ಮೈಸೂರು: ವಿಶ್ವವಿಖ್ಯಾತ 411ನೇ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ವಿದ್ಯುಕ್ತ ಚಾಲನೆ ಸಿಗಲಿದೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಸೇರಿದಂತೆ ಗಣ್ಯರು ಆ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ದಸರಾ ಸಂಬ್ರಮದಲ್ಲಿರುವ ಅರಮನೆ ನಗರಿ ಮೈಸೂರು ಮಧುವಣಗಿತ್ತಿಯಂತೆ …
Read More »ಗೋವಿಂದ ಕಾರಜೋಳ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ
ರನ್ನ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಆಗ್ರಹಿಸಿ,ಕಳೆದ 72 ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಯು ಇಂದು ತೀವ್ರ ಸ್ವರೂಪಕ್ಕೆ ಪಡೆದುಕೊಂಡ ಘಟನೆ ಬಾಗಲಕೋಟ ಜಿಲ್ಲೆಯ ಮುದೋಳ ಪಟ್ಟಣದಲ್ಲಿ ಜರುಗಿದೆ ,ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಲಾಗಿತ್ತು. ಆದರೆ ಇದನ್ನು ತಡೆಯಲು ಪೊಲೀಸ್ ಬಿಗಿ ಭದ್ರತಾ ಏರ್ಪಡಿಸಿದ್ದ ರಿಂದ ಕೆಲ ಸಮಯ ಗೊಂದಲಮಯ ವಾತಾವರಣ ಉಂಟಾಗಿತು. ಸಚಿವ ಕಾರಜೋಳ ಮನೆಗೆ ಮುತ್ತಿಗೆ …
Read More »ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು ವೈದ್ಯರ ಮುಷ್ಕರ : `OPD’ ಸೇವೆ ವ್ಯತ್ಯಯ
ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಆಸ್ಪತ್ರೆಗಳ ಸ್ಥಾನಿಕ ವೈದ್ಯರು (Doctor) ಇಂದು ಹೊರ ರೋಗಿ ಸೇವೆ (OPD) ಬಹಿಷ್ಕರಿಸಿ ಮುಷ್ಕರ (Strike) ನಡೆಸಲಿದ್ದಾರೆ. ಇಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸ್ಥಾನಿಕ ವೈದ್ಯರು ಹಾಗೂ ಇಂಟರ್ನಿ ವೈದ್ಯರು ಮುಷ್ಕರ (Strike) ನಡೆಸಲಿದ್ದು, ಇದರಿಂದ ಸರ್ಕಾರಿ ಆಸ್ಪತ್ರೆಗಳ ಹೊರರೋಗಿಗಳ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಕೊರೊನಾ ಅಪಾಯ ಭತ್ಯೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ …
Read More »ರಸ್ತೆ ಗುಂಡಿಗಳ ಬಗ್ಗೆ ವರದಿ ತಯಾರಿಸಲು ಕಾರ್ಯಪಡೆ ರಚಿಸಲು ನಿರ್ಧರಿಸಲಾಗಿದೆ:ಬೊಮ್ಮಾಯಿ
ಮೈಸೂರು: ಬೆಂಗಳೂರಿನಲ್ಲಿನ ರಸ್ತೆ ಗುಂಡಿಗಳ ಬಗ್ಗೆ ವರದಿ ತಯಾರಿಸಲು ಕಾರ್ಯಪಡೆ ರಚಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಸಿದರು. ರಸ್ತೆ ಗುಣಮಟ್ಟದ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ. ಕಳಪೆ ಕಾಮಗಾರಿಯಿಂದ ಗುಂಡಿಗಳು ಬಿದ್ದಿದ್ದರೆ ಗುತ್ತಿಗೆದಾರನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದು ನಿಶ್ಚಿತ ಎಂದು ಬೊಮ್ಮಾಯಿ ಎಚ್ಚರಿಸಿದರು. ಯಾವ ಅವಧಿಯಲ್ಲಿ ರಸ್ತೆ ಆಗಿದೆ? ರಸ್ತೆಗಳನ್ನು ನಿರ್ಮಿಸುವಾಗ ಗುಣಮಟ್ಟ ಕಾಪಾಡಲಾಗಿದೆಯೇ ಎಂಬ ಬಗ್ಗೆ ವಿಸ್ತೃತ ವರದಿ ತರಿಸಿಕೊಳ್ಳುತ್ತೇನೆ. ಕಳಪೆ ಕಾಮಗಾರಿಯಿಂದ ರಸ್ತೆಯಲ್ಲಿ ಗುಂಡಿ …
Read More »ಬೆಳಗಾವಿ: ಭಾರಿ ಮಳೆಗೆ ಮನೆ ಕುಸಿದು ಒಂದೇ ಮನೆಯ 7 ಜನರು ಮೃತ, 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಳಗಾವಿ: ಭಾರಿ ಮಳೆಗೆ ಮನೆ ಕುಸಿದು ಒಂದೇ ಮನೆಯ ಐವರು ಮೃತಪಟ್ಟ ವಿಷಾದಕರ ಘಟನೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಸಂಭವಿಸಿದೆ. 7 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಗಂಗವ್ವ ಭೀಮಪ್ಪ(80), ಸತ್ಯವ್ವ ಅರ್ಜುನ್(45), ಕಾಶವ್ವ(8), ಪೂಜಾ ಅರ್ಜುನ್(8), ಸವಿತಾ ಭೀಮಪ್ಪ(28) ಮೃತರು. ಭೀಮಪ್ಪ ಖನಗಾಂವಿ ಎಂಬುವವರಿಗೆ ಸೇರಿದ ಮನೆ ಕುಸಿದಿದೆ. ಸ್ಥಳದಲ್ಲೇ ಐವರು, ಆಸ್ಪತ್ರೆಗೆ ಸಾಗಿಸುವಾಗ …
Read More »ಮಹಾಮಳೆಗೆ ಕುಸಿದುಬಿದ್ದ ಮನೆ.. ಒಂದೇ ಕುಟುಂಬದ 7 ಮಂದಿ ಸಾವು
ಬೆಳಗಾವಿ: ನಿನ್ನೆಯಿಂದ ಎಡೆಬಿಡದೇ ಸುರಿಯುತ್ತಿರುವ ಭಾರಿ ಮಳೆಗೆ ಮನೆ ಬಿದ್ದು ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಮಳೆಗೆ ಮನೆ ಕುಸಿದಿದ್ದರಿಂದ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮತ್ತಿಬ್ಬರು ಸಾವಿನ ಕದ ತಟ್ಟಿದ್ದಾರೆ. ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಮೃತರೆಲ್ಲರೂ ಭೀಮಪ್ಪಾ ಖನಗಾವಿ ಕುಟುಂಬದ ಸದಸ್ಯರಾಗಿದ್ದಾರೆ. ಮೃತರನ್ನು ಗಂಗವ್ವ ಖನಗಾವಿ (50), ಸತ್ಯವ್ವ ಖನಗಾವಿ (45), ಪೂಜಾ …
Read More »ಹಸಿರುಕ್ರಾಂತಿ ಸಂಸ್ಥಾಪಕ ಸಂಪಾದಕರಾದ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ನಿಧನ
ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ *ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು * ಅವರು ಬೆಳಗಾವಿ ಜಿಲ್ಲೆ ಗೋಕಾಕದಲ್ಲಿ ಬುಧವಾರ ದಿ.6 ರಂದು ಮುಂಜಾನೆ ಕೊನೆಯುಸಿರೆಳೆದರು… ಜನ್ಮತಃ ಹೋರಾಟದ ಮನೋಭಾವದ *ಕಲ್ಯಾಣರಾವ್ ಮುಚಳಂಬಿಯವರು * ಬುಧವಾರ ಮುಂಜಾನೆ ಸಾವಳಗಿ ಬಳಿ ಹೋರಾಟದ ಅಂಗವಾಗಿ ಪಾದಯಾತ್ರೆಯೊಂದರಲ್ಲಿ ಪಾಲ್ಗೊಂಡಿದ್ದರು. ಹೋರಾಟಗಾರನೊಬ್ಬ ಹೋರಾಟದ ಸಮಯದಲ್ಲಿಯೇ ಅಸುನೀಗಿರುವುದು ಅವರ ವ್ಯಕ್ತಿತ್ವದ ಸಾಧನೆಗೆ ಸಿಕ್ಕ ಗೌರವ.. ರಾಜ್ಯದ ರೈತ ಹೋರಾಟದಲ್ಲೇ ತಮ್ಮ …
Read More »ಇಂಜಿನ್ ಹೋದ್ರೆ ಡಬ್ಬಿಗಳು ಏನೂ ಮಾಡುವುದಕ್ಕೆ ಆಗುವುದಿಲ್ಲ ರಮೇಶ ಜಾರಕಿಹೊಳಿ ಹೆಸರು ಹೇಳದೇ ಟಾಂಗ್ ಕೊಟ್ಟ ಸತೀಶ ಜಾರಕಿಹೊಳಿ
ಇಂಜಿನ್ ಹೋದ ಮೇಲೆ ಕಾಂಗ್ರೆಸ್‍ನಲ್ಲಿ ಎಲ್ಲಾ ಗುಂಪುಗಾರಿಕೆ ಹೋಗಿ ಬಿಟ್ಟಿದೆ. ನಮ್ಮಲ್ಲಿ ಇಂಜಿನ್ ಈಗ ಇಲ್ಲ. ಈಗ ಬಿಜೆಪಿಯಲ್ಲಿದೆ, ಅಲ್ಲಿ ಏನು ಆಗುತ್ತೆ ಹೇಳುವುದಕ್ಕೆ ಬರುವುದಿಲ್ಲ ಎಂದು ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪರೋಕ್ಷವಾಗಿ ಲೇವಡಿ ಮಾಡಿದರು.ಕಾಂಗ್ರೆಸ್‍ನಲ್ಲಿನ ಗುಂಪುಗಾರಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬುಧವಾರ ಬೆಳಗಾವಿಯಲ್ಲಿ ಉತ್ತರಿಸಿದ ಸತೀಶ ಜಾರಕಿಹೊಳಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಾವು ಗುಂಪುಗಾರಿಕೆಯಿಂದ ಸೋತಿದ್ದು ನಿಜ. ಆದರೆ …
Read More »ಗ್ರಾಮೀಣ ಕ್ಷೇತ್ರದಲ್ಲಿ ಎರಡು ಚಡ್ಡಿಗಳಿವೆ. ಇನ್ನು ಎರಡು ವರ್ಷ ಚಡ್ಡಿ ಗಟ್ಟಿ ಉಳಿಯಬೇಕಲ್ಲ.: ಸತೀಶ ಜಾರಕಿಹೊಳಿ
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಈಗಾಗಲೇ ಎರಡು ಕ್ಯಾಂಡಿಡೇಟ್‍ಗಳಾಗಿವೆ. ಎರಡು ಚಡ್ಡಿಗಳಿವೆ. ಇನ್ನು ಎರಡು ವರ್ಷ ಚಡ್ಡಿ ಗಟ್ಟಿ ಉಳಿಯಬೇಕಲ್ಲ. ಇವರಿವರ ಬಡಿದಾಡಿ ಹರಿದುಕೊಂಡರೆ ಏನೂ ಮಾಡೋಕೆ ಬರುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಲೇವಡಿ ಮಾಡಿದರು.ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಂಜಯ್ ಪಾಟೀಲ್ ಹೇಳಿಕೆ ಬಗ್ಗೆ ಬುಧವಾರ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ ವಿರೋಧಿಗಳು ಯಾವಾಗಲೂ ಇರಬೇಕು. ವಿರೋಧಿಗಳು ಇಲ್ಲ ಎಂದರೆ ನಾವು ಮಲಗಿ ಬಿಡುತ್ತೇವೆ. …
Read More »ಅಂಬೇಡ್ಕರ್ ವೃತ್ತದಿಂದ ಸಂಜಯ ಪಾಟೀಲ ಅಣುಕು ಶವಯಾತ್ರೆ ಭಾವ ಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ, ದಲಿತ ಸಂಘಟನೆಗಳು
ಬೆಳಗಾವಿ: ಗ್ರಾಮೀಣ ಮತಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಶಾಸಕ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ವಿರುದ್ಧ ಬುಧವಾರ ನಗರದ ಅಂಬೇಡ್ಕರ್ ವೃತ್ತದಿಂದ ಅಣುಕು ಶವಯಾತ್ರೆ ನಡೆಸಿದ ವಿವಿಧ ದಲಿತ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಸಂಜಯ ಅವರ ಭಾವ ಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿ, ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ರವಾನಿಸಿದರು. ಬೆಳಗಾವಿ ಗ್ರಾಮೀಣ …
Read More »