Breaking News

6 ರಿಂದ 8 ನೇ ತರಗತಿ ಆರಂಭಕ್ಕೆ ಸಮ್ಮತಿ|’ಸೆಪ್ಟೆಂಬರ್ 6′ ರಿಂದ ಶಾಲೆ ಶುರು

ಬೆಂಗಳೂರು: ರಾಜ್ಯದಲ್ಲಿ 6, 7 ಹಾಗೂ 8 ನೇ ತರಗತಿ ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಇಂದು( ಆ.30) ತಜ್ಞರ ಜೊತೆ ನಡೆದ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಆರ್. ಅಶೋಕ್ ಅವರು, ಕೋವಿಡ್ ಪಾಸಿಟಿವಿಟಿ ದರ 2 % ಕಡಿಕೆ ಇರುವ ತಾಲೂಕುಗಳಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ಸೆಪ್ಟೆಂಬರ್ 6 ರಿಂದ ಭೌತಿಕ ತರಗತಿಗಳ (6,7,8)ನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡುತ್ತಿದೆ ಎಂದರು. 50% …

Read More »

ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; 20 ದಿನದಲ್ಲಿ ಬಾಕಿ ಪಠ್ಯಪುಸ್ತಕ ಪೂರೈಕೆ

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಶೇಕಡ 54.74 ರಷ್ಟು ಪಠ್ಯಪುಸ್ತಕ ಪೂರೈಕೆ ಮಾಡಲಾಗಿದ್ದು, ಪುಸ್ತಕಗಳ ಮುದ್ರಣ ಕಾರ್ಯ ಪ್ರಗತಿಯಲ್ಲಿದೆ. ಇನ್ನು 20 ದಿನಗಳ ಒಳಗೆ ಮಕ್ಕಳಿಗೆ ಪಠ್ಯ ಪುಸ್ತಕ ಪೂರೈಕೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಹೈಕೋರ್ಟ್ ಗೆ ರಾಜ್ಯ ಸರ್ಕಾರದಿಂದ ಈ ಕುರಿತಾಗಿ ಮಾಹಿತಿ ಸಲ್ಲಿಸಲಾಗಿದೆ. ಈ ಕುರಿತಂತೆ ಸಲ್ಲಿಕೆಯಾಗಿದ್ದ ವಿಚಾರಣೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆದಿದ್ದು, …

Read More »

ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ಇಂದಿನಿಂದ ಸೆಪ್ಟಂಬರ್ 2 ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.   ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇಂದಿನಿಂದ ಮೂರು ದಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, …

Read More »

ಕೇರಳದಲ್ಲಿ ಮಹಾಮಾರಿ ಕೊರೊನಾ ಆತಂಕ : 24 ಗಂಟೆಯಲ್ಲಿ19,622 ಪ್ರಕರಣಗಳು ಪತ್ತೆ

ತಿರುವನಂತಪುರಂ : ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ 1,17,216 ಕೊರೊನಾ ಪರೀಕ್ಷೆಗಳು ನಡೆದಿದ್ದು, ಬಳಿಕ ಕೇರಳದಲ್ಲಿ 19,622 ಪ್ರಕರಣಗಳು ವರದಿಯಾಗಿದೆ.   ಈ ಬಗ್ಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ಕೇರಳದಲ್ಲಿ 19,622 ಪ್ರಕರಣಗಳು ವರದಿಯಾಗಿದೆ. ಸದ್ಯ ಕೇರಳದಲ್ಲಿ ಪಾಸಿಟಿವಿಟಿ ರೇಟ್ ಶೇಕಡಾ 16.74 ರಷ್ಟಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನೂ., ಕೇರಳದಲ್ಲಿ 123 ಹೊಸ ಸಾವುಗಳು ವರದಿಯಾಗಿವೆ, ಸಾವಿನ ಸಂಖ್ಯೆ 20673 …

Read More »

ಕುರಿ ಸಂತೆ ಎಫೆಕ್ಟ್; ಕಿಲೋಮೀಟರ್​​ಗಟ್ಟಲೆ ಟ್ರಾಫಿಕ್ ಜಾಮ್.. ಪರದಾಡಿದ ಆಯಂಬುಲೆನ್ಸ್

ರಾಯಚೂರು: ಎಪಿಎಂಸಿ ಮತ್ತು ಪೊಲೀಸ್​ ಇಲಾಖೆಯ ನಿರ್ಲಕ್ಷ್ಯಕ್ಕೆ ರಾಜ್ಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಆಯಂಬುಲೆನ್ಸ್ ಸಾಗಲು ಪರದಾಡಿದ ಘಟನೆ ಜಿಲ್ಲೆಯ ಜಿಲ್ಲೆಯ ಸಿಂಧನೂರಿನ ಕುಷ್ಟಗಿ ಮುಖ್ಯ ಹೆದ್ದಾರಿಯಲ್ಲಿ ನಡೆದಿದೆ.     ಸಿಂಧನೂರು ಪಟ್ಟಣದ ಹೊರ ವಲಯದಲ್ಲಿ ಪ್ರತಿ ಸೋಮವಾರ ಕುರಿ ಸಂತೆ ನಡೆಯುತ್ತದೆ. ಕುರಿ ಸಂತೆ ಹಿನ್ನೆಲೆ ಅಪಾರ ಪ್ರಮಾಣದಲ್ಲಿ ಕುರಿ ವ್ಯಾಪಾರಸ್ಥರು, ಗ್ರಾಹಕರು ಸ್ಥಳದಲ್ಲಿ ಜಮಾಯಿಸುತ್ತಾರೆ. ಪರಿಣಾಮ ಸಂತೆಯ ದಿನ ಇಡೀ ರಸ್ತೆ ಒಂದು ಕಿಲೋ …

Read More »

ವಿಜಯಪುರ ಅತ್ಯಾಚಾರಿ ಆತ್ಮಹತ್ಯೆ: ನಾಲ್ವರು ಪೊಲೀಸರ ಅಮಾನತು

ವಿಜಯಪುರ, ಆಗಸ್ಟ್ 30: ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ವ್ಯಕ್ತಿ ಪೊಲೀಸ್​ ಠಾಣೆ ಶೌಚಾಲಯದಲ್ಲೇ ನೇಣಿಗೆ ಶರಣಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಂದಗಿ ಠಾಣೆಯ ನಾಲ್ವರು ಪೊಲೀಸ್​ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಆರೋಪದ ಮೇರೆಗೆ ಪೊಲೀಸರ ಅಮಾನತು ಮಾಡಿದ್ದು, ರಾಷ್ಟ್ರೀಯ ಮಾನವ ಹಕ್ಕುಗಳ ನಿಯಮದ ಪ್ರಕಾರ ಕ್ರಮ ಕೈಗೊಂಡಿದ್ದಾಗಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸಬ್‌ ಇನ್ಸ್‌ಪೆಕ್ಟರ್ ಸಂಗಮೇಶ್ ಹೊಸಮನಿ, …

Read More »

ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಧ್ವನಿ ಎತ್ತಿದ RTI ಕಾರ್ಯಕರ್ತನ ಮೇಲೆ ಹಲ್ಲೆ

ಬೆಂಗಳೂರು: ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಅರ್ಜಿ ಸಲ್ಲಿಸಿದ್ದ RTI ಕಾರ್ಯಕರ್ತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸರ್ಜಾಪುರದ ಸೋಂಪುರ ಬಳಿ ನಡೆದಿದೆ. ಮಾಡ್ರನ್ ಸ್ಪೇಸ್ ಕಂಪನಿಯ ಯತೀಶ್ ಮತ್ತು ಮಂಜುನಾಥ್ ಅಕ್ರಮ ಕಟ್ಟಡ ಕಾಮಗಾರಿ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿ RTI ಕಾರ್ಯಕರ್ತ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ರು. ಅರ್ಜಿ ಪರಿಶೀಲಿಸಿ ಎಚ್ಚೆತ್ತುಕೊಂಡ ಅಧಿಕಾರಿಗಳು, ಡ್ರೀಮ್ಸ್ ಇನ್ ಪ್ರಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಗೆ ಸಂಬಂಧಿಸಿದ ಸೋಂಪುರದ ಸರ್ವೆ …

Read More »

ಶೂ ಹಾಕಿಕೊಂಡೇ ದೇಗುಲ ಪ್ರವೇಶಿಸಿ ದೇವರ ದರ್ಶನ ಪಡೆದ ಸಚಿವ ಪ್ರಭು ಚೌಹಾಣ್

ಹಾವೇರಿ:ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಎಡವಟ್ಟು ಮಾಡಿಕೊಂಡಿದ್ದಾರೆ.ದೇಗುಲದ ಒಳಗೇ ಶೂ ಹಾಕಿಕೊಂಡು ದೇವರ ದರ್ಶನ ಪಡೆದಿದ್ದಾರೆ.ಹಾವೇರಿ‌ ಜಿಲ್ಲೆಯ ಶಿಗ್ಗಾವಿಯ ಬಂಕಾಪುರ ಪಟ್ಟಣದಲ್ಲಿ ನಡೆದಿರುವ ಘಟನೆ . ಬಂಕಾಪುರದ ಪ್ರಸಿದ್ಧ ನಗರೇಶ್ವರ ದೇವಾಲಯದ ಒಳಗೆ ಶೂ ಹಾಕಿಕೊಂಡು ಹೋಗಿ ದೇವರ ದರ್ಶನ ಪಡೆದ ಚೌಹಾಣ್ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.ಮುಖ್ಯಮಂತ್ರಿಯವರ ಆದೇಶದ ಮೇರೆಗೆ ಜಿಲ್ಲೆಯು ಪ್ರವಾಸ ಕೈಗೊಂಡಿರುವ ಪಶು ಸಂಗೋಪನೆ ಸಚಿವರಾದ ಪ್ರಭು ಚೌಹಾಣ್ ರವರು ಹಾವೇರಿ ಪ್ರವಾಸದಲ್ಲಿ ಇದ್ದಾರೆ. ಈ ಮಧ್ಯೆ …

Read More »

ನಿಂತಿದ್ದ ಲಾರಿಗೆ ಪೊಲೀಸ್​ ಜೀಪ್​ ಡಿಕ್ಕಿ: ಡಿಎಸ್ಪಿ ಗೆ ಗಂಭೀರ ಗಾಯ

ಯಾದಗಿರಿ: ನಿಂತ ಲಾರಿಗೆ ಹಿಂಬದಿಯಿಂದ ಪೊಲೀಸ್​ ಜೀಪ್​ ಡಿಕ್ಕಿ ಹೊಡೆದ ಪರಿಣಾಮ ಜೀಪ್​ನಲ್ಲಿದ್ದ ಡಿಎಸ್ಪಿ ಗಂಭೀರವಾಗಿ ಗಾಯಗೊಂಡ ಘಟನೆ ಶಹಾಪುರದ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.   ಬೆಳಗಿನ ಜಾವ ಘಟನೆ ನಡೆದಿದೆ ಎನ್ನಲಾಗಿದ್ದು, ನೈಟ್ ರೌಂಡ್ಸ್ ನಲ್ಲಿದ್ದ ಸುರಪುರ ಡಿಎಸ್ಪಿ ವೆಂಕಟೇಶ ಉಗಿಬಂಡಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನುಳಿದಂತೆ ಪೊಲೀಸ್ ವಾಹನದಲ್ಲಿದ್ದ ಕಾರು ಚಾಲಕ ಹಾಗೂ ಪೊಲೀಸ್ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಗೊಂಡ ಡಿಎಸ್ಪಿ ಯನ್ನು ಕಲಬುರಗಿ …

Read More »

ಪಕ್ಷದಿಂದ 34 ಮಂದಿಯನ್ನು ಉಚ್ಛಾಟಿಸಿದ ಕಾಂಗ್ರೆಸ್​​

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ವಿರುದ್ಧ ಹೋದ ಬಂಡಾಯ ಅಭ್ಯರ್ಥಿಗಳನ್ನು ಕಾಂಗ್ರೆಸ್​ ಪಕ್ಷದಿಂದ ಉಚ್ಛಾಟಿಸಿದೆ. ಪಾಲಿಕೆ ಚುನಾವಣೆಯಲ್ಲಿ ಪಕ್ಷದ ನಾಯಕರ ಮನವೊಲಿಕೆಗೂ ಮಣಿಯದೇ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದ 34 ಜನರನ್ನು ಮುಂದಿನ 6 ವರ್ಷ ಪಕ್ಷದಿಂದ ಉಚ್ಚಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಆದೇಶ ಹೊರಡಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯ ಚಟುವಟಿಕೆಗಳು ಗರಿಗೆದರಿದ್ದು, ನಗರದ ಮೊದಲ ಪ್ರಜೆಯಾಗಲು ಮೂರು ಪಕ್ಷಗಳು ತೀವ್ರ ಜಟಾಪಟಿ ನಡೆಸುತ್ತಿವೆ.

Read More »