Breaking News

ಮುಖ್ಯಮಂತ್ರಿ ಪದವಿ ಹೋದ ಮೇಲೆ ಸಿದ್ದರಾಮಯ್ಯ ಅವರಿಗೆ ನಿತ್ಯ ಕೆಟ್ಟ ಕನಸು ಬೀಳುತ್ತಿವೆ.: ಈಶ್ವರಪ್ಪ

 : ಮುಖ್ಯಮಂತ್ರಿ ಪದವಿ ಹೋದ ಮೇಲೆ ಸಿದ್ದರಾಮಯ್ಯ ಅವರಿಗೆ ನಿತ್ಯ ಕೆಟ್ಟ ಕನಸು ಬೀಳುತ್ತಿವೆ. ಮತ್ತೆ ರಾಜ್ಯದ ಮುಖ್ಯಮಂತ್ರಿ ಆಗುತ್ತೇನೆ ಎಂಬ ಕೆಟ್ಟ ಕನಸು ಬೀಳುತ್ತಿವೆ. ಆದರೆ ಈ ಕನಸು ನನಸಾಗಲು ಸಾಧ್ಯವೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ವ್ಯಂಗ್ಯವಾಡಿದರು. ಬೆಳಗಾವಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಸರಿಯಾಗಿ ಆಡಳಿತ ಮಾಡಿದ್ದರೆ ಮತ್ತೆ ಅಧಿಕಾರಕ್ಕೆ ಅವರೇ ಬರುತ್ತಿದ್ದರು. ಈಗ ಚುನಾವಣೆಗೆ ಎರಡು ವರ್ಷ ಮೊದಲೇ …

Read More »

ಡಿಕೆಶಿ-ಜಮೀರ್ ಅಹ್ಮದ್ ಗೆ ‘ಭಲೇ ಜೋಡಿ’ ಎಂದ ಬಿಜೆಪಿ: ಯಾಕೆ ಗೊತ್ತಾ..?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಮತ್ತು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಗೆ ಭಲೇ ಜೋಡಿ ಅಂತಾ ಬಿಜೆಪಿ ವ್ಯಂಗ್ಯವಾಡಿದೆ. ಜಮೀರ್ ಅಹ್ಮದ್ ಮನೆ ಮೇಲೆ ಇಡಿ ದಾಳಿ ನಡೆಸಿದ ಬಳಿಕ ಅವರನ್ನು ಭೇಟಿಯಾಗಿದ್ದ ಡಿಕೆಶಿ ಧೈರ್ಯ ತುಂಬಿದ್ದರು. ಶಾಸಕ ಜಮೀರ್ ಅಹ್ಮದ್ ಆಸ್ತಿ ಮೇಲೆ ಇಡಿ ದಾಳಿ ಯಾಕೆ ನಡೆದಿದೆ ಎಂದು ಚರ್ಚಿಸಿದ್ದೇನೆ. ಅವರಿಗೆ ಕೆಲವೊಂದು ಮಾರ್ಗದರ್ಶನ ನೀಡಿದ್ದೇನೆ ಅಂತಾ ಡಿಕೆಶಿ ಹೇಳಿದ್ದರು. ಈ ವಿಚಾರವಾಗಿ ಬುಧವಾರ …

Read More »

ನಮಗೆ ಬೆಂಕಿ ಬಂಡಾಯ ಏನೂ ಇಲ್ಲ : ಸಚಿವ ಶ್ರೀರಾಮುಲು

ಬೆಂಗಳೂರು : ನಮಗೆ ಬೆಂಕಿ ಬಂಡಾಯ ಏನೂ ಇಲ್ಲ ನಮ್ಮದು ಶಿಸ್ತಿನ ಪಕ್ಷ, ನಮ್ಮ ಹೈಕಮಾಂಡ್ ಇದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾತೆಯ ವಿಚಾರಕ್ಕೆ ಸಂಬಂಧಿಸಿದಂತೆ ರಾಮುಲು ಅಸಮಧಾನಗೊಂಡಿದ್ದರೆ ನಾನು ಕೆಲವು ಮಾಧ್ಯಮದಲ್ಲಿ ನೋಡಿದ್ದೇನೆ. ನನಗೆ ಯಾವ ಅಸಮಾಧಾನ ಇಲ್ಲ, ನಮ್ಮದು ಶಿಸ್ತಿನ ಪಕ್ಷ, ಹೈಕಮಾಂಡ್ ಎಲ್ಲವನ್ನು ನಿರ್ಧರಿಸುತ್ತದೆ ಎಂದಿ ಹೇಳಿದ್ದಾರೆ. ನನಗೆ ಕೊಟ್ಟ ಸಾರಿಗೆ ಇಲಾಖೆ ನಿರ್ವಹಣೆ ‌ಮಾಡುತ್ತೇನೆ. ಜನಪರವಾದ ಕೆಲಸ ‌ಮಾಡಬೇಕು. …

Read More »

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು

ದೆಹಲಿ: ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಸಾವು ಪ್ರಕರಣಕ್ಕೆ ಸಂಬಂಧಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ.   ವಿಧಾನಸಭೆಯ ನಿವೃತ್ತ ಭದ್ರತಾ ಅಧೀಕ್ಷಕರಾದ ಎಂ.ಎನ್.ಪಿಳ್ಳಪ್ಪ ಎಂಬುವವರು ದೂರು ನೀಡಿದ್ದು, ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ‌ ಕೈಗೊಳ್ಳಬೇಕು ಮತ್ತು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಲು ಮನವಿ ಮಾಡಿದ್ದಾರೆ.

Read More »

ಕೆಜಿ ಹಳ್ಳಿ-ಡಿಜೆ ಹಳ್ಳಿ ಗಲಭೆಗೆ 1 ವರ್ಷ; ಇನ್ನೂ ನನಗೆ ನ್ಯಾಯ ಸಿಕ್ಕಿಲ್ಲಾ ಎಂದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ

ಬೆಂಗಳೂರು: ಒಂದು ವರ್ಷದ ಹಿಂದೆ ಇಡೀ ಬೆಂಗಳೂರಿಗೆ ಬೆಂಗಳೂರೆ ಬೆಚ್ಚಿ ಬೀಳುವಂತ ಘಟನೆ ನಡೆದಿತ್ತು. ಕೆಜಿ ಹಳ್ಳಿ-ಡಿಜೆ ಹಳ್ಳಿ ಗಲಭೆ ಪ್ರಕರಣ(DJ Halli and KG Halli Violence) ಜನರ ನಿದ್ದೆ ಕೆಡಿಸಿತ್ತು. ಒಂದು ಫೇಸ್​ಬುಕ್ ಪೋಸ್ಟ್​ನಿಂದ ಭಾರಿ ಅನಾಹುತ ನಡೆದಿತ್ತು. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ(Akhanda Srinivas Murthy) ಮನೆ ಬೆಂಕಿಗೆ ಆಹುತಿಯಾಗಿತ್ತು. ಸದ್ಯ ಇಂದು ಈ ಘಟನೆ ನಡೆದು ಒಂದು ವರ್ಷ ಕಳೆದಿದೆ. ಈ ಬಗ್ಗೆ ಡಿಜೆ …

Read More »

ಯೋಗೀಶ್ ಗೌಡ ಕೊಲೆ ಕೇಸ್​: ಧಾರವಾಡಕ್ಕೆ ಭೇಟಿ ನೀಡದಂತೆ ವಿನಯ್​ ಕುಲಕರ್ಣಿಗೆ ಸುಪ್ರೀಂನಿಂದ ಷರತ್ತುಬದ್ಧ ಜಾಮೀನು

ನವದೆಹಲಿ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಬುಧವಾರ (ಆಗಸ್ಟ್ 11) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆದರೂ ಕುಲಕರ್ಣಿಗೆ ಸದ್ಯ ಜೈಲಿನಿಂದ ಬಿಡುಗಡೆ ಇಲ್ಲ ಎಂದು ವರದಿ ವಿವರಿಸಿದೆ. ಯೋಗಿಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಕಳೆದ 9 ತಿಂಗಳಿನಿಂದ ಜೈಲಿನಲ್ಲಿದ್ದು, ಜಾಮೀನು ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈ ಹಿನ್ನೆಲೆಯಲ್ಲಿ ಧಾರವಾಡಕ್ಕೆ ಭೇಟಿ ನೀಡದಂತೆ …

Read More »

ಆನಂದ್ ಸಿಂಗ್ ರಾಜೀನಾಮೆ ಹೈಡ್ರಾಮ: ಯಾವ ಒತ್ತಡಕ್ಕೂ ಸೊಪ್ಪು ಹಾಕದಿರಲು ಸಿಎಂಗೆ ಹೈಕಮಾಂಡ್​ ಸಲಹೆ

ಬೆಂಗಳೂರು: ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವ ಸಚಿವ ಆನಂದ್​ ಸಿಂಗ್​, ತನ್ನ ಬೇಡಿಕೆ ಈಡೇರಿಸಿಕೊಳ್ಳಲು ರಾಜೀನಾಮೆ ಅಸ್ತ್ರ ಪ್ರಯೋಗಿಸಿದ್ದಾರೆ. ಅತ್ತ ಯಾವುದೇ ಒತ್ತಡಕ್ಕೂ ಸೊಪ್ಪು ಹಾಕಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದ್ದು, ಬೊಮ್ಮಾಯಿ ಸಂಪುಟದತ್ತ ಎಲ್ಲರ ಚಿತ್ತ ಮೂಡಿದೆ. ಯಾವುದೇ ಕಾರಣಕ್ಕೂ ಖಾತೆ ಬದಲಾವಣೆ ಮಾಡಬೇಡಿ. ಈಗ ಖಾತೆ ಬದಲಾವಣೆ ಮಾಡಿದರೆ ಮತ್ತೊಬ್ಬರು ಖಾತೆ ಕ್ಯಾತೆ ತೆಗೆಯುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕರು ಮತ್ತು ಆರ್​ಎಸ್​ಎಸ್​ನಿಂದ ಸಿಎಂಗೆ ಸಲಹೆ ಬಂದಿದೆ. …

Read More »

ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಜತೆಗೆ ರಾಜಕೀಯಕ್ಕೇ ನಿವೃತ್ತಿ ಘೋಷಿಸಲು ಸಜ್ಜಾದ ಆನಂದ್ ಸಿಂಗ್!

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲು ಆನಂದ್ ಸಿಂಗ್ ನಿರ್ಧರಿಸಿದ್ದಾರೆ. ಈಗಾಗಲೇ ಸ್ಪೀಕರ್ ಭೇಟಿಗೆ ಅವಕಾಶ ಕೇಳಿದ್ದು, ಇನ್ನು ಕೆಲವೇ ಗಂಟೆಯಲ್ಲಿ ಬೆಂಗಳೂರಿಗೆ ಆಗಮಿಸಿ ರಾಜೀನಾಮೆ ಘೋಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ಮಾತ್ರವಲ್ಲ, ರಾಜಕೀಯಕ್ಕೂ ನಿವೃತ್ತಿ ಘೋಷಣೆ ಮಾಡಲಿದ್ದಾರೆ. ಬೈ ಎಲೆಕ್ಷನ್ ನಡೆದರೂ ಅದಕ್ಕೂ ನಿಲ್ಲದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಆನಂದ್​ ಸಿಂಗ್​ಗೆ ಪ್ರವಾಸೋದ್ಯಮ ಖಾತೆ ಸಿಕ್ಕಿದೆ. ತಾನು ಕೇಳಿದ್ದ ಖಾತೆಯನ್ನು ಕೊಟ್ಟಿಲ್ಲ …

Read More »

ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು : ಸಿಎಂ ಬೊಮ್ಮಾಯಿ

ಬೆಂಗಳೂರು : ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡುವ ಮೂಲಕ ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡಬೇಕು ಮತ್ತು ಅಪರಾಧವನ್ನು ಸಂಪೂರ್ಣವಾಗಿ ಸದೆಬಡಿಯುವ ಕೆಲಸ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರರಿಗೆ ಸಿಎಂ ಬೊಮ್ಮಾಯಿ ನಿರ್ದೇಶನ ನೀಡಿದ್ದಾರೆ. ಅಪರಾಧ ಪ್ರಕರಣಗಳನ್ನು ಹತೋಟಿಗೆ ತರಬೇಕು. ಜೂಜು, ಡಾರ್ಕ್ವೆಬ್‌ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದರಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವಂತಿಲ್ಲ. ಭೂ ವಿವಾದದ ಹಿನ್ನೆಲೆಯಲ್ಲಿ ಸಂಭವಿಸುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು. ಮಾದಕ ವಸ್ತುಗಳ …

Read More »

ಮಾಸ್ಕ್ ಧರಿಸದ್ದಕ್ಕೆ ದಂಡ ವಿಧಿಸಿದ ಅಧಿಕಾರಿಗೆ ಹಿಗ್ಗಾಮುಗ್ಗ ಥಳಿಸಿದ ಮಹಿಳೆ; ವಿಡಿಯೋ ವೈರಲ್

ಕೊವಿಡ್ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಮಹಿಳೆಯೊಬ್ಬರಿಗೆ ದಂಡ ವಿಧಿಸಿದ ಅಧಿಕಾರಿಯೇ ಆಕೆಯಿಂದ ಒದೆ ತಿಂದಿರುವ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಕೊವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಿಲ್ಲ ಎಂದು ದಂಡ ವಿಧಿಸಿದ್ದಕ್ಕೆ ಆ ಅಧಿಕಾರಿಯ ಕೆನ್ನೆಗೆ ಹೊಡೆದು, ಕಾಲಿನಲ್ಲಿ ಒದ್ದು, ಆತನ ಕೂದಲನ್ನು ಹಿಡಿದು ಎಳೆದಾಡಿರುವ ಮಹಿಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಘಟನೆ ಸಂಬಂಧ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ನವದೆಹಲಿಯಲ್ಲಿ ನಡೆದ ಈ ಘಟನೆಯ ವಿಡಿಯೋ ನೋಡಿದ ನೆಟ್ಟಿಗರು …

Read More »