Breaking News

ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಪೊಲೀಸರು ಬಂಧಿಸಿದ್ದಾರೆ.

ಮುಂಬೈ: ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಸೋಮವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಮತ್ತು ಕೆಲವು ಆಯಪ್‌ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪ ಅವರ ಮೇಲಿದೆ. ಮುಂಬೈ ಅಪರಾಧ ವಿಭಾಗದ ಪೊಲೀಸರು ಕುಂದ್ರಾ ಅವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಕುಂದ್ರಾ ಅವರೇ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ‘ಅಶ್ಲೀಲ ಚಿತ್ರಗಳ ತಯಾರಿ ಮತ್ತು ಅವುಗಳನ್ನು ಕೆಲವು …

Read More »

ನೂತನ ” ಶ್ರೀದೇವಿ ಇನ್ಸೂರೆನ್ಸ್ ಜೋನ್” ಉದ್ಘಾಟಿಸಿದ ಸತೀಶ ಜಾರಕಿಹೊಳಿ

ಸವದತ್ತಿ: ತಾಲೂಕಿನ ಯರಗಟ್ಟಿಯಲ್ಲಿ ನೂತನ ನಿರ್ಮಾಣವಾದ ಶ್ರೀದೇವಿ ಇನ್ಸೂರೆನ್ಸ್ ಜೋನ್ ನನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೋಮವಾರ ಉದ್ಘಾಟಿಸಿ, ಹೊಲ್ ಸೆಲ್ ಕಿರಾಣಿ ಅಂಗಡಿಯನ್ನು ಪರಿಶೀಲಿಸಿದರು.   ಕಾಂಗ್ರೆಸ್ ಮುಖಂಡರು ಬಸವರಾಜ್ ಸಾಯನ್ನವರ.     ಪಂಚನಗೌಡ ದ್ಯಾಮನಗೌಡರ, ರವೀಂದ್ರ ಯಲಿಗಾರ, ವಿಶ್ವಾಸ ವೈದ್ಯ, ಯುವ ನಾಯಕ ಗೌತಮ ದ್ಯಾಮನಗೌಡರ ಮಲ್ಲು ಜಕಾತಿ, ಆ.ಆ. ಟೋಪೋಜಿ, ಯಶವಂತ ಯಲಿಗಾರ, ಈರಣ್ಣ ಸಂಗಪನವರ, ಹರಳಿ , ಹಾಗೂ ಸವದತ್ತಿ ತಾಲೂಕಿನ …

Read More »

ಮನೆಯ ಯಜಮಾನನಿಂದಲೇ ಕಳ್ಳತನ : ಘಟನೆ ನಡೆದ ಕೆಲವೇ ಗಂಟೆಯಲ್ಲಿ ಪ್ರಕರಣ ಭೇದಿಸಿದ ಪೊಲೀಸರು

ಕೊಪ್ಪಳ: ಕೊಪ್ಪಳದಲ್ಲಿನ ಕಲ್ಯಾಣ ನಗರದ ಮನೆಯೊಂದರಲ್ಲಿ ಆಭರಣ, ನಗದು ಕಳ್ಳತನ ಪ್ರಕರಣದಲ್ಲಿ ಮನೆಯ ಯಜಮಾನನೇ ಕಳ್ಳತನ ಮಾಡಿರುವ ವಿಚಿತ್ರ ಘಟನೆ ನಡೆದಿದ್ದು ಈ ಪ್ರಕರಣವನ್ನು ಪೊಲೀಸರು ಕೇವಲ ಕೆಲವೇ ಗಂಟೆಯಲ್ಲಿ ಪತ್ತೆ ಮಾಡಿ ಬಂಧಿತನಿಂದ ನಗದು, ಆಭರಣ ಜಪ್ತಿ ಮಾಡಿದ ಪ್ರಸಂಗವೂ ನಡೆದಿದೆ. ಕೊಪ್ಪಳದ ಕಲ್ಯಾಣ ನಗರದ ಜ್ಯೋತಿ ಶಿವರಾಜ ಭಜೇಂತ್ರಿ ಎನ್ನುವವರು ಊರಿಗೆ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಕಳ್ಳತನ ನಡೆದಿತ್ತು. ಅವರು ಮನೆಗೆ ಬಂದು ನೋಡಿದಾಗ ಆಭರಣ, ನಗದು …

Read More »

BSY ಜತೆ ಸಮುದಾಯ : ಬದಲಾವಣೆ ಕೆಂಡಕ್ಕೆ “ಆಡಿಯೋ’ ತುಪ್ಪ : ಬಿಎಸ್‌ವೈ ಮೌನ

ಬೆಂಗಳೂರು : ಒಂದು ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬದಲಾಯಿಸಿದರೆ ಬಿಜೆಪಿ ಮೇಲೆ ಅಡ್ಡ ಪರಿಣಾಮ ಉಂಟಾದೀತು! ಇದು ಲಿಂಗಾಯತ ನಾಯಕರು ಮತ್ತು ಮಠಾಧೀಶರು ನೀಡಿರುವ ನೇರ ಎಚ್ಚರಿಕೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಅವರದು ಎನ್ನಲಾದ ಆಡಿಯೋ ಬಹಿರಂಗವಾದ ಬಳಿಕ ನಾಯಕತ್ವ ಬದಲಾವಣೆಯ ಚರ್ಚೆ ಇನ್ನಷ್ಟು ಬಿಸಿ ಪಡೆದಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಯಡಿಯೂರಪ್ಪ, ವಲಸಿಗ ಸಚಿವರು ಮತ್ತು ಸಿಎಂ ಬೆಂಬಲಿಗರು ಮೌನಕ್ಕೆ ಶರಣಾಗಿದ್ದಾರೆ. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, …

Read More »

ತಗ್ಗಿದ ಮಳೆಯ ಅಬ್ಬರ: ಜಲಾಶಯಗಳಲ್ಲಿ ಹೆಚ್ಚಿದ ನೀರು

ಬೆಂಗಳೂರು: ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದ ಬಹುತೇಕ ಕಡೆ ಸೋಮವಾರ ಸಾಧಾರಣ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಆರ್ಭಟಿಸಿದ್ದ ಮಳೆ ಸೋಮವಾರ ಸ್ವಲ್ಪ ಬಿಡುವು ನೀಡಿದೆ. ಶಿವಮೊಗ್ಗ ಸೇರಿ ಹಲವೆಡೆ ಬಿಸಿಲ ದರ್ಶನವಾದರೆ, ಸೊರಬ, ಹೊಸನಗರ, ತೀರ್ಥಹಳ್ಳಿ, ಸಾಗರದ ಕೆಲವೆಡೆ ಮಧ್ಯಾಹ್ನದ ನಂತರ ಸಾಧಾರಣ ಮಳೆಯಾಗಿದೆ. ಮಳೆ ಕ್ಷೀಣಿಸಿದರೂ ಜಲಾಶಯಗಳಿಗೆ ಸಾಕಷ್ಟು ನೀರು ಹರಿದುಬರುತ್ತಿದೆ. ಹೊಸನಗರ ತಾಲ್ಲೂಕಿನಲ್ಲಿ 17.1 ಸೆಂ.ಮೀ, ಹುಲಿಕಲ್‌ನಲ್ಲಿ 13.6 ಸೆಂ.ಮೀ, ಮಾಣಿಯಲ್ಲಿ 11.5 …

Read More »

‘ರಾಜ್ಯ ಮದ್ಯಪಾನ ಸಂಯಮ ಮಂಡಳಿ’ ಅಧ್ಯಕ್ಷೆಯಾಗಿ ‘ನಟಿ ಶೃತಿ’ ನೇಮಿಸಿ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆಯಾಗಿದ್ದಂತ ನಟಿ ಶೃತಿಯನ್ನು, ನಿನ್ನೆಯಷ್ಟೇ ಆ ಸ್ಥಾನದಿಂದ ಕೆಳಗಿಳಿಸಿ, ಸಿಎಂ ಆಪ್ತ ಕಾಪು ಸಿದ್ದಲಿಂಗಸ್ವಾಮಿಗೆ ನೀಡಲಾಗಿತ್ತು. ಇದೀಗ ಇಂದು ನಟಿ ಶೃತಿಗೆ ಕರ್ನಾಟಕ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.   ಈ ಕುರಿತಂತೆ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ ಜೆಸಿಂತ ಅಧಿಸೂಚನೆ ಹೊರಡಿಸಿದ್ದು, ಮುಖಅಯಮಂತ್ರಿಯವರ ಗೃಹ ಕಚೇರಿಯ ಟಿಪ್ಪಣಿಯಂತೆ …

Read More »

ಬಕ್ರೀದ್ ಸ್ಪೆಷಲ್: 1.25 ಲಕ್ಷ ರೂ.ಗೆ ಬಂಡೂರು ತಳಿಯ 2 ಟಗರು ಮಾರಾಟ

ಮಂಡ್ಯ: ಬಕ್ರಿದ್ ಹಬ್ಬದ ಹಿನ್ನೆಲೆಯಲ್ಲಿ ಟಗರು, ಕುರಿಗಳ ವ್ಯಾಪಾರ ಜೋರಾಗಿದೆ. ಇದರಲ್ಲಿ ವಿಶೇಷ ಎಂಬಂತೆ ಈ ಬಾರಿ ಬರೋಬರಿ 1.25 ಲಕ್ಷ ರೂ.ಗೆ ಎರಡು ಬಂಡೂರು ತಳಿಯ ಟಗರು ಮಾರಾಟವಾಗಿದೆ. ಮಂಡ್ಯ ತಾಲೂಕು ಸೂನಗನಹಳ್ಳಿಯಲ್ಲಿ ಟಗರುಗಳ ಮಾರಾಟ ಭರ್ಜರಿಯಾಗಿ ನಡೆಯುತ್ತಿದ್ದು ಇಲ್ಲಿ ದೊಡ್ಡ ಮೊತ್ತಕ್ಕೆ ಟಗರು ಸೇಲ್ ಆಗಿದೆ. ಸುಮಾರು ಒಂದು ವರ್ಷದಿಂದ ರೈತ ಶಂಭು ಎನ್ನುವವರು ಸಾಕಿದ್ದ ಜೋಡಿ ಟಗರುಗಳನ್ನು ಭಾರಿ ಮೊತ್ತಕ್ಕೆ ಮಂಡ್ಯದ ಹಾಲಹಳ್ಳಿ ಬಡಾವಣೆಯ ಸಾಬುದ್ದೀನ್ …

Read More »

ಮಹಿಳೆ ಸುಪಾರಿ ಕೊಲೆ ಶಂಕೆ ; ಗಂಡನ ತೀವ್ರ ವಿಚಾರಣೆ

ಉಡುಪಿ: ಇಲ್ಲಿಗೆ ಸಮೀಪದ ಬ್ರಹ್ಮಾವರದ ಉಪ್ಪಿನಕೋಟೆ ಅಪಾರ್ಟ್‌ಮೆಂಟ್‌ನಲ್ಲಿ ಕಳೆದ ಜುಲೈ.12 ರಂದು ಸಂಭವಿಸಿದ ವಿಶಾಲಾ ಗಾಣಿಗ ಎಂಬ ಮಹಿಳೆಯ ಕೊಲೆಗೆ ಸಂಬಂದಿಸಿದಂತೆ ಮಹಿಳೆಯ ಪತಿ ರಾಮಕೃಷ್ಣ ಗಾಣಿಗ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಕರಣದಲ್ಲಿ ತನಿಖೆಗೆ ಪೊಲೀಸರು ನಾಲ್ಕು ತಂಡ ರಚಿಸಿದ್ದು, ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಹೊರ ರಾಜ್ಯದ ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳಿಂದ …

Read More »

ರಾಜ್ಯ ಶಿಕ್ಷಣ ಇಲಾಖೆಯಿಂದ ಬೆಳಗಾವಿ ಡಿಡಿಪಿಐ ತಂಡಕ್ಕೆ ಅಭಿನಂದನಾ ಸಂದೇಶ

ಬೆಳಗಾವಿ–   ಎಸ್ಎಸ್ಎಲ್ ಸಿ ಪರೀಕ್ಷೆಯ ಮೊದಲ ಹಂತದ ಯಶಸ್ಸಿನ ಹಿನ್ನೆಲೆಯಲ್ಲಿ ರಾಜ್ಯ ಶಿಕ್ಷಣ ಇಲಾಖೆ ಬೆಳಗಾವಿ ಡಿಡಿಪಿಐ ಮತ್ತು ಅವರ ಸಂಪೂರ್ಣ ತಂಡಕ್ಕೆ ಅಭಿನಂದನೆ ಸಲ್ಲಿಸಿದೆ. ಈ ಕುರಿತು ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕ ಕೆ. ಎಸ್. ಕರಿಚಣ್ಣವರ ಸಂದೇಶ ಕಳಿಸಿದ್ದಾರೆ. ಅವರ ಸಂದೇಶ ಹೀಗಿದೆ – “ಬೆಳಗಾವಿ ಜಿಲ್ಲೆಯಾದ್ಯಂತ ಇಂದು ದಿ: ೧೯-೦೭-೨೦೨೧ ರಂದು ನಡೆದ SSLC ಪರೀಕ್ಷೆಯ ಯಶಸ್ಸಿಗೆ ಕಾರಣರಾದ ಉಪ ನಿರ್ದೇಶಕರು(ಆಡಳಿತ) ಹಾಗೂ ತಂಡ,  (ಅಭಿವೃದ್ಧಿ) …

Read More »

6 ಬ್ಯಾಗ್‌ ಕೊಂಡೊಯ್ದರು ಎಂದೆ, ಪ್ರಧಾನಿಗೆ ಹಣ ಕೊಂಡೊಯ್ದರು ಎಂದೆನೇ? ಎಚ್‌ಡಿಕೆ

ಬೆಂಗಳೂರು: ‘ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ದೆಹಲಿಗೆ ಹೋಗುವಾಗ ವಿಶೇಷ ವಿಮಾನದಲ್ಲಿ ಆರು ಬ್ಯಾಗ್‌ಗಳಲ್ಲಿ ತೆಗೆದುಕೊಂಡು ಹೋಗಿದ್ದು ಏನು ಎಂದು ನಾನು ಕೇಳಿದ್ದೆ. ಪ್ರಧಾನಿಗೆ ಹಣ ಕೊಂಡೊಯ್ದಿದ್ದಾರೆ ಎಂದು ನಾನು ಹೇಳಿದ್ದೇನೆಯೇ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು. ಜೆಡಿಎಸ್‌ ಕಚೇರಿ ಜೆ.ಪಿ. ಭವನದಲ್ಲಿ ಸೋಮವಾರ ವಿವಿಧ ಜಿಲ್ಲೆಗಳ ಪಕ್ಷದ ಮುಖಂಡರ ಸಭೆ ನಡೆಸುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ತಮ್ಮ ಹೇಳಿಕೆ ಕುರಿತು …

Read More »