Breaking News

210 ಗ್ರಾಂನ 3 ಚಿನ್ನದ ಕಿರೀಟ ಗಿಫ್ಟ್ ನೀಡಿದ ಗ್ರಾಮಸ್ಥರು

ವಿಜಯಪುರ: ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ, ಮಾಜಿ ಸಚಿವ ಎಂಬಿ ಪಾಟೀಲ್ ಹಾಗೂ ಶಿವಾನಂದ್ ಪಾಟೀಲ್ ಗೆ ವಿಜಯಪುರದ ಕಾರಜೋಳ ಗ್ರಾಮಸ್ಥರು ಚಿನ್ನದ ಕಿರೀಟಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಕಾರಜೋಳದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದ ವೇಳೆ ಈ ಮೂವರಿಗೆ 210 ಗ್ರಾಂ ನ ಮೂರು ಚಿನ್ನದ ಕಿರೀಟಗಳನ್ನು ಗ್ರಾಮಸ್ಥರು ಗಿಫ್ಟ್ ಮಾಡಿದ್ದಾರೆ. ಆದರೆ ಮೂವರು ನಾಯಕರು ಕೂಡ ಚಿನ್ನದ ಕಿರೀಟ ಗಿಫ್ಟ್ ಪಡೆಯಲು ನಿರಾಕರಿಸಿದ್ದಾರೆ.ಒತ್ತಾಯ ಪೂರ್ವಕವಾಗಿ ಗ್ರಾಮಸ್ಥರು ನಾಯಕರಿಗೆ ಕಿರೀಟ ತೊಡಿಸಿದ್ದಾರೆ. …

Read More »

ಯಡಿಯೂರಪ್ಪ ಈ ಹಂತಕ್ಕೆ ಇಳೀತಾರೆ ಅಂದ್ಕೊಂಡಿರ್ಲಿಲ್ಲ – ಮಗಳ ಎಂಗೇಜ್ಮೆಂಟ್‍ನಂದೇ ನೋಟಿಸ್ ಕೊಟ್ಟಿದ್ದಾರೆ

ಕಲಬುರಗಿ: ಒಂದು ವರ್ಷದಿಂದ ಸುಮ್ಮನೆ ಇದ್ದವರು ನನ್ನ ಮನೆಯಲ್ಲಿ ಕಾರ್ಯಕ್ರಮ ಇದ್ದಾಗಲೇ ನೋಟಿಸ್ ಕೊಡಲು ಬಂದಿದ್ದಾರೆ. ನನಗೆ ಚಳಿ ಯಾವುದು, ಮಳೆ ಯಾವುದು ಗೊತ್ತಿಲ್ಲ. ಎಲ್ಲವನ್ನೂ ಒಂದೇ ರೀತಿಯಾಗಿ ಅನುಭವಿಸಿದ್ದೇನೆ. ನನ್ನ ಮೇಲೆ ಎಫ್‍ಐಆರ್ ಹಾಕಿದ್ದೇ ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿಬಿಐ ನೋಟಿಸ್ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮ ಮನೆಯಲ್ಲೆ ನನ್ನ ಮಗಳ ಎಂಗೆಜ್ಮೆಂಟ್ ಕಾರ್ಯಕ್ರಮ ಇದ್ದಾಗ ಮನೆ …

Read More »

ಬೆಳಗಾವಿಯ ಆರ್ ಟಿ ಓ ಕಚೇರಿ ನಿರ್ಮಿಸಲು 4 ಎಕರೆ ಜಾಗೆ ಮಂಜೂರು

ಬೆಳಗಾವಿ- ಬೆಳಗಾವಿಯ ಆರ್ ಟಿ ಓ ಕಚೇರಿ ನಿರ್ಮಿಸಲು ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ಯಮನಾಪೂರ ಗ್ರಾಮದಲ್ಲಿ ನಾಲ್ಕು ಎಕರೆ ಜಾಗೆಯನ್ನು ಮಂಜೂರು ಮಾಡಿಸಲಾಗಿದೆ ಎಂದು ಬೆಳಗಾವಿ ಉತ್ತರ ಮತಕ್ಷೇತ್ರ್ ಶಾಸಕ ಅನೀಲ ಬೆನಕೆ ತಿಳಿಸಿದ್ದಾರೆ. ಬೆಳಗಾವಿಯ ಆರ್ ಟಿ ಓ ಕಚೇರಿ ಆವರಣದಲ್ಲಿ ಅಂಚೆ ಕಚೇರಿಯ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಯಮನಾಪೂರ ಗ್ರಾಮದಲ್ಲಿ ಜಾಗೆ ಮಂಜೂರು ಮಾಡಿಸುವ ಸಂಧರ್ಭದಲ್ಲಿ ಅನೇಕ ಸಮಸ್ಯೆಗಳು ಎದುರಾಗಿದ್ದವು,ಎಲ್ಲ ಸಮಸ್ಯೆಗಳನ್ನು ನಿವಾರಿಸಿ ಜಾಗೆ ಮಂಜೂರು …

Read More »

ಒಕ್ಕಲಿಗರ ಅಭಿವೃದ್ಧಿ ನಿಗಮಕ್ಕೆ ಡಿಸಿಎಂ ಅಶ್ವತ್ಥನಾರಾಯಣ ಒತ್ತಾಯ

ಬೆಳಗಾವಿ: ರಾಜ್ಯ ಸರ್ಕಾರ ಲಿಂಗಾಯತ ಅಭಿವೃದ್ಧಿ ನಿಗಮ ರಚಿಸಿ 500 ಕೋಟಿ ರೂ. ಅನುದಾನ ನೀಡಿದ ಬೆನ್ನಲ್ಲಿಯೇ ಒಕ್ಕಲಿಗರ ಅಭಿವೃದ್ಧಿ ನಿಗಮವೂ ರಚಿಸಲಿ ಎಂದು ಬೆಳಗಾವಿಯಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಒತ್ತಾಯಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಒಕ್ಕಲಿಗರ ಅಭಿವೃದ್ಧಿ ನಿಗಮ ಆಗಬೇಕು ಎನ್ನುವ ಒತ್ತಾಯಕ್ಕೆ ನನ್ನ ಬೆಂಬಲವೂ ಇದೆ ಎಂದು ಡಿಸಿಎಂ ಹೇಳಿದರು. ಕಾಲೇಜು ಆರಂಭಕ್ಕೆ ವಿದ್ಯಾರ್ಥಿಗಳು, ಪೆÇೀಷಕರ ಒತ್ತಾಯ ಇತ್ತು ಹೀಗಾಗಿ …

Read More »

ಪಂಚಾಯಿತಿ ಚುನಾವಣೆಗೆ ಬಿಜೆಪಿಯಿಂದ ಪಂಚಸೂತ್ರ

ಬೆಂಗಳೂರು, ನ.23- ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಪಂಚರತ್ನ, ಪಂಚಸೂತ್ರ ವಿಧಾನದ ಮೂಲಕ ಜಿಲ್ಲೆಯಲ್ಲಿ ಎರಡು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಇಂದು ನಡೆದ ಸಂಘಟನಾ ಸಭೆ ನಂತರ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಚುನಾವಣೆ ಬರುತ್ತಿದೆ. ಕಳೆದ ಬಾರಿ ತಂದಿದ್ದ ಯೋಜನೆಯಿಂದಾಗಿ ಯಶಸ್ವಿಯಾಗಿದ್ದೆವು. ಇದೀಗ ಪಂಚರತ್ನ, ಪಂಚಸೂತ್ರ ವಿಧಾನ ತಂದಿದ್ದೇವೆ. ಒಂದೊಂದು ಸಮುದಾಯವನ್ನೂ ಗುರಿಯಾಗಿಟ್ಟು ಈ ವಿಧಾನ ಅನುಸರಿಸಲಾಗುತ್ತಿದೆ ಎಂದು …

Read More »

ನ.26ರಂದು ಆಟೋ-ಟ್ಯಾಕ್ಸಿ ಚಾಲಕರ ಮುಷ್ಕರ

ಬೆಂಗಳೂರು, ನ.24- ಕೋವಿಡ್ ಸಂಕಷ್ಟದಲ್ಲಿರುವ ಆಟೋ ಮತ್ತು ಟ್ಯಾಕ್ಸಿ ವಾಹನಗಳ ಸಾಲ ಮನ್ನಾ ಮಾಡಬೇಕು. ಚಾಲಕರ ಪುನಶ್ಚೇತನಕ್ಕೆ ಜಾತಿವಾರು ನಿಗಮಗಳಿಂದ ನೇರ ಸಾಲ ಯೋಜನೆಯಡಿ ಸಾಲ ನೀಡುವುದು, ಖಾಸಗಿ ಲೇವಾದೇವಿದಾರರಿಂದಾಗುವ ಕಿರುಕುಳ ತಪ್ಪಿಸುವುದು ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳ ಐಕ್ಯ ಹೋರಾಟ ಸಮಿತಿ (ಜೆಸಿಟಿಯು) ನ.26ರಂದು ನಗರದಲ್ಲಿ ಮುಷ್ಕರ ನಡೆಸಲು ತೀರ್ಮಾನಿಸಿದೆ. ಈ ಸಂಬಂಧ ಇಂದು ಪತ್ರಿಕಾಗೋಷ್ಠಿ ನಡೆಸಿದ ಜೆಸಿಟಿಯು ಸಂಚಾಲಕ …

Read More »

ರೋಷನ್ ಬೇಗ್ ಬೆನ್ನಲ್ಲೇ ಮತ್ತೊಬ್ಬ ಶಾಸಕರಿಗೆ ನಡುಕ ಶುರು

ಬೆಂಗಳೂರು, ನ.23- ಐಎಂಎ ಹಗರಣಕ್ಕೆ ಸಂಬಂಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ಬಂಸಿರುವ ಹಿನ್ನೆಲೆಯಲ್ಲಿ ನಗರದ ಶಾಸಕರೊಬ್ಬರಿಗೆ ನಡುಕ ಉಂಟಾಗಿದೆ. ನಗರದ ಈ ಪ್ರಭಾವಿ ಶಾಸಕರ ಹೆಸರು ಐಎಂಎ ಹಗರಣದಲ್ಲಿ ಕೇಳಿ ಬಂದಿತ್ತು. ಎಸ್‍ಐಟಿ ಈಗಾಗಲೇ ಅವರನ್ನು ವಿಚಾರಣೆಗೊಳಪಡಿಸಿ ಕೆಲವು ಮಾಹಿತಿ ಗಳನ್ನು ಪಡೆದುಕೊಂಡಿದೆ. ಈಗ ತನಿಖೆ ನಡೆಸುತ್ತಿರುವ ಸಿಬಿಐ ವಿಚಾರಣೆಗೆ ಹಾಜರಾಗುವಂತೆ ಈ ಪ್ರಭಾವಿ ಶಾಸಕರಿಗೆ ಸದ್ಯದಲ್ಲಿಯೇ ನೋಟೀಸ್ ನೀಡಬಹುದು. ವಿಚಾರಣೆ ಸಂದರ್ಭದಲ್ಲಿ ಹಗರಣ ಸಂಬಂಧ …

Read More »

ನಕ್ಸಲ್ ಚಟುವಟಿಕೆ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಯುತ್ತಿದೆ – ಐಜಿ ವಿಫುಲ್ ಕುಮಾರ್

ಮಡಿಕೇರಿ: ಕೇರಳ-ಕೊಡಗಿನ ಗಡಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ವಿರುದ್ಧ ಎಎನ್‍ಎಫ್, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದೆ ಎಂದು ಐಜಿ ವಿಫುಲ್ ಕುಮಾರ್ ಹೇಳಿದ್ದಾರೆ. ಮಡಿಕೇರಿಯಲ್ಲಿ ಮಾದಕ ವಸ್ತು, ಅಪರಾಧ ತಡೆ ಕುರಿತು ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಗೃತಿ ಜಾಥಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಜಿಲ್ಲೆಯ ಜನತೆ ಆತ್ಮಶಿಸ್ತಿನಿಂದ ವರ್ತಿಸಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಹೇಳುತ್ತೇನೆ ಎಂದರು. …

Read More »

ಕರಾವಳಿಯಲ್ಲಿ ಝಳಪಿಸಿದ ತಲ್ವಾರ್ ಬೈಕಿನಲ್ಲಿ ಹೋಗುತ್ತಿದ್ದ ಯುವಕನ ತಲ್ವಾರ್ ನಿಂದ ದಾಳಿ ನಡೆಸಿರುವ ಘಟನೆ

ಮಂಗಳೂರು: ರಾತ್ರಿ ಕುಟುಂಬದ ಜೊತೆ ಬೈಕಿನಲ್ಲಿ ಹೋಗುತ್ತಿದ್ದ ಯುವಕನ ತಲ್ವಾರ್ ನಿಂದ ದಾಳಿ ನಡೆಸಿರುವ ಘಟನೆ ಮಂಗಳೂರಿನ ಫಳ್ನೀರ್ ಬಳಿ ನಡೆದಿದೆ. 30 ವರ್ಷದ ನೌಷಾದ್ ಹಲ್ಲೆಗೊಳಗಾದ ಯುವಕ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಕದ್ರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನವೆಂಬರ್ 15ರಂದು ಗುರುಪುರದ ಕೈಕಂಬ ಬಳಿಯ ಕಂದಾವರ ಮಸೀದಿ ಹತ್ತಿರ ಅಬ್ದುಲ್ ಅಜೀಜ್ ಎಂಬವರ ಕೊಲೆಗೆ …

Read More »

ಮಹಾತ್ಮ ಗಾಂಧೀಜಿ ಮರಿಮೊಮ್ಮಗ ಕೊರೊನಾಗೆ ಬಲಿ

ಜೋಹಾನ್ಸಬರ್ಗ್: ಮಹಾತ್ಮ ಗಾಂಧೀಜಿ ಅವರ ಮರಿಮೊಮ್ಮಗ ಸತೀಶ್ ಧುಪೆಲಿಯಾ ಕೊರೊನಾ ವೈರಸ್ ಗೆ ಸೌಥ್ ಆಫ್ರಿಕಾದಲ್ಲಿ ಬಲಿಯಾಗಿದ್ದಾರೆ. ಮೂರು ದಿನಗಳ ನಂತರ ಸತೀಶ್ ಧುಪೆಲಿಯಾ ತಮ್ಮ 66ನೇ ಹುಟ್ಟುಹಬ್ಬ ಆಚರಿಸಿಕೊಳ್ಳುವರಿದ್ದರು. ಸತೀಶ್ ಅವರ ಸೋದರಿ ಉಮಾ ಧುಪೆಲಿಯಾ ಸೋದರನ ಸಾವನ್ನು ಖಚಿತಪಡಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನನ್ನ ಪ್ರೀತಿಯ ಅಣ್ಣ ನಮ್ಮನ್ನು ಅಗಲಿದ್ದಾನೆ. ನ್ಯೂಮೇನಿಯಾ ಆಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ವೇಳೆ ಅವರಿಗೆ ಕೋವಿಡ್-19 ಸೋಂಕು ಸಹ …

Read More »