ಲಿಂಗಸುಗೂರು: ಕಳೆದ ವರ್ಷದ ಪದವಿ ಪ್ರಶ್ನೆ ಪತ್ರಿಕೆ ಪೂರೈಸಿದ ಗುಲಬರ್ಗಾ ವಿವಿ ಅಧಿಕಾರಿಗಳ ಯಡವಟ್ಟಿನಿಂದ ವಿದ್ಯಾರ್ಥಿಗಳು ಒಂದು ತಾಸು ತಡವಾಗಿ ಪರೀಕ್ಷೆ ಬರೆದ ಘಟನೆ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ. ಗುರುವಾರ ಪದವಿ ಪರೀಕ್ಷೆ ಆರಂಭವಾಗಿದ್ದು, ವಿವಿಧ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಪೂರೈಸಲು ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜನ್ನು ನೋಡಲ್ ಕೇಂದ್ರವನ್ನಾಗಿ ಮಾಡಲಾಗಿದೆ. ಗುರುವಾರ ಬಿಎ ಮೂರನೇ ಸೆಮಿಸ್ಟರ್‌ನ ಇತಿಹಾಸ ವಿಷಯ ಪರೀಕ್ಷೆ ನಡೆದಿದ್ದು, …
Read More »ಶಿವಸೇನ ಪುಂಡರಿಗೆ ಖಡಕ ಎಚ್ಚರಿಕೆ ನೀಡಿದ ಕರ್ನಾಟಕ ಪೊಲೀಸ್
ಬೆಳಗಾವಿ : ಗಡಿ ಭಾಗ ಬೆಳಗಾವಿಯಲ್ಲಿ ಒಂದಿಲ್ಲೊಂದು ಖ್ಯಾತೆ ತೆಗೆಯುತ್ತಲೆ ಬಂದಿರುವ ಶಿವಸೇನೆ ಪುಂಡರು ಗಡಿಯಲ್ಲಿ ಮತ್ತೆ ಪುಂಡಾಟೀಕೆ ಮುಂದುವರೆಸಿದ್ದಾರೆ. ರಾಜ್ಯಕ್ಕೆ ಕೋವಿಡ್ ಮೂರನೆ ಅಲೆಯ ಭೀತಿ ಇರುವ ಹಿನ್ನೆಲೆಯಲ್ಲಿ ಬೆಳಗಾವಿ ಗಡಿಯಲ್ಲಿ ಮಹಾರಾಷ್ಟ್ರದಿಂದ ಬರುವ ವಾಹನಗಳ ತಪಾಸಣೆಯನ್ನು ರಾಜ್ಯದ ಪೊಲೀಸರಿಂದ ಮಾಡಲಾಗುತ್ತಿದೆ.ಹಾಗಾಗಿ ವಾಹನ ತಪಾಸಣೆ ನಿಲ್ಲಿಸುವಂತೆ ಶಿವಸೇನೆಯ ಪುಂಡರು ಖ್ಯಾತೆ ತೆಗೆದಿದ್ದಾರೆ. ಮಹಾರಾಷ್ಟ್ರ ಕೆಲ ಹಳ್ಳಿಗಳಿಗೆ ಕರ್ನಾಟಕದ ಎನ್ ಎಚ್4 ರಾಷ್ಟ್ರೀಯ ಹೆದ್ದಾರಿ ಮೂಲಕ ಹಾದು ಹೋಗಬೇಕು. …
Read More »ರಾಜಕೀಯಕ್ಕೆ ಮತ್ತೊಬ್ಬ ಐಪಿಎಸ್ ಅಧಿಕಾರಿ: ಬಿಜೆಪಿ ಸೇರಲಿದ್ದಾರಾ ರವಿ ಚನ್ನಣ್ಣನವರ್?
ಬೆಂಗಳೂರು, ಆಗಸ್ಟ್ : ಇತ್ತೀಚೆಗೆ ಐಎಎಸ್, ಐಪಿಎಸ್ ಅಧಿಕಾರಿಗಳು ಅವಧಿ ಮುನ್ನವೇ ಸ್ವಯಂ ನಿವೃತ್ತಿ ಪಡೆದು ರಾಜಕಾರಣಕ್ಕೆ ಸೇರುತ್ತಿದ್ದಾರೆ. ಇದಕ್ಕೆ ಇತ್ತೀಚಿಗೆ ಬಿಜೆಪಿ ಸೇರಿದ ಕೆ.ಅಣ್ಣಾಮಲೈ ತಾಜಾ ಉದಾಹರಣೆಯಾಗಿದ್ದಾರೆ. ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದ ಕೆ. ಅಣ್ಣಾಮಲೈ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ಭಾರತೀಯ ಜನತಾ ಪಕ್ಷ ಸೇರಿದ್ದರು. ಕಳೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಸೋತು ಈಗ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದಾರೆ. ಈಗ ಅಣ್ಣಾಮಲೈ ತುಳಿದ ಹಾದಿಯನ್ನೇ …
Read More »ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ `ED’ ದಾಳಿ ಅಂತ್ಯ : ದಾಳಿ ಬಗ್ಗೆ ಕೈ ಶಾಸಕ ಹೇಳಿದ್ದೇನು?
ಬೆಂಗಳೂರು : ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ ಅಂತ್ಯವಾಗಿದ್ದು, ಇಡಿ ದಾಳಿ ಕುರಿತಂತೆ ಶಾಸಕ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್ ಖಾನ್, ನನ್ನ ಮನೆ ವಿಚಾರವಾಗಿ ಯಾರೋ ದೂರು ಕೊಟ್ಟಿದ್ದಾರಂತೆ ಹೀಗಾಗಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಾನು ನೀಡಿದ ದಾಖಲೆಗಳು ಸರಿಯಿದ್ದ ಕಾರಣ ನನ್ನ ಮನೆಯಿಂದ ಇಡಿ ಅಧಿಕಾರಿಗಳು ವಾಪಸ್ …
Read More »ಜನತಾ ದರುಶನವನ್ನೇ ಮರೆತ ಸಿಎಂ ಬಸವರಾಜ್ ಬೊಮ್ಮಾಯಿ: ಮುಖ್ಯಮಂತ್ರಿ ನಡೆ ವಿರುದ್ದ ರೈತರ ಆಕ್ರೋಶ
ಬೆಂಗಳೂರು: ಸಿಎಂ ಆಗಿ ಒಂದು ವಾರ ಕಳೆದರೂ ಜನತಾ ದರ್ಶನದ ಕಡೆ ಗಮನ ಹರಿಸಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಸದಾಗಿ ನೇಮಕಗೊಂಡ ಸಿಎಂ ಬಸವರಾಜ ಬೊಮ್ಮಾಯಿ ಜನತಾ ದರ್ಶನದ ಕಡೆ ಗಮನ ಹರಿಸಿಲ್ಲವೆಂದು ಆರ್ ಟಿ ನಗರದ ನಿವಾಸದ ಬಳಿ ಬೊಮ್ಮಾಯಿ ನಡೆ ವಿರುದ್ದ ರೈತರು ಆಕ್ರೋಶಗೊಂಡಿದ್ದಾರೆ. ಸಿಎಂ ಭೇಟಿ ಸಾಧ್ಯವಾಗದೇ ಇರುವುದಕ್ಕೆ ಕೋಪಗೊಂಡ ರೈತರು, ನಾವು ಎಲ್ಲೆಲ್ಲಿಂದಲೂ ಇಲ್ಲಿಗೆ ಬಂದಿದೇವೆ, ಆದರೆ ಮುಖ್ಯಮಂತ್ರಿಗಳು ನಮ್ಮ ಅಹವಾಲು ಕೇಳುತ್ತಿಲ್ಲ …
Read More »ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ, ನನ್ನ ಸಮಯ ಬಂದೇ ಬರುತ್ತೆ: ಸಚಿವ ಸ್ಥಾನವೂ ಸಿಗದಿದ್ದಕ್ಕೆ ಬೆಲ್ಲದ್ ಬೇಸರ
ಮುಖ್ಯಮಂತ್ರಿ ರೇಸ್ನಲ್ಲಿ ಅತ್ಯಂತ ಪ್ರಬಲವಾಗಿ ಕೇಳಿ ಬಂದ ಹೆಸರು ಅರವಿಂದ್ ಬೆಲ್ಲದ್. ಧಾರವಾಡ ಕ್ಷೇತ್ರದ ಶಾಸಕ ಬೆಲ್ಲದ್ ಸಿಎಂ ಆಯ್ಕೆ ವೇಳೆ ಹಲವು ಬಾರಿ ದೆಹಲಿಗೆ ಹಾರಿದ್ದು ಎಲ್ಲರ ಗಮನ ಸೆಳೆದಿತ್ತು. ಆದರೆ ಅಂತಿಮವಾಗಿ ಮುಖ್ಯಮಂತ್ರಿ ಸ್ಥಾನ ಬಸವರಾಜ ಬೊಮ್ಮಾಯಿಯವರ ಪಾಲಾಯಿತು. ನಂತರ ಬೆಲ್ಲದ್ ಅವರನ್ನು ಡಿಸಿಎಂ ಮಾಡಲಾಗುತ್ತೆ, ಇಲ್ಲವೇ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬೆಲ್ಲಾ ನಿರೀಕ್ಷೆಗಳು ಗರಿ ಬಿಚ್ಚಿ ಹಾರಾಡಿದ್ದವು. ಆದರೆ ಕ್ಯಾಬಿನೆಟ್ ಪಟ್ಟಿಯಲ್ಲೂ ಅರವಿಂದ್ ಬೆಲ್ಲದ್ ಹೆಸರು …
Read More »ಳಿನ್ ಕುಮಾರ್ ಕಟೀಲ್ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ
ಬೆಂಗಳೂರು: ನೂತನ ಸಚಿವ ಸಂಪುಟ ರಚನೆ ಬೆನ್ನಲ್ಲೆ ಬಿಜೆಪಿ ಕಚೇರಿಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಜೊತೆ ಚರ್ಚೆ ನಡೆಸಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಅನೌಪಚಾರಿಕವಾಗಿ ಮಾತನಾಡುತ್ತ ನನಗೂ ಒಳ್ಳೆಯ ಕಾಲ ಬರುತ್ತದೆ ಎಂದು ಹೇಳಿಕೊಂಡಿದ್ದಾರೆ. ಮಲ್ಲೇಶ್ವರಂ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುಮಾರು 15 ನಿಮಿಷಗಳ ಕಾಲ ನಳಿನಕುಮಾರ್ ಕಟೀಲ್ ಅವರ ಜೊತೆಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. …
Read More »ಮೈಸೂರು: ಪ್ರಾಧ್ಯಾಪಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ?
ಮೈಸೂರು: ಸಂಶೋಧನ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡು ಪ್ರಾಧ್ಯಾಪಕನೋರ್ವ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಸಂತ್ರಸ್ತೆ ಹಾಗೂ ಆರೋಪಿಯ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ| ರಾಮಚಂದ್ರಪ್ಪ ವಿರುದ್ಧ ಇಂಥದ್ದೊಂದು ಆರೋಪ ಕೇಳಿ ಬಂದಿದೆ. ಇವರ ಪತ್ನಿ ಇದೇ ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಕನ್ನಡ ಪ್ರಾಧ್ಯಾಪಕಿ. ಸಂತ್ರಸ್ತೆಯು ರಾಮಚಂದ್ರಪ್ಪರ ಮಾರ್ಗದರ್ಶನದಲ್ಲಿ ಪಿಎಚ್‌ಡಿ ಮಾಡುತ್ತಿದ್ದು, ಗುರುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ …
Read More »ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಸಾರ್ವಕಾಲಿಕ 54,717ಕ್ಕೆ ಏರಿಕೆ, ನಿಫ್ಟಿ ಜಿಗಿತ
ಮುಂಬಯಿ: ಮುಂಬಯಿ ಷೇರುಪೇಟೆಯ ವಹಿವಾಟು ಸತತ ಎರಡನೇ ದಿನವಾದ ಗುರುವಾರ(ಆಗಸ್ಟ್ 05) ಕೂಡಾ 123.07 ಅಂಕಗಳಷ್ಟು ಏರಿಕೆಯೊಂದಿಗೆ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಅಲ್ಲದೇ ರಿಲಯನ್ಸ್ ಇಂಡಸ್ಟ್ರೀಸ್, ಎಚ್ ಡಿಎಫ್ ಸಿ ಬ್ಯಾಂಕ್ ಷೇರುಗಳು ಲಾಭಗಳಿಸಿದೆ. ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 123.07 ಅಂಕಗಳ ಏರಿಕೆಯೊಂದಿಗೆ ಸಾರ್ವಕಾಲಿಕ ದಾಖಲೆಯ 54,717.24 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 35.80 ಅಂಕ …
Read More »ಸುಳೆಭಾವಿ ಗ್ರಾಮದ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳಿಗೆ ಭೇಟಿ ನೀಡಿದ ಡಾ. ಸೋನಾಲಿ ಸರ್ನೋಬತ್,
ಇಂದು 2021 ಆಗಸ್ಟ್ 7ರಂದು ಜವಳಿ ದಿನವನ್ನು ಆಚರಿಸಲು ಬಿಜೆಪಿ ಬೆಳಗಾವಿ ಗ್ರಾಮೀಣ ಮಹಿಳಾ ಮೋರ್ಚಾದ ವತಿಯಿಂದ ಡಾ. ಸೋನಾಲಿ ಸರ್ನೋಬತ್, ಶ್ರೀಮತಿ ಜ್ಯೋತಿ ಕುಲಕರ್ಣಿ ಮತ್ತು ಶ್ರೀಮತಿ ಚೇತನಾ ಅಗಸಗೇಕರ್ ಮತ್ತು ಕಾರ್ಯಕರ್ತೆಯರು ಸುಳೆಭಾವಿ ಗ್ರಾಮದ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳಿಗೆ ಭೇಟಿ ನೀಡಿದರು. ಏತನ್ಮಧ್ಯೆ ಅಂಗನವಾಡಿ ಶಿಕ್ಷಕಿಯರ ಅಗಾಧವಾದ ಕೆಲಸವನ್ನು ಕಡೆಗಣಿಸಲಾಗಿದೆ. ನಾವು ಆಶಾ ಕಾರ್ಯಕರ್ತೆಯರು ಕೆಲಸ ಮಾಡುವುದನ್ನು ಮಾತ್ರ ಗಮನಿಸುತ್ತೇವೆ.ಆದರೆ ಅಂಗನವಾಡಿಯ ಶಿಕ್ಷಕಿಯಾರು ಸಹ ಶ್ರದ್ಧೆಯಿಂದ …
Read More »