Breaking News

ರಕ್ತರಹಿತವಾದ ಬಕ್ರೀದ್ ಆಚರಿಸೋಣ, ನಿಶ್ಶಬ್ದವಾದ ಶುಕ್ರವಾರ ಆಚರಣೆ ಮಾಡೋಣ. ಆಗ ಶಬ್ದವಿಲ್ಲದ, ಪಟಾಕಿ ಇಲ್ಲದ ದೀಪಾವಳಿ ಆಚರಿಸೋಣ

ಚಿಕ್ಕಮಗಳೂರು: ರಕ್ತರಹಿತವಾದ ಬಕ್ರೀದ್ ಆಚರಿಸೋಣ, ನಿಶ್ಶಬ್ದವಾದ ಶುಕ್ರವಾರ ಆಚರಣೆ ಮಾಡೋಣ. ಆಗ ಶಬ್ದವಿಲ್ಲದ, ಪಟಾಕಿ ಇಲ್ಲದ ದೀಪಾವಳಿ ಆಚರಿಸೋಣ ಎಂದು ಕಾಳಿಮಠದ ಋಷಿಕುಮಾರ ಸ್ವಾಮೀಜಿ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಮಾತನಾಡಿದ ಅವರು, ಪಟಾಕಿ ನಿಷೇಧದ ಬಗ್ಗೆ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹಸಿರು ಪಟಾಕಿಯಂತೆ. ಇದ್ಯಾವುದು ಹೊಸದು. ಎಲೆ ಸುತ್ತಬೇಕಾ ಅಥವಾ ಪೇಪರ್ ಹರಿದು ಹಸಿರು ಬಣ್ಣದ ಪೇಪರ್ ಸುತ್ತಬೇಕಾ ಎಂದು ಸರ್ಕಾರದ ವಿರುದ್ಧ …

Read More »

ರಜೆಗೆ ಬಂದಿದ್ದ ಯೋಧನನ್ನು ಕೊಂದಿದ್ದ ಪಾಪಿ ತಂದೆಗೆ ಜೀವಾವಧಿ ಶಿಕ್ಷೆ

ಬೆಳಗಾವಿ: ರಜೆಗೆ ಬಂದಿದ್ದ ಯೋಧನನ್ನು ಕೊಂದಿದ್ದ ಪಾಪಿ ತಂದೆಗೆ ಬೆಳಗಾವಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. ಕೋರ್ಟ್ ಇಂದು ಜೀವಾವಧಿ ಶಿಕ್ಷೆಯ ಜೊತೆಗೆ ಮೂರು ಸಾವಿರ ರೂ. ದಂಡ ವಿಧಿಸಿದೆ. 2016ರ ಡಿಸೆಂಬರ್ 12ರಂದು ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಯಾನಗರ ಗ್ರಾಮದಲ್ಲಿ ಮಗ ಈರಣ್ಣ ಹತ್ಯೆಗೈದಿದ್ದ ತಂದೆ ವಿಠ್ಠಲ್ ಇಂಡಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಹಣಕಾಸಿನ ವ್ಯವಹಾರ …

Read More »

10 ಜನ ಪೊಲೀಸರು ಜೂಜು ಆಡುತ್ತಿದ್ದ ವೇಳೆ ಧಾರವಾಡ ಸಿಎಸ್‍ಪಿ ತಂಡ ದಾಳಿ

ಧಾರವಾಡ: ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯಬೇಕಾದ ಪೊಲೀಸರೇ ಅಂದರ್ ಬಾಹರ್ ಆಡುತ್ತಿದ್ದಾಗ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಧಾರವಾಡ ತಾಲೂಕಿನ ಗರಗ ಪೊಲೀಸ್ ಠಾಣಾ ವ್ಯಾಪ್ತಿಯ ಮುಮ್ಮಿಗಟ್ಟಿ ಬಳಿಯ ನೀಲಕಮಲ್ ಹೋಟೆಲ್ ಹತ್ತಿರದ ಉಡುಪಿ ಹೋಟೆಲ್ ಹಿಂಭಾಗದ ಕೋಣೆಯೊಂದರಲ್ಲಿ 10 ಜನ ಪೊಲೀಸರು ಜೂಜು ಆಡುತ್ತಿದ್ದ ವೇಳೆ ಧಾರವಾಡ ಸಿಎಸ್‍ಪಿ ತಂಡ ದಾಳಿ ನಡೆಸಿದೆ. ಇನ್ನೇನು ಅವರನ್ನು ಹಿಡಿಯಬೇಕು ಎನ್ನುವಷ್ಟರಲ್ಲಿ ಹತ್ತೂ ಜನ ಪೊಲೀಸರು ಪರಾರಿಯಾಗಿದ್ದಾರೆ. ಗರಗ ಗ್ರಾಮದ ಅನೀಲ್ ಉಳವಣ್ಣವರ್ …

Read More »

ಯಾರಿಗೆ ಯಾವ ಖಾತೆ ಮೇಲೆ ಕಣ್ಣು?

ಯಾರಿಗೆ ಯಾವ ಖಾತೆ ಮೇಲೆ ಕಣ್ಣು? ಗೃಹಸಚಿವರಾಗಿರುವ ಬೊಮ್ಮಾಯಿ ಇಂಧನ ಖಾತೆ ಮೇಲೆ ಕಣ್ಣು ಇಟ್ಟಿದ್ದರೆ ಕೈಗಾರಿಕಾ ಖಾತೆಯನ್ನು ನೋಡಿಕೊಳ್ಳುತ್ತಿರುವ ಜಗದೀಶ್ ಶೆಟ್ಟರ್ ಗ್ರಾಮೀಣಾಭಿವೃದ್ಧಿ ಮತ್ತು ಕಂದಾಯ ಇಲಾಖೆ ಮೇಲೆ ಕಣ್ಣಿಟ್ಟಿದ್ದಾರೆ. ಆರ್. ಅಶೋಕ್ ಅವರು ಹಾಲಿ ಕಂದಾಯ ಸಚಿವರಾಗಿದ್ದು ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಬಯಸಿದ್ದಾರೆ. ಸದ್ಯ ಸಿಎಂ ಯಡಿಯೂರಪ್ಪನವರು ಬೆಂಗಳೂರು ಅಭಿವೃದ್ಧಿ ಖಾತೆಯನ್ನು ನೋಡಿಕೊಳ್ಳುತ್ತಿದ್ದಾರೆ. ವಸತಿ ಇಲಾಖೆಯನ್ನು ನೋಡಿಕೊಳ್ಳುತ್ತಿರುವ ವಿ.ಸೋಮಣ್ಣ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಮೇಲೆ ಕಣ್ಣು …

Read More »

B.S.Y. ಸಂಪುಟಕ್ಕೆ ಹೊಸ ಮಂತ್ರಿಗಳು ಸೇರ್ಪಡೆ ಹೈಕಮಾಂಡ್ ಅನುಮತಿ ಸೂಚಿಸಿದರೆ ,ಹಿರಿಯರಿಗೆ ಕೊಕ್ ….!

ಬೆಂಗಳೂರು: ಹೈಕಮಾಂಡ್ ಅನುಮತಿ ನೀಡಿದರೆ ದೀಪಾವಳಿಯ ನಂತರ ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟಕ್ಕೆ ಹೊಸ ಮಂತ್ರಿಗಳು ಸೇರ್ಪಡೆಯಾಗಲಿದ್ದಾರೆ. ಸಂಪುಟ ಪುನಾರಚನೆಯೋ ಅಥವಾ ವಿಸ್ತರಣೆಯೋ ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಆದರೆ ಸಂಪುಟ ಪುನಾರಚನೆ ಮಾಡುವಂತೆ ಹೈಕಮಾಂಡ್ ಸೂಚಿಸಿದರೆ ಬಿಎಸ್‍ವೈ ಧರ್ಮಸಂಕಟಕ್ಕೆ ಸಿಲುಕಲಿದ್ದಾರೆ. ಸಂಪುಟದಲ್ಲಿ ಹಿರಿಯ ಕುರ್ಚಿಗೆ ಕೈ ಹಾಕುವಂತಿಲ್ಲ. ಆದರೆ ಹಿರಿಯರನ್ನು ಬಿಟ್ಟುಬಿಡಿ ಎನ್ನುವುದು ಯಡಿಯೂರಪ್ಪನವರ ಪ್ಲ್ಯಾನ್. ಸಾಫ್ಟ್ ಸಚಿವರನ್ನು ಮಾತ್ರ ಸಂಪುಟದಿಂದ ಕೈಬಿಟ್ಟು ಜಾತಿ ಆಧಾರಿತ, ಪ್ರಾದೇಶಿಕ ಲೆಕ್ಕಾಚಾರ …

Read More »

ಬೆಳಗಾವಿ ಲೋಕಸಭಾ ಅಭ್ಯರ್ಥಿಯ ಆಯ್ಕೆ ಎಂ.ಬಿ ಪಾಟೀಲ್& ಸತೀಶ್ ಜಾರಕಿಹೊಳಿ ಆಯ್ಕೆ ಮಾಡಿ: ಡಿ.ಕೆ. ಶಿವುಕುಮಾರ್

ಬೆಂಗಳೂರು: ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿಯವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಯ ಆಯ್ಕೆಗಾಗಿ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವುಕುಮಾರ್ ಅವರು ಸಮಿತಿ ರಚನೆ ಮಾಡಿದ್ದಾರೆ. ಸಮಿತಿ ಅಧ್ಯಕ್ಷರಾಗಿ ಶಾಸಕ ಎಂ.ಬಿ ಪಾಟೀಲ್, ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಸಂಯೋಜಕರಾಗಿ ಹಾಗೂ ಸದಸ್ಯರಾದ ಎಲ್.ಹನುಮಂತಯ್ಯ, ಹೆಚ್.ಎಂ.ರೇವಣ್ಣ, ವೀರಕುಮಾರ್ ಎ ಪಾಟೀಲ್, ಅಜಯ್ ಕುಮಾರ್ ಸರ್ ನಾಯಕ್, ಅನಿಲ್ ಲಾಡ್, ಜಿ.ಎಸ್.ಪಾಟೀಲ್, ಬಸವರಾಜ್ ಶಿವಣ್ಣನವರ್, ಶ್ರೀನಿವಾಸ್ ವಿ.ಮಾನೆ, …

Read More »

ಐಪಿಎಲ್ 2020ರ ತಂಡದ ಪ್ರಕಟಿಸಿದ ಸೆಹ್ವಾಗ್- ಕನ್ನಡಿಗರಿಗೆ ಆರಂಭಿಕ ಸ್ಥಾನ

ಮುಂಬೈ: ಟೀ ಇಂಡಿಯಾ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಐಪಿಎಲ್ 2020ರ ತಂಡವನ್ನು ಪ್ರಕಟಿಸಿದ್ದು, ಈ ಆವೃತ್ತಿಯಲ್ಲಿ ಕ್ರಿಕೆಟಿಗರು ತೋರಿದ ಪ್ರದರ್ಶನದ ಆಧಾರದ ಮೇಲೆ ತಂಡವನ್ನು ಆಯ್ಕೆ ಮಾಡಿದ್ದಾರೆ. ಪ್ರಮುಖವಾಗಿ ಕನ್ನಡಿಗರಾದ ಕೆಎಲ್ ರಾಹುಲ್ ಹಾಗೂ ದೇವ್‍ದತ್ ಪಡಿಕ್ಕಲ್ ಅವರಿಗೆ ಆರಂಭಿಕ ಆಟಗಾರರ ಸ್ಥಾನವನ್ನು ನೀಡಿದ್ದಾರೆ. ಐಪಿಎಲ್ 2020ರ ಆವೃತ್ತಿಯಲ್ಲಿ ಕೆಎಲ್ ರಾಹುಲ್ 670 ರನ್ ಗಳೊಂದಿಗೆ ಆರೆಂಜ್ ಕ್ಯಾಪ್ ಪಡೆದಿದ್ದು, ಇತ್ತ ಯುವ ಆಟಗಾರ ಪಡಿಕ್ಕಲ್ 473 ರನ್ …

Read More »

ಸಂಸ್ಕೃತಿಯ ಬಗ್ಗೆ ಅರಿವು ಮುಡಿಸುವ ಪ್ರೊಫೆಸರ್ ಒಬ್ಬರು ಮಹಿಳೆಯರ ಮಂಗಳಸೂತ್ರವನ್ನು ನಾಯಿ ಚೈನಿಗೆ ಹೋಲಿಕೆ ಮಾಡಿ ವಿವಾದಕ್ಕೀಡಾದ ಘಟನೆ ಗೋವಾದಲ್ಲಿ ನಡೆದಿದೆ.

ಪಣಜಿ: ಮಕ್ಕಳಿಗೆ ಶಿಕ್ಷಣ, ಸಂಸ್ಕೃತಿಯ ಬಗ್ಗೆ ಅರಿವು ಮುಡಿಸುವ ಪ್ರೊಫೆಸರ್ ಒಬ್ಬರು ಮಹಿಳೆಯರ ಮಂಗಳಸೂತ್ರವನ್ನು ನಾಯಿ ಚೈನಿಗೆ ಹೋಲಿಕೆ ಮಾಡಿ ವಿವಾದಕ್ಕೀಡಾದ ಘಟನೆ ಗೋವಾದಲ್ಲಿ ನಡೆದಿದೆ. ಶಿಲ್ಪಾ ಸಿಂಗ್ ವಿವಾದಕ್ಕೀಡಾದ ಪ್ರೊಫೆಸರ್ ಆಗಿದ್ದು, ಸದ್ಯ ಇವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ರಾಷ್ಟ್ರೀಯ ಹಿಂದೂ ಯುವ ವಾಹಿನಿ ಗೋವಾ ಘಟಕದ ರಾಜೀವ್ ಝಾ ಎಂಬವರು ಪ್ರೊಫೆಸರ್ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ …

Read More »

ಜಾರಕಿಹೊಳಿ ಮನೆಯಲ್ಲಿ ಸಚಿವಾಕಾಂಕ್ಷಿಗಳ ರಹಸ್ಯ ಸಭೆ

ಬೆಂಗಳೂರು: ಉಪಚುನಾವಣೆ ಫಲಿತಾಂಶ ಬೆನ್ನಲ್ಲೇ ಬಿಜೆಪಿಯಲ್ಲಿ ರಹಸ್ಯ ಸಭೆ ನಡೆಸಲಾಗಿದ್ದು, ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ ಸೇರಿದ ಸಚಿವಾಕಾಂಕ್ಷಿಗಳು ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ. ಸಚಿವಾಕಾಂಕ್ಷಿಗಳಾದ ಮುರುಗೇಶ್ ನಿರಾಣಿ, ಶಂಕರ್ ಪಾಟೀಲ್ ಮುನೇನಕೊಪ್ಪ, ರಾಜುಗೌಡ, ರೇಣುಕಾಚಾರ್ಯ, ಶಾಸಕ ಬೆಳ್ಳಿ ಪ್ರಕಾಶ್ ಸೇರಿದಂತೆ ಹಲವು ಸಚಿವಾಕಾಂಕ್ಷಿಗಳು ಸಭೆ ನಡೆಸಿದ್ದಾರೆ. ಸಚಿವ ಸಂಪುಟ ಪುನಾರಚನೆ ವಿಚಾರದ ಬಗ್ಗೆ ಚರ್ಚೆ ನಡೆಸಲಾಗಿದೆ. ಸಿಎಂಗೆ ಸಚಿವ ಸ್ಥಾನದ ಬೇಡಿಕೆ ಸಲ್ಲಿಸುವುದು, ಹಾಲಿ ಸಚಿವರನ್ನು ಕೈ …

Read More »

ಹೊಸ ಸಚಿವರಿಗೆ ಅವಕಾಶ ನೀಡಲು ಸಚಿವ ಸಂಪುಟವನ್ನು ಪುನರ್ ರಚನೆ ಮಾಡಬೇಕು:ಎಚ್.ವಿಶ್ವನಾಥ್

ಬೆಂಗಳೂರು: ಸಾರ್ವತ್ರಿಕ ಚುನಾವಣೆಗೆ ಹೋಗಬೇಕೆಂದರೆ ಹೊಸ ಮುಖಗಳು ಬೇಕು. ಹೀಗಾಗಿ ಹೊಸ ಸಚಿವರಿಗೆ ಅವಕಾಶ ನೀಡಲು ಸಚಿವ ಸಂಪುಟವನ್ನು ಪುನರ್ ರಚನೆ ಮಾಡಬೇಕು ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಗ್ರಹಿಸಿದ್ದಾರೆ. ಹಾಲಿ ಸಚಿವರನ್ನಿಟ್ಟುಕೊಂಡು ಹೋದರೆ ಮುಂದಿನ ಸಾರ್ವತ್ರಿಕ ಚುನಾವಣೆ ಗೆಲ್ಲುವುದು ಕಷ್ಟ ಎಂದು ಹೇಳುವ ಮೂಲಕ ಪರೋಕ್ಷವಾಗಿ ಹಾಲಿ ಸಚಿವರಿಗೆ ಎಚ್.ವಿಶ್ವನಾಥ್ ಟಾಂಗ್ ನೀಡಿದ್ದಾರೆ. ಉಪಚುನಾವಣೆ ಸಹಜವಾಗಿ ಸರ್ಕಾರದ ಪರವಾಗಿ ಬರುತ್ತದೆ. ಉಪಚುನಾವಣೆಗಳನ್ನು ಸರ್ಕಾರಗಳು ನಡೆಸುತ್ತವೆ. ಆದರೆ ಸಾರ್ವತ್ರಿಕ ಚುನಾವಣೆ …

Read More »