ಬೆಳಗಾವಿ: ಖಾನಪುರದ ರೈಲ್ವೆ ಹಳಿಯ ಮೇಲೆ 24 ವರ್ಷದ ಮುಸ್ಲಿಂ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು, ಅನ್ಯ ಧರ್ಮದ ಯುವತಿಯನ್ನು ಪ್ರೀತಿಸುತ್ತಿದ್ದರಿಂದ ಆತನನ್ನು ಹತ್ಯೆ ಮಾಡಿರಬಹುದೆಂಬ ಅನುಮಾನ ಉಂಟಾಗಿದೆ. ಮೃತನನ್ನು ಅರ್ಬಾಜ್ ಅಫ್ತಾಬ್ ಮುಲ್ಲಾ ಎಂದು ಗುರುತಿಸಲಾಗಿದೆ. ಈತ ಬೇರೆ ಧರ್ಮಕ್ಕೆ ಸೇರಿದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಐಪಿಸೆ ಸೆಕ್ಷನ್ 302ರ ಅಡಿಯಲ್ಲಿ ಹತ್ಯೆ ಪ್ರಕರಣ ದಾಖಲಿಸಲಾಗಿದೆ. ಆತ ಬೇರೆ ಧರ್ಮಕ್ಕೆ ಸೇರಿದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎಂಬ ಮಾಹಿತಿ ಆಧಾರದ ಮೇಲೆ …
Read More »ಯುಪಿಎ ಅವಧಿಯಲ್ಲೇ ಹಗರಣಗಳು ಹೆಚ್ಚು : ಸಚಿವ ಪ್ರಹ್ಲಾದ ಜೋಶಿ
ಹುಬ್ಬಳ್ಳಿ: ದೇಶದ ಇತಿಹಾಸದಲ್ಲಿ ಅತ್ಯಂತ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದ್ದೇ 10 ವರ್ಷಗಳ ಯುಪಿಎ ಸರಕಾರದ ಅವಧಿಯಲ್ಲಿ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಪಿಎ ಆಡಳಿತದಲ್ಲಿ 1 ಲಕ್ಷ 76 ಸಾವಿರ ಕೋಟಿ ರೂ. 2ಜಿ, 2 ಲಕ್ಷ 84 ಸಾವಿರ ಕೋಟಿ ರೂ. ಕಲ್ಲಿದ್ದಲು, ಸ್ಪೆಕ್ಟ್ರಂ, ಕ್ರೀಡೆ ಸೇರಿದಂತೆ ಪ್ರತಿಯೊಂದರಲ್ಲೂ ಸಹಿತ ಭ್ರಷ್ಟಾಚಾರ-ಹಗರಣ ಮಾಡಿದರು. ಈಗ ಪ್ರಧಾನಿ ಮೋದಿ …
Read More »ಉಪಚುನಾವಣೆಗಳಿಗೆ ಬಿಜೆಪಿ ಉಸ್ತುವಾರಿ ನೇಮಕ | ವಿಜಯೇಂದ್ರಗೆ ಸಿಗದ ಸ್ಥಾನ
ಬೆಂಗಳೂರು: ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಗೆ ಸಿದ್ಧತೆ ನಡೆಸಿರುವ ಬಿಜೆಪಿ ಇಂದು ಉಸ್ತುವಾರಿಗಳನ್ನು ನೇಮಕ ಮಾಡಿದೆ. ಎರಡೂ ಕ್ಷೇತ್ರಗಳ ಉಸ್ತುವಾರಿ ಪಟ್ಟಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರಿಗೆ ಸ್ಥಾನ ಸಿಗದಿರುವುದು ಇದೀಗ ಗಮನ ಸೆಳೆಯುತ್ತಿದೆ. ಸಿಂಧಗಿ ವಿಧಾನ ಸಭೆ ಕ್ಷೇತ್ರಕ್ಕೆ ಗೋವಿಂದ್ ಕಾರಜೋಳ, ವಿ.ಸೋಮಣ್ಣ, ಸಿ.ಸಿ ಪಾಟೀಲ್, ಶಶಿಕಲಾ ಜೊಲ್ಲೆ, ರಮೇಶ್ ಜಿಗಜಿಣಗಿ, ಬಸನಗೌಡ ಪಾಟೀಲ್ ಯತ್ನಾಳ, ಲಕ್ಷ್ಮಣ ಸವದಿ, ಸೋಮನಗೌಡ ಪಾಟೀಲ್, ಎ.ಎಸ್. ಪಾಟೀಲ್ …
Read More »ಮಾಂಜ್ರಾ ನದಿ: 60 ಅಡಿ ಮೇಲಿಂದ ಧುಮುಕಿ ಯುವಕನ ಹುಚ್ಚಾಟ
ಬೀದರ್: ಮಹಾರಾಷ್ಟ್ರದಿಂದ ಭಾರೀ ನೀರು ಬಿಟ್ಟ ಕಾರಣ ಮಾಂಜ್ರಾ ನದಿ ಮೈದುಂಬಿ ಹರಿಯುತ್ತಿದ್ದು ನೋಡುಗರ ಕಣ್ಮನ ಸೆಳೆಯುತ್ತಿದೆ. ಉಕ್ಕಿ ಹರಿಯುತ್ತಿರುವ ಈ ನದಿಯಲ್ಲಿ ಯುವಕರು ಜೀವವನ್ನು ಲೆಕ್ಕಿಸದೇ ದುಸ್ಸಾಹಸಕ್ಕೆ ಮುಂದಾಗುತ್ತಿದ್ದು ಪ್ರಾಣಕ್ಕೆ ಸಂಚಕಾರ ತಂದುಕೊಳ್ಳುವ ಭರದಲ್ಲಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಸುರಿದ ಮಳೆ ಮತ್ತು ನೆರೆಯ ರಾಜ್ಯದಿಂದ ನೀರಿ ಬಿಟ್ಟ ಕಾರಣ ಮಾಂಜ್ರಾ ನದಿ ತುಂಬಿ ತುಳುಕುತ್ತಿದೆ. ಕಳೆದ ತಿಂಗಳು ಈ ನದಿಯಲ್ಲಿ ದುಸ್ಸಾಹಸಕ್ಕೆ ಮುಂದಾಗಿದ್ದ ವ್ಯಕ್ತಿಯೋರ್ವ ನದಿಪಾಲಾಗಿದ್ದ. ಆ …
Read More ».ಮದ್ಯ ಸೇವಿಸಿ ಅತಿವೇಗವಾಗಿ ಕಾರು ಚಾಲನೆ,ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ್ದು ಅರ್ಧ ಕಿ.ಮೀಗೂ ಹೆಚ್ಚು ದೂರ ಮೃತದೇಹವನ್ನ ಕಾರ್ ಎಳೆದೊಯ್ದಿದೆ..!
ಮಂಡ್ಯ: ಮಂಡ್ಯದ ನಾಗಮಂಗಲದಲ್ಲಿ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ್ದಾನೆ. ನಾಗಮಂಗಲ ತಾಲೂಕಿನ ಕಸಲಗೆರೆ ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು ಗ್ರಾಮದ ಚಂದ್ರಣ್ಣ(50) ಮೃತ ದುರ್ದೈವಿ. ಅದೇ ಗ್ರಾಮದ ಬಸವರಾಜು ಅಪಘಾತವೆಸಗಿದ ಪಾನಮತ್ತ ಚಾಲಕ. ಕೆಲಸ ನಿಮಿತ್ತ ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಬಂದಿದ್ದ ಬಸವರಾಜು.. ಬೇರೊಬ್ಬರ ರೇಂಜ್ ರೋವರ್ ಕಾರು ತಂದಿದ್ದ ಎನ್ನಲಾಗಿದೆ. ವಾಪಾಸ್ ಬೆಂಗಳೂರಿಗೆ ತೆರಳುವ ವೇಳೆ ಅಪಘಾತ ನಡೆದಿದೆ …
Read More »ಭಾರತ್ ಬಂದ್ ವೇಳೆ ಪೊಲೀಸರ ವಾಕಿಟಾಕಿಯೇ ಕಳವು
ಬೆಂಗಳೂರು: ಸೆಪ್ಟೆಂಬರ್ 27 ರಂದು ಕೃಷಿ ಕಾಯ್ದೆ ವಿರೋಧಿಸಿ ನಡೆದ ಭಾರತ್ ಬಂದ್ ವೇಳೆ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರ ವಾಕಿಟಾಕಿ ಕಳ್ಳತನವಾಗಿದೆ. ಟೌನ್ ಹಾಲ್ ಮುಂಭಾಗ ಘಟನೆ ನಡೆದಿದೆ. ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಹಲವು ಸಂಘಟನೆಗಳು ಭಾರತ್ ಬಂದ್ ನಡೆಸಿದ್ದವು. ಈ ವೇಳೆ ಟೌನ್ ಹಾಲ್ ಬಳಿ ರೈತರು ಪ್ರತಿಭಟನಾ ಜಾಥಾ ನಡೆಸಿದ್ದರು. ಈ ವೇಳೆ ಟೌನ್ ಹಾಲ್ ಬಳಿ ಕರ್ತವ್ಯಕ್ಕೆ ಎಸ್ ಜೆ ಪಾರ್ಕ್ ಠಾಣೆ …
Read More »ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿಗೆ ಸೇರಿದ ಕಾರ್ ಡಿಕ್ಕಿ.. ಮಹಿಳೆ ಸ್ಥಳದಲ್ಲೇ ಸಾವು
ಹಾಸನ: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿಯವರಿಗೆ ಸೇರಿದ ಕಾರ್ ಬೈಕ್ಗೆ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹನುಮಂತನಗರದ ಬಳಿ ನಡೆದಿದೆ. ಶಾಸಕರ ಕಾರ್ ಚಾಲಕ ಕಾರ್ನಲ್ಲಿ ಬೇಲೂರಿನತ್ತ ಬರುತ್ತಿದ್ದ.. ಈ ವೇಳೆ ಮುಂದೆ ಚಲಿಸುತ್ತಿದ್ದ ಬೈಕ್ಗೆ ಡಿಕ್ಕಿಯಾಗಿದೆ. ಚಾಲಕ ಡ್ರಿಂಕ್ ಅಂಡ್ ಡ್ರೈವ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆ ಹೂವಮ್ಮ (55) ಸಾವನ್ನಪ್ಪಿದ್ದು, ಪುತ್ರನಿಗೆ ಗಂಭೀರ ಗಾಯವಾಗಿದೆ. …
Read More »ಆನಂದ್ ಸಿಂಗ್‍ರನ್ನು ಉಡಕ್ಕೆ ಹೋಲಿಸಿದ ಬೊಮ್ಮಾಯಿ
ವಿಜಯನಗರ: ರಾಜ್ಯದ ನೂತನ ಜಿಲ್ಲೆಯಾಗಿ ವಿಜಯನಗರ ಅಧಿಕೃತವಾಗಿ ಇಂದು ಉದ್ಘಾಟನೆಯಾಗಿದೆ. ಜಿಲ್ಲಾ ಕೇಂದ್ರ ಹೊಸಪೇಟೆಯ ಮುನಿಸಿಪಲ್ ಕ್ರೀಡಾಂಗಣದಲ್ಲಿ ರಚಿಸಿದ್ದ ಭವ್ಯ ವೇದಿಕೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‍ವೈ ಅಧಿಕೃತವಾಗಿ ಜಿಲ್ಲೆಯ ಉದ್ಘಾಟನೆಯನ್ನು ಮಾಡಿದ್ದಾರೆ. ಈ ವೇಳೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಆನಂದ್ ಸಿಂಗ್ ಹಠವಾದಿ. ಅವರು ಒಂದು ಕೆಲಸ ಹಿಡಿದರೆ ಮಾಡದೇ ಬಿಡಲ್ಲ. ಅವರು ಉಡದ ಹಾಗೆ ಕೆಲಸ ಮುಗಿಯುವವರೆಗೂ ಬಿಡಲ್ಲ. ನೂತನ ಜಿಲ್ಲೆಯ ಅಭಿವೃದ್ಧಿಗೆ ಇಡೀ …
Read More »ಎರಡು ಉಪಚುನಾವಣೆಯಲ್ಲಿ ಬಿಜೆಪಿ ಧೂಳಿಪಟ ಖಚಿತ: ಎಸ್‍ಆರ್ ಪಾಟೀಲ್
ಬಾಗಲಕೋಟೆ: ಸಿಂಧಗಿ, ಹಾನಗಲ್ ಎರಡು ಉಪಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದ್ದು, ಬಿಜೆಪಿ ಧೂಳಿಪಟವಾಗಲಿದೆ ಎಂದು ಪರಿಷತ್ ವಿಪಕ್ಷ ನಾಯಕ ಎಸ್‍ಆರ್ ಪಾಟೀಲ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತೆ, ಬಿಜೆಪಿ ಸೋಲುವುದು ನಿಶ್ಚಿತ ಎಂದು ಭವಿಷ್ಯ ನುಡಿದರು. ಹಾನಗಲ್ ಕ್ಷೇತ್ರದಲ್ಲಿ ಟಿಕೆಟ್ ವಿಚಾರವಾಗಿ ಭಿನ್ನಾಭಿಪ್ರಾಯ ಶುರುವಾಗಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಹಾನಗಲ್ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿದ್ದಾರೆ. ನಮ್ಮ ಪಕ್ಷದಲ್ಲಿ ಒಮ್ಮತದಿಂದ …
Read More »ಬೆಳಗಾವಿ ಲೋಕಸಭೆಯಿಂದ ನನ್ನ ಸ್ಪರ್ಧೆ ನಿಶ್ಚಿತ : ಸತೀಶ್ ಜಾರಕಿಹೊಳಿ
ಚಿಕ್ಕೋಡಿ: ಮುಂದಿನ ವಿಧಾನಸಭಾ ಚುನಾವಣೆಗೆ ಪುತ್ರನಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಈಗಿನಿಂದಲೇ ತಯಾರಿ ನಡೆಸಿದ್ದಾರೆ. ಇದಕ್ಕೆ ಸಾಕ್ಷಿ ಎನ್ನುವಂತೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮದಲ್ಲಿ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರ ಹುಟ್ಟುಹಬ್ಬವನ್ನ ಆಚರಣೆ ಮಾಡಲಾಯಿತು. ರಾಹುಲ್ ಜಾರಕಿಹೊಳಿ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದ್ದ, ಹುಟ್ಟುಹಬ್ಬದ ಆಚರಣೆಯಲ್ಲಿ ಐದು ಸಾವಿರಕ್ಕೂ ಹೆಚ್ಚಿನ ಜನ ಪಾಲ್ಗೊಂಡಿದ್ದರು. ಅಷ್ಟೇ …
Read More »