Breaking News

ಪೆಟ್ರೋಲ್‌ ದರ ಏರಿಕೆ ಬೆನ್ನಲ್ಲೇ ಸಿಎನ್‌ಜಿ ದರವೂ ಏರಿಕೆ

ನವದೆಹಲಿ: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯಾದ ಬೆನ್ನಲ್ಲೇ ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್ ಬೆಲೆ ಏರಿಕೆಯಾಗಿದೆ. ಪ್ರತಿ ಕೆಜಿ ಸಿಎನ್‌ಜಿ ದರವನ್ನು 2 ರೂ. ಏರಿಸಲಾಗಿದೆ. ಪರಿಷ್ಕೃತ ದರ ಇಂದು ಬೆಳಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ 1 ಕೆಜಿ ಸಿಎನ್‌ಜಿ ದರ 90 ರೂ.ಗೆ ಏರಿಕೆಯಾಗಿದೆ. ವಿವಿಧ ಭಾಗಗಳಲ್ಲಿ ಅಥವಾ ವಿತರಕರ (ಗ್ಯಾಸ್ ಕಂಪನಿಗಳು) ಆಧಾರದ ಮೇಲೆ ಬೆಲೆಯಲ್ಲಿ 0.10 ರಿಂದ 1 ರವರೆಗೆ ವ್ಯತ್ಯಾಸ ಇರಲಿದೆ. ಆಟೋರಿಕ್ಷಾಗಳು, ಕ್ಯಾಬ್‌ಗಳು …

Read More »

ಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ 3 ರೂ. ಏರಿಕೆ

ನವದೆಹಲಿ: ನಿರೀಕ್ಷೆಯಂತೆ ದೇಶಾದ್ಯಂತ ಪೆಟ್ರೋಲ್  ಮತ್ತು ಡೀಸೆಲ್  ಬೆಲೆಯಲ್ಲಿ ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಳವಾಗಿದೆ. ತೈಲ ಮಾರಾಟ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಇಂಧನ ದರ ಏರಿಕೆಗೆ ಅನುಗುಣವಾಗಿ ದರವನ್ನು ಏರಿಕೆ ಮಾಡಿದೆ. ಪರಿಷ್ಕೃತ ದರ ಇಂದು ಬೆಳಿಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ದರ 106.17 ರೂ. ಏರಿಕೆಯಾದರೆ ಡಿಸೇಲ್‌ ದರ 94.10 ರೂ. ತಲುಪಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ  ಬೆಲೆಯಲ್ಲಿ ಸತತ ಏರಿಳಿತವಾಗುತ್ತಿದೆ. …

Read More »

ಬೆಂಗಳೂರು ಮತ್ತು ಮುಂಬೈ ನಡುವೆ ನೂತನ ಎಕ್ಸ್‌ಪ್ರೆಸ್ ರೈಲು ಸಂಚಾರ ಪ್ರಾರಂಭ

ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ಹಾಗೂ ಬೆಂಗಳೂರು, ಉತ್ತರ ಕರ್ನಾಟಕದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಮಹಾರಾಷ್ಟ್ರದ ಪುಣೆ, ಮುಂಬೈ ನಗರಗಳ ನಡುವೆ ಸಂಪರ್ಕವನ್ನು ಸುಧಾರಿಸಲು ರೈಲ್ವೆ ಸಚಿವಾಲಯವು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ ನಡುವೆ ಹೊಸ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಅನುಮೋದನೆ ನೀಡಿದೆ. ಈ ನೂತನ ಸೇವೆಯ ಆರಂಭದ ಅಂಗವಾಗಿ, ರೈಲು ಸಂಖ್ಯೆ …

Read More »

ಕಾಂಗ್ರೆಸ್‌ ಸರ್ಕಾರಕ್ಕೆ ಹುಚ್ಚು ಹಿಡಿದಿದೆ: ವಿಜಯೇಂದ್ರ ಕಿಡಿ

ಬೆಂಗಳೂರು: ಶಾಲೆಗಳಲ್ಲಿ ಹಿಜಬ್ ಧರಿಸಲು ಅಧಿಕೃತ ಮಾಡಿದ್ದು ಸರಿಯಲ್ಲ. ಕಾಂಗ್ರೆಸ್ (Congress) ಸರ್ಕಾರಕ್ಕೆ ಹುಚ್ಚು ಹಿಡಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ  ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ವಸ್ತ್ರಸಂಹಿತೆ ಕುರಿತು ರಾಜ್ಯ ಸರ್ಕಾರದ ಆದೇಶ ವಿಚಾರವಾಗಿ ಬೆಂಗಳೂರಿನಲ್ಲಿ ಅವರು ಮಾತನಾಡಿದರು. ಈ ವೇಳೆ, ಸರ್ಕಾರದ ಪಾಪದ ಕೊಡ ತುಂಬಿದೆ. ಇವರ ಯೋಗ್ಯತೆಗೆ ಆಡಳಿತ ನಡೆಸಲು ಸಾಧ್ಯವಾಗದೇ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಾ ಬರುತ್ತಿದ್ದಾರೆ. ರಾಜ್ಯದಲ್ಲಿ ಮಾಡಬೇಕಾದ ಸಾಕಷ್ಟು …

Read More »

ಹವಾಮಾನ ವೈಪರಿತ್ಯ – ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

ಮಂಗಳೂರು: ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಂದಿದ್ದ ಎರಡು ವಿಮಾನಗಳು ಹವಾಮಾನ ವೈಪರಿತ್ಯದಿಂದಾಗಿ ಅರ್ಧಗಂಟೆ ಕಾಲ ಆಕಾಶದಲ್ಲೇ ಸುತ್ತಾಡಿ, ತಡವಾಗಿ ಲ್ಯಾಂಡ್‌ ಆಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆಯಾಗುತ್ತಿದೆ. ಏರ್‌ಪೋರ್ಟ್‌ ಬಳಿಯೂ ಮಳೆಯಾಗುತ್ತಿದ್ದು, ವಿಮಾನಗಳು ಲ್ಯಾಂಡ್‌ ಆಗಲು ಸಾಧ್ಯವಾಗದೆ ಆಕಾಶದಲ್ಲೇ ಸುತ್ತಾಡಿವೆ. ವಿಟ್ಲದ ಬಳಿ ಭಾರೀ ಕೆಲ ಭಾಗದಲ್ಲೇ ವಿಮಾನಗಳು ಸುತ್ತಾಡಿವೆ. ಅರ್ಧಗಂಟೆ ಬಳಿಕ ಎರಡೂ ವಿಮಾನಗಳು ಲ್ಯಾಂಡ್‌ ಆಗಿವೆ. ತೀರ ಕೆಳಭಾಗದಲ್ಲೇ ವಿಮಾನಗಳು ಹಾರಾಟ ನಡೆಸಿದ್ದರಿಂದ ವಿಟ್ಲದ ಜನರು …

Read More »

ಸಾವಿರಾರು ಸರ್ಕಾರಿ ಶಾಲೆಗಳ ವಿಲೀನಕ್ಕೆ ಮುಂದಾದ ರಾಜ್ಯ ಸರ್ಕಾರ – ವಿದ್ಯಾರ್ಥಿಗಳು, ಪೋಷಕರ ವಿರೋಧ

ಚಿಕ್ಕಬಳ್ಳಾಪುರ: ಕೆಪಿಎಸ್‌ ಮ್ಯಾಗ್ನೇಟ್‌ ಯೋಜನೆಯಡಿ ರಾಜ್ಯದಲ್ಲಿ ಸಾವಿರಾರು ಸರ್ಕಾರಿ ಶಾಲೆಗಳನ್ನ ವಿಲೀನಗೊಳಿಸುತ್ತಿರುವ ರಾಜ್ಯದ ಸರ್ಕಾರ ಕ್ರಮ ಖಂಡಿಸಿ ಎಐಡಿಎಸ್‌ಓ ಹೋರಾಟಕ್ಕೆ ಮುಂದಾಗಿದೆ. ಇದರ ಜೊತೆಗೆ ಪಿಎಂ ಶ್ರೀ ಶಾಲೆಗಳಿಗೂ ಸಹ ಸುತ್ತ ಮತ್ತಲಿನ ಶಾಲೆಗಳ ವಿಲೀನಗೊಳಿಸಲಾಗುತ್ತಿದೆ. ಕೆಲ ಪಿಯು ಕಾಲೇಜುಗಳ ವಿಲೀನ ಪ್ರಕ್ರಿಯೆಗೆ ಮುಂದಾಗಿದೆಯಂತೆ. ಹೀಗಾಗಿ ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಗಳನ್ನ ಮುಚ್ಚುವ ವಿಲೀನಗೊಳಿಸುವ ಪ್ರಕ್ರಿಯೆ ಮಾಡಬಾರದು ಎಂದು ಎಐಡಿಎಸ್‌ಈ ಆಗ್ರಹಿಸಿದೆ. ಅಂದಹಾಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ನೂರಾರು ಶಾಲೆಗಳ ವಿಲೀನ …

Read More »

ದರ್ಶನ್‌ಗೆ ಶುಕ್ರವಾರ ಬಿಗ್‌ ಡೇ – ಜಾಮೀನು ರದ್ದುಗೊಳಿಸಿದ್ದ ನ್ಯಾ. ಪರ್ದಿವಾಲಾ ಪೀಠದಲ್ಲೇ ಮತ್ತೆ ಅರ್ಜಿ ವಿಚಾರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜೈಲು ಸೇರಿ 8 ತಿಂಗಳಾಗುತ್ತಾ ಬಂದಿದೆ. ಬೆಂಗಳೂರಿನ (Bengaluru) ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಿನ ಅವ್ಯವಸ್ಥೆ, ಚಿತ್ರಹಿಂಸೆ ಹಾಗೂ ಪ್ರಕರಣದ ತನಿಖೆ ವಿಳಂಬ ಪ್ರಶ್ನಿಸಿ, ದರ್ಶನ್ (Darshan) ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಶುಕ್ರವಾರ (ಮೇ 15) ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಈ ಹಿಂದೆ, ಜಾಮೀನು ರದ್ದುಗೊಳಿಸಿ ಮರುಬಂಧನಕ್ಕೆ ಸೂಚಿಸಿದ್ದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಪರ್ದಿವಾಲಾ ಪೀಠದಲ್ಲೇ ಶುಕ್ರವಾರ ಜಾಮೀನು …

Read More »

ಕೇಜ್ರಿವಾಲ್‌, ಸಿಸೋಡಿಯಾ ಸೇರಿ AAP ನಾಯಕರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭ

ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ನಾಯಕರಾದ ಅರವಿಂದ್ ಕೇಜ್ರಿವಾಲ್ , ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್, ವಿನಯ್ ಮಿಶ್ರಾ, ದುರ್ಗೇಶ್ ಪಾಠಕ್ ಮತ್ತು ಸೌರಭ್ ಭಾರದ್ವಾಜ್ ಅವರ ವಿರುದ್ಧ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಗುರುವಾರ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣವನ್ನು ಆರಂಭಿಸಿದ್ದಾರೆ. ಪ್ರತಿವಾದಿಗಳು ವಜಾ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಹಂಚಿಕೊಂಡ ವಿವಿಧ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಮತ್ತು ವೀಡಿಯೊಗಳನ್ನು ಗಮನಿಸಿದ ನಂತರ ನ್ಯಾಯಮೂರ್ತಿ ಶರ್ಮಾ …

Read More »

ಹಾರ್ಟ್ ಅಟ್ಯಾಕ್ ಅಲ್ಲ, ಪತ್ನಿಯಿಂದ ಕೊಲೆ ಎಂದ ಸಹೋದರ- ಹೂತಿಟ್ಟ ಶವ ಹೊರತೆಗೆದು ಮರು ತನಿಖೆ

ಬೆಂಗಳೂರು: ನನ್ನ ಸಹೋದರನ ಸಾವಿಗೆ ಆತನ ಪತ್ನಿಯೇ ಕಾರಣವಾಗಿದ್ದು, ಇದು ಹಾರ್ಡ್ ಅಟ್ಯಾಕ್ ಅಲ್ಲ ಕೊಲೆ ಅಂತಾ ಬಂದ ದೂರು ಆಧರಿಸಿ, ಮರು ತನಿಖೆಗೆ ಇಳಿದ ಪೊಲೀಸರು ಬರೋಬ್ಬರಿ 6 ತಿಂಗಳ ಬಳಿಕ ತಹಶೀಲ್ದಾರ್ ಸಮ್ಮುಖದಲ್ಲಿ ಹೂತಿಟ್ಟ ಶವ ಹೊರತೆಗೆದಿದ್ದಾರೆ. ಬೆಂಗಳೂರು ನಗರದ HAL ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರು ತಿಂಗಳ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದ ಇಂತಿಯಾಜ್ ಪಾಷಾ ಶವವನ್ನು ಇಂದು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಸಾವಿನ ಕುರಿತು ಅನುಮಾನ …

Read More »

ಸಿಡಿಲು ಬಡಿದು ಕಾರ್ಮಿಕ ಸಾವು

ಉಡುಪಿ: ರಾಷ್ಟ್ರೀಯ ಹೆದ್ದಾರಿ-66ರ ಅರಾಟೆ ಸೇತುವೆ  ಸಮೀಪ ಗುರುವಾರ ಸಂಜೆ ಸಿಡಿಲು ಬಡಿದು ಕಾರ್ಮಿಕನೊಬ್ಬ ಮೃತಪಟ್ಟ ದಾರುಣ ಘಟನೆ ನಡೆದಿದೆ. ಪಂಜಾಬ್ ಮೂಲದ ಕಾರ್ಮಿಕ ಅಶುತೋಷ್ (35) ಮೃತ ವ್ಯಕ್ತಿ. ಮತ್ತೋರ್ವ ಕಾರ್ಮಿಕ ಲವಜೋತ್ ಸಿಂಗ್ (28) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅರಾಟೆ ಹಳೆ ಸೇತುವೆಯ ದುರಸ್ತಿ ಕಾಮಗಾರಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದು, ಗುರುವಾರ ಸಂಜೆ ಪಂಜಾಬ್ ಮೂಲದ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. …

Read More »