Breaking News

ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಜನರು ಚಿರಂಜೀವಿಗಳಾಗಿದ್ದರಾ?: ಈಶ್ವರಪ್ಪ

ಬೆಳಗಾವಿ: ಉಚಿತ ಶವಸಂಸ್ಕಾರ ಮಾಡುವ ಬಿಜೆಪಿ ಪ್ರಣಾಳಿಕೆ ಬಗ್ಗೆ ವ್ಯಂಗವಾಡಿರುವ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಜನರು ಚಿರಂಜೀವಿಗಳಾಗಿದ್ದರಾ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು. ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ಇದ್ದಾಗ ದೇಶದಲ್ಲಿ ಯಾರು ಸತ್ತೇ ಇಲ್ಲ, ಶವಸಂಸ್ಕಾರ ಮಾಡಿಯೇ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ಸರ್ಕಾರದಲ್ಲಿ ಸಾವು ಖಚಿತ ಅಂತಾ ಡಿ.ಕೆ.ಶಿವಕುಮಾರ್ ಟೀಕೆ ಮಾಡಿದ್ದಾರೆ. ಕಾಂಗ್ರೆಸ್ ಆಡಳಿತ …

Read More »

ಬಿಜೆಪಿ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ 7 ಜನರನ್ನು ಪಕ್ಷದಿಂದ ಉಚ್ಛಾಟನೆ

– ಬೆಳಗಾವಿ :ಮಹಾನಗದರ ಪಾಲಿಕೆ ಚುನಾವಣೆಗೆ ಬಿಜೆಪಿ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ 7 ಜನರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.                     ಬಿಜೆಪಿ ಮಹಾನಗರ ಅಧ್ಯಕ್ಷ ಶಶಿಕಾಂತ ಪಾಟೀಲ ಈ ಕುರಿತು ಪ್ರಕಟಣೆ ನೀಡಿದ್ದಾರೆ. 7 ಬಂಡಾಯ ಅಭ್ಯರ್ಥಿಗಳನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ತಿಳಿಸಿದ್ದಾರೆ. ಉಚ್ಛಾಟನೆಗೊಂಡವರ ವಿವರ ಇಲ್ಲಿದೆ –  ವಾರ್ಡ್ ನಂ.41ರ ದೀಪಕ್ ಜಮಖಂಡಿ, …

Read More »

ಈ ಬಾರಿ ಬಿಜೆಪಿಗೆ ಜನರಿಂದ ತಕ್ಕ ಪಾಠ.!ಸತೀಶ್ ಜಾರಕಿಹೊಳಿ

ಬೆಳಗಾವಿ: ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾಗ ಜನರ ಸಮಸ್ಯೆ ಕೇಳಲು ಬಾರದೆ ಇದೀಗ ಚುನಾವಣೆ ಪ್ರಚಾರಕ್ಕೆ ಜನರ ಬಳಿ ಓಡೋಡಿ ಹೋಗುತ್ತಿದ್ದಾರೆ ಅಂತ ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸತೀಶ್ ಜಾರಕಿಹೊಳಿ, ಜಿಲ್ಲೆಯಿಂದ 4 ಮಂದಿ ಸಚಿವರಿದ್ದಾರೆ. ಆದ್ರೆ ಇವರೆಲ್ಲರೂ ಕೋವಿಡ್ ಹಾಗೂ ಪ್ರವಾಹ ವೇಳೆ ಸಮಸ್ಯೆಗಳ ನಿರ್ವಹಣೆ ಬಗ್ಗೆ ಒಂದು ಸಭೆಯನ್ನೂ ನಡೆಸಲಿಲ್ಲ. ಕನಿಷ್ಟಪಕ್ಷ ಜನರಿಗೆ …

Read More »

ಕಲ್ಯಾಣ ಕರ್ನಾಟಕ ಹೆಸರು ಬದಲಾಯಿಸಿದಷ್ಟೇ ಬಿಜೆಪಿ ಸಾಧನೆ: ಕುಮಾರಸ್ವಾಮಿ

ಕಲಬುರಗಿ, ;ಕಲ್ಯಾಣ ಕರ್ನಾಟಕ ಎಂದು ಹೆಸರು ಬದಲಾಯಿಸಿದಷ್ಟೇ ಬಿಜೆಪಿ ಸಾಧನೆಯಾಗಿದೆ ಹೊರತು ಹಿಂದುಳಿದ ಈ ಪ್ರದೇಶದ ಅಭಿವೃದ್ಧಿಗೆ ಯಾವುದೇ ರೀತಿಯ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ಇಂದಿಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆ ಡಿ ಎಸ್ ನಿಂದ 42 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಬಲಿಷ್ಟ ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಪಾಲಿಕೆ ಚುನಾವಣೆಯ ಮೂಲಕ ಜೆ ಡಿ ಎಸ್ …

Read More »

ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆಯಿಲ್ಲ: ಅರುಣ್ ಸಿಂಗ್

ಮೈಸೂರು: ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಅಧಿಕೃತವಾಗಿ, ಅನಧಿಕೃತವಾಗಿ ಯಾವುದೇ ಪಕ್ಷದೊಂದಿಗೆ ಬಿಜೆಪಿ ಹೊಂದಾಣಿಕೆ ಇಲ್ಲ. ಜೆಡಿಎಸ್ ಈಸ್ ಸಿಂಕಿಂಗ್, ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯುವುದು ನಮ್ಮ ಸಂಕಲ್ಪ. ಜೆಡಿಎಸ್, ಕಾಂಗ್ರೆಸ್ ಎರಡೂ ಸರ್ಕಾರಗಳನ್ನು ಜನ ನೋಡಿದ್ದಾರೆ. ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಮ್ಮದು ವಿಶ್ವದ ಅತಿ …

Read More »

ಮಳೆಯಿಂದ ಹಾನಿ: ಉತ್ತರ ಕನ್ನಡದಲ್ಲಿ ಸರ್ವಋತು ರಸ್ತೆ ನಿರ್ಮಾಣ

ಕಾರವಾರ, ಆಗಸ್ಟ್ 30: “ಈ ವರ್ಷದ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಸರ್ವಋತು ರಸ್ತೆಗಳ ಪುನರ್‌ನಿರ್ಮಾಣಕ್ಕೆ ಮತ್ತು ಇತರ ಕಾಮಗಾರಿಗಳಿಗೆ ಹೆಚ್ಚಿನ ಅನುದಾನಕ್ಕಾಗಿ ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ,” ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಹೇಳಿದರು. ಇಂದು (ಸೋಮವಾರ) ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್‌ರೊಂದಿಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಳಚೆ ಗ್ರಾಮಕ್ಕೆ ಭೇಟಿ ನೀಡಿದ ಸಚಿವ ಸಿ.ಸಿ. ಪಾಟೀಲ್, …

Read More »

ಕಾಂಗ್ರೆಸ್ ಮಾಡಿದ ಸಾರ್ವಜನಿಕ ಆಸ್ತಿಗಳನ್ನು BJP ಖಾಸಗಿ ಪಾಲಿಗೆ ನೀಡುತ್ತಿದೆ:ಎಚ್.ಕೆ.ಪಾಟೀಲ

ಹುಬ್ಬಳ್ಳಿ: ಕಾಂಗ್ರೆಸ್ ಏನು ಮಾಡಿದೆ ಎಂದು ಹೋದಲ್ಲಿ ಬಂದಲ್ಲಿ ಆರೋಪಿಸುವ ಬಿಜೆಪಿಯವರು, ದೇಶದ ಹಿತ ದೃಷ್ಟಿಯಿಂದ ಕಾಂಗ್ರೆಸ್ ಅಧಿಕಾರದಲ್ಲಿ ಕೈಗೊಂಡ ಸಾರ್ವಜನಿಕ ಆಸ್ತಿ-ಉದ್ಯಮಗಳನ್ನು ಖಾಸಗಿಯವರ ಪಾಲಾಗಿಸಲು ಮುಂದಾಗಿದೆ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ ಆರೋಪಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹೆದ್ದಾರಿ, ರೈಲ್ವೆ, ಹಡಗು, ವಿಮಾನ ನಿಲ್ದಾಣ, ವೇರ್ ಹೌಸ್, ಗಣಿಗಳು, ನೈಸರ್ಗಿಕ ಅನಿಲ ಹೀಗೆ ಎಲ್ಲವನ್ನು ಖಾಸಗಿಯವರ ತೆಕ್ಕೆಗೆ ನೀಡಲು …

Read More »

ಇಬ್ಬರು ವಿದ್ಯಾರ್ಥಿನಿಯರು ಸೇರಿ ಮೂವರು ಡಿಬಾರ್

ಕಲಬುರಗಿ, ; ಗುಲಬರ್ಗಾ ವಿಶ್ವವಿದ್ಯಾಲಯವು ಜರುಗಿಸುತ್ತಿರುವ ಸ್ನಾತಕ ಪದವಿ ಕೋರ್ಸಿನ ಒಂದು ಮತ್ತು ಮೂರನೇ ಸೆಮೆಸ್ಟರ್‍ನ ಮುಂದೂಡಲಾದ ಪರೀಕ್ಷೆಗಳು ಪ್ರಾರಂಭಗೊಂಡಿದ್ದು, ಈ ಪ್ರಯುಕ್ತ ಕುಲಪತಿಗಳು ಪದವಿ ಪರೀಕ್ಷೆಗಳ ಪರಿವೀಕ್ಷಣೆಗಾಗಿ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಹಾಗಾಂವ ಕ್ರಾಸ್ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಮಲಾಪೂರನ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಕುಲಪತಿಗಳು ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಒಬ್ಬೊಬ್ಬ ವಿದ್ಯಾರ್ಥಿನಿಯರನ್ನು ಪರೀಕ್ಷೆಯಿಂದ ಡಿಬಾರ್ …

Read More »

ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ಸ್ವಸಹಾಯ ಗುಂಪುಗಳಿಗೆ 600 ಕೋಟಿ ರೂ. ಸಮುದಾಯ ನಿಧಿ

ಮಂಗಳೂರು: ಗ್ರಾಮೀಣ ಮಹಿಳೆಯರು ಆರ್ಥಿಕ ಸ್ವಾವಲಂಭಿಗಳಾಗಲು ಹಾಗೂ ಉದ್ಯಮಶೀಲರಾಗಲು ಸರಕಾರ ಎನ್.ಆರ್.ಎಲ್.ಎಂ ಯೋಜನೆ ಮೂಲಕ ರಾಜ್ಯದ ಎಲ್ಲ ಮಹಿಳಾ ಸ್ವಸಹಾಯ ಗುಂಪುಗಳಿಗೆ 600 ಕೋಟಿ ರೂ.ಗಳಿಗೂ ಹೆಚ್ಚಿನ ಸಮುದಾಯ ಬಂಡವಾಳ ನಿಧಿ ನೀಡಲಾಗಿದೆ ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಾಯ ಖಾತೆ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯ ಕುರ್ನಾಡು ಗ್ರಾಮ ಪಂಚಾಯತಿಯ ಮುಡಿಪು ಗ್ರಾಮದಲ್ಲಿ ಬಂಜರು ಬಿದ್ದಿದ್ದ ಭೂಮಿಯನ್ನು ಸಾಗುವಳಿ ಮಾಡಿ ಭತ್ತ ಬೆಳೆಯುತ್ತಿರುವ ಸ್ವಸಹಾಯ ಗುಂಪುಗಳ ಮಹಿಳೆಯರ …

Read More »

ಮೂಡಲಗಿ ಅತ್ಯಾಚಾರ ಪ್ರಕರಣ ಕುರಿತು ಜೈ ಭೀಮ್ ಸಂಘರ್ಷ ಸಮಿತಿ ಹಾಗೂ ಅಂಬೇಡ್ಕರ ವಾಣಿ ವತಿಯಿಂದ ಅತ್ಯಾಚಾರ ಮಾಡಿದ ಆರೋಪಿಗಳಿಗೆ ಕ್ರಮ ಕೈಗೊಳ್ಳುವ ಮನವಿ

ಈ ಮೇಲಿನ ವಿಷಯದಂತೆ ನಾವು ತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಜುಲೈ-2021 ತಿಂಗಳಲ್ಲಿ 16 ವರ್ಷದ ಅಪ್ರಾಪ್ತ ಪರಿಶಿಷ್ಟ ಜಾತಿಯ ಬಾಲಕಿ ಮೇಲೆ 5 ಜನ ಅನ್ಯಜನಾಂಗದ ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಮಾಡಿರುತ್ತಾರೆ. ಬಳಿಕ ಈ ಕೃತ್ಯದ ಬಗ್ಗೆ ಯಾರಿಗಾದರೂ ಹೇಳಿದರೆ ನಿನ್ನನ್ನು ಬಿಡುವುದಿಲ್ಲ ಅಂತಾ ಜೀವ ಬೆದರಿಕೆ ಹಾಕಿದ್ದ ಕಾಮುಕರನ್ನು ಈಗಾಗಲೇ 4 ಜನ ಕಾಮುಕರನ್ನು ಘಟಪ್ರಭಾ ಪೊಲೀಸರು ಬಂಧಿಸಿರುತ್ತಾರೆ. ಇನ್ನುಳಿದ ಕಾಮುಕನನ್ನು ತಕ್ಷಣವೇ ಬಂಧಿಸುವುದಾಗಲೆ …

Read More »