Breaking News

ಕೃಷ್ಣಾ ನದಿ ನೀರಿನಲ್ಲಿ ಇಳಿಕೆ ಕಂಡ ಹಿನ್ನೆಲೆಯಲ್ಲಿ12 ಕೆ.ಜಿ. ತೂಕದ ಬೃಹತ್ ಗಾತ್ರದ ಮೀನು ಸಿಕ್ಕಿದೆ.

ಬೆಳಗಾವಿ: ಕೃಷ್ಣಾ ನದಿ ನೀರಿನಲ್ಲಿ ಇಳಿಕೆ ಕಂಡ ಹಿನ್ನೆಲೆಯಲ್ಲಿ ಜನ ಮೀಗಾರಿಕೆ ಆರಂಭಿಸಿದ್ದು, ಇದೇ ವೇಳೆ 12 ಕೆ.ಜಿ. ತೂಕದ ಬೃಹತ್ ಗಾತ್ರದ ಮೀನು ಸಿಕ್ಕಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರು – ಕಲ್ಲೋಳ ಸೇತುವೆ ಬಳಿ 12 ಕೆ.ಜಿ. ತೂಕದ ಮೀನು ಬಲೆಗೆ ಬಿದ್ದಿದೆ. ಬೋರಗಾಂವ ಪಟ್ಟಣದ ಹೈದರ ಅವರಿಗೆ ಮೀನು ಸಿಕ್ಕಿದೆ. ಇಷ್ಟೊಂದು ದೊಡ್ಡ ಗಾತ್ರದ ಮೀನು ಸಿಕ್ಕಿರುವುದಕ್ಕೆ ಹವ್ಯಾಸಿ ಮೀನಗಾರ ಹೈದರ ಸಂತಸ ವ್ಯಕ್ತಪಡಿಸಿದ್ದಾರೆ. ಇಷ್ಟೊಂದು …

Read More »

ನಾವು ಗೆದ್ದೇ ಗೆಲ್ತೇವೆ ಮತ್ತೇ ಮೆಜಾರಿಟಿ ತಂದೇ ತರ್ತೇವೆ: ಫಿರೋಜ್ ಸೇಠ್ ವಿಶ್ವಾಸ

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದೇ ಗೆಲ್ಲುತ್ತೇವೆ ಮತ್ತು ಮೆಜಾರಿಟಿ ಪಡೆದು ಪಾಲಿಕೆ ಚುಕ್ಕಾಣಿ ಹಿಯುತ್ತೇವೆ ಎಂದು ಫಿರೋಜ್ ಸೇಠ್ ಹೇಳಿದ್ದಾರೆ. ನಾವು ಜನರಲ್ಲಿ ನಮ್ಮ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮನವರಿಕೆ ಮಾಡುತ್ತೇವೆ. ಈ ಹಿಂದೆ ನಮ್ಮ 10 ವರ್ಷಗಳ ಅಧಿಕಾರಾವಧಿಯಲ್ಲಿ ಮಾಡಿದಂತೆ ಈ ಬಾರಿಯೂ ಅಭಿವೃದ್ಧಿ ಕಾರ್ಯ ಮಾಡುತ್ತೇವೆ ಎಂದಿದ್ದಾರೆ. ಎಂಐಎಂ ಸ್ಪರ್ಧೆಯಿಂದ ಬಿಜೆಪಿಗೆ ಲಾಭವಾಗುತ್ತೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ ಇದು ಪಶ್ಚಿಮ ಬಂಗಾಳದಲ್ಲಿ …

Read More »

ರಸ್ತೆ ಅಪಘಾತ, ದೇವನಕಟ್ಟಿಯ ಯೋಧ ಮುಂಬೈನಲ್ಲಿ ಸಾವು- ಸ್ವಗ್ರಾಮದಲ್ಲಿ ಅಂತಿಮ ನಮನ

ಚಿಕ್ಕೋಡಿ: ಸೇವೆಗೆ ಹಾಜರಾಗಲು ಹೊರಟಿರುವಾಗ ಸೆಪ್ಟೆಂಬರ್ 1ರಂದು ಮಾರ್ಗಮಧ್ಯೆ ಮುಂಬಯಿ ನಗರದಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ರಾಯಭಾಗ ತಾಲೂಕಿನ ಯೋಧ ಯಲ್ಲಪ್ಪಾ ಬಾಲಪ್ಪಾ ನಾಯಿಕ ಅವರ ಅಂತ್ಯಸಂಸ್ಕಾರವನ್ನು ತಾಲೂಕಿನ ದೇವನಕಟ್ಟಿಯಲ್ಲಿ ಗುರುವಾರ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ರಾಯಭಾಗ ತಾಲೂಕು ದೇವನಕಟ್ಟಿ ನಿವಾಸಿಯಾದ ಯಲ್ಲಪ್ಪಾ ಅವರು, ಕಳೆದ 9 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮಂಗಳವಾರ ರಾತ್ರಿ ಸೇವೆಗೆ ಹಾಜರಾಗಲು ಸ್ವಗ್ರಾಮದಿಂದ ಜಮ್ಮು-ಕಾಶ್ಮೀರಕ್ಕೆ ಹೊರಟಿರುವಾಗ ಮಾರ್ಗಮಧ್ಯೆ ರಸ್ತೆಯ ಅಪಘಾತದಿಂದ ಸಾವನ್ನಪ್ಪಿದ್ದರು. ಯಲ್ಲಪ್ಪ ಅವರ …

Read More »

ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸುವ ವಿಶ್ವಾಸವಿದೆ: ಸತೀಶ್ ಜಾರಕಿಹೊಳಿ

ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸುವ ವಿಶ್ವಾಸವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಜನರು ಈ ಬಾರಿ ನಮ್ಮ ಪಕ್ಷಕ್ಕೆ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದಿದ್ದಾರೆ.   ಬೆಲೆ ಏರಿಕೆ ಜನರಿಗೆ ಈಗಾಗಲೇ ಹೊರೆಯಾಗಿದೆ. ಮತ್ತೆ ಎಲ್‍ಪಿಜಿ ಸಿಲಿಂಡರ್ ದರ 25 ರೂ. ಹೆಚ್ಚಿಸಲಾಗಿದೆ. ಇದು ನಿಲ್ಲುವ ಲಕ್ಷಣಗಳಿಲ್ಲ. …

Read More »

ಕೆಲವೇ ನಿಮಿಷಗಳ ಅಂತರದಲ್ಲಿ ಎರಡು ಡೋಸ್ ಲಸಿಕೆ ಪಡೆದ ವ್ಯಕ್ತಿ

ಮಂಗಳೂರು: ಕೊರೊನಾ ವೈರಸ್‌ ಸೋಂಕು ತಡೆಯಲು ನೀಡಲಾಗುತ್ತಿರುವ ಲಸಿಕೆಗಳ ಪೈಕಿ ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್‌ಗಳ ನಡುವೆ 84 ದಿನಗಳ ಅಂತರ ನಿಗದಿಪಡಿಸಲಾಗಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನಲ್ಲಿ ಬುಧವಾರ 19 ವರ್ಷದ ದಿನಗೂಲಿ ಕಾರ್ಮಿಕರೊಬ್ಬರಿಗೆ ಕೆಲವೇ ನಿಮಿಷಗಳ ಅಂತರದಲ್ಲಿ ಎರಡು ಡೋಸ್ ಲಸಿಕೆ ನೀಡಲಾಗಿದೆ. ಎರಡು ಡೋಸ್ ಲಸಿಕೆ ನೀಡುವುದರ ಪರಿಣಾಮ ಏನಾಗಬಹುದು ಎನ್ನುವುದು ಆರೋಗ್ಯಾಧಿಕಾರಿಗಳು ಊಹಿಸುವುದು ಕಷ್ಟ. ಹೀಗಾಗಿ ಲಸಿಕೆ ಪಡೆದ ವ್ಯಕ್ತಿಯನ್ನು ನಿಗಾದಲ್ಲಿ ಇರಿಸಲಾಗಿದೆ. …

Read More »

ದೇವಸ್ಥಾನಗಳಲ್ಲಿ‌ ಮಾತ್ರ ಗಣಪತಿ ಮೂರ್ತಿ ಪ್ರತಿಷ್ಠಾಪನೆ: ಕಮಲ್‌ಪಂತ್

ಬೆಂಗಳೂರು: ಬೆಂಗಳೂರು ನಗರದಲ್ಲಿ ಸಾರ್ವಜನಿಕವಾಗಿ ದೇವಸ್ಥಾನಗಳಲ್ಲಿ ಮಾತ್ರ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿದೆ. ಸಾರ್ವಜನಿಕ ರಸ್ತೆಯಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿಲ್ಲ ಎಂದು‌ ಪೊಲೀಸ್ ‌ಕಮಿಷನರ್ ಕಮಲ್ ಪಂತ್ ಹೇಳಿದರು. ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ರಾಜ್ಯ‌ ಸರ್ಕಾರದ ನಿಯಮಗಳನ್ವಯ ಮೂರ್ತಿ ಪ್ರತಿಷ್ಠಾಪಿಸಲು ಅವಕಾಶವಿದೆ. ಉಳಿದಂತೆ‌, ಕೋವಿಡ್ ನಿಯಮಗಳು‌ ಜಾರಿಯಲ್ಲಿ ಇರಲಿವೆ. ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು. ದೇವಸ್ಥಾನದಲ್ಲಿ‌ ಮೂರ್ತಿ ಪ್ರತಿಷ್ಠಾಪನೆಗೂ‌ ಮುನ್ನ ಪೊಲೀಸರು ಹಾಗೂ‌ ಬಿಬಿಎಂಪಿ ಅವರಿಂದ ಅನುಮತಿ‌ …

Read More »

ಯಡಿಯೂರಪ್ಪ, ಶೆಟ್ಟರ್ ಅನುಭವ ಪಕ್ಷ ಬಳಸಿಕೊಳ್ಳಲಿದೆ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಹಿರಿಯರಾದ ಬಿ.ಎಸ್. ಯಡಿಯೂರಪ್ಪ ಹಾಗೂ ಜಗದೀಶ ಶೆಟ್ಟರ್ ಅವರ ರಾಜಕೀಯ ಅನುಭವವನ್ನು‌ ಮುಂಬರುವ ದಿನಗಳಲ್ಲಿ ಪಕ್ಷ ಸಮರ್ಪಕವಾಗಿ ಬಳಸಿಕೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಮಹಾನಗರ ಪಾಲಿಕೆ ಚುನಾವಣೆಗೆ ಕುಟುಂಬ ಸಮೇತ ಬಂದು ಮತ ಚಲಾಯಿಸಿ ಮಾಧ್ಯಮದವರ ಜೊತೆ ‌ಮಾತನಾಡಿದ ಅವರು ಪಕ್ಷದಲ್ಲಿ ಯಾವ ಹಿರಿಯರನ್ನೂ ಕಡೆಗಣಿಸಿಲ್ಲ. ಕೋವಿಡ್ ಕಾರಣಕ್ಕೆ ಕೋರ್ ಕಮಿಟಿ ಸಭೆ ನಡೆದಿಲ್ಲ. ಮುಂದಿನ ದಿನಗಳಲ್ಲಿ ಸಭೆ ನಡೆಸಿ ಹಿರಿಯರ ಸಲಹೆ ಪಡೆದೇ ತೀರ್ಮಾನ ಕೈಗೊಳ್ಳಲಾಗುವುದು …

Read More »

ಯಾವ ಹಿರಿಯರನ್ನೂ ಬಿಜೆಪಿ ಕಡೆಗಣಿಸಿಲ್ಲ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಜಗದೀಶ ಶೆಟ್ಟರ್ ಅವರ ರಾಜಕೀಯ ಅನುಭವವನ್ನು‌ ಬಿಜೆಪಿ ಸಮರ್ಪಕವಾಗಿ ಬಳಸಿಕೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆಗೆ ಕುಟುಂಬ ಸಮೇತ ಬಂದು ಮತ ಚಲಾಯಿಸಿ ಮಾಧ್ಯಮದವರ ಜೊತೆ ‌ಮಾತನಾಡಿದ ಅವರು, ಪಕ್ಷದಲ್ಲಿ ಯಾವ ಹಿರಿಯರನ್ನೂ ಕಡೆಗಣಿಸಿಲ್ಲ. ಕೋವಿಡ್ ಕಾರಣಕ್ಕೆ ಕೋರ್ ಕಮಿಟಿ ಸಭೆ ನಡೆದಿಲ್ಲ. ಮುಂದಿನ ದಿನಗಳಲ್ಲಿ ಸಭೆ ನಡೆಸಿ ಹಿರಿಯರ ಸಲಹೆ ಪಡೆದೇ ತೀರ್ಮಾನ ಕೈಗೊಳ್ಳಲಾಗುವುದು …

Read More »

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರದಿಂದ ಇನ್ನೂ ಮನೆ ಹಂಚಿಕೆ ಮಾಡಿಲ್ಲ.

ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರದಿಂದ ಇನ್ನೂ ಮನೆ ಹಂಚಿಕೆ ಮಾಡಿಲ್ಲ. ಇದಕ್ಕಾಗಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಮನೆ ಹಂಚಿಕೆ ಮಾಡುವಂತೆ ಭಿಕ್ಷೆ ಬೇಡುತ್ತಿಲ್ಲ. ಮನೆ ಕೊಟ್ಟರೆ ಕೊಡಲಿ, ಬಿಡುವುದಿದ್ದರೆ ಬಿಡಲಿ, ಇನ್ನು ಮುಂದೆ ಮನೆ ಹಂಚಿಕೆ ಮಾಡುವಂತೆ ಕೇಳುವುದಿಲ್ಲ ಎಂದು ಅವರು ಹೇಳಿದ್ದಾರೆ. ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ಆಗಮಿಸಿದ್ದ ಅವರು ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ಮನೆ …

Read More »

ಮಾಸ್ಕ್ ಹಾಕದೆ ಇದ್ರೆ ಮತ ಹಾಕಲು ಅವಕಾಶ ಇಲ್ಲ.!

ಹುಬ್ಬಳ್ಳಿ: ನಗರದ ಲ್ಯಾಮಿಂಗ್ಟನ್ ಹೈಸ್ಕೂಲಿನಲ್ಲಿ ಮತ ಚಲಾವಣೆ ನಡೆಯುತ್ತಿದ್ದು, ಮತಚಲಾಯಿಸಿದ ಬಳಿಕ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಎಥಿಕ್ಸ್ ಮೇಲೆ ಚುನಾವಣೆ ನಡೆಯುತ್ತಿಲ್ಲ, ಕೊರೋನಾ ಭೀತಿ ಇರುವುದರಿಂದ ಮಾಸ್ಕ್ ಹಾಕದೆ ಇರುವವರಿಗೆ ಮತ ಹಾಕಲು ಅವಕಾಶ ಕೊಡಬಾರದು ಎಂದು ತಿಳಿಸಿದ್ರು. ಜನಪರವಾದ ಕೆಲಸ ಎಲ್ಲಿಯವರೆಗೆ ಮಾಡುವುದಿಲ್ಲ ಅಲ್ಲಿಯವರೆಗೂ ಇದು ಹೀಗೆ ನಡೆಯುತ್ತದೆ. ಆಯ್ಕೆಯಾದವರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ನಮ್ಮದು ಪ್ರಜಾಪ್ರಭುತ್ವ ದೇಶ, ಎಲ್ಲರೂ ಜನಪರ ಕೆಲಸ ಮಾಡಬೇಕು. ಜೋಶಿ ಪುತ್ರಿಯ ಮದುವೆಗೆ …

Read More »