Breaking News

ಗೋವಾದಲ್ಲಿ ಆಲ್ಕೋಹಾಲ್‌ ಮ್ಯೂಸಿಯಂ!

ಪಣಜಿ: ಪ್ರವಾಸಿ ರಾಜ್ಯ ಗೋವಾದಲ್ಲಿ ಮೊದಲ ಆಲ್ಕೋಹಾಲ್‌ ಮ್ಯೂಸಿಯಂ ತೆರೆಯಲಾಗಿದೆ. ಸ್ಥಳೀಯ ವಿಶೇಷ ಮದ್ಯವೆನಿಸಿಕೊಂಡಿರುವ ಫೆನ್ನಿಯ ಪ್ರಸಿದ್ಧತೆಯನ್ನು ದೇಶ ವಿದೇಶಕ್ಕೆ ಹರಡಿಸುವ ಉದ್ದೇಶದೊಂದಿಗೆ ಈ ಮ್ಯೂಸಿಯಂ ತೆರೆಯಲಾಗಿದೆ. ಉದ್ಯಮಿ ನಂದನ್‌ ಕುಡcಡ್ಕರ್‌ “ಆಲ್‌ ಎಬೌಟ್‌ ಆಲ್ಕೋಹಾಲ್‌’ ಹೆಸರಿನ ಮ್ಯೂಸಿಯಂ ತೆರೆದಿದ್ದಾರೆ. ಕಾಂಡೋಲಿಮ್‌ ಬೀಚ್‌ ಗ್ರಾಮದ ಬಳಿ ಈ ಮ್ಯೂಸಿಯಂ ಇದೆ. ಇದರಲ್ಲಿ ವಿಶೇಷವಾಗಿ ಪೆನ್ನಿಗೆ ಸಂಬಂಧಪಟ್ಟ ಸಾಮಗ್ರಿಗಳನ್ನು ಪ್ರದರ್ಶಿಸಲಾಗುವುದು. ಹಿಂದಿನ ಕಾಲದಲ್ಲಿ ಪೆನ್ನಿಯನ್ನು ಸಂಗ್ರಹಿಸುಡುತ್ತಿದ್ದ ಬೃಹದಾಕಾರದ ಹೂಜಿಗಳು, ಪೆನ್ನಿಗೆ ಸಂಬಂಧಿಸಿದ …

Read More »

ನಡುರಾತ್ರಿ ರಂಗೇರಿದ ಬೆಳಗಾವಿ ರಾಜಕೀಯ: ಪಾಲಿಕೆ ಚುನಾವಣೆಗೆ ಕೈ-ಕಮಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಳಗಾವಿ: ಬೆಳಗಾವಿಯ ಮಹಾನಗರ ಪಾಲಿಕೆಯ ಚುನಾವಣೆಯ ಕಾವು ರಂಗೇರುತ್ತಿದೆ. ಸೆಪ್ಟೆಂಬರ್ 3 ರಂದು 58 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ನಡುರಾತ್ರಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿವೆ. ಬಿಜೆಪಿಯಿಂದ ರಾತ್ರಿ ತುರ್ತು ಸುದ್ದಿ ಗೋಷ್ಠಿ ನಡೆಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಾಸಕ ಅಭಯ್ ಪಾಟೀಲ್, ಸಂಸದೆ ಮಂಗಲಾ ಅಂಗಡಿ, ಶಾಸಕ ಅನಿಲ್ ಬೆನಕೆ ನೇತೃತ್ವದಲ್ಲಿ 21 ಜನರ ಅಭ್ಯರ್ಥಿಗಳ ಮೊದಲ ಹಂತದ ಮೊದಲ …

Read More »

ಬೆಳಗಾವಿ :ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರು ದಾಳಿ 28 ಜನರ ಬಂಧನ ನಗದು ಜಪ್ತಿ: ಡಿಸಿಪಿ ವಿಕ್ರಂ ಅಮಟೆ

ಬೆಳಗಾವಿ–  ಮೂರು ಕಡೆಗಳಲ್ಲಿ ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, 28 ಜನರನ್ನು ಬಂಧಿಸಿದ್ದಾರೆ. ಈ ಕುರಿತು ಡಿಸಿಪಿ ವಿಕ್ರಂ ಅಮಟೆ ಮಾಹಿತಿ ನೀಡಿದ್ದಾ್ರೆ. ದಿ. 21/08/2021 ರಂದು ರಾತ್ರಿ  ಅಂಬೇಡ್ಕರ ನಗರದ ಸಾವ೯ಜನಿಕ ಸ್ಥಳದಲ್ಲಿ ಕುಳಿತುಕೊಂಡು  ಇಸ್ಪೀಟ್ ಎಲೆಗಳ ಮೇಲೆ ಹಣವನ್ನು ಪಣಕ್ಕೆ ಕಟ್ಟಿ ಅಂದರ ಬಾಹರ್ ಅನ್ನುವ ಜುಗಾರ ಆಟ ಆಡುತ್ತಿರುವವರ ದಾಳಿ ಮಾಡಿದ್ದು, ದಾಳಿ ಕಾಲಕ್ಕೆ 10 ಜನ ಆರೋಪಿತರನ್ನು ವಶಕ್ಕೆ ಪಡೆಯಲಾಗಿದೆ.  ಅವರಿಂದ  …

Read More »

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಕಾಂಗ್ರೆಸ್ ಪಟ್ಟಿ ರಾತ್ರೋ ರಾತ್ರಿ ಬಿಡುಗಡೆ, ಇಲ್ಲಿದೆ ಅಭ್ಯರ್ಥಿ ಗಳ ಡೀಟೇಲ್ಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ವಾರ್ಡ್ ನಂ 1– ಇಕ್ರಾ ಮುಲ್ಲಾ IQra mulla ವಾರ್ಡ್ ನಂ 2– ಮುಜಮ್ಮಿಲ್ಲ್ ಡೋಣಿ Mujammil doni ವಾರ್ಡ್ ನಂ– 3 ಜ್ಯೋತಿ ಕಡೋಲ್ಕರ್ Jyoti kadolkar ವಾರ್ಡ್ 4–ಲಕ್ಷ್ಮಣ ಬುರುಡ Laxman burud ವಾರ್ಡ್ ನಂ 5 ಅಫ್ರೋಜ್ ಮುಲ್ಲಾ Afroz mulla ವಾರ್ಡ್ ನಂ 6 ಮಹ್ಮದ ರಸೂಲ ಪೀರಜಾದೆ Mohmed rasool peerzade ವಾರ್ಡ್ ನಂ 7 ಗುಂಡು ಕುಕ್ಕಡೆ …

Read More »

ನೀವು ಯುವತಿ ಜತೆ ನಗ್ನವಾಗಿರುವ ವಿಡಿಯೋ ನನ್ನ ಬಳಿ ಇದೆ’ ಎಂದು ಬಿಜೆಪಿ ಮುಖಂಡನಿಗೆ ಬ್ಲ್ಯಾಕ್​ಮೇಲ್​ ಮಾಡಿದ ಅಪರಿಚಿತ

ಬೆಂಗಳೂರು: ‘ನೀವು ಯುವತಿ ಜತೆ ನಗ್ನವಾಗಿರುವ ವಿಡಿಯೋ ನನ್ನ ಬಳಿ ಇದೆ’ ಎಂದು ಬಿಜೆಪಿ ಮುಖಂಡನಿಗೆ ಅಪರಿಚಿತನೊಬ್ಬ ಬ್ಲ್ಯಾಕ್​ಮೇಲ್​ ಮಾಡಿದ್ದು, ಸುಮಾರು 30 ಸಾವಿರ ರೂಪಾಯಿ ವಸೂಲಿ ಕೂಡ ಮಾಡಿಕೊಂಡಿದ್ದಾನೆ. ಅಪರಿಚಿತ ವ್ಯಕ್ತಿಯ ಬೆದರಿಕೆ ಕರೆ ಕುರಿತು ಬಿಜೆಪಿ ಮುಖಂಡ ಪೊಲೀಸರಿಗೆ ದೂರು ನೀಡಿದ್ದಾರೆ. ಬಿಜೆಪಿ ಮುಖಂಡ ಚಿ.ನಾ. ರಾಮು ಇಂಥದ್ದೊಂದು ಬೆದರಿಕೆ ಕರೆಗೆ ಒಳಗಾಗಿದ್ದಾರೆ. ಕೇಂದ್ರ ಸರ್ಕಾರದ ಸಾಮಾಜಿಕ ಸಬಲೀಕರಣ ಇಲಾಖೆ ಅಧೀನದ ಅಂಬೇಡ್ಕರ್ ಫೌಂಡೇಷನ್​ ನಿರ್ದೇಶಕ ಆಗಿರುವ …

Read More »

ಹೆಣ್ಣು ನೋಡುವ ಶಾಸ್ತ್ರಕ್ಕೆಂದು ಹೋದವರು ಹೆಣವಾಗಿ ಹೋದರು; ಸ್ಥಳದಲ್ಲೇ ಸಾವಿಗೀಡಾದ ದಂಪತಿ

ಆನೇಕಲ್: ಕ್ಯಾಂಟರ್ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತ ಎರಡು ಜೀವಗಳನ್ನು ಬಲಿ ಪಡೆದಿದ್ದು, ಹೆಣ್ಣು ನೋಡುವ ಶಾಸ್ತ್ರಕ್ಕೆಂದು ಹೋದವರು ಹೆಣವಾಗಿ ಹೋದಂತಾಗಿದೆ. ಆನೇಕಲ್ ತಾಲೂಕಿನ ಚೂಡಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಚಂದಾಪುರ ಸಮೀಪದ ಕಿತ್ತಗಾನಹಳ್ಳಿಯ ನಿವಾಸಿಗಳಾದ ಮುನಿರಾಜಾಚಾರಿ (55), ಅಕ್ಕಯಮ್ಮ (50) ಮೃತಪಟ್ಟ ದಂಪತಿ. ಹೆಣ್ಣು ನೋಡುವ ಶಾಸ್ತ್ರಕ್ಕೆಂದು ಇವರು ದ್ವಿಚಕ್ರವಾಹನದಲ್ಲಿ ಆನೇಕಲ್ ತಾಲೂಕಿನ ಚೂಡಹಳ್ಳಿಗೆ ಹೋಗಿದ್ದರು. ಚೂಡಗಾನಹಳ್ಳಿ ಬಳಿ ಎದುರುಗಡೆಯಿಂದ ಬರುತ್ತಿದ್ದ ತಮಿಳುನಾಡು …

Read More »

ಪ್ರವಾಸಕ್ಕೆ ತೆರಳಿದ್ದ ಒಂದೇ ಕುಟುಂಬದ ಮೂವರು ನೀರಿನಲ್ಲಿ ಕೊಚ್ಚಿ ಹೋಗಿ ಸಾವು

ಬಾಗಲಕೋಟೆ : ಜಿಲ್ಲೆಯ ಬಾದಾಮಿಯ ಶಿವಯೋಗಮಂದಿರ ಕ್ಷೇತ್ರದ ಬಳಿಕ, ಒಂದೇ ಕುಟುಂಬದ ಮೂವರು ಪಿಕ್ ನಿಕ್ ತೆರಳಿದ್ದರು. ಊಟ ಮುಗಿಸಿ, ನದಿಯಲ್ಲಿ ಕೈ ತೊಳೆಯುತ್ತಿದ್ದಂತ ಸಂದರ್ಭದಲ್ಲಿ ಬಿದ್ದಂತ ಕುಟುಂಬದ ಒಬ್ಬರನ್ನು ರಕ್ಷಿಸಲು ಹೋಗಿ, ಮೂವರು ನೀರು ಪಾಲಾಗಿರೋ ಘಟನೆ ನಡೆದಿದೆ.   ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಶಿವಯೋಗಮಂದಿರದ ಕ್ಷೇತ್ರದ ಬಳಿಯ ನದಿ ಹತ್ತಿರ ಒಂದೇ ಕುಟುಂಬದ ವಿಶ್ವನಾಥ ಮಾವಿನಪರದ, ಶ್ರೀದೇವಿ ಹಾಗೂ ನಂದಿನಿ ಮಾವಿನಮರದ ತೆರಳಿದ್ದರು.   ಹೀಗೆ …

Read More »

‘2ಎ’ಗೆ ಪಂಚಮಸಾಲಿ ಸೇರ್ಪಡೆಗೆ ವಿರೋಧ

ತುಮಕೂರು: ಹಿಂದುಳಿದ ಪ್ರವರ್ಗ 2ಎಗೆ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಸೇರ್ಪಡೆಮಾಡಿ, ಮೀಸಲಾತಿ ಕಲ್ಪಿಸಬಾರದು. ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ (ಜಾತಿ ಗಣತಿ) ವರದಿಯನ್ನು ಜನರ ಮುಂದಿಡಬೇಕು ಎಂದು ಅತಿ ಹಿಂದುಳಿದ ವರ್ಗಗಳ ಸಮುದಾಯದ ಮುಖಂಡರು ಒಮ್ಮತದಿಂದ ಒತ್ತಾಯಿಸಿದರು. ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ನೇತೃತ್ವದಲ್ಲಿ ಶನಿವಾರ ನಡೆದ ಹಿಂದುಳಿದ ವರ್ಗಗಳ ಜಾಗೃತಿ ಸಭೆಯಲ್ಲಿ ಮಾತನಾಡಿದ ಮುಖಂಡರು, ‘ಸದಾಶಿವ ಆಯೋಗದ ವರದಿಯಲ್ಲಿ ಒಳಮೀಸಲಾತಿ ಪ್ರಸ್ತಾಪಿಸಿ ರುವ ಮಾದರಿಯಲ್ಲಿ ಹಿಂದುಳಿದ …

Read More »

ಜಾತಿ ಆಧಾರಿತ ಜನಗಣತಿ ಮಾಡಲೇಬೇಕು: ನಿತೀಶ್ ಕುಮಾರ್

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಳೆ ದೆಹಲಿಗೆ ಭೇಟಿ ನೀಡಲಿದ್ದು ಜಾತಿ ಆಧಾರಿತ ಜನಗಣತಿಗೆ ಒತ್ತಾಯಿಸಲು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಅವರು 10 ಸದಸ್ಯರ ನಿಯೋಗವನ್ನು ಮುನ್ನಡೆಸಲಿದ್ದಾರೆ. ಇದರಲ್ಲಿ ಬಿಜೆಪಿ ಸೇರಿದೆ, ಈ ಹಿಂದೆ ಬಿಜೆಪಿ ಜನಗಣತಿಯಲ್ಲಿ ಆಸಕ್ತಿ ಹೊಂದಿರಲಿಲ್ಲ. ಕೆಲವರು ಈಗಾಗಲೇ ದೆಹಲಿಯನ್ನು ತಲುಪಿದ್ದಾರೆ ಮತ್ತು ಕೆಲವರು ನನ್ನೊಂದಿಗೆ ಹೋಗುತ್ತಾರೆ. ನಾಳೆ ನಾವು 11 ಗಂಟೆಗೆ ಭೇಟಿಯಾಗುತ್ತೇವೆ ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. ಪ್ರತಿಯೊಬ್ಬರ …

Read More »

ಜಾತಿ ಗಣತಿ’ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು?

ಹುಬ್ಬಳ್ಳಿ : ಜಾತಿ ಗಣತಿ ವಿಚಾರದ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದು, ಜಾತಿ ಗಣತಿ ವರದಿಯನ್ನು ಹಿಂದುಳಿದ ಆಯೋಗ ಕೂಡ ಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಜಾತಿ ಗಣತಿ ವಿಚಾರ ನ್ಯಾಯಾಲಯದ ಅಂಗಳದಲ್ಲಿದ್ದು, ಇತ್ಯರ್ಥಕ್ಕೆ ಕಾಲಾವಕಾಶವಿದೆ. ಈ ಕುರಿತು ವಿರೋಧ ಪಕ್ಷದವರಷ್ಟೇ ಅಲ್ಲ. ಯಾರೂ ಬೇಕಾದರೂ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಬಹುದು ಎಂದು ಹೇಳಿದ್ದಾರೆ. ಗುಂಡು ಹಾಕಿದರೂ ಸಾರ್ವಜನಿಕ ಗಣೇಶ …

Read More »