Breaking News

ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತದೆ: ಹೊರಟ್ಟಿ

ಧಾರವಾಡ: ಚಳಿಗಾಲದ ಅಧಿವೇಶನ ಬೆಳಗಾವಿದಲ್ಲಿ ನಡೆಯುತ್ತದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸಿಎಂ ಇದ್ದಾಗಲೂ ನಾನು ಬೆಳಗಾವಿ ಅಧಿವೇಶನದ ಬಗ್ಗೆ ಪತ್ರ ಬರೆದಿದ್ದೆ, ತೀರ್ಮಾನ ಮಾಡುವಂತೆ ಒತ್ತಾಯ ಮಾಡಿದ್ದೆ. ಆದರೆ ಒಟ್ಟು 900 ಅಧಿಕಾರಿಗಳು, ಶಾಸಕರು ಸೇರಿ ಬಹಳ ಜನ ಆಗುತ್ತಾರೆ. ಈಗ ಮಳೆಗಾಲ ಇದೆ, ಕೋವಿಡ್ ಕೂಡ ಇದೆ ಎಂದು ಅಧಿವೇಶನವನ್ನು ಬೆಂಗಳೂರಿನಲ್ಲೇ ನಡೆಸಿದರು ಎಂದರು .ಈ …

Read More »

ಇಲಾಖೆಯಲ್ಲಿ ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ನಮ್ಮ ಗುರಿ: ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ಬೆಂಗಳೂರು :ರಾಜ್ಯದ ವಿವಿಧ ಇಲಾಖೆಯಲ್ಲಿನ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದೇ ನಮ್ಮ ಮೊದಲ ಗುರಿ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷರ ಸೂಚನೆಯಂತೆ ಪಕ್ಷದ ಕಚೇರಿಗೆ ಬಂದಿದ್ದೇವೆ, ಅಹವಾಲುಗಳನ್ನು ಸ್ವೀಕಾರ ಮಾಡಿದ್ದೇವೆ ಅಲ್ಲದೆ ಪ್ರತೀ ದಿನ ಕಾರ್ಯಾಲಯಕ್ಕೆ ಬಂದು ಅಹವಾಲು ಸ್ವೀಕಾರಕ್ಕೆ ಸೂಚನೆಯನ್ನೂ ನೀಡಿದ್ದೇವೆ ಎಂದರು. ಸಮಾಜ ಕಲ್ಯಾಣ ಇಲಾಖೆಯಲ್ಲಿ 1.20 ಕೋಟಿ ಕುಟುಂಬ ಇದೆ. ಅವರಿಗೆ …

Read More »

ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಬೆಂಗಳೂರು,ಸೆ.8- ಜನಸಾಮಾನ್ಯರಿಗೆ ಹೊರೆಯಾಗುವಂತಹ ಬೆಲೆ ಏರಿಕೆ ಹಾಗೂ ಇತರ ಅನೇಕ ವಿಷಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಬೆಂಗಳೂರು ದಕ್ಷಿಣ, ಉತ್ತರ ಮತ್ತು ಕೇಂದ್ರ ಕಾಂಗ್ರೆಸ್ ಜಿಲ್ಲೆಗಳಿಂದ ನಗರದ ಆನಂದರಾವ್ ವೃತ್ತದಿಂದ ರಾಜಭವನ ಚಲೋ ನಡೆಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಮಾಜಿ ಸಚಿವರಾದ ಕೃಷ್ಣಬೈರೇಗೌಡ, ಕೆ.ಜೆ.ಜಾರ್ಜ್, ಶಾಸಕಿ ಸೌಮ್ಯಾರೆಡ್ಡಿ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರ್‍ನಾಥ್ ಸೇರಿದಂತೆ ಅನೇಕ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಅಡುಗೆ …

Read More »

ಅನುಶ್ರೀ ಹೇರ್ ಟೆಸ್ಟ್ ಏಕೆ ಮಾಡಿಸಿಲ್ಲ : ಇಂದ್ರಜೀತ್ ಲಂಕೇಶ್

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ರಾಜಕೀಯ, ಚಿತ್ರರಂಗ, ಸಾಮಾಜಿಕ ಸೇರಿದಂತೆ ಹಲವಾರು ಆಯಾಮಗಳಿವೆ. ಆದ್ದರಿಂದಲೇ ಇದು ನಮ್ಮ ರಾಜ್ಯದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸ್ಕ್ಯಾಂಡಲ್ ಎಂದು ಪತ್ರಕರ್ತ ಹಾಗೂ ಸಿನಿಮಾ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಸಿಸಿಬಿ ಸಿದ್ಧಪಡಿಸಿರುವ ಚಾರ್ಜ್ ಶೀಟ್ ನಲ್ಲಿ ನಿರೂಪಕಿ ಅನುಶ್ರೀ ಅವರು ಹೆಸರು ಉಲ್ಲೇಖಿಸಿರುವುದು ಬೆಳಕಿಗೆ ಬರುತ್ತಿದ್ದಂತೆ ಮಾಧ್ಯಮಗೋಷ್ಠಿ ನಡೆಸಿದ ಲಂಕೇಶ್ ಸಾಕಷ್ಟು ವಿಚಾರಗಳನ್ನು ಹೊರಹಾಕಿದರು. ಲಂಕೇಶ್ ಹೇಳಿದ್ದಿಷ್ಟು : “ಕರ್ನಾಟಕದ ಡ್ರಗ್ಸ್ ಜಾಲದ …

Read More »

ಕೋವಿಡ್ : ಮನೆಮನೆಗೆ ತೆರಳಿ ಲಸಿಕೆ ನೀಡಿಯೆಂದು ಆದೇಶಿಸಲು ಸಾಧ್ಯವಿಲ್ಲ : ಸುಪ್ರೀಂ ಅಭಿಪ್ರಾಯ

ನವ ದೆಹಲಿ : ದೇಶದಲ್ಲಿನ ಕೋವಿಡ್ 19 ಪರಿಸ‍್ಥಿತಿಯನ್ನು ಅವಲೋಕಿಸಿದರೇ, ಈಗಿರುವ ಲಸಿಕೆ ನೀತಿಯನ್ನು ರದ್ದುಗೊಳಿಸುವಂತೆ ನಿರ್ದೇಶನ ನೀಡಲು ಆಗುವುದಿಲ್ಲ, ಮಾತ್ರವಲ್ಲದೇ, ಪ್ರಸ್ತು ಸ್ಥಿತಿಯಲ್ಲಿ ಮನೆ ಮನೆಗೆ ಹೋಗಿ ಲಸಿಕೆಯನ್ನು ನೀಡಿ ಎಂದು ಆದೇಶಿಸಲು ಸಾಧ್ಯವಿಲ್ಲವೆಂದು ಇಂದು(ಸಪ್ಟೆಂಬರ್ 8) ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ. ಯುವ ವಕೀಲರ ಸಂಘವೊಂದು ಅಂಗವಿಕಲರು, ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ದುರ್ಬಲ ವರ್ಗದವರಿಗೆ ಹಾಗೂ ಕೋವಿನ್‌ ಪೋರ್ಟಲ್‌ ನಲ್ಲಿ ಹೆಸರು ನೋಂದಾಯಿಸಕೊಳ್ಳಲಾಗದೇ, ಲಸಿಕೆ ಸಿಗದೇ ಸಮಸ್ಯೆ …

Read More »

ಡ್ರಗ್ಸ್​ ‘ಸುಳಿ’ಯಲ್ಲಿ ರಾಣಾ ದಗ್ಗುಬಾಟಿ.. ED ಮುಂದೆ ಹಾಜರ

ಬಾಹುಬಲಿ ನಟಿ, ಟಾಲಿವುಡ್​ ಸ್ಟಾರ್​ ರಾಣಾ ದಗ್ಗುಬಾಟಿ ಇಂದು ಜಾರಿ ನಿರ್ದೇಶನಾಲಯ (ಇ.ಡಿ) ಎದುರು ಹಾಜರಾಗಿದ್ದಾರೆ. 2017ರ ಡ್ರಗ್ಸ್​ ಪ್ರಕರಣದ ಸಂಬಂಧ ರಾಣಾ ವಿಚಾರಣೆಗೆ ಎದುರಾಗಿದ್ದು, ಹೈದರಾಬಾದ್​​ನ ಇ.ಡಿ ಕಚೇರಿಗೆ ಇಂದು ಬೆಳಗ್ಗೆ ಆಗಮಿಸಿದರು. ಇ.ಡಿ ಅಧಿಕಾರಿಗಳು ಟಾಲಿವುಡ್​​ನ ಹಲವು ನಟ ನಟಿಯರಿಗೆ ಪ್ರಕರಣದ ಸಂಬಂಧ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ವರದಿಗಳ ಅನ್ವಯ 2017ರಲ್ಲಿ ಎಸ್​​​ಐಟಿ ವಿಚಾರಣೆ ನಡೆಸಿದ ಸಂದರ್ಭದಲ್ಲಿ ರಾಣಾ ವಿಚಾರಣೆಗೆ ಹಾಜರಾಗಿರಲಿಲ್ಲ. …

Read More »

ಅನುಶ್ರೀ ಜೊತೆ ಮಾದಕ ವಸ್ತು ಸೇವಿಸಿ ಡ್ರಿಂಕ್ಸ್ ಪಾರ್ಟಿ ಮಾಡಿರ್ತೇನೆ’ -ಚಾರ್ಜ್​ಶೀಟ್​ನಲ್ಲಿ ಕಿಶೋರ್​ ಶೆಟ್ಟಿ ಹೇಳಿಕೆ ಉಲ್ಲೇಖ

ಬೆಂಗಳೂರು: ಆಯಂಕರ್ ಅನುಶ್ರೀ ವಿರುದ್ಧದ ಡ್ರಗ್​​ ಕೇಸ್​​ಗೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಸಿಸಿಬಿ ಅಧಿಕಾರಿಗಳು ತಯಾರಿ ಮಾಡಿರುವ ಚಾರ್ಜ್​ಶೀಟ್​ ಲಭ್ಯವಾಗಿದೆ. ಈ ಪ್ರಕರಣದಲ್ಲಿ ಅನುಶ್ರೀ ಆರೋಪಿ‌ ಅಲ್ಲ. ಮಂಗಳೂರು ಡ್ರಗ್​​ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಕಿಶೋರ್ ಕೊಟ್ಟ ಹೇಳಿಕೆಯಲ್ಲಿ ಅನುಶ್ರೀ ಹೆಸರು ಬಂದಿದೆ. ಅನುಶ್ರೀ ಜೊತೆ ಸೇರಿ ಡ್ರಗ್ ಸೇವನೆ ಮಾಡಿರೋದಾಗಿ ಕಿಶೋರ್​ ಶೆಟ್ಟಿ ಹೇಳಿದ್ದಾನೆ. ಆತನ ಹೇಳಿಕೆಯನ್ನ ತನಿಖಾಧಿಕಾರಿಗಳು ಉಲ್ಲೇಖಿಸಿದ್ದಾರೆ.     ಚಾರ್ಜ್​ಶೀಟ್​ನಲ್ಲಿ ಏನಿದೆ..? ನಾನು ಸುಮಾರು …

Read More »

ಡ್ರಗ್ಸ್​ ಪ್ರಕರಣ; ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ -ಆರಗ ಜ್ಞಾನೇಂದ್ರ

ಬೆಳಗಾವಿ: ಡ್ರಗ್ಸ್ ಕೇಸ್ ಚಾರ್ಜ್​​ಶೀಟ್​ನಲ್ಲಿ ಆಯಂಕರ್ ಅನುಶ್ರೀ ಕೈ ಬಿಡಲಾಗಿದೆಯೇ ಎಂಬ ಪ್ರಶ್ನೆ ಉದ್ಭವಾಗಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಯಾರನ್ನು ಬಿಡೋ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ ಅವರು, ಡ್ರಗ್ಸ್ ಪ್ರಕರಣದಲ್ಲಿ ಯಾವ ರಾಜಕೀಯ ಒತ್ತಡಗಳು ಇರೋದಿಲ್ಲ. ಡ್ರಗ್ಸ್ ವಿರುದ್ಧ ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಯಾರನ್ನು ಬಿಡುವ ಪ್ರಶ್ನೆ ಇಲ್ಲ, ನಿಜವಾದ …

Read More »

ಅನುಶ್ರೀ ಡ್ರಗ್ ಸೇವನೆ ಮಾಡ್ತಿದ್ರು, ನಮ್ಮ ರೂಮಿಗೂ ತರುತ್ತಿದ್ರು? : ಕಿಶೋರ್ ಶೆಟ್ಟಿ ಆರೋಪ

ಮಂಗಳೂರು : ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಡ್ರಗ್ ಸೇವನೆ ಮಾಡುತ್ತಿದ್ದರು, ನಮ್ಮ ಜೊತೆಯೇ ಡ್ರಗ್ ತೆಗೆದುಕೊಳ್ಳುತ್ತಿದ್ದರು ಎಂದು ಡ್ರಗ್ ಪ್ರಕರಣದ A 2 ಆರೋಪಿ ಕಿಶೋರ್ ಶೆಟ್ಟಿ ಮಂಗಳೂರು ಸಿಸಿಬಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸುಸ್ತಾಗಬಾರದು ಎಂಬ ಕಾರಣಕ್ಕೆ ಅನುಶ್ರೀ ಡ್ರಗ್ಸ್ ಸೇವನೆ ಮಾಡುತ್ತಿದ್ದರು. ಕನ್ನಡದ ಖಾಸಗಿ ವಾಹಿನಿ ನಡೆಸುತ್ತಿದ್ದ ರಿಯಾಲಿಟಿ ಶೋ ವೇಳೆ ಡ್ರಗ್ಸ್ ಬಂದಿತ್ತು. ಆ ವೇಳೆ ಅನುಶ್ರಿ …

Read More »

ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ, ಅನುಶ್ರೀಯವರ ನಾಟಕ ಬಯಲಾಗಿದೆ. ಜೈಲಿಗೆ ಹೋಗುವುದು ಫಿಕ್ಸ್…?

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ನಲ್ಲಿ ಆಂಕರ್ ಅನುಶ್ರೀ ಹೆಸರು ಉಲ್ಲೇಖ ವಿಚಾರವಾಗಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ, ಅನುಶ್ರೀಯವರ ನಾಟಕ ಬಯಲಾಗಿದೆ. ಜೈಲಿಗೆ ಹೋಗುವುದು ಫಿಕ್ಸ್ ಆಗಿದೆ ಎಂದು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2020 ಸೆಪ್ಟೆಂಬರ್ ನಲ್ಲಿ ನಾನು ಶುಗರ್ ಡ್ಯಾಡಿ ಎಂದು ಟ್ವೀಟ್ ಮಾಡಿದ್ದೆ. ಆಗ ಮಾಜಿ ಸಿಎಂ ಒಬ್ಬರು ಊಹಾಪೋಹಕ್ಕೆ ನಾಂದಿ ಹಾಡಿದ್ದರು. ಪ್ರಕರಣದ ತನಿಖೆಯನ್ನು ಮಂಗಳೂರು ಪೊಲೀಸರು ಸರಿಯಾಗಿ …

Read More »