Breaking News

ಸಾಕಷ್ಟು ಜನ ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ,  ಸಚಿವ ಸ್ಥಾನ‌ ನೀಡುವದು ಸಿಎಂ ವಿವೇಚನೆಗೆ ಬಿಟ್ಟಿದ್ದು

ಬೆಳಗಾವಿ:  ಸಾಕಷ್ಟು ಜನ ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ,  ಸಚಿವ ಸ್ಥಾನ‌ ನೀಡುವದು ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ  ಹುಕ್ಕೇರಿ ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ವಲಸಿಗರು ಹಾಗೂ ಮೂಲ   ಬಿಜೆಪಿಗರ ಮಧ್ಯೆ  ಯಾವುದೇ ತಿಕ್ಕಾಟವಿಲ್ಲ.  ಬಿಜೆಪಿಯಲ್ಲಿನ ತಿಕ್ಕಾಟ ಇದು ಮಾಧ್ಯಮಗಳ ಸೃಷ್ಟಿ ಎಂದರು. ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ  ಮಾತನಾಡಿ, ಸದ್ಯ  ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಮುಂದಿನ …

Read More »

ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ತೀರ್ಮಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಗೆ ಮುಂದಾಗಿರುವ ಕೆಎಂಎಫ್, ಪ್ರತಿ ಟನ್‍ಗೆ 15 ಸಾವಿರ ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಇಲ್ಲಿನ ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆದೇಶದ ಮೇರೆಗೆ ರೈತರ ಅನುಕೂಲಕ್ಕಾಗಿ ಮೆಕ್ಕಜೋಳ ಖರೀದಿಗೆ ನಮ್ಮ ಸಂಸ್ಥೆ ಮುಂದಾಗಿದ್ದು, ಅಂದಾಜು …

Read More »

ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಶೇ. 80 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ:ಲಕ್ಷ್ಮಣ ಸವದಿ

ರಾಯಚೂರು: ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಶೇ. 80 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ ಎಂದು  ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮ ಸ್ವರಾಜ್ ಸಮಾವೇಶದ ಮೂಲಕ ಹಳ್ಳಿಯಿಂದ ದಿಲ್ಲಿಯ ವರೆಗೆ ಬಿಜೆಪಿ ಕಾರ್ಯಕರ್ತರನ್ನು ಹುರಿದುಂಬಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ  ಬಿಜೆಪಿ ಸದಸ್ಯರ ಆಯ್ಕೆಗೆ ಶ್ರಮಿಸಲಾಗುವುದು ಎಂದು ಹೇಳಿದರು. ಮಸ್ಕಿ  ಉಪ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಸೂರ್ಯ- ಚಂದ್ರರಿವುದು ಎಷ್ಟು ಸತ್ಯವೋ, …

Read More »

ಕುರ್ಚಿ ಬಿಟ್ಟು ಎದ್ದೇಳಿ, ರೈತರ ಮೇಲೆ ಟಿಯರ್ ಗ್ಯಾಸ್ ಮತ್ತು ಅವರ ಮೇಲೆ ದಬ್ಬಾಳಿಕೆ ನಡೆಸುವುದನ್ನು ಬಿಡಿ: ರಾಹುಲ್ ಗಾಂಧಿ,

ಹೊಸದಿಲ್ಲಿ:   ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಅವರ ಹಕ್ಕುಗಳನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಅನ್ನದಾತರು ರಸ್ತೆಯಲ್ಲಿ ಕುಳಿತಿದ್ದರೇ ಟಿವಿಯಲ್ಲಿ ಭಾಷಣಗಳು ಬರುತ್ತಿವೆ, ಶ್ರಮಜೀವಿಗಳ ಋಣದಲ್ಲಿದ್ದೇವೆ, ಅವರಿಗೆ ನ್ಯಾಯ ಒದಗಿಸುವ ಮೂಲಕ ಅವರ ಋಣ ತೀರಿಸಬೇಕಿದೆ. ರೈತರ ಶ್ರಮಕ್ಕೆ ಎಲ್ಲರೂ ಆಭಾರಿಯಾಗಿದ್ದಾರೆ, ಹೀಗಾಗಿ ಅವರಿಗೆ ನ್ಯಾಯ ಒದಗಿಸುವ ಮೂಲಕ ನಾವು ಅವರು ಋಣವನ್ನು ತೀರಿಸಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಕುರ್ಚಿ ಬಿಟ್ಟು …

Read More »

ವಿಕಲಚೇತನ ಫಲಾನುಭವಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ  ಮಂಗಳವಾರ ತಮ್ಮ ಕಾರ್ಯಾಲಯದಲ್ಲಿ ತ್ರಿಚಕ್ರ ವಾಹನಗಳನ್ನು ವಿತರಿಸಿದರು.

ಗೋಕಾಕ : ವಿಕಲಚೇತನ ಫಲಾನುಭವಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ  ಮಂಗಳವಾರ ತಮ್ಮ ಕಾರ್ಯಾಲಯದಲ್ಲಿ ತ್ರಿಚಕ್ರ ವಾಹನಗಳನ್ನು ವಿತರಿಸಿದರು. ಜಿ.ಪಂ ಸದಸ್ಯ ಟಿ.ಆರ್.ಕಾಗಲ್, ಮಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಅರೆನ್ನವರ, ಪೌರಾಯುಕ್ತ ಶಿವಾನಂದ ಹಿರೇಮಠ, ಸದಸ್ಯರುಗಳಾದ ಅಬ್ಬಾಸ ದೇಸಾಯಿ, ಪ್ರಕಾಶ ಮುರಾರಿ, ಸಂತೋಷ ಮಂತ್ರಣವರ , ಸಿದ್ದಪ್ಪ ಹುಚ್ಚರಾಯಪ್ಪಗೋಳ, ಶ್ರೀಶೈಲ ಯಕ್ಕುಂಡಿ, ಮುಖಂಡರುಗಳಾದ ಅಬ್ದುಲವಹಾಬ ಜಮಾದಾರ, ದಾದಾಪೀರ ಶಾಬಾಶಖಾನ, ದುರ್ಗಪ್ಪ ಶಾಸ್ತ್ರಿಗೋಲ್ಲರ, ಬಸವರಾಜ ದೇಶನೂರ, …

Read More »

ಯಾವುದೇ ಕಾರಣಕ್ಕೂ ಮುಂಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ.:ಬಸವರಾಜ ಬೊಮ್ಮಾಯಿ

ಬೆಳಗಾವಿ:  ಯಾವುದೇ ಕಾರಣಕ್ಕೂ ಮುಂಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಬಿ.ಎಸ್. ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು  ಸಮರ್ಥ ನಾಯಕರಾಗಿದ್ದು, ಮುಂದಿನ 3 ವರ್ಷದ ಅವರೇ ಸಿಎಂ ಆಗಿರಲಿದ್ದಾರೆ.  ಮುಂದಿನ  ಚುನಾವಣೆಯನ್ನು ಅವರ ನೇತೃತ್ವದಲ್ಲಿಯೇ ಎದುರಿಸುತ್ತೇವೆ ಎಂದು ಹೇಳಿದರು.

Read More »

ಯಲ್ಲಾಮ್ಮ ದೇವಿದರ್ಶನ ಮುಂದಿನ ವರ್ಷ

ಸವದತ್ತಿ: ಬೆಳಗಾವಿ ಜನರ ಆರಾಧ್ಯ ದೇವತೆ ಯಲ್ಲಾಮ್ಮ ದೇವಿ ವರ್ಷದ 12 ತಿಂಗಳು ಈ ದೇವಸ್ಥಾನ ಭಕ್ತರಿಂದ ತುಂಬಿ ಇರುತಿತ್ತು, ಈ ಒಂದು ಯಲಮ್ಮ ದೇವಿಯ ದರ್ಶನ ವನ್ನಾ ಈ ಕ ರೋ ನಾ ಮಹಾಮಾರಿ ಬಂದಾಗಿನಿಂದ ಈ ದೇವಿಯ ದರ್ಶನ ವನ್ನಾ ಎಲ್ಲಾ ಭಕ್ತಾದಿಗಳಿಗೆ ದರ್ಶನ ಭಾಗ್ಯ ವನ್ನಾ ಬಂದ್ ಮಾಡಲಾಗಿದೆ. ಬೆಳಗಾವಿ ಅಷ್ಟೇ ಅಲ್ಲದೆ ಕರ್ನಾಟಕದ ವಿವಿಧ ಭಾಗಗಳಿಂದ , ಹಾಗೂ ಮಹಾರಾಷ್ಟ್ರ ದಿಂದ ಕೂಡ ಈ …

Read More »

ಯೋಗೇಶ್ವರ್ ಅವರನ್ನು ಮಂತ್ರಿ ಮಾಡೇ ಮಾಡ್ತೀವಿ : ಸಿಎಂ ಬಿಎಸ್‍ವೈ

ಬೆಂಗಳೂರು, ಡಿ.1- ಕೆಲವು ಶಾಸಕರ ವಿರೋಧದ ನಡುವೆಯೂ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರನ್ನು ನೂರಕ್ಕೆ ನೂರರಷ್ಟು ಮಂತ್ರಿ ಮಾಡುತ್ತೇವೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಡ್ಡಿ ಮುರಿದಂತೆ ಹೇಳಿದ್ದಾರೆ. ಯೋಗೇಶ್ವರ್ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಲು ಬಿಜೆಪಿಯೊಳಗೆ ಕೆಲವು ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಸ್ವತಃ ಸಿಎಂ ಅವರೇ ನೂರಕ್ಕೆ ನೂರರಷ್ಟು ಅವರನ್ನು ಮಂತ್ರಿ ಮಾಡುತ್ತೇವೆ ಎಂದು ಹೇಳಿರುವುದು ಮಹತ್ವ ಪಡೆದುಕೊಂಡಿದೆ. ವಿಧಾನಸೌಧ ನಿರ್ಮಾತೃ ದಿ.ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧದಲ್ಲಿರುವ …

Read More »

ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ವಿಶೇಷ ಪೂಜೆ

ನವದೆಹಲಿ,ಡಿ.1-ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಚಳವಳಿ ಯಶಸ್ಸಿಗಾಗಿ ರಾಜಧಾನಿಯಲ್ಲಿರುವ ಗುರುದ್ವಾರಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರಿಗೆ ಮಾರಕವಾಗಿರುವ ಕೃಷಿ ನೀತಿಯನ್ನು ಸರ್ಕಾರ ಈ ಕೂಡಲೇ ಹಿಂಪಡೆಯಬೇಕು. ಕೃಷಿಕರ ಹೋರಾಟ ಯಶಸ್ವಿಯಾಗಬೇಕು ಎಂಬ ಉದ್ದೇಶದಿಂದ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ ಎಂದು ಗುರುದ್ವಾರ ವ್ಯವಸ್ಥಪನಾ ಮಂಡಳಿ ಮಂಜಿಂದರ್ ಸಿಂಗ್ ತಿಳಿಸಿದ್ದಾರೆ. ಹೋರಾಟ ನಡೆಸುತ್ತಿರುವ ರೈತರನ್ನು ಖಲಿಸ್ತಾನಿಗಳು ಹಾಗೂ ಭಯೋತ್ಪಾದಕರಿಗೆ ಹೋಲಿಸಿರುವ ಬಿಜೆಪಿ ಮುಖಂಡರ ಹೇಳಿಕೆಗೆ ತಿರುಗೇಟು ನೀಡಿರುವ …

Read More »

ಆಸ್ಪತ್ರೆಯಲ್ಲಿ ವೈದ್ಯರೇ ಹೆಣ್ಣು ಮಗುವನ್ನ ಮಾರಾಟ

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರೇ ಹೆಣ್ಣು ಮಗುವನ್ನ ಮಾರಾಟ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವತಿ ಕಳೆದ ಮಾರ್ಚ್ 14ರಂದು ಹೆರಿಗೆ ನೋವಿನಿಂದ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದರು. ಅಲ್ಲಿ ವೈದ್ಯರಿಲ್ಲದ ಕಾರಣ ಅಲ್ಲಿಂದ ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಳು. ಹೆರಿಗೆ ನೋವಿನಿಂದ ಬಳಲುತ್ತಿದ್ದ ಯುತಿಗೆ ಹೆಣ್ಣು ಮಗು ಜನಿಸಿತ್ತು. ಆದರೆ ತಾಯಿಗೆ ಮದುವೆಯಾಗದ ಕಾರಣ ಕೊಪ್ಪ ತಾಲೂಕು ಆಸ್ಪತ್ರೆ …

Read More »