Breaking News

ಹಂಸಲೇಖ, ನಾನು ಗುಡ್ ಫ್ರೆಂಡ್ಸ್ ಅಲ್ಲವೇ ಅಲ್ಲ’ ಎಂದು ಹೇಳಿ ಅಚ್ಚರಿ ಮೂಡಿಸಿದ ರವಿಚಂದ್ರನ್

ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಮತ್ತು ಖ್ಯಾತ ಸಂಗೀತ ಸಂಯೋಜಕ ಹಂಸಲೇಖ ಅವರ ಸಂಬಂಧದ ಕುರಿತು ಟಿವಿ9ನೊಂದಿಗೆ ಮಾತನಾಡಿದ್ದಾರೆ. ಈ ವೇಳೆ ನಾವೀರ್ವರೂ ಉತ್ತಮ ಗೆಳೆಯರೇ ಅಲ್ಲ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ. ಹಾಗಾದರೆ ಅವರೀರ್ವರ ಸಂಬಂಧ ಹೇಗಿತ್ತು? ವಿಡಿಯೊ ನೋಡಿ ಕನ್ನಡ ಬೆಳ್ಳಿತೆರೆಯಲ್ಲಿ ತಮ್ಮ ಸೂಪರ್ ಹಿಟ್ ಕಾಂಬಿನೇಷನ್​ನಿಂದ ಗಮನ ಸೆಳೆದ ಜೋಡಿಗಳಲ್ಲಿ ರವಿಚಂದ್ರನ್ ಹಾಗೂ ಹಂಸಲೇಖ ಪ್ರಮುಖರು. ದೃಶ್ಯ 2 ಚಿತ್ರದ ಬಿಡುಗಡೆಯ ಸಂದರ್ಭದಲ್ಲಿಮಾತನಾಡಿರುವ ರವಿಚಂದ್ರನ್ ಹಳೆಯ ದಿನಗಳನ್ನು …

Read More »

ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಮೇಯರ್, ಉಪಮೇಯರ್ ಸ್ಥಾನ ಬಿಜೆಪಿಗೆ: ಜಗದೀಶ್ ಶೆಟ್ಟರ್ ವಿಶ್ವಾಸ

ಹುಬ್ಬಳ್ಳಿ, ಸೆ. 12: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಮೇಯರ್ ಹಾಗೂ ಉಪಮೇಯರ್ ಗಾದಿಯನ್ನು ಬಿಜೆಪಿಯವರೇ ಅಲಂಕರಿಸಲಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ರವಿವಾರ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಎರಡು ಬಾರಿ ಆಡಳಿತ ನಡೆಸಿದೆ. ಈ ಬಾರಿಯೂ ಜನರ ಆಶೀರ್ವಾದದಿಂದಾಗಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದರು. ನಮ್ಮ ಪಕ್ಷದ ಜನಪ್ರತಿನಿಧಿಗಳು ತಮ್ಮ ವಿಶೇಷ ಮತ ಹಾಕುವುದರಿಂದ ಬಿಜೆಪಿ 45 …

Read More »

ಬಿಜೆಪಿ ಹಣದಿಂದ ಅಧಿಕಾರಕ್ಕೆ ಬಂದಿರುವುದಕ್ಕೆ ಶ್ರೀಮಂತ್‌ ಪಾಟೀಲ್‌ ಹೇಳಿಕೆ ಸಾಕ್ಷಿ: ದಿನೇಶ್‌

ಬೆಂಗಳೂರು: ಕಾಗವಾಡ ಶಾಸಕ ಶ್ರೀಮಂತ್‌ ಪಾಟೀಲ್‌ ಬಿಜೆಪಿ ಸೇರಲು ಹಣದ ಆಫ‌ರ್‌ ನೀಡಿದ್ದ ಬಗ್ಗೆ ಸ್ವತಃ ಒಪ್ಪಿಕೊಂಡಿದ್ದಾರೆ. ಶಾಸಕರನ್ನು ಖರೀದಿಸಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದಕ್ಕೆ ಇದು ಸಾಕ್ಷಿ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, 17 ಶಾಸಕರನ್ನು ಬಿಜೆಪಿ ಅಕ್ರಮ ದುಡ್ಡಿನಿಂದ ಖರೀದಿಸಿದೆ ಎಂಬುದು ಕೊನೆಗೂ ನಿಜವಾಗಿದೆ. ಶಾಸಕರ ಖರೀದಿಸಿ ಅಧಿಕಾರಕ್ಕೆ ಬಂದಿರುವ ಈ ಸರ್ಕಾರ ಅಕ್ರಮ ಸಂತಾನ. ಶಾಸಕರ ಖರೀದಿಗೆ …

Read More »

ಕರ್ನಾಟಕದಲ್ಲಿ ಮೂರು ದಿನ ಮಳೆ; ಯೆಲ್ಲೋ ಅಲರ್ಟ್

ಬೆಂಗಳೂರು, ಸೆಪ್ಟೆಂಬರ್ 13; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಮೂರುದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು, ಕರಾವಳಿ, ಕೊಡಗು ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಜಲಾಶಯಗಳಿಗೆ ಒಳಹರಿವು ಸಹ ಹೆಚ್ಚಿದೆ. ಇನ್ನೂ ಮೂರು ದಿನಗಳ ಕಾಲ …

Read More »

ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೊಮ್ಮಾಯಿ ಅವರಿಗೆ ಇದು ಮೊದಲ ಅಧಿವೇಶನ

ಬೆಂಗಳೂರು: ಇಂದಿನಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೊಮ್ಮಾಯಿ ಅವರಿಗೆ ಇದು ಮೊದಲ ಅಧಿವೇಶನವಾಗಿದೆ.   ಅಧಿವೇಶನದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿಳಂಬ, ವರ್ಗಾವಣೆ ದಂಧೆ ಕುರಿತು ಪ್ರಸ್ತಾವಿಸುವುದಾಗಿ ವಿಪಕ್ಷ ಕಾಂಗ್ರೆಸ್‌ ಘೋಷಿಸಿದ್ದು, ಪ್ರತಿಪಕ್ಷ ಹಾಗೂ ಆಡಳಿತ ಪಕ್ಷಗಳ ಮಧ್ಯೆ ವಾಕ್ಸಮರ, ಆರೋಪ – ಪ್ರತ್ಯಾರೋಪ, ಬಿಸಿ ಬಿಸಿ ಚರ್ಚೆಗೆ ವೇದಿಕೆಯಾಗಲಿದೆ.   6 …

Read More »

ಇಂದಿನಿಂದ ವಿಧಾನಮಂಡಲ ಅಧಿವೇಶನ: ಎತ್ತಿನ ಗಾಡಿಯಲ್ಲಿ ಕಲಾಪಕ್ಕೆ ಆಗಮಿಸಲಿರುವ ಕಾಂಗ್ರೆಸ್ ನಾಯಕರು!

ಬೆಂಗಳೂರು: 10 ದಿನಗಳ ವಿಧಾನಮಂಡಲ ಅಧಿವೇಶನ ಸೋಮವಾರ ಆರಂಭವಾಗುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಮುಖ್ಯವಾಗಿ ಪ್ರತಿಪಕ್ಷ ಕಾಂಗ್ರೆಸ್ ಸಜ್ಜುಗೊಳ್ಳುತ್ತಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವನ್ನು ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೋವಿಡ್ ನಿರ್ವಹಣೆ, ಲಸಿಕೆ ಪೂರೈಕೆಯಲ್ಲಿ ಕೊರತೆ, ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಇಕ್ಕಟ್ಟಿಗೆ ಸಿಲುಕಿಸಲು, ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿವೆ. ಇನ್ನೊಂದೆಡೆ ಸರ್ಕಾರ, ಈ ಕಲಾಪದಲ್ಲಿ 18 ಮಸೂದೆಗಳ ಅಂಗೀಕಾರಕ್ಕೆ ಬಯಸುತ್ತಿದೆ. ಕರ್ನಾಟಕ ಪೊಲೀಸ್ …

Read More »

ಅಡುಗೆ ಎಣ್ಣೆ ಸುಂಕ ಇಳಿಕೆ:4ರೂಪಾಯಿ ಇಳಿಸಿದ್ದೇ ಕೇಂದ್ರದ ಮಹಾನ್ ಸಾಧನೆ: ಗುಂಡೂರಾವ್ ವ್ಯಂಗ್ಯ

ಬೆಂಗಳೂರು : ಹಬ್ಬಗಳ ಋತುವಿನಲ್ಲಿ ಅಡುಗೆ ಎಣ್ಣೆಗಳ ಬೆಲೆಯನ್ನು ನಿಯಂತ್ರಣದಲ್ಲಿ ಇರಿಸುವುದಕ್ಕಾಗಿ ಕೇಂದ್ರ ಸರಕಾರವು ತಾಳೆ, ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆಗಳ ಆಮದು ಸುಂಕವನ್ನು ಶೇ. 2.11ರಷ್ಟು ಕಡಿಮೆ ಮಾಡಿದ ಬೆನ್ನಿಗೆ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್, ಮೋದಿ ಸರ್ಕಾರ ಹಬ್ಬಕ್ಕೆ ಜನಸಾಮಾನ್ಯರಿಗೆ ಕೊಟ್ಟ ಬಹುದೊಡ್ಡ ಕೊಡುಗೆಯಿದು ಎಂದು ಹೇಳಿದ್ದಾರೆ. ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಕೇಂದ್ರ ಸರ್ಕಾರವನ್ನು ವ್ಯಂಗ್ಯ ಧ್ವನಿಯಲ್ಲಿ ಟೀಕೆ ಮಾಡಿದ ಗುಂಡೂರಾವ್, ಕೇಂದ್ರ ಸರ್ಕಾರ ಅಡುಗೆ …

Read More »

ಕುಟುಂಬ ರಾಜಕಾರಣಕ್ಕೆ ಅಡಿಪಾಯ ಹಾಕಿದ್ದೇ ಇಂದಿರಾ ಗಾಂಧಿ : ನಟ ಚೇತನ್

ಬೆಂಗಳೂರು: ಮೊದಲು ಕಾಂಗ್ರೆಸ್‍ನ್ನು ಸೋಲಿಸಬೇಕೆಂದು ಹೇಳಿದ್ದ ನಟ ಹಾಗೂ ಹೋರಾಟಗಾರ ಚೇತನ್ ಕುಮಾರ್, ಕಾಂಗ್ರೆಸ್ ನ ಕುಟುಂಬ ರಾಜಕಾರಣಕ್ಕೆ ಅಡಿಪಾಯ ಹಾಕಿದ್ದೇ ಇಂದಿರಾ ಗಾಂಧಿ ಎಂದು ಟೀಕಿಸಿದ್ದಾರೆ. ಕುಟುಂಬ ರಾಜಕಾರಣದ ವಿಚಾರವನ್ನಿಟ್ಟುಕೊಂಡು, ದಿವಂಗತ ಇಂದಿರಾಗಾಂಧಿ ಅವರ ಬಗ್ಗೆ ಟ್ವೀಟ್ ಮಾಡಿರುವ ಚೇತನ್, ಕಾಂಗ್ರೆಸ್ ನ ಕುಟುಂಬ ರಾಜಕಾರಣಕ್ಕೆ ಮತ್ತು ಸ್ವಜನ ಪಕ್ಷಪಾತಕ್ಕೆ ಅಡಿಪಾಯ ಹಾಕಿದ್ದೇ ಇಂದಿರಾ ಗಾಂಧಿ ಎಂದು ಆರೋಪಿಸಿದ್ದಾರೆ. 1959 ರಲ್ಲಿ ಜವಾಹರಲಾಲ್ ನೆಹರೂ ಅವರು ಪ್ರಧಾನ ಮಂತ್ರಿಯಾಗಿದ್ದಾಗ ಅವರ …

Read More »

ಸೂತ್ರಧಾರಿ ಪಟ್ಟ ಅಳಿಯುತ್ತದೆ, ಸೂತ್ರಧಾರಿ ಸರಕಾರವನ್ನು ನಡೆಸುತ್ತಾನೆ: ಕೋಡಿಶ್ರೀಗಳ ಭವಿಷ್ಯ

ಕಳೆದ ಒಂದೂವರೆ ತಿಂಗಳಲ್ಲಿ ಕೋಡಿಮಠದ ಶ್ರೀಗಳು ಮತ್ತೊಮ್ಮೆ ಭವಿಷ್ಯವನ್ನು ನುಡಿದಿದ್ದಾರೆ. ಸಾಮಾನ್ಯವಾಗಿ, ಹಿಂದೂಗಳ ಹಬ್ಬದ ಸಂದರ್ಭಗಳಲ್ಲಿ ಭವಿಷ್ಯ ನುಡಿಯುವ ಶ್ರೀಗಳು, ಈಗ ತಾವು ಭಾಗವಹಿಸುವ ಧಾರ್ಮಿಕ ಕಾರ್ಯಕ್ರಮದ ನಂತರ ಕೂಡಾ ಭವಿಷ್ಯವನ್ನು ನುಡಿಯಲಾರಂಭಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಕಾರದ ಬಗ್ಗೆ ಭವಿಷ್ಯ ನುಡಿದಿರುವ ಕೋಡಿಶ್ರೀಗಳು, ‘ಸೂತ್ರಧಾರಿ ಪಟ್ಟ ಅಳಿಯುತ್ತದೆ’ ಎಂದು ಹೇಳಿದ್ದು, ಒಂದು ತಿಂಗಳ ಹಿಂದೆ ಅವರು ಹೇಳಿದ ಭವಿಷ್ಯಕ್ಕೂ ಈಗ ಹೇಳುತ್ತಿರುವ ಭವಿಷ್ಯಕ್ಕೂ ತಾಳೆಯಾಗುತ್ತಿಲ್ಲ ಎನ್ನುವುದು ಗಮನಿಸಬೇಕಾದ ವಿಚಾರ. …

Read More »

ಸಚಿವರಾದ ಪ್ರಹ್ಲಾದ್ ಜೋಶಿ, ತೋಮರ್ ಗೆ ಗುಜರಾತ್ ನೂತನ ಮುಖ್ಯಮಂತ್ರಿ ಆಯ್ಕೆ ಹೊಣೆ?

ಅಹ್ಮದಾಬಾದ್: ದಿಢೀರ್ ಬೆಳವಣಿಗೆಯಲ್ಲಿ ವಿಜಯ್ ರೂಪಾಣಿ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಗುಜರಾತ್ ನ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಭಾರತೀಯ ಜನತಾ ಪಕ್ಷ ಇಬ್ಬರು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ನರೇಂದ್ರ ಸಿಂಗ್ ತೋಮರ್ ಅವರನ್ನು ಭಾನುವಾರ (ಸೆ.12) ಕಳುಹಿಸುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ. ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ದಿಢೀರ್ ರಾಜೀನಾಮೆ ನೀಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿತ್ತು. ರಾಜ್ಯಪಾಲರಿಗೆ ರಾಜೀನಾಮೆ …

Read More »