ಕರ್ನಾಟಕ ರಾಜ್ಯ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ (SSLC Result 2021) ಪ್ರಕಟಣೆಗೆ ಸಿದ್ಧವಾಗಿದ್ದು, ಇಂದು ಲಭ್ಯವಾಗಲಿದೆ. ಮಧ್ಯಾಹ್ನ 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಸಭಾಂಗಣದಲ್ಲಿ ನಿಗದಿಪಡಿಸಲಾದ ಸುದ್ದಿಗೋಷ್ಠಿಯಲ್ಲಿ ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ಫಲಿತಾಂಶ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಬಾರಿ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಲಿದ್ದು, ಫಲಿತಾಂಶದ ಬಗ್ಗೆ ಅಸಮಾಧಾನ ಹೊಂದಿದವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ. …
Read More »ಕೆಆರ್‌ಎಸ್ ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ: ಎಸ್‌ಪಿಗೆ ಮನವಿ
ದಾವಣಗೆರೆ: ಪೊಲೀಸರ ದಬ್ಬಾಳಿಕೆ ಮತ್ತು ದೌರ್ಜನ್ಯದ ವಿರುದ್ಧ ದೂರು ನೀಡಲು ಹೋದ ಕೆಆರ್‌ಎಸ್ ಪಕ್ಷದ ಪದಾಧಿಕಾರಿಗಳನ್ನು ಸುಳ್ಳು ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಕೆಆರ್‌ಎಸ್ ಪಕ್ಷದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಅವರಿಗೆ ದೂರು ನೀಡಲಾಗಿದೆ. ದಾವಣಗೆರೆಯ ಆಸ್ಪತ್ರೆಯೊಂದರಲ್ಲಿ ವ್ಯಾಕ್ಸಿನ್ ಕೊಡುವಲ್ಲಿ ಆಗುತ್ತಿದ್ದ ಅವ್ಯವಹಾರ, ಅವ್ಯವಸ್ಥೆ, ಮತ್ತು ಬೆಳಿಗ್ಗೆ ಐದು ಗಂಟೆಯಿಂದ ಕಾಯುತ್ತಿದ್ದವರಿಗೆ ಕೊಡದೆ ಬೇರೆಯವರಿಗೆ ಲಸಿಕೆ ನೀಡುತ್ತಿರುವ ಬಗ್ಗೆ ವೈದ್ಯಾಧಿಕಾರಿಗಳ ಗಮನಕ್ಕೆ ತರಲು ವಿಡಿಯೊ ಮಾಡಲಾಗುತ್ತಿತ್ತು. …
Read More »ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಬೊಮ್ಮಾಯಿ
ಮೈಸೂರು : ಮೈಸೂರಿನ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು(ಸೋಮವಾರ, ಆಗಸ್ಟ್ 9) ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ನಾಡದೇವತೆಯ ದರ್ಶನ ಪಡೆಯಲು ಆಗಮಿಸಿದ ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಪೂರ್ಣ ಕುಂಭ ಸ್ವಾಗತ ಮಾಡಲಾಯಿತು. ತದನಂತರ ದೇವಿಯ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಮೈಸೂರಿನಲ್ಲಿಂದು ಸಿಎಂ ಪ್ರವಾಸ : ಮೈಸೂರಿನ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಸಚಿವರುಗಳಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ವಿ.ಸೋಮಣ್ಣ, …
Read More »ಗೋಕಾಕ: ನಗರದ ತಹಶೀಲ್ದಾರ ಕಾರ್ಯಾಲಯದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ ನಿಮಿತ್ಯ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡುತ್ತಿರುವುದು.
ಗೋಕಾಕ: ಕೊವಿಡ್-19ರ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಹೊಸ ನಿರ್ದೇಶನಗಳ ಮೇರೆಗೆ ಬರುವ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುವದೆಂದು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದರು. ಶನಿವಾರದಂದು ನಗರದ ತಹಶೀಲ್ದಾರ ಕಾರ್ಯಾಲಯದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ ನಿಮಿತ್ಯ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಕೋರೋನಾ ಹಿನ್ನೆಲೆಯಲ್ಲಿ ವಿವಿಧ ಸಾಸಂಸ್ಕøತಿಕ ಕಾರ್ಯಕ್ರಮಗಳನ್ನು ರದ್ದು ಪಡಿಸಲಾಗಿದ್ದು, 10 ವರ್ಷದೊಳಗಿನ ಮಕ್ಕಳಿಗೆ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ವಾಲ್ಮೀಕಿ ಕ್ರೀಡಾಂಗಣದಲ್ಲಿ ಆಚರಿಸುವ ಸ್ವಾತ್ರಂತ್ರೋತ್ಸವ ಕಾರ್ಯಕ್ರಮದಲ್ಲಿ …
Read More »ಗೃಹ ಇಲಾಖೆಯಲ್ಲಿ ಅಮೂಲಾಗ್ರ ಸುಧಾರಣೆ ತರುತ್ತೇನೆ: ಅರಗ ಜ್ಞಾನೇಂದ್ರ
ತುಮಕೂರು: ಗೃಹ ಇಲಾಖೆಯಲ್ಲಿ ಅಮೂಲಾಗ್ರ ಬದಲಾವಣೆ ತರಲು ಪ್ರಯತ್ನ ಪಡುತ್ತೇನೆ ಎಂದು ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹ ಇಲಾಖೆ ಜವಾಬ್ದಾರಿ ನನಗೆ ಹೊಸದು. ನಾಳೆ ಇಲಾಖೆಯ ಅಧಿಕಾರಿಗಳ ಸಭೆ ನಡೆಸುತ್ತೆನೆ. ಆ ಮೂಲಕ ಅಧಿಕೃತವಾಗಿ ಚಾರ್ಜ್ ತೆಗೆದುಕೊಳ್ಳುತ್ತೇನೆ ಎಂದರು. ಪೊಲೀಸ್ ಇಲಾಖೆ ಸಶಕ್ತವಾಗಿ ಕೆಲಸ ಮಾಡುವ ಹಾಗೆ ಶಕ್ತಿ ತುಂಬಬೇಕೆಂದು ಯೋಚನೆ ಮಾಡಿದ್ದು, …
Read More »ಕಂಬಳ ಭೀಷ್ಮ ಗುರುಪುರ ಕೆದುಬರಿ ಗುರುವಪ್ಪ ಅಪಘಾತದಲ್ಲಿ ನಿಧನ
ಮಂಗಳೂರು: ಕಂಬಳ ಕ್ಷೇತ್ರದ ಹಿರಿಯ ಭೀಷ್ಮ, ಕೃಷಿಕ, ಸರಳಜೀವಿ ಕೆದುಬರಿ ಗುರುವಪ್ಪ ಪೂಜಾರಿ (78) ಭಾನುವಾರ ಸಂಜೆ ಮಂಗಳೂರಿನ ಗುರುಪುರ ಸಮೀಪದ ಕುಕ್ಕುದಕಟ್ಟೆ ಬಳಿ ರಸ್ತೆ ಅಪಘಾತದಲ್ಲಿ ನಿಧನರಾದರು. ಕುಕ್ಕುದಕಟ್ಟೆಯಲ್ಲಿರುವ ಡೈರಿಗೆ ಹಾಲು ಹಾಕಲು ತನ್ನ ಸ್ಕೂಟಿಯಲ್ಲಿ ಸಾಗುತ್ತಿದ್ದ ವೇಳೆ ಕಾರು ಹಾಗೂ ಸ್ಕೂಟಿ ಮಧ್ಯೆ ಈ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತರು ಮೂವರು ಪುತ್ರರು, ಓರ್ವ ಪುತ್ರಿ ಹಾಗೂ …
Read More »ಕಿಸಾನ್ ಸಮ್ಮಾನ್ ಕಂತು ಇಂದು ಜಮಾ
ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಮುಂದಿನ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 9ರಂದು ಬಿಡುಗಡೆ ಮಾಡಲಿದ್ದಾರೆ. ಸೋಮವಾರ ಮಧ್ಯಾಹ್ನ 12.30ಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಬಿಡುಗಡೆ ಕಾರ್ಯ ನೆರವೇರಿಸಲಿದ್ದಾರೆ. 9.75 ಕೋಟಿಗೂ ಅಧಿಕ ರೈತ ಕುಟುಂಬಗಳಿಗೆ 19,500 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವರ್ಗಾಯಿಸಿ, ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ವಾರ್ಷಿಕ 6000 ರೂಪಾಯಿ ನೆರವು ನೀಡುವ ಈ ಯೋಜನೆಯನ್ವಯ ಅರ್ಹ ಫಲಾನುಭವಿ ಕುಟುಂಬದ …
Read More »ಭಾರತ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದೆಯೇ?
ಭಾರತವು ಮೊದಲ ಬಾರಿಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದೆ. ಜಗತ್ತಿನ ಜುಟ್ಟು ಈಗ ಭಾರತದ ಕೈಯಲ್ಲಿದೆ. ಪಾಕಿಸ್ತಾನ, ಟರ್ಕಿ ದಿಗ್ಭ್ರಾಂತಿಗೆ ಒಳಗಾಗಿವೆ’ ಎಂಬ ಬರಹದ ಪೋಸ್ಟರ್‌ಗಳು ಕಳೆದ ಮೂರ್ನಾಲ್ಕು ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ‘ನಮೋ ಹಿಂದೂಸ್ತಾನಿ’, ‘ನಮೋ ಇಂಡಿಯಾ’ ಸೇರಿದಂತೆ ವಿವಿಧ ಫೇಸ್‌ಬುಕ್ ಪೇಜ್‌ಗಳಲ್ಲಿ ಈ ಪೋಸ್ಟರ್‌ಗಳು ಷೇರ್ ಆಗುತ್ತಿವೆ. ಭಾರತವು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಧ್ಯಕ್ಷ ಸ್ಥಾನ ವಹಿಸಿಕೊಂಡಿದ್ದು ಇದೇ ಮೊದಲಲ್ಲ ಎಂದು ಆಲ್ಟ್ …
Read More »ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದಶಾಸಕ ಸತೀಶ್ ಜಾರಕಿಹೊಳಿ
ಗೋಕಾಕ: ರಾಜ್ಯ ಸರ್ಕಾರದ ಬಿಜೆಪಿ ನಾಯಕರಿಂದ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ವಿಚಾರವಾಗಿ ನೀಡಿರುವ ಹೇಳಿಕೆ ಕುರಿತಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಒಂದು ವೇಳೆ ಬದಲಾವಣೆ ಮಾಡಲು ಪ್ರಯತ್ನಿಸಿದರೆ ಕಾಂಗ್ರೆಸ್ ಪಕ್ಷದಿಂದ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದರು. ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು, ಬಡವರ ಪರವಾಗಿ ಕೆಲಸ ಮಾಡಿದವರು. ಹಿಂದುಳಿದ ವರ್ಗದ ಜನರಿಗಾಗಿಯೇ ತಮ್ಮ …
Read More »ಸಾರ್ವಜನಿಕ ಗಣೇಶೋತ್ಸವ ರದ್ದು ಮಾಡಬೇಡಿ
ಭಕ್ತಿ ಹಾಗೂ ಭಾವೈಕ್ಯತೆ ಹಿನ್ನೆಲೆಯಲ್ಲಿ ಬಾಲ ಗಂಗಾಧರ ತಿಲಕರ ಮುಂದಾಳತ್ವದಲ್ಲಿ ಹುಟ್ಟಿ ಬೆಳೆದ ಸಾರ್ವಜನಿಕ ಗಣೇಶೋತ್ಸವ ಎಲ್ಲರ ಅಚ್ಚುಮೆಚ್ಚಿನ ಹಬ್ಬ. ಅಲ್ಲದೆ ಅದು ಶ್ರದ್ಧಾ ಭಾವನೆಗಳ ಜೊತೆಗೆ ಸಾಮಾಜಿಕ ಸುಧಾರಣೆಯ ಅಭಿಯಾನವೂ ಆಗಿದೆ. ದೇಶದಾದ್ಯಂತ ಅನೇಕ ಕಲಾವಿದರೂ, ಉದ್ಯಮ ರಂಗದವರೂ ಈ ಉತ್ಸವದ ಮೇಲೆ ಅವಲಂಬಿತರಾಗಿದ್ದಾರೆ. ಉದಯೋನ್ಮುಖ ಕಲಾವಿದರಿಗೆ ಪ್ರತಿಭೆ ಪ್ರದರ್ಶಿಸಲು ಈ ಉತ್ಸವವು ವೇದಿಕೆಯಾಗಿದೆ. ಕರೊನಾದಿಂದಾಗಿ ಈಗಾಗಲೇ ಹಲವಾರು ಉದ್ಯಮಗಳು ನೆಲಕಚ್ಚಿವೆ. ಕರೊನಾ ಸೋಂಕಿನ ಮೂರನೇ ಅಲೆ ಬರುವ …
Read More »