ದಾವಣಗೆರೆ: ದಾವಣಗೆರೆ ಜಿಲ್ಲೆಯ ಐವರು ಬಿಜೆಪಿ ಶಾಸಕರಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡಲಿ ಎಂದು ಹತ್ತೂರು ಗ್ರಾಮದಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹತ್ತೂರು ಗ್ರಾಮದಲ್ಲಿ ಮಾತನಾಡಿದ ರೇಣುಕಾಚಾರ್ಯ, ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿ ಪಕ್ಷದ ವರಿಷ್ಠರು, ಸಿಎಂ ಸಂಪುಟ ರಚನೆ ಬಗ್ಗೆ ನಿರ್ಧರಿಸಲಿದ್ದಾರೆ. ಸಿಎಂ ಪರಮಾಧಿಕಾರ ಹೊಂದಿದ್ದು, ಪಕ್ಷದ ನಾಯಕರು ಮತ್ತು ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧವಾಗಿರುತ್ತೇನೆ ಎಂದು ಹೇಳಿದ್ದಾರೆ.
Read More »ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ಬಾಲಕಿಯ ಕಣ್ಣೀರಿಗೆ ಸ್ಪಂದಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಬೆಳಗಾವಿ: ಹಿರಣ್ಯಕೇಶಿ ನದಿ ಪ್ರವಾಹದಿಂದ ಮನೆ ಕುಸಿದು ಬಿದ್ದು, ಮನೆಯಲ್ಲಿದ್ದ ಎಲ್ಲಾ ಸಾಮಗ್ರಿ ಕೊಚ್ಚಿಕೊಂಡು ಹೋಗಿದ್ದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ಬಾಲಕಿಯ ಕಣ್ಣೀರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸಿದ್ದಾರೆ. ನಿಸರ್ಗ ದೇಸಾಯಿ ಎಂಬ ಎಂಟು ವರ್ಷದ ಬಾಲಕಿ ಪುಸ್ತಕ, ಆಟಿಕೆ ಸಾಮಾಗ್ರಿ, ಟಿವಿ ಕಳೆದುಕೊಂಡು ಕಣ್ಣೀರಿಟ್ಟಿದ್ದಳು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿದ್ದಾರೆ. ಬಾಲಕಿಗೆ ಪುಸ್ತಕ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಿಕೊಡುವಂತೆ ಸಿಎಂ …
Read More »ಸಂಧಾನ ಮಾಡಿದ್ರೂ ಸಹಿಸದ ಮನಸ್ಸು! ಮಗ ವಿದೇಶದಲ್ಲಿರುವಾಗ್ಲೇ ಸೊಸೆಯನ್ನು ಹತ್ಯೆ ಮಾಡಿದ ಮಾವ
ರಾಜಮಂಡ್ರಿ: ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಸೊಸೆಯನ್ನೇ ಕೊಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಮಲ್ಕಿಪುರಂ ಮಂಡಲದ ಮೆಡಿಚೆರ್ಲಾ ಪಾಳ್ಯಂನಲ್ಲಿ ನಡೆದಿದೆ. ಮೃತ ಸೊಸೆಯನ್ನು ಪ್ರಿಯಾಮಣಿ (25) ಎಂದು ಹಾಗೂ ಆರೋಪಿ ಮಾವನನ್ನು ಸತ್ಯನಾರಾಯಣ ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಪ್ರಿಯಾಮಣಿ, ಸತ್ಯನಾರಾಯಣ ಮಗ ವಿಜಯ್ ಕುಮಾರ್ನನ್ನು ಮದುವೆ ಆಗಿದ್ದಳು. ವಿಜಯ್ ಕತಾರ್ನಲ್ಲಿ ಕೆಲಸ ಮಾಡುತ್ತಿದ್ದಾನೆ. ಪ್ರಿಯಾಮಣಿಯ ಪಾಲಕರು …
Read More »ಸಿಎಂ ಆಗ್ಬೇಕು ಎಂದು ಗಡ್ಡ ಬಿಟ್ಟಿಲ್ಲ; ಭವಿಷ್ಯ ನಿಜವಾದರೆ ತುಂಬಾ ಜನ ಬಿಡ್ಬಹುದು ಎಂದ ಸಿ.ಟಿ.ರವಿ
ಚಿಕ್ಕಮಗಳೂರು; ಮುಖ್ಯಮಂತ್ರಿಯಾಗಬೇಕು ಎಂದು ನಾನು ಗಡ್ಡ ಬಿಟ್ಟಿಲ್ಲ, ಕಾಲೇಜು ದಿನಗಳಿಂದಲೂ ನಾನು ನಿರಂತರವಾಗಿ ಗಡ್ಡ ಬಿಡುತ್ತಿದ್ದೇನೆ. ಇದು ನನ್ನ ಐಡೆಂಟಿಟಿಯ ಒಂದು ಭಾಗ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಮುಂದಿನ ಮಾರ್ಚ್ ತಿಂಗಳಲ್ಲಿ ಗಡ್ಡಧಾರಿಯೋರ್ವರು ಸಿಎಂ ಆಗ್ತಾರೆ ಎಂಬ ವಿಜಯನಗರ ಮೈಲಾರಲಿಂಗ ಭವಿಷ್ಯ ನುಡಿದ ಬಗ್ಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಗಡ್ಡಾಧಾರಿ ಬಗ್ಗೆ ಭವಿಷ್ಯ ನಿಜವಾದರೆ ಇನ್ಮೇಲೆ ಬಹಳ ಜನ ಗಡ್ಡ ಬಿಡಬಹುದು. ಅದರಲ್ಲೂ ಸಿಎಂ ಸ್ಥಾನದ ಆಕಾಂಕ್ಷಿಗಳೆಲ್ಲರೂ …
Read More »ನಾಳೆಯಿಂದಲೇ ಶಾಲೆ ಆರಂಭದ ನಿರ್ಧಾರ ಕೈಬಿಟ್ಟ ರುಪ್ಸಾ
ಬೆಂಗಳೂರು: ಶಾಲೆಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ರಾಜ್ಯ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟದಿಂದ ನಾಳೆಯಿಂದ ಶಾಲೆ ಆರಂಭಿಸುವ ನಿರ್ಧಾರ ಕೈಬಿಡಲಾಗಿದೆ. ಹಲವು ರಾಜ್ಯಗಳಲ್ಲಿ ಈಗಾಗಲೇ ಶಾಲೆ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ನಮ್ಮ ಸರ್ಕಾರ ಮಾತ್ರ ಶಾಲೆ ಆರಂಭಿಸಲು ನಿರ್ಧಾರ ಕೈಗೊಳ್ಳುತ್ತಿಲ್ಲ. ಮುಖ್ಯಮಂತ್ರಿಗಳು ಕರೆಮಾಡಿ ಸಭೆ ನಡೆಸಿ ಚರ್ಚಿಸಲು ಮನವಿ ಮಾಡಿದ್ದಾರೆ. ನಾಳೆಯಿಂದ ಶಾಲೆಗಳನ್ನು ಆರಂಭ ಮಾಡಲು ನಿರ್ಧಾರ ಕೈಗೊಳ್ಳಲಾಗಿತ್ತು. ಶಾಲೆ ಆರಂಭದ …
Read More »ಸಾಲ ಸೌಲಭ್ಯ, ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2021-22 ನೇ ಸಾಲಿನ ವಿವಿಧ ಯೋಜನೆಗಳಿಗೆ ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ಸ್ವಯಂ ಉದ್ಯೋಗ ಕಾರ್ಯಕ್ರಮಗಳಾದ ಸ್ವಯಂ ಉದ್ಯೋಗ-ನೇರಸಾಲ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಪ್ರೇರಣಾ (ಮೈಕ್ರೋ ಕ್ರೆಡಿಟ್)ಯೋಜನೆ(ನೊಂದಾಯಿತ ಸ್ವಸಹಾಯ ಮಹಿಳಾ ಸಂಘದವರಿಗಾಗಿ), ಭೂ ಒಡೆತನ ಯೋಜನೆ, ಸಮಗ್ರ ಗಂಗಾ ಕಲ್ಯಾಣ ಯೋಜನೆ, ಪರಿಶಿಷ್ಟ ಪಂಗಡದ ಅಲೆಮಾರಿ/ಅರೆ ಅಲೆಮಾರಿ/ಸೂಕ್ಷ್ಮ ಮತ್ತು …
Read More »ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಸಿಎಂ ಬೊಮ್ಮಾಯಿ
ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಮಾಜಿ ಪ್ರಧಾನಿ ಕಾಲಿಗೆ ನಮಸ್ಕರಿಸಿ ಆಶಿರ್ವಾದ ಪಡೆದರು. ಈ ವೇಳೆ ದೇವೇಗೌಡರು ನೂತನ ಸಿಎಂಗೆ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದರು. ಬಸವರಾಜ್ ಬೊಮ್ಮಾಯಿ ಅವರಿಗೆ ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಹೆಚ್.ಡಿ.ರೇವಣ್ಣ ಸಾಥ್ …
Read More »ಮುಖ್ಯಮಂತ್ರಿ ಕಚೇರಿಯಿಂದ ಯಡಿಯೂರಪ್ಪ ತಂಡ ಹೊರಕ್ಕೆ: ವಿಶೇಷ ಅಧಿಕಾರಿಗಳ ಕಾರ್ಯಮುಕ್ತಿ ಆದೇಶ ಪ್ರಕಟ
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರದ ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಕಚೇರಿಯಲ್ಲಿ (ಮುಖ್ಯಮಂತ್ರಿಗಳ ಸಚಿವಾಲಯ) ನಿಯೋಜನೆ, ಒಪ್ಪಂದ ಹಾಗೂ ಗುತ್ತಿಗೆ ಆಧಾರದ ಮೆಲೆ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ಕಾರ್ಯಮುಕ್ತಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್ ಆದೇಶ ಹೊರಡಿಸಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಎಂ.ಲಕ್ಷ್ಮೀನಾರಾಯಣ ಸೇರಿದಂತೆ ಒಟ್ಟು 19 ಅಧಿಕಾರಿಗಳನ್ನು ಕರ್ತವ್ಯಮುಕ್ತಗೊಳಿಸಲಾಗಿದೆ. ನಿಯೋಜನೆ / ಒಪ್ಪಂದದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ತಮ್ಮ …
Read More »ಸಂಪುಟ ರಚನೆ: ಸಂಭವನೀಯ ಸಚಿವರ ಪಟ್ಟಿಯೊಂದಿಗೆ ದೆಹಲಿಗೆ ಹೊರಟ ಸಿಎಂ ಬೊಮ್ಮಾಯಿ
ಬೆಂಗಳೂರು: ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಸಚಿವ ಸಂಪುಟ ರಚನೆ ನಿಟ್ಟಿನಲ್ಲಿ ವರಿಷ್ಠರ ಸಮ್ಮತಿ ಪಡೆದು ವಾಪಸ್ ಆಗಲಿದ್ದಾರೆ. ನೂತನ ಸಚಿವರ ಲಿಸ್ಟ್ ನೊಂದಿಗೆ ಸಂಜೆ 5:40ಕ್ಕೆ ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಒಪ್ಪಿಗೆ ಪಡೆದು ಸಚಿವರ ಪಟ್ಟಿ ಅಂತಿಮಗೊಳಿಸಲಿದ್ದಾರೆ. ನಾಳೆಯೇ ಸಂಪುಟ ರಚನೆಗೆ ಮುಹೂರ್ತ ಫೈನಲ್ ಆಗಲಿದ್ದು, ಮಂಗಳವಾರ ಅಥವಾ ಬುಧವಾರ ನೂತನ ಸಚಿವರು ಪ್ರಮಾಣವಚನ …
Read More »ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ
ನವದೆಹಲಿ, ಜುಲೈ 31: ಮುಂದಿನ ವಾರ ವಿಪಕ್ಷಗಳು ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಾರಿ ಸಂಸತ್ ಮುಂಗಾರು ಅಧಿವೇಶನವು ಲೋಕಸಭೆ ಹಾಗೂ ರಾಜ್ಯಸಭೆ ಎರಡರಲ್ಲೂ ಪೆಗಾಸಸ್‌ನಿಂದಲೇ ಆರಂಭವಾಗಿತ್ತು. ಆಮೇಲೆ ಕೃಷಿ ಕಾಯ್ದೆ ಸೇರಿದಂತೆ ಬೇರೆ ವಿಚಾರಗಳಿಗೆ ತಿರುಗಿತು. ಅಧಿವೇಶನ ಆರಂಭವಾಗಿ ಎರಡು ವಾರಗಳೇ ಕಳೆದರೂ ಇದುವರೆಗೂ ಸರಿಯಾಗಿ ಅಧಿವೇಶನವನ್ನು ನಡೆಸಲು ಸಾಧ್ಯವಾಗಿಲ್ಲ. ಇಡೀ ದೇಶದಲ್ಲಿ ಸಂಚಲನ ಮೂಡಿಸಿರುವ …
Read More »