Breaking News

ಹುಣಸೂರು: ಮರದ ದಿಮ್ಮಿ ತುಂಬಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಡಿಕ್ಕಿ, ಬಸ್‌ ಚಾಲಕನಿಗೆ ಗಂಭೀರ ಗಾಯ

ಹುಣಸೂರು: ರಸ್ತೆ ಪಕ್ಕದಲ್ಲಿ ನಿಂತಿದ್ದ ಮರದ ದಿಮ್ಮಿಗಳನ್ನು ತುಂಬಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದಿದ್ದು, ಬಸ್‌ ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಕಲ್ಬೆಟ್ಟ ಬಳಿ ನಡೆದಿದೆ. ಬಸ್‌ ಚಾಲಕ ಎಚ್‌.ಬಿ.ಮಹದೇವ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಮರದ ದಿಮ್ಮಿಗಳನ್ನು ತುಂಬಿದ್ದ ಲಾರಿ ಹುಣಸೂರಿನ ಕಡೆ ಹೊರಟಿತ್ತು. ಈ ವೇಳೆ ಕಲ್ಬೆಟ್ಟದ ಬಳಿ ನಿಂತಿತ್ತು. ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ …

Read More »

ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಒತ್ತಾಯ; ಶೆಟ್ಟರ್ ಮನೆಮುಂದೆ ಶ್ರೀರಾಮ ಸೇನೆ ಪ್ರತಿಭಟನೆ

ಹುಬ್ಬಳ್ಳಿ: ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಒತ್ತಾಯಿಸಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆ ಮುಂದೆ ಶ್ರೀರಾಮ ಸೇನೆ ಪ್ರತಿಭಟನೆ ನಡೆಸಿದೆ. ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಭಟನೆಯ ನೇತೃತ್ವ ವಹಿಸಿಕೊಂಡಿದ್ದಾರೆ. ಸರ್ಕಾರಕ್ಕೆ ಇಲ್ಲದ ಕೋವಿಡ್ ನಿಯಮ ಗಣೇಶನಿಗೆ ಯಾಕೆ ಎಂದು ಮುತಾಲಿಕ್ ಪ್ರಶ್ನೆ ಮಾಡಿದ್ದಾರೆ. ಬಿಜೆಪಿಯ ರ್ಯಾಲಿಗಳಲ್ಲಿ ಕೋವಿಡ್ ನಿಯಮಗಳೇ ಇಲ್ಲ. ಆದ್ರೆ ಗಣೇಶನಿಗೆ ಮಾತ್ರ ನಿಯಮ ಪಾಲನೆ ಇದೆ. ಇಂದು ಸಿಎಂ ಜೊತೆಗಿನ …

Read More »

ಶಾಲೆಗಳ ಆರಂಭದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ!

ಬೆಂಗಳೂರು, ಆ. 30: ರಾಜ್ಯದಲ್ಲಿ ಶಾಲೆಗಳ ಆರಂಭದ ಕುರಿತು ತಾಂತ್ರಿಕ ಸಮಿತಿ ಸಭೆಯಲ್ಲಿ ಚರ್ಚಿಸಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ತೆಗೆದು ಕೊಳ್ಳಲಿದ್ದಾರೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಸೋಮವಾರ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಿದರು. ನಂತರ ಮಾತನಾಡಿದ ನಾಗೇಶ್, ಒಂದನೇ ತರಗತಿಯಿಂದ ಶಾಲೆಗಳನ್ನು ಆರಂಭಿಸಬೇಕೇ …

Read More »

ಮಹಿಳೆಯರಿಗೆ ಸಿಹಿ ಸುದ್ದಿ: ಹೆಂಡತಿಯ ಆಸ್ತಿ ಅಥವಾ ಬಡ್ಡಿ ಗಳಿಕೆಯಲ್ಲಿ ಪತಿಗೆ ಅವಕಾಶವಿಲ್ಲ, MWPಕಾಯ್ದೆ ಬಗ್ಗೆ ತಿಳಿದರಲಿ

ವಿವಾಹಿತ ಮಹಿಳೆಯರ ರಕ್ಷಣಾ ಕಾಯ್ದೆಯನ್ನು (ಎಂಡಬ್ಲ್ಯುಪಿ ಕಾಯ್ದೆ) ವಿವಾಹಿತ ಮಹಿಳೆಯರನ್ನು ರಕ್ಷಿಸಲು ವಿನ್ಯಾಸಗೊಳಿಸಲಾಗಿದೆ.ಅಂದ ಹಾಗೇ ಎಂಡಬ್ಲ್ಯೂಪಿ ಕಾಯ್ದೆಯನ್ನು 1874 ರಲ್ಲಿ ಮಾಡಲಾಗಿದ್ದು, ವಿವಾಹಿತ ಮಹಿಳೆಯರಿಗೆ ಸಂಬಳ, ಗಳಿಕೆ, ಆಸ್ತಿ, ಹೂಡಿಕೆ ಮತ್ತು ಉಳಿತಾಯದ ಮಾಲೀಕತ್ವದ ಹಕ್ಕುಗಳನ್ನು ನೀಡುವ ಅಧಿಕಾರವನ್ನು ಈ ಕಾನೂನು ಹೊಂದಿದೆ. ಹೆಂಡತಿಯ ಯಾವುದೇ ಆದಾಯ ಅಥವಾ ಹೂಡಿಕೆಯ ಹಕ್ಕನ್ನು ಗಂಡನಿಗೆ ನೀಡುವ ಹಾಗಿಲ್ಲ ಅಂತ ಈ ಕಾಯ್ದೆಯಲ್ಲಿ ಹೇಳಲಾಗಿದೆ. ಎಂಡಬ್ಲ್ಯೂಪಿ ಕಾಯ್ದೆಯ ಪ್ರಕಾರ, ಹೂಡಿಕೆ, ಉಳಿತಾಯ, ಸಂಬಳ …

Read More »

ಮೈಸೂರಲ್ಲಿ ಗ್ಯಾಂಗ್​ ರೇಪ್​: ನಮ್ಮಲ್ಲೊಬ್ಬನಿಗೆ ಲೈಂಗಿಕ ಚಟವಿತ್ತು. ಬೆಚ್ಚಿಬೀಳಿಸುತ್ತೆ ಆರೋಪಿಗಳ ಮಾತು

ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳು ಎರಡು ವರ್ಷದಿಂದಲೂ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಯುವ ಜೋಡಿಗಳನ್ನು ಪೀಡಿಸಿದ್ದು ಮಾತ್ರವಲ್ಲ, ಅವರ ಬಳಿ ಸಿಕ್ಕಿದ್ದನ್ನೆಲ್ಲ ದೋಚುತ್ತಿದ್ದಾರೆ. ಬಂಧಿತ ಐವರು ಆರೋಪಿಗಳಲ್ಲಿ ಒಬ್ಬನಿಗೆ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಚಟವಿತ್ತು. ಒಬ್ಬ ಮಹಿಳೆಯರ ಮೇಲೆ ಆತ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರೆ, ಇನ್ನುಳಿದವರು ಚಿನ್ನಾಭರಣ ಮತ್ತು ಹಣಕ್ಕೆ ಆಸೆ ಬೀಳುತ್ತಿದ್ದರು ಎಂಬ ಅಂಶ ತನಿಖೆಯಲ್ಲಿ ಬಯಲಾಗಿದೆ. ಕೃತ್ಯ ಎಸಗಿರುವುದಾಗಿ ಆರೋಪಿಗಳೆಲ್ಲರೂ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ. ವಯಸ್ಸಿನ ವ್ಯತ್ಯಾಸವನ್ನೇ …

Read More »

ಬಸ್‍ಗೆ ದಾರಿ ಬಿಡದೇ ಬೈಕ್‍ನಲ್ಲಿ ಯುವಕನ ಪುಂಡಾಟ – ಹಿಡಿದು ಥಳಿಸಿದ ಸಾರ್ವಜನಿಕರು

ಹಾಸನ : ಸಾರಿಗೆ ಬಸ್‍ಗೆ ದಾರಿ ಬಿಡದೇ ಪುಂಡಾಟ ಮೇರೆದ ಯುವಕನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ವೈ.ಎನ್.ಪುರ ಬಳಿ ನಡೆದಿದೆ. ಬೈಕ್‍ನಲ್ಲಿ ಹೋಗುತ್ತಿದ್ದ ಯುವಕ ತನ್ನ ಹಿಂದೆ ಸಾರಿಗೆ ಬಸ್ ಬರುತ್ತಿದ್ದರು ಕೂಡ ಬೈಕ್ ನಲ್ಲಿ ವೀಲ್ಹಿಂಗ್ ಮಾಡುತ್ತಾ ಬಸ್‍ಗೆ ಅಡ್ಡ ಬರುತ್ತಿದ್ದ. ಡ್ರೈವರ್ ಹಾರ್ನ್ ಮಾಡಿದರೂ ಕೂಡ ರಸ್ತೆ ಒಂದು ಬದಿಯಿಂದ ಮತ್ತೊಂದು ಬದಿಗೆ ಜಿಗ್‍ಜಾಗ್ ಮಾದರಿಯಲ್ಲಿ ಬೈಕ್ ಚಲಾಯಿಸಲಾರಂಭಿಸಿದ್ದಾನೆ. ಇದರಿಂದ …

Read More »

ಒಂದು ವರ್ಷದಿಂದ ಇವರು ಬಾಯಿ ಮುಚ್ಚಿದ್ರು: ಡಿಕೆಶಿ ವಿರುದ್ಧ ಅನಿಲ್ ಬೆನಕೆ ವಾಗ್ದಾಳಿ

ಒಂದುವರ್ಷದಿಂದ ಇವರು ಬಾಯಿ ಮುಚ್ಚಿಕೊಂಡಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರ ಸುರೇಶ್ ಅಂಗಡಿ ಅವರ ಅಮಾನವೀಯ ಅಂತ್ಯಸಂಸ್ಕಾರ ಮಾಡಿತು ಎಂಬ ಡಿಕೆಶಿ ಆರೋಪ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸನ್ಮಾನ್ಯ ಸುರೇಶ ಅಂಗಡಿ ಕೊರೊನಾದಿಂದ ಮೃತಪಟ್ಟು ಒಂದು ವರ್ಷವಾಯಿತು. ಒಂದು ವರ್ಷದಿಂದ ಇವರು ಬಾಯಿ ಮುಚ್ಚಿದ್ರು. ಇವರು ಡಿ.ಕೆ ಶಿವಕುಮಾರ್ …

Read More »

ಮನಸ್ಸಿಗೆ ನೋವಾಗಿದ್ದರೆ ಕ್ಷಮಿಸಿ: ಗೋವಿಂದ ಕಾರಜೋಳ

ಬೆಳಗಾವಿ: ರಾಜ್ಯದಲ್ಲಿ ಬೆಂಗಳೂರು ಬಿಟ್ಟರೆ ಬೆಳಗಾವಿ ನಗರಕ್ಕೆ ಮಹತ್ವ ಇದೆ ಎಂದು ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಸೆ. 3ರಂದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಮಹಾನಗರ ಪಾಲಿಕೆಗೆ 58 ವಾರ್ಡ್‍ಗಳ ಪೈಕಿ 56 ವಾರ್ಡ್‍ಗಳಲ್ಲಿ ಸ್ಪರ್ಧೆಯಾಗುತ್ತಿದೆ. ಬೆಳಗಾವಿ ಸುತ್ತಮುತ್ತ ನಾಲ್ಕು ಆಹಾರ ಸಂಸ್ಕರಣಾ ಘಟಕ ಸ್ಥಾಪನೆಯಾಗಬೇಕು. ಒಂದೂವರೆ ವರ್ಷದೊಳಗಾಗಿ ಸ್ಮಾರ್ಟ್ ಸಿಟಿ ಯೋಜನೆ ಪೂರ್ಣಗೊಳಿಸುತ್ತೇವೆ. ರಾಜ್ಯದಲ್ಲಿ …

Read More »

ಹುಬ್ಬಳ್ಳಿ- ಧಾರವಾಡ: 25 ಭರವಸೆಗಳ ಬಿಜೆಪಿ ಪ್ರಣಾಳಿಕೆ

ಹುಬ್ಬಳ್ಳಿ: ‘ಮನೆ ಬಾಗಿಲಿಗೆ ಮಹಾನಗರ ಪಾಲಿಕೆ’ ಸಂಕಲ್ಪದೊಂದಿಗೆ 25 ಭರವಸೆಯುಳ್ಳ ಚುನಾವಣೆ ಪ್ರಣಾಳಿಕೆಯನ್ನು ಬಿಜೆಪಿ ಮುಖಂಡರು ಭಾನುವಾರ ನಗರದಲ್ಲಿ ಬಿಡುಗಡೆ ಮಾಡಿದರು. ನಿರಂತರ ಕುಡಿಯುವ ನೀರು ಯೋಜನೆ, ನೀರಿನ ಕರದ ಮೇಲಿನ ದಂಡ ಮನ್ನಾ, ಕಸಮುಕ್ತ ನಗರ, ಮೇಲ್ಸೇತುವೆ ನಿರ್ಮಾಣ, ಸ್ಮಾರ್ಟ್ ಸಿಟಿ ಯೋಜನೆ ಸಮರ್ಪಕ ಅನುಷ್ಠಾನ, ಜನಸ್ನೇಹಿ ಆಡಳಿತಕ್ಕೆ ಎಚ್‌ಡಿಎಂಸಿ-ಇ-ಗವರ್ನೆನ್ಸ್ ಆಯಪ್ ವ್ಯವಸ್ಥೆ ಪ್ರಣಾಳಿಕೆಯಲ್ಲಿದ್ದ ಪ್ರಮುಖ ಭರವಸೆಗಳು. ಪ್ರಣಾಳಿಕೆ ಬಿಡುಗಡೆ ನಂತರ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, …

Read More »

ಭ್ರಷ್ಟಾಚಾರದಲ್ಲಿ ರಾಜ್ಯ ಸರಕಾರ ನಂ.1: ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಕೋವಿಡ್‌ ಸಂದರ್ಭದ ಭ್ರಷ್ಟಾಚಾರದಲ್ಲಿ ರಾಜ್ಯ ಸರಕಾರ ರಾಷ್ಟ್ರದಲ್ಲೇ ಮೊದಲ ಸ್ಥಾನದಲ್ಲಿದೆ. ಚಿಕಿತ್ಸೆ, ಔಷಧ, ಶವಸಂಸ್ಕಾರಕ್ಕೂ ಕ್ಯೂ ನಿಲ್ಲಿಸಿದರು. ಸಂಕಷ್ಟದ ಸಂದರ್ಭದಲ್ಲಿ ಆಸ್ತಿ ತೆರಿಗೆ ಸೇರಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿ ಜನರನ್ನು ಕಿತ್ತು ತಿನ್ನುವ ಕೆಲಸವನ್ನು ಸರಕಾರ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತಮ ಆಡಳಿತವಿದ್ದರೆ ಎರಡೇ ವರ್ಷಕ್ಕೆ ಮುಖ್ಯಮಂತ್ರಿಯನ್ನು ಬದಲಾಯಿಸಿದ್ದು ಯಾಕೆ? ರಾಜೀನಾಮೆ ನೀಡುವ ಮೊದಲು ಮುಖ್ಯಮಂತ್ರಿಗಳು ಬಹಿರಂಗವಾಗಿ …

Read More »