ನವದೆಹಲಿ (ಸೆ.01): ಬಹುನಿರೀಕ್ಷಿತ ಕರ್ನಾಟಕದ ಮೇಕೆದಾಟು ಯೋಜನೆಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಯೋಜನೆಗೆ ತಮಿಳುನಾಡು, ಕೇರಳ ಸೇರಿ ಎಲ್ಲಾ ರಾಜ್ಯಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಮುಂದಿನ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬರುವ ಸಾಧ್ಯತೆ ಇದೆ. ಹಾಗೆಯೇ ತಮಿಳುನಾಡು ಕೈಗೊಂಡಿರುವ ಗುಂಡಾರ್ ನದಿ ನೀರು ಜೋಡಣೆಗೆ ಕರ್ನಾಟಕ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಇನ್ನು ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪ್ರಾಧಿಕಾರದ ಅಧ್ಯಕ್ಷ …
Read More »ಅಮೆರಿಕ ಸೇನೆ ಅಷ್ಘಾನಿಸ್ತಾನದಿಂದ ಹೊರಟಿರುವ ಬೆನ್ನಲ್ಲೇ,
ಲಂಡನ್(ಸೆ.01): ಅಮೆರಿಕ ಸೇನೆ ಅಷ್ಘಾನಿಸ್ತಾನದಿಂದ ಹೊರಟಿರುವ ಬೆನ್ನಲ್ಲೇ, ಇತ್ತ ತಾಲಿಬಾನ್ ಉಗ್ರರು ಈ ಹಿಂದೆ ಅಮೆರಿಕ ನೇತೃತ್ವದ ನ್ಯಾಟೋ ಪಡೆಗಳ ಪರ ಕೆಲಸ ಮಾಡಿದ್ದಾರೆ ಎನ್ನಲಾದ ಆರೋಪಿಗಳ ಮನೆಗಳ ಮೇಲೆ ತಾವೇ ಶರಣಾಗಬೇಕು. ಇಲ್ಲದಿದ್ದರೆ ನಿಮಗೆ ಸಾವಿನ ಶಿಕ್ಷೆ ನೀಡಬೇಕಾಗುತ್ತದೆ ಎಂಬ ಭಯಾನಕವಾದ ‘ಬೆದರಿಕೆ ಪತ್ರ’ ಅಂಟಿಸುತ್ತಿದ್ದಾರೆ. ಹಿಂದೆ ತಾಲಿಬಾನ್ ಉಗ್ರರನ್ನು ಶೋಧಿಸಲು ಅಮೆರಿಕದ ಪಡೆಗಳಿಗೆ ನೆರವು ನೀಡಿದ್ದಾರೆ ಎನ್ನಲಾದ ಆರೋಪಿಗಳನ್ನು ಉದ್ದೇಶಿಸಿ ಈ ಪತ್ರದಲ್ಲಿ ನೀವು ನ್ಯಾಟೋ ಪಡೆಗಳ …
Read More »ಸೇವಾದಳವನ್ನು ನಾಡಿನಾದ್ಯಂತ ಕಟ್ಟಿದ ಡಾ.ಎನ್.ಎಸ್.ಹರ್ಡೀಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ತತ್ವಾದರ್ಶಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ‘ಎಂದು ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಗೋಕಾಕ : ‘ ಸೇವಾದಳವನ್ನು ನಾಡಿನಾದ್ಯಂತ ಕಟ್ಟಿದ ಡಾ.ಎನ್.ಎಸ್.ಹರ್ಡೀಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ತತ್ವಾದರ್ಶಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ‘ಎಂದು ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಘಟಪ್ರಭಾದ ಡಾ.ಎನ್.ಎಸ್.ಹರ್ಡೀಕರ್ ಸೇವಾದಳ ರಾಷ್ಟ್ರೀಯ ತರಬೇತಿ ಕೇಂದ್ರದಲ್ಲಿ ಸೇವಾದಳದ ಪ್ರಪ್ರಥಮ ಮಹಿಳಾ ಸಮರ್ಥ್ 5 ದಿನದ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ‘ಸೇವಾದಳ ಕೇಂದ್ರದಲ್ಲಿ ಹೆಚ್ಚು ಹೆಚ್ಚು ಕಾರ್ಯಕರ್ತರಿಗೆ ತರಬೇತಿ ನೀಡುವುದರ ಮೂಲಕ …
Read More »ಅಭಿವೃದ್ಧಿ ಕಾರ್ಯಗಳೇ ನಮ್ಮ ಸಾಧನೆಯನ್ನು ಹೇಳುತ್ತವೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಳಗಾವಿ: ನಗರದ 45ನೇ ವಾರ್ಡ್ ನ ಹಿಂಡಾಲ್ಕೊ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶ್ರೀ ನಾಯ್ಕ್ ಪರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಂದು ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಉಸ್ತುವಾರಿ ಸಚಿವ ಹಾಗೂ ಫೀರೋಜ್ ಸೇಠ್ ಶಾಸಕರಾಗಿದ್ದ ಸಂದರ್ಭದಲ್ಲಿ ಸಮೀಪದ ಬಸವನಕೊಳ್ಳ ಅರಣ್ಯಭೂಮಿಯಲ್ಲಿ ನೀರಿನ ಶುದ್ಧೀಕರಣ ಘಟಕ ನಿರ್ಮಿಸುವ ಮೂಲಕ 45ನೇ ವಾರ್ಡ್ ಸೇರಿ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ …
Read More »ಕಾಂಗ್ರೆಸ್ ಪಕ್ಷದಿಂದಜಯಶ್ರೀ ಮಾಳಗಿ ಹಾಗೂಜಯರಾಜ ಹಲಗೆಕರ್ ಉಚ್ಛಾಟನೆ
ಬೆಳಗಾವಿ – ಮಹಾನಗರ ಪಾಲಿಕೆ ಚುನಾವಣೆಗೆ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. 12ನೇ ವಾರ್ಡ್ ನಿಂದ ಸ್ಪರ್ಧಿಸಿರುವ ಜಯಶ್ರೀ ಮಾಳಗಿ ಹಾಗೂ 29ನೇ ವಾರ್ಡ್ ನಿಂದ ಸ್ಪರ್ಧಿಸಿರುವ ಜಯರಾಜ ಹಲಗೆಕರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ ಆದೇಶ ಹೊರಡಿಸಿದ್ದಾರೆ.
Read More »ಟೆಲಿಪೋನ್ ಕದ್ದಾಲಿಕೆ ಪ್ರಕರಣದಲ್ಲಿ ಅಲೋಕ್ ಕುಮಾರ್ಗೆ ಕ್ಲೀನ್ ಚಿಟ್!
ಬೆಂಗಳೂರು, ಆ. 31 : ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಹಿರಿಯ ರಾಜಕಾರಣಿಗಳ ಹಾಗೂ ಪೊಲೀಸ್ ಅಧಿಕಾರಿಗಳ ಪೋನ್ ಕದ್ದಾಲಿಕೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಟೆಲಿನೋನ್ ಕದ್ದಾಲಿಕೆ ಪ್ರಕರಣದಲ್ಲಿ ಸಿಬಿಐ ಬಿ ವರದಿ ಸಲ್ಲಿಸಿದ್ದು, ಇದಕ್ಕೆ ಅಕ್ಷೇಪಣೆ ವ್ಯಕ್ತಪಡಿಸಿ ರೈಲ್ವೇ ಎಡಿಜಿಪಿ ಭಾಸ್ಕರರಾವ್ ಅವರು ಸಿಬಿಐ ವಿಶೇಷ ನ್ಯಾಯಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದಾರೆ. ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳ ನಡುವಿನ “ಟೆಲಿಪೋನ್ ಕದ್ದಾಲಿಕೆ ಪ್ರಕರಣ” ಗುದ್ದಾಟ ಮತ್ತೆ ಬೀದಿಗೆ ಬಂದಿದೆ. …
Read More »ಮೈಸೂರು ಅತ್ಯಾಚಾರ ಪ್ರಕರಣದ ತನಿಖಾ ವಿಧಾನಕ್ಕೆ ಆಕ್ಷೇಪ
ಮೈಸೂರು: ಪ್ರಕರಣವನ್ನು ಪೊಲೀಸರು ನಿರ್ವಹಿಸಿದ ರೀತಿಗೆ ಆಕ್ಷೇಪ ವ್ಯಕ್ತವಾಗಿದೆ. ದೆಹಲಿ ಪ್ರಕರಣದಷ್ಟು ಗಂಭೀರವಾಗಿ ನಿರ್ವಹಿಸಿಲ್ಲ ಎಂಬ ಅಸಮಾಧಾನ ಕೇಳಿಬಂದಿದೆ. ‘ತನಿಖೆ ಪೂರ್ಣಗೊಳ್ಳುವ ಮುನ್ನವೇ ಆರೋಪಿಗಳ ಭಾವಚಿತ್ರ, ಮತ್ತು ಹೆಸರುಗಳು ಬಹಿರಂಗಗೊಂಡಿರುವುದು ವರ್ಮಾ ಆಯೋಗದ ವರದಿಗೆ ವಿರುದ್ಧ’ ಎಂದು ವಕೀಲರಾದ ಮಂಜುಳಾ ಮಾನಸ ಆಕ್ಷೇಪಿಸಿದ್ದಾರೆ. ಬೆಂಗಳೂರಿನ ವಕೀಲ ಕೆ.ವಿ.ಧನಂಜಯ್ ಅವರೂ ಟ್ವಿಟರ್ನಲ್ಲಿ ಆಕ್ಷೇಪಿಸಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ಸೂದ್ ಅವರು ಸುದ್ದಿಗೋಷ್ಠಿಯಲ್ಲಿ ಆರೋಪಿಗಳ ಹೆಸರು, ಚಿತ್ರ ಬಹಿರಂಗಪಡಿಸಲು ನಿರಾಕರಿಸಿದ್ದರು. ಸಂತ್ರಸ್ತೆಯ …
Read More »ಡಿಕೆಶಿಗೆ ಇನ್ನೂ ತಂಡ ಕಟ್ಟಿಕೊಳ್ಳೋಕೆ ಆಗ್ತಿಲ್ಲ : ಸಿ.ಟಿ.ರವಿ
ಕಲಬುರಗಿ : ರಾಜ್ಯದ ಕಾಂಗ್ರೆಸ್ ಅಧ್ಯಕ್ಷರಿಗೆ ಇನ್ನೂ ಕೂಡ ತಂಡ ಕಟ್ಟಿಕೊಳ್ಳೋಕೆ ಆಗ್ತಿಲ್ಲ, ಪಕ್ಷದ ತಂಡವನ್ನೇ ಕಟ್ಟಿಕೊಳ್ಳೊಕ್ಕೆ ಆಗದಿರೋರು ಅಧಿಕಾರಕ್ಕೆ ಬರಲು ಹಗಲುಗನಸು ಕಾಣುವ ನೈತಿಕತೆ ಎಲ್ಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾನತಾಡಿದ ಅವರು, ಮೂರು ಮಹಾನಗರಪಾಲಿಕೆಗಳಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ ಸಿದ್ದರಾಮಯ್ಯ ಪ್ರಕೃತಿ ಚಿಕಿತ್ಸೆ ಬಗ್ಗೆ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ …
Read More »ಕೆ.ಎಸ್.ಈಶ್ವರಪ್ಪ ನಾಲಿಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ: ಸಿದ್ದರಾಮಯ್ಯ
ಬೆಂಗಳೂರು: ಕಾಂಗ್ರೆಸ್ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ(KS Eshwarappa) ಅವರ ನಾಲಿಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ವ್ಯಂಗ್ಯವಾಡಿದ್ದಾರೆ. ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕೆ.ಎಸ್.ಈಶ್ವರಪ್ಪ ಎಷ್ಟೇ ಕೂಗಾಡಲಿ, ಹಾರಾಡಲಿ ಮುಂಬರುವ ಚುನಾವಣೆಯಲ್ಲಿ ನಾಡಿನ ಜನ ಯಾರ ಫ್ಯೂಸ್ ಕಿತ್ತಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ’ ಅಂತಾ ಕುಟುಕಿದ್ದಾರೆ. ‘ಕೊರೊನಾ ರೋಗದ ಬಗ್ಗೆ ಹೆಚ್ಚು ಎಚ್ಚರಿಕೆಯಿಂದಿರಬೇಕಾದ ಆಡಳಿತಾರೂಢ ಪಕ್ಷವೇ ಜನಾಶೀರ್ವಾದ ಯಾತ್ರೆ …
Read More »ಬೆಳಗಾವಿ ಪಾಲಿಕೆ ಚುನಾವಣೆ: ಬಿಜೆಪಿ ಘಟಾನುಘಟಿ ನಾಯಕರಿಂದ ಪ್ರಚಾರ, ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯ
ಬಹಿರಂಗ ಪ್ರಚಾರಕ್ಕೆ ಮಂಗಳವಾರ (ಆಗಸ್ಟ್ 31) ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಚುರುಕಿನ ಪ್ರಚಾರ ನಡೆಸಿದರು. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಹಲವು ಹಿರಿಯ ನಾಯಕರು ನಗರದಲ್ಲಿ ಸಂಚರಿಸಿ, ಮತಭಿಕ್ಷೆ ಕೇಳಿದರು. ಬೆಳಗಾವಿ: ಬಿಜೆಪಿ ಮತ್ತು ಕಾಂಗ್ರೆಸ್ ಹುರಿಯಾಳುಗಳ ನಡುವೆ ಜಿದ್ದಾಜಿದ್ದಿ ಹೋರಾಟಕ್ಕೆ ಸಾಕ್ಷಿಯಾಗಿರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಸೆ.3ರಂದು ಮತದಾನ ನಡೆಯಲಿದೆ. ಬಹಿರಂಗ ಪ್ರಚಾರಕ್ಕೆ ಮಂಗಳವಾರ (ಆಗಸ್ಟ್ 31) ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಚುರುಕಿನ ಪ್ರಚಾರ ನಡೆಸಿದರು. ಬಿಜೆಪಿ …
Read More »