ಬೆಂಗಳೂರು: ವಲಸಿಗ ರಿಂದಲೇ ಬಿಜೆಪಿ ಸರಕಾರ ಬಂದಿದ್ದು, ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಜತೆ ಮಾತನಾಡುವುದಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಗುರುವಾರ ಬೆಂಗಳೂರಿನ ಆರೆಸ್ಸೆಸ್ ಕಚೇರಿಗೆ ಭೇಟಿ ನೀಡಿ, ಮುಖಂಡ ಮುಕುಂದ್ ಅವರನ್ನು ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿದರು. ಸಚಿವ ಸಂಪುಟ ರಚನೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ವರಿಷ್ಠರಿಗೆ ಬಿಟ್ಟಿದ್ದು, ವಲಸಿಗರ ವಿಷಯ …
Read More »ಭ್ರಷ್ಟಾಚಾರವೇ ಸರಕಾರದ ಸಾಧನೆ: ಸಿದ್ದು
“ಆಪರೇಷನ್ ಕಮಲ’ ಎಂಬ ಅನೈತಿಕ ಮಾರ್ಗದಿಂದ ಅಧಿಕಾರಕ್ಕೇರಿದ ರಾಜ್ಯ ಬಿಜೆಪಿ ಸರಕಾರವು ಭ್ರಷ್ಟಾಚಾರ, ದುರಾಡಳಿತಗಳಿಂದಲೇ ಎರಡು ವರ್ಷಗಳನ್ನು ಪೂರೈಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸರಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ “ಜನಪೀಡಕ ಸರಕಾರ’ ಕಿರುಹೊತ್ತಿಗೆ ಬಿಡುಗಡೆ ಮಾಡಿದ ಅವರು, ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಬಿಜೆಪಿ ಸರಕಾರ ಇದ್ದರೆ ಸ್ವರ್ಗವನ್ನೇ ಸೃಷ್ಟಿಸುತ್ತೇವೆ ಎಂದು ಜನರನ್ನು ನಂಬಿಸಿ ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂದು ಟೀಕಿಸಿದರು. ಕೊರೊನಾ ಸಂಬಂಧಿ ಸಲಕರಣೆ …
Read More »ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಹೊಸ ಮುಖಗಳಿಗೆ ಮನ್ನಣೆ-
ಬೆಂಗಳೂರು: ರಾಜ್ಯಸರ್ಕಾರದಲ್ಲಿ ಮುಖ್ಯಮಂತ್ರಿ ನಾಯಕತ್ವ ಬದಲಾವಣೆ ಡ್ರಾಮಾ ಕೊನೆಯಾಗುತ್ತಿದ್ದಂತೆ ವಿಧಾನ ಸೌಧದ ಪಡಸಾಲೆಯಲ್ಲಿ ಈಗ ಕೇಳಿಬರುತ್ತಿರುವ ಸುದ್ದಿಯೊಂದೇ ಬಸವರಾಜ ಬೊಮ್ಮಾಯಿಯವರ ನೂತನ ಸಂಪುಟದಲ್ಲಿ ಯಾರ್ಯಾರು ಸೇರ್ಪಡೆಯಾಗುತ್ತಾರೆ, ಯಾರ್ಯಾರಿಗೆ ಈ ಬಾರಿ ಸಚಿವ ಸ್ಥಾನ ಒಲಿಯುತ್ತದೆ ಎಂದು. ಜಾತಿ, ಪ್ರದೇಶವಾರು ಪ್ರಾತಿನಿಧ್ಯವನ್ನು ನೋಡಿಕೊಂಡು ಶಾಸಕರಿಗೆ ಹಿಂದಿನ ಬಿ ಎಸ್ ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಮಣೆ ಹಾಕಲಾಗಿದ್ದು, ಅವರಲ್ಲಿ ಹಲವರಿಗೆ ಈ ಬಾರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ಸಿಗುವುದು ಸಂಶಯವಾಗಿದೆ. …
Read More »ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ವರಿಷ್ಠರಿಗೆ ಸಚಿವ ಸಂಪುಟ ರಚನೆಯ ತಲೆನೋವು ಆರಂಭವಾಗಿದೆ. ಪ್ರಮುಖ ಸ್ವಾಮೀಜಿಗಳು ತಮ್ಮ ಸಮುದಾಯಗಳ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಡ ಹೇರುತ್ತಿರುವುದು ಇದಕ್ಕೆ ಕಾರಣ. ಮುಖ್ಯಮಂತ್ರಿ ಬೊಮ್ಮಾಯಿ ತತ್ಕ್ಷಣ ಸಚಿವ ಸಂಪುಟ ರಚಿಸುವ ಲೆಕ್ಕಾಚಾರದಲ್ಲಿ ಇದ್ದಂತೆ ಕಾಣಿಸುತ್ತಿಲ್ಲ. ಆಷಾಢ ಮುಗಿ ಯುವವರೆಗೂ ಆಕಾಂಕ್ಷಿಗಳು ಕಾಯ ಬೇಕಾಗ ಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರ ವಾರ ದಿಲ್ಲಿಗೆ ತೆರಳಲಿದ್ದು, ಪ್ರಧಾನಿ ಮೋದಿ, …
Read More »ಬೆಳಗಾವಿ: ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ 54 ಜನರನ್ನು ರಕ್ಷಿಸಿ, ಸ್ಥಳಾಂತರ ಮಾಡಲಾಗಿದೆ.
ಬೆಳಗಾವಿ: ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ 54 ಜನರನ್ನು ರಕ್ಷಿಸಿ, ಸ್ಥಳಾಂತರ ಮಾಡಲಾಗಿದೆ. ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮದಲ್ಲಿ 54 ಜನ ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದರು. ಎನ್ಡಿಆರ್ಎಫ್ ತಂಡ ಹಾಗೂ ಸ್ಥಳೀಯ ಪೊಲೀಸರು ಜನರನ್ನು ರಕ್ಷಿಸಿ, ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಿದ್ದಾರೆ. ಕೃಷ್ಣಾ ನದಿಯಿಂದ ಸವದಿ ಗ್ರಾಮ ಸಂಪೂರ್ಣ ಜಲಾವೃತಗೊಂಡಿದೆ. ಏಕಾಏಕಿ ನೀರು ಬಂದಿದ್ದರಿಂದ ಗ್ರಾಮಸ್ಥರು ಸಿಲುಕಿಕೊಂಡಿದ್ದರು. ಉತ್ತರ ಕನ್ನಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿರುವ …
Read More »ಹುಬ್ಬಳಿಗೆ ಬಂದ ಸಿಎಂ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಆರ್ಎಸ್ಎಸ್ ಕಚೇರಿಗೆ ಭೇಟಿ ಕೊಟ್ಟ ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ರಾಜ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಗೆ ಆಗಮಿಸಿದ್ದರು. ಮೊದಲ ಬಾರಿಗೆ ಹುಬ್ಬಳಿಗೆ ಬಂದ ಸಿಎಂಗೆ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಲಭಿಸಿತ್ತು. ಸಿಎಂ ಆದ ಬಳಿಕ ಮೊದಲ ಬಾರಿಗೆ ಹುಬ್ಬಳಿಗೆ ಆಗಮಿಸಿದ ಬೊಮ್ಮಾಯಿ ಅವರು, ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಆರ್.ಎಸ್.ಎಸ್ ಕೇಶವ ಕುಂಜ ಕಚೇರಿಗೆ ಭೇಟಿ ನೀಡಿ ಸಂಘಟನೆಯ ಪ್ರಮುಖರೊಂದಿಗೆ ಚರ್ಚೆ ನಡೆಸಿದರು. ತಂದೆ-ತಾಯಿ ಸಮಾಧಿಗೆ ಬೊಮ್ಮಾಯಿ …
Read More »‘ಮಂತ್ರಿಗಿರಿ’ಗಾಗಿ ಹೈಕಮಾಂಡ್ ಮುಂದೆ ಸೋಮಶೇಖರ್ ರೆಡ್ಡಿ ಲಾಬಿ
ಬಳ್ಳಾರಿ: ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ಬೆನ್ನಲ್ಲೇ ಬಸವರಾಜ್ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಸದ್ಯದಲ್ಲೇ ಬಸವರಾಜ್ ಬೊಮ್ಮಾಯಿ ಹೈಕಮಾಂಡ್ ಆದೇಶದ ಮೇರೆಗೆ ಹೊಸ ಸಚಿವ ಸಂಪುಟ ರಚನೆ ಮಾಡಲಿದ್ದಾರೆ. ಹೀಗಾಗಿ ಹಲವರು ಸಚಿವ ಸ್ಥಾನಕ್ಕೆ ಭಾರೀ ಲಾಬಿ ನಡೆಸುತ್ತಿದ್ದಾರೆ. ಈ ಸಾಲಿಗೆ ಈಗ ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ ಸೇರ್ಪಡೆಗೊಂಡಿದ್ದಾರೆ. ಹೌದು, ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ ತನಗೂ ಮಂತ್ರಿ ಸ್ಥಾನಕ್ಕೆ ನೀಡುವಂತೆ ಹೈಕಮಾಂಡ್ …
Read More »ಕೇಂದ್ರ ಮಾಜಿ ಸಚಿವ ದಿ.ಸುರೇಶ ಅಂಗಡಿ ಅವರ ಸಹೋದರರಾಗಿದ್ದ ಡಾ. ಸಿ.ಸಿ.ಅಂಗಡಿ ನಿಧನ
ಬೆಳಗಾವಿ – ಕೇಂದ್ರ ಮಾಜಿ ಸಚಿವ ದಿ.ಸುರೇಶ ಅಂಗಡಿ ಅವರ ಸಹೋದರರಾಗಿದ್ದ ಡಾ. ಸಿ.ಸಿ.ಅಂಗಡಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದಾಗಿ ಅವರು ಬೆಳಗಾವಿಯ ವಿಶ್ವೇಶ್ವರ ನಗರದ ನಿವಾಸದಲ್ಲಿ ಕೊನೆಯುಸಿರೆಳೆದರು. ನಿವೃತ್ತ ಶಿಕ್ಷಕರಾಗಿರುವ ಅವರಿಗೆ ಓರ್ವ ಪುತ್ರ ಹಾಗೂ ಇಬ್ಬರು ಹೆಣ್ಣುಕ್ಕಳಿದ್ದಾರೆ. ಬೆಳಗಾವಿಯ ಸದಾಶಿವನಗರದ ಸ್ಮಶಾನ ಭೂಮಿಯಲ್ಲಿ ಗುರುವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಿತು.
Read More »ರಾಜ್ಯಪಾಲ ಹುದ್ದೆಗಾಗಿ ಮನವೊಲಿಕೆ ಯತ್ನ? ಬಿ.ಎಸ್.ಯಡಿಯೂರಪ್ಪ ಆರ್ ಎಸ್ ಎಸ್ ನಾಯಕರನ್ನು ಭೇಟಿಯಾಗಿ ಚರ್ಚಿಸಿರುವುದು ಕುತೂಹಕ್ಕೆ ಕಾರಣ
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಬಿ.ಎಸ್.ಯಡಿಯೂರಪ್ಪ ಆರ್ ಎಸ್ ಎಸ್ ನಾಯಕರನ್ನು ಭೇಟಿಯಾಗಿ ಚರ್ಚಿಸಿರುವುದು ಕುತೂಹಕ್ಕೆ ಕಾರಣವಾಗಿದೆ. ಬೆಂಗಳೂರಿನ ಕೇಶವ ಕೃಪಾ ಆರ್ ಎಸ್ ಎಸ್ ಕಚೇರಿಗೆ ತೆರಳಿರುವ ಯಡಿಯೂರಪ್ಪ ಆರ್ ಎಸ್ ಎಸ್ ಮುಖಂಡ ಮುಕುಂದ್ ಹಾಗೂ ಹಲವು ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈಗಾಗಲೇ ರಾಜ್ಯಪಾಲರ ಹುದ್ದೆ ಬೇಡವೆಂದಿರುವ ಯಡಿಯೂರಪ್ಪನವರನ್ನು ಮನವೊಲಿಕೆ ಮಾಡುವ ನಿಟ್ಟಿನಲ್ಲಿ ಮುಖಂಡರು ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.
Read More »ಪಂಚಮಸಾಲಿ ಶ್ರೀ ರಾಜ್ಯಾದ್ಯಂತ ಅಭಿಯಾನ, ಸತ್ಯಾಗ್ರಹದ ಎಚ್ಚರಿಕೆ
ಬೆಂಗಳೂರು: ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆಯೇ ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರವಾಗಿ ನೀಡಿದ್ದ ಭರವಸೆಗಳ ಬಗ್ಗೆ ಮತ್ತೆ ನೆನಪಿಸಿರುವ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಸರ್ಕಾರಕ್ಕೆ ಅಂತಿಮ ಗಡುವಿನ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಂಚಮಸಾಲಿ ಶ್ರೀಗಳು, 2ಎ ಮೀಸಲಾತಿಗಾಗಿ ಆಗ್ರಹಿಸಿ ಆಗಸ್ಟ್ 15ರಿಂದ ಸೆ.30ರವರೆಗೆ ರಾಜ್ಯಾದ್ಯಂತ ಅಭಿಯಾನ ನಡೆಸಲಾಗುತ್ತದೆ. ಚಾಮರಾಜನಗರ ಜಿಲ್ಲೆ ಮಲೈಮಹದೇಶ್ವರ ಬೆಟ್ಟದಿಂದ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದ್ದು, …
Read More »