಡೆ: 45,074 ಅಭ್ಯರ್ಥಿಗಳಿಗೆ ಅರ್ಹತೆ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು, ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಕೆಎಆರ್‌ಟಿಇಟಿ-2021)ಯ ಫಲಿತಾಂಶ ಬಿಡುಗಡೆ ಮಾಡಿದೆ. ವಿವಿಧ ತರಗತಿಗಳ ಬೋಧಕರಿಗೆ ನಡೆಸಲಾಗುವ ಪತ್ರಿಕೆ 1 ಹಾಗೂ 2 ರಲ್ಲಿ ಒಟ್ಟಾರೆಯಾಗಿ 2,31,886 ಅಭ್ಯರ್ಥಿಗಳು ಹಾಜರಾಗಿದ್ದರು. ಈ ಪೈಕಿ 45,074 ಜನರು ಅರ್ಹತೆ ಪಡೆದಿದ್ದು, ಶೇ.19 ಉತ್ತೀರ್ಣತೆ ದಾಖಲಾಗಿದೆ. ಕಳೆದ ವರ್ಷ ಪರೀಕ್ಷೆಗೆ ಹಾಜರಾಗಿದ್ದ 2,02,991 ಅಭ್ಯರ್ಥಿಗಳ ಪೈಕಿ 7,980 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದರು, ಶೇ.3.93 ಫಲಿತಾಂಶ ದಾಖಲಾಗಿತ್ತು. ಈ ಬಾರಿ ಶೇ.15 ರಷ್ಟು …

Read More »

ದಸರಾ ಬಳಿಕ ಪ್ರಾಥಮಿಕ ತರಗತಿ ಆರಂಭಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ಪಿಯುಸಿ, ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆ (6ರಿಂದ 12ನೇ ತರಗತಿ) ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಸುಸೂತ್ರವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೂ ದಸರಾ ಬಳಿಕ ಭೌತಿಕ ತರಗತಿ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧತೆ ಆರಂಭಿಸಿದೆ. ಸರಕಾರ ಹಾಗೂ ಕೊರೊನಾ ತಾಂತ್ರಿಕ ತಜ್ಞರ ಸಮಿತಿಯ ಅಭಿಪ್ರಾಯ ಹಾಗೂ ಒಪ್ಪಿಗೆ ಪಡೆದೇ ಭೌತಿಕ ತರಗತಿಗಳನ್ನು ಆರಂಭಿಸಬೇಕು. ಈಗಾಗಲೇ ನಡೆಯುತ್ತಿರುವ ಭೌತಿಕ ತರಗತಿಗಳಿಗೆ ವಿದ್ಯಾರ್ಥಿಗಳು, ಪಾಲಕ, …

Read More »