ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ಬಿಡುಗಡೆಯಾಗುತ್ತಿದ್ದಂತೆ ಸೋಶಿಯಲ್ ಮೀಡಿಯಾ ಸೇರಿದಂತೆ ತಮ್ಮ ದಿನ ನಿತ್ಯದ ಚಟುವಟಿಕೆಯಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಇದೀಗ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಆದರೆ ರಾಜ್ ಕುಂದ್ರಾ ಕಾಣಿಸದೇ ಇರುವುದರ ಕುರಿತಾಗಿ ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ. ಈ ವೀಕೆಂಡ್‌ನಲ್ಲಿ ಶಿಲ್ಪಾ ಶೆಟ್ಟಿ ತಮ್ಮ ಮಕ್ಕಳಾದ ವಿಯಾನ್, ಸಮಿಷಾ ಹಾಗೂ ತಾಯಿ ಸುನಂದಾ ಶೆಟ್ಟಿ ಜೊತೆಯಲ್ಲಿ ಆಲಿಬಾಗ್‍ಗೆ ಹೋಗಿದ್ದಾರೆ. ಶಿಲ್ಪಾ ಶೆಟ್ಟಿ ತೆರಳುವಾಗ ನಗುಮೊಗದಿಂದಲೇ …
Read More »ಚಿಕ್ಕಬಳ್ಳಾಪುರ: ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ
ಚಿಕ್ಕಬಳ್ಳಾಪುರ: ಭಾರೀ ಮಳೆಗೆ ತುಂಬಿ ಹರಿಯುತ್ತಿದ್ದ ರಸ್ತೆ ದಾಟಲು ಹೋಗಿ ಕೊಚ್ಚಿ ಹೋದ ಯುವಕ ಪ್ರಾಣಾಪಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಕಮ್ಮಗುಟ್ಟನಹಳ್ಳಿ ವ್ಯಾಪ್ತಿಯ ನವಿಲುಗುರ್ಕಿಯಲ್ಲಿ ಈ ಘಟನೆ ನಡೆದಿದೆ. ಭಾರೀ ಮಳೆ ಕಾರಣ ರಸ್ತೆ ಮೇಲೆ ರಭಸವಾಗಿ ನೀರು ಹರಿಯುತ್ತಿತ್ತು. ಈ ವೇಳೆ ಬೈಕ್ ಮೂಲಕ ಯುವಕ ರಸ್ತೆ ದಾಟಲು ಮುಂದಾಗಿದ್ದು ಈ ವೇಳೆ ಕೊಚ್ಚಿ ಹೋಗುತ್ತಿದ್ದ ಯುವಕನನ್ನ ಸ್ಥಳೀಯರು ಟ್ರ್ಯಾಕ್ಟರ್ ಮೂಲಕ ರಕ್ಷಣೆ ಮಾಡಿದ್ದಾರೆ. ಮಳೆಗೆ ತುಂಬಿ ಹರಿಯುತ್ತಿದ್ದ ರಸ್ತೆಯಲ್ಲಿ …
Read More »ಮಕ್ಕಳ ಆಟದ ಪಾರ್ಕ್ ಮಳೆ ನೀರು ನಿಂತು ಚಿಕ್ಕ ಕೆರೆಯಂತಾಗಿದೆ.
ಗುಡಿಬಂಡೆ: ಪಟ್ಟಣದ ಹನ್ನೊಂದನೇ ವಾರ್ಡ್‌ನ ಮಕ್ಕಳ ಆಟದ ಪಾರ್ಕ್ ಮಳೆ ನೀರು ನಿಂತು ಚಿಕ್ಕ ಕೆರೆಯಂತಾಗಿದೆ. ಪಟ್ಟಣದಲ್ಲಿ ಒಟ್ಟು 7 ಪಾರ್ಕ್‌ಗಳಿದ್ದು, ಅವುಗಳಲ್ಲಿ ನಾರೆಪ್ಪ ಬಡಾವಣೆಯ ಪಾರ್ಕ್‌ನ ಅಭಿವೃದ್ಧಿಗಾಗಿ ಒಂದಷ್ಟು ಹಣವನ್ನು ವ್ಯಯ ಮಾಡಿ ಅಭಿವೃದ್ಧಿ ಮಾಡಿದ್ದರು, ನಂತರ ಇನ್ನು ಹೆಚ್ಚಿನ ಅಭಿವೃದ್ಧಿಗಾಗಿ 2016-17ನೇ ಸಾಲಿನಲ್ಲಿ 14ನೇ ಹಣಕಾಸು ಯೋಜನೆಯಲ್ಲಿ ಸುಮಾರು 7.82 ಲಕ್ಷ ವೆಚ್ಚ ಮಾಡಿ ಪಾರ್ಕ್‌ಗೆ ಗೇಟ್ ಹಾಗೂ ಉಳಿಕೆ ಭಾಗದ ಕಾಂಪೌಂಡ್ ನಿರ್ಮಾಣಕ್ಕೆ ಖರ್ಚು ಮಾಡಿ ಅಭಿವೃದ್ದಿ …
Read More »ಬುರುಡೆ ಬೊಮ್ಮಾಯಿ..ಕೊರೊನಾ ವೇಳೆ ಜನ ಬದುಕಿದ್ದು ಅನ್ನಭಾಗ್ಯದಿಂದ ನಿಮ್ಮಿಂದ ಅಲ್ಲ: Siddaramaiah ತಿರುಗೇಟು
ಬೆಂಗಳೂರು : ಬುರುಡೆ ರಾಮಯ್ಯ ಎಂದು ಟ್ವೀಟ್ ಮಾಡಿ ರಾಜ್ಯದ ಪ್ರತಿಯೊಬ್ಬ ಪ್ರಜೆಯ ತಲೆಯ ಮೇಲೂ 44 ಸಾವಿರಕ್ಕೂ ಅಧಿಕ ಸಾಲದ ಹೊರೆ ಹೇರಿದ್ದೀರಿ ಎಂದು ಟ್ವೀಟ್ ಮಾಡಿದ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಅವರು ಶನಿವಾರ ”ಬುರುಡೆ ಬೊಮ್ಮಾಯಿ” ಎನ್ನುವ ಟ್ಯಾಗ್ ಬಳಸಿಕೊಂಡು ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಮಾಡಿರುವ ಸರಣಿ ಟ್ವೀಟ್ ಗಳು ಹೀಗಿವೆ ”ಬಿಜೆಪಿ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ ಈಗಿನ ಸಾಲ ರೂ.4,57,899 ಕೋಟಿ. 2020-21 ರಲ್ಲಿಯೇ …
Read More »ಕಿತ್ತೂರು ಉತ್ಸವದಲ್ಲಿ ಸಿಎಂ ಮಹತ್ವದ ಘೋಷಣೆ: ಮುಂಬೈ ಕರ್ನಾಟಕಕ್ಕೆ ‘ಕಿತ್ತೂರು ಕರ್ನಾಟಕ’ ಎಂದು ಮರುನಾಮಕರಣ
ಬೆಳಗಾವಿ: ಮುಂದಿನ ವರ್ಷದಿಂದ ರಾಜ್ಯಮಟ್ಟದಲ್ಲಿ ಕಿತ್ತೂರು ಉತ್ಸವ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆಯುತ್ತಿರುವ ಕಿತ್ತೂರು ಉತ್ಸವದಲ್ಲಿ ಅವರು ಮಾತನಾಡಿ, ಒಂದು ತಿಂಗಳ ಕಾಲ ಕಿತ್ತೂರು ಜ್ಯೋತಿ ರಾಜ್ಯದಲ್ಲಿ ಸಂಚರಿಸಲು ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಮರು ನಾಮಕರಣ ಮಾಡುವ ಬಗ್ಗೆ ಸಂಪುಟದಲ್ಲಿ ಚರ್ಚೆ ನಡೆಸಿ ನಿರ್ಣಯ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
Read More »ಶಿಕ್ಷಕರಿಗೆ ದೀಪಾವಳಿ ಗಿಫ್ಟ್: ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ -ಟ್ರಾನ್ಸ್ಫರ್ ನಿರೀಕ್ಷೆಯಲ್ಲಿದ್ದವರಿಗೆ ಕೊನೆಗೂ ಸಿಹಿ ಸುದ್ದಿ
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ನಾಳೆಯಿಂದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. 2022ರ ಫೆಬ್ರವರಿ 26 ರವರೆಗೂ ವರ್ಗಾವಣೆ ಪ್ರಕ್ರಿಯೆ ನಡೆಯಲಿದ್ದು, ಈಗಾಗಲೇ ಅರ್ಜಿ ಸಲ್ಲಿಸಿದ 72,000 ಶಿಕ್ಷಕರಿಗೆ ವರ್ಗಾವಣೆ ಭಾಗ್ಯ ಸಿಗಲಿದೆ. ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. ಕಡ್ಡಾಯ ವರ್ಗಾವಣೆ ಆಗಿದ್ದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಮೊದಲ ಹಂತದ ಕೌನ್ಸೆಲಿಂಗ್ ನವೆಂಬರ್ 2 ರಂದು ನಡೆಯಲಿದೆ. ಎರಡನೇ ಹಂತದ ಕೌನ್ಸೆಲಿಂಗ್ 2021ರ ಜನವರಿ 18 …
Read More »ಕಿತ್ತೂರು ಉತ್ಸವದಲ್ಲಿ ವೈವಿಧ್ಯಮಯ ಕಾರ್ಯಕ್ರಮ
ಬೆಳಗಾವಿ: ವೀರರಾಣಿ ಕಿತ್ತೂರ ರಾಣಿ ಚೆನ್ನಮ್ಮನ ಸೈನ್ಯದ ವಿಜಯೋತ್ಸವದ ಸವಿ ನೆನಪಿಗಾಗಿ ಆಚರಿಸಲ್ಪಡುವ ಕಿತ್ತೂರ ಉತ್ಸವಕ್ಕೆ ಈಗ ಬೆಳ್ಳಿ ಹಬ್ಬದ ಸಂಭ್ರಮ. ಕೊರೊನಾದ ಸಂಕಷ್ಟದ ಸಮಯದಲ್ಲೂ ಎರಡು ದಿನಗಳ ಕಾಲ ಉತ್ಸವವನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಸಿದ್ಧತೆಗಳು ನಡೆದಿವೆ. ಉತ್ಸವದಲ್ಲಿ ವಿವಿಧ ವೈವಿಧ್ಯಮಯ ಕಾರ್ಯಕ್ರಮಗಳನ್ನು ಜನರ ಮನತಣಿಸಲಿವೆ. ಸೋಮವಾರ ಬೆಳಗಾವಿಯಲ್ಲಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ …
Read More »ಕಿತ್ತೂರು ಉತ್ಸವಕ್ಕೆ ಸಿಗಲಿ ರಾಜ್ಯಮಟ್ಟದ ಮಾನ್ಯತೆ
ಬೆಳಗಾವಿ: ಸತತವಾಗಿ ಕಾಡುತ್ತಲೇ ಇರುವ ಕೊರೊನಾ ಹಾವಳಿ ನಡುವೆ ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ಇಡೀ ಕಿತ್ತೂರು ಸಂಸ್ಥಾನ ಸಜ್ಜಾಗಿದ್ದು, ಜಿಲ್ಲಾಡಳಿತ ಕೊರೊನಾ ಮಾರ್ಗಸೂಚಿ ಅನ್ವಯ ಎರಡು ದಿನಗಳ ಉತ್ಸವದ ಅರ್ಥಪೂರ್ಣ ಆಚರಣೆಗೆ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಉತ್ಸವದ ಈ ಬಾರಿಯ ವಿಶೇಷ ಆಕರ್ಷಣೆ ಎಂದರೆ ಬಹಳ ವರ್ಷಗಳ ನಂತರ ಮುಖ್ಯಮಂತ್ರಿಗಳು ಉತ್ಸವದ ಉದ್ಘಾಟನೆಗೆ ಬರುತ್ತಿದ್ದಾರೆ. ಉತ್ಸವಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬ ಮೂಢ ನಂಬಿಕೆ ಮಾತುಗಳಿಗೆ ಕಿವಿಗೊಡದೆ ಸಿಎಂ ಬಸವರಾಜ ಬೊಮ್ಮಾಯಿ ಉತ್ಸವದ …
Read More »ರಾಜ್ಯದಲ್ಲಿ ಮತ್ತೊಂದು ಘೋರ ದುರಂತ: 4 ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಂದೆ
ಚಿಕ್ಕೋಡಿ: ಪತ್ನಿ ಸಾವಿನಿಂದ ಮನನೊಂದ ವ್ಯಕ್ತಿಯೊಬ್ಬ ತನ್ನ ನಾಲ್ಕು ಮಕ್ಕಳಿಗೆ ವಿಷ ಉಣಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೋರಗಲ್ ಗ್ರಾಮದಲ್ಲಿ ನಡೆದಿದೆ. ಗೋಪಾಲ ಹಾದಿಮನಿ 46, ಸೌಮ್ಯಾ ಹಾದಿಮನಿ 19, ಶ್ವೇತಾ ಹಾದಿಮನಿ 16, ಸಾಕ್ಷಿ ಹಾದಿಮನಿ 11, ಸೃಜನ ಹಾದಿಮನಿ 8 ಮೃತ ದುರ್ದೈವಿಗಳು. ಜುಲೈ 6 ರಂದು ಗೋಪಾಲ್ ಪತ್ನಿ ಜಯಾ ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದರು. ಇದರಿಂದ ಮನನೊಂದು …
Read More »ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ; ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಕಾರ್ಯಕ್ರಮಕ್ಕೆ ಗೈರು
ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಇಂದು (ಅಕ್ಟೋಬರ್ 23) ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯೋತ್ಸವ ಆಚರಣೆ ಮಾಡಲಾಗಿದೆ. ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜನೆ ಮಾಡಲಾದ ಈ ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನಿಲ್ ಕುಮಾರ್ ಮತ್ತು ಅಧ್ಯಕ್ಷತೆ ವಹಿಸಬೇಕಿದ್ದ ಶಾಸಕ ಉದಯ ಗರುಡಾಚಾರ್ ಗೈರಾಗಿದ್ದಾರೆ. ಹಾನಗಲ್ ಉಪಚುನಾವಣಾ ಪ್ರಚಾರದಲ್ಲಿರುವ ಕಾರಣ ಜಯಂತ್ಯೋತ್ಸವ ಉದ್ಘಾಟಿಸಬೇಕಿದ್ದ ಸಿಎಂ ಬಸವರಾಜ …
Read More »