Breaking News

ನಾನು ಸಿಎಂ ಆಗಿದ್ರೆ ಲಾಕ್ಡೌನ್ ವೇಳೆ 10 ಸಾವಿರ ಕೊಡ್ತಿದ್ದೆ ಸಿದ್ದರಾಮಯ್ಯ

ಬೆಂಗಳೂರು(ಆ.16): ನಾನು ಸಿಎಂ ಆಗಿದ್ದರೆ ಲಾಕ್ಡೌನ್ ವೇಳೆ 10ಸಾವಿರ ಕೊಡುತ್ತಿದ್ದೆ. ಯಡಿಯೂರಪ್ಪ ಹಾಗೂ ಅವರ ಮಗ ಲೂಟಿ ಹೊಡೆದರು. ಆದ್ರೆ ಕಣ್ಣೀರಿನಲ್ಲಿ ಕೈತೊಳೆಯುವ ಜನರಿಗೆ ಹಣ ಕೊಡಲಿಲ್ಲ. ಕೆಲಸವಿಲ್ಲದೆ ಪರದಾಡುವ ಜನರಿಗೆ ಸಹಾಯ ಮಾಡಲಿಲ್ಲ ಎಂದು ವಿಜಯನಗರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಂದಿರಾ ಕ್ಯಾಂಟೀನ್ ಮುಚ್ಚಲು ಹೊರಟಿದ್ದಾರೆ. ಅವನ್ಯಾವನೋ ಸಿ.ಟಿ.ರವಿ ಅಂತ ಇದ್ದಾನೆ. ಅವನಿಗೆ ಮನುಷ್ಯತ್ವವೂ ಇಲ್ಲ. ಬಡವರ ಬಗ್ಗೆಯೂ ಗೊತ್ತಿಲ್ಲ ಅನ್ನಪೂರ್ಣೇಶ್ವರಿ ಹೆಸರು ಇಡಬೇಕು ಎನ್ನುತ್ತಾನೆ. …

Read More »

ಚಿಕಿತ್ಸೆಗೆಂದು ವೃದ್ಧಾಶ್ರಮ ಸೇರಿದ್ದ ವೃದ್ಧ ಮಹಿಳೆ ನಿಗೂಢ ಸಾವು

ಬೆಂಗಳೂರು, ಆ. 16: ವೃದ್ಧರನ್ನು ಪೋಷಣೆ ಮಾಡುವ ಹೆಸರಿನಲ್ಲಿ ದುಡ್ಡಿಗಾಗಿ ಹುಟ್ಟಿಕೊಂಡಿರುವ ಅನಾಥಾಶ್ರಮಗಳಲ್ಲಿ ಮಹಾ ದುರಂತಗಳಲ್ಲಿ ನಡೆಯುತ್ತಿವೆ. ವೃದ್ಧರನ್ನು ಪೋಷಣೆ ಮಾಡುವ ಹೆಸರಿನಲ್ಲಿ ಚಿತ್ರಹಿಂಸೆ ಕೊಟ್ಟು ಸಾಯಿಸಿರುವ ಆರೋಪಗಳು ಮೊದಲಿನಿಂದಲೂ ಕೇಳಿ ಬರುತ್ತಿದ್ದವು. ಇದೀಗ ವೃದ್ಧ ಮಹಿಳೆಯೊಬ್ಬಳು ಅನಾಥಾಶ್ರಮದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ರಾಮಚಂದ್ರ ಎಂಬುವರ ತಾಯಿ ಕಮಲಮ್ಮ ಮರೆವು ಕಾಯಿಲೆಯಿಂದ ಬಳಲುತ್ತಿದ್ದರು. ದಿನವೂ ಆಕೆಯನ್ನು ಹಾರೈಕೆ ಮಾಡಲಾಗದ ಕಾರಣದಿಂದ ಅವರು ನಾಗರಭಾವಿಯಲ್ಲಿರುವ ಉಸುರು ಫೌಂಡೇಷನ್ ವೃದ್ಧರ …

Read More »

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ; ಬಿಜೆಪಿ ಮಹತ್ವದ ಸಭೆ

ಬೆಳಗಾವಿ, ಆಗಸ್ಟ್ 16; ಕರ್ನಾಟಕ ಬಿಜೆಪಿ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಸಿದ್ಧತೆಯನ್ನು ಬಿರುಸಿನಿಂದ ಮಾಡುತ್ತಿದೆ. ಸೋಮವಾರ ಚುನಾವಣಾ ಅಧಿಸೂಚನೆ ಪ್ರಕಟವಾಗಿದ್ದು,3/9/2021ರಂದು ಮತದಾನ ನಡೆಯಲಿದೆ. ಮಂಗಳವಾರ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ವಿಶೇಷ ಸಭೆಯನ್ನು ನಡೆಸಿದರು. ಈ ಮೂಲಕ ಚುನಾವಣೆ ಪ್ರಚಾರವನ್ನು ಅಧಿಕೃತವಾಗಿ ಆರಂಭಿಸಿದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಚುನಾವಣೆ ಮೇಲೆ ಹೇಗೆ ಪ್ರಭಾವ ಬೀರಲಿದ್ದಾರೆ? ಎಂದು ಕಾದು …

Read More »

ಹೇಳಿಕೆಗಳಿಂದ ನಾಯಕನಾಗಲು ಸಾಧ್ಯವಾಗಲ್ಲ,ಕೆಲಸ ಮಾಡಬೇಕು: ವಿಜಯೇಂದ್ರ

ಶಿವಮೊಗ್ಗ: ಯಾವುದೇ ಹೇಳಿಕೆಗಳಿಂದ ನಾಯಕನಾಗಿ ಹೊರಹೊಮ್ಮಲು ಸಾಧ್ಯವಿಲ್ಲ. ಅದರ ಬದಲು ಜನಪರ ಕೆಲಸ ಮಾಡುವ ಮೂಲಕ ಸಂಘಟನೆ ಮಾಡಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಎರಡು ಪೆಗ್ ಬೇಕು ಎಂಬ ಹೇಳಿಕೆಗಳಿಗೆ ತಿರುಗೇಟು ನೀಡಿದರು. ಬಹಳಷ್ಟು ಜನ ಎಲುಬಿಲ್ಲದ ನಾಲಿಗೆ ರೀತಿ ವರ್ತಿಸುತ್ತಿದ್ದಾರೆ. ಇದನ್ನು ನಾವೆಲ್ಲರೂ ಗಮನಿಸುತ್ತಿದ್ದೇವೆ. ಹೇಳಿಕೆಗಳನ್ನು ಕೊಡುವುದರ ಮೂಲಕ ನಾಯಕತ್ವ ಬೆಳೆದುಬಿಡುತ್ತದೆ ಎಂಬ …

Read More »

ಅಜ್ಜಿಯ ಹಲ್ಲಿನ ಸೆಟ್ ಹಾಳು ಮಾಡಿದ ಹಸುಳೆಯ ಹತ್ಯೆ: ಆರೋಪಿ ಬಂಧನ

ವಿಜಯಪುರ: ತಾಯಿಯ ಹಲ್ಲಿನ ಸೆಟ್ ನಾಶ ಮಾಡಿದಳೆಂಬ ಕಾರಣಕ್ಕೆ ವಿಕೃತ ಯುವಕನೊಬ್ಬ ಆರು ವರ್ಷದ ಬಾಕಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಆ.9 ರಂದು ಮಿರಗಿ ಗ್ರಾಮದಲ್ಲಿ ಬೋಳೆಗಾಂವ ಮೂಲದ ಆರು ವರ್ಷದ ಬಾಲಕಿ ಗ್ರಾಮದ ಹನಮಂತ ದೇವರ ದೇವಸ್ಥಾನದ ಬಳಿ ಆಟ ಆಡುತ್ತಿದ್ದಾಗ ಕಾಣೆಯಾಗಿದ್ದಳು. ಜೊತೆಗಿದ್ದ ಆಕೆಯ ಸಹೋದರಿ ಮನೆಗೆ ಬಂದರೂ ಈ ಬಾಲೆ ಮನೆಗೆ ಮರಳದ ಕಾರಣ ಗ್ರಾಮದಲ್ಲಿ ಹುಡುಕಿದ …

Read More »

ಹಾರೋಗೆರಿ ಅಪ್ರಾಪ್ತ ಬಾಲಕಿ ಕೊಲೆ ಪ್ರಕರಣ: ರಾಹುಲ್ ಗಾಂಧಿ ಲಿಂಕ್ ಮಾಡಿ ಜೊಲ್ಲೆ ಖಂಡಿಸಿದ ರಕ್ಷಾ ರಾಮಯ್ಯ!

ಬೆಂಗಳೂರು, ಆ, 16: ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ನಡೆಯನ್ನು ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿ ನಡೆಸಿದ್ದ ಸ್ಟಿಂಗ್ ಆಪರೇಶನ್‌ನಲ್ಲಿ ಸಚಿವ ಶಶಿಕಲಾ ಜೊಲ್ಲೆ ಹೆಸರು ಕೇಳಿ ಬಂದಿತ್ತು. ಅದಾದ ಬಳಿಕ ಅವರನ್ನು ನೂತನ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದಿಲ್ಲ ಎನ್ನಲಾಗಿತ್ತು. ಆದರೆ ಬಿಜೆಪಿ ಹೈಕಮಾಂಡ್ ಮತ್ತೊಮ್ಮೆ ಅವರಿಗೆ ಮಂತ್ರಿಯಾಗುವ ಅವಕಾಶವನ್ನು ಮಾಡಿಕೊಟ್ಟಿದೆ. ಇದೇ ಸಂದರ್ಭದಲ್ಲಿ ಅವರ ನಡೆಯನ್ನು ಯುವ ಕಾಂಗ್ರೆಸ್ ತೀವ್ರವಾಗಿ …

Read More »

ಸಚಿವರ ಮೆರವಣಿಗೆ ವೇಳೆ ದುರಂತ; ಪೊಲೀಸ್​ ಸಿಬ್ಬಂದಿ ಕಾಲಿನ ಮೇಲೆ ಹರಿದ ಜೀಪ್​

ಬೆಂಗಳೂರು: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಎ. ನಾರಾಯಣಸ್ವಾಮಿ ಮೆರವಣಿಗೆ ನಡೆಸುವ ವೇಳೆಯಲ್ಲಿ ಅವಘಡವೊಂದು ಸಂಭವಿಸಿದ್ದು, ಪೊಲೀಸ್​ ಸಿಬ್ಬಂದಿಯ ಕಾಲಿನ ಮೇಲೆ ಜೀಪ್​ ಹರಿದಿದೆ.     ಇಂದು ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸಲು ದೆಹಲಿಯಿಂದ, ನಗರದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಚಿವರು ಆಗಮಿಸಿದ ವೇಳೆ ಅವರನ್ನು ಮೆರವಣಿಗೆ ಮೂಲಕ ಕರೆತರಲಾಗುತ್ತಿತ್ತು. ಸಾಕಷ್ಟು ಜನರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಚಿಕ್ಕಜಾಲ ಪೋಲಿಸ್ ಠಾಣೆಯ ಸಿಬ್ಬಂದಿ ಶಿವಕುಮಾರ್ …

Read More »

ಬಿಜೆಪಿ ಸೇರುವಂತೆ ನನಗೂ ಕರೆ ಬಂದಿತ್ತು’: ಸ್ಫೋಟಕ ಹೇಳಿಕೆ ಕೊಟ್ಟ ಕೈ ಶಾಸಕ

ಬಳ್ಳಾರಿ: ನಾನೇನಾದ್ರೂ ಬಿಜೆಪಿಗೆ ಹೋಗಿದ್ರೇ ಈಗ ನಾನು ಮಂತ್ರಿಯಾಗ್ತಿದ್ದೇ, ಬಿಜೆಪಿ ಸರ್ಕಾರ ರಚನೆ ಸಂದ​ರ್ಭ​ದಲ್ಲಿ ನನಗೂ ಬಿಜೆಪಿ ಪಕ್ಷ​ದಿಂದ ಕರೆ ಬಂದಿತ್ತು. ಎಂದು ಹಗರಿಬೊಮ್ಮನಹಳ್ಳಿ ಕಾಂಗ್ರೆಸ್​ಶಾಸಕ ಎಸ್‌. ಭೀಮಾ​ನಾಯ್ಕ್ ಹೇಳಿ​ದ್ದಾ​ರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಿಜೆಪಿ ಸರ್ಕಾರ ನನಗೂ ಸಚಿವ ಸ್ಥಾನದ ಆಮಿಷ ಒಡ್ಡಿ ಪಕ್ಷ ಸೇರುವಂತೆ ಕರೆ ಬಂದಿತ್ತು, ಆದರೆ ನಾನು ಮಾಜಿ ಸಿಎಂ ಸಿದ್ದರಾಮಯ್ಯನವರ ಮುಖ ನೋಡ್ಕೊಂಡು ಬಿಜೆಪಿಗೆ ಹೋಗಲಿಲ್ಲ ಎಂದಿದ್ದಾರೆ. 2013- 2018ರ ವರೆಗೆ …

Read More »

ಲವ್ ಮಾಡಲ್ಲ ಎಂದ ಯುವತಿಯನ್ನ ನಡುರಸ್ತೆಯಲ್ಲೇ ಕತ್ತು ಸೀಳಿ ಕೊಲೆಗೈದ ಯುವಕ

ಗುಂಟೂರು: ಮೂರನೇ ವರ್ಷದ ಬಿ.ಟೆಕ್​ ಶಿಕ್ಷಣವನ್ನು ಪಡೆಯುತ್ತಿದ್ದ ವಿದ್ಯಾರ್ಥಿನಿಯನ್ನು ಯುವಕನೊಬ್ಬ ನಡುರಸ್ತೆಯಲ್ಲಿ ಕತ್ತಿಯಿಂದ ಕುತ್ತಿಗೆ ಕೊಯ್ದು ಬರ್ಬರವಾಗಿ ಕೊಲೆಗೈದಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ನಡೆದಿದೆ. ರಮ್ಯಾಶ್ರೀ ಕೊಲೆಯಾದ ವಿದ್ಯಾರ್ಥಿನಿಯಾಗಿದ್ದು, ಆಕೆಯ ಹೊಟ್ಟೆ ಭಾಗ ಹಾಗೂ ಕುತ್ತಿಗೆ ಭಾಗಕ್ಕೆ 6ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಲಾಗಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಶಶಿ ಕೃಷ್ಣನನ್ನು ಪೊಲೀಸರು ಬಂಧಿಸಿದ್ದಾರೆ.     ಘಟನೆ ನಡೆಯುವ ಮುನ್ನ ವಿದ್ಯಾರ್ಥಿನಿಯೊಂದಿಗೆ …

Read More »

ಸಿಂಬಾಲ್… ಕೆಪಿಸಿಸಿ ಅಂಗಳದಲ್ಲಿ ಬೆಳಗಾವಿ ಬಾಲ್….!!!

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ನೇಮಿಸಲಾದ ಕಾಂಗ್ರೆಸ್ ಮೇಲುಸ್ತುವಾರಿ ಸಮೀತಿ ಇಂದು ಬೆಳಗಾವಿಯಲ್ಲಿ ಸ್ಥಳೀಯ ನಾಯಕರ ಜೊತೆ,ಮಾಜಿ ನಗರಸೇವಕರ ಜೊತೆ,ಸಭೆ ಮಾಡಿದ್ರೂ ಪಾಲಿಕೆ ಚುನಾವಣೆ ಯನ್ನು ಪಕ್ಷದ ಚಿಹ್ನೆಯ ಮೇಲೆ ಮಾಡಬೇಕೋ..ಬಿಡಬೇಕೋ ಎನ್ನುವ ನಿರ್ಧಾರ ಕೈಗೊಳ್ಳುವಲ್ಲಿ ಸಫಲವಾಗಿಲ್ಲ. ಸುಮಾರು ಎರಡು ಘಂಟೆಗಳ ಕಾಲ ಬೆಳಗಾವಿಯ ನಾಯಕರ ಜೊತೆ ಮಾಜಿ ಸಚಿವ ಎಂ.ಬಿ ಪಾಟೀಲ,ಬಿ.ಕೆ ಹರಿಪ್ರಸಾದ ಸೇರಿದಂತೆ ಮೇಲುಸ್ತುವಾರಿ ಸಮೀತಿಯ ಸದಸ್ಯರು ಸಭೆ ಮಾಡಿದ್ರು,ಆದ್ರೆ ಸಭೆಯಲ್ಲಿ ಸ್ಥಳೀಯ ನಾಯಕರು,ಮಾಜಿ ನಗರ …

Read More »