Breaking News

ಕೆಎಸ್​ಆರ್​ಟಿಸಿ 4 ನಿಗಮಗಳಿಗೆ ಹೆಚ್ಚುವರಿ ಹಣ ನೀಡುವಂತೆ ಬಸವರಾಜ ಬೊಮ್ಮಾಯಿಗೆ ಮನವಿ

ಬೆಂಗಳೂರು: ಕೆಎಸ್​ಆರ್​ಟಿಸಿ ಸಂಸ್ಥೆ ಕುರಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ಮುಕ್ತಾಯಗೊಂಡಿದೆ. ವಿಧಾನಸೌಧದಲ್ಲಿ ಗುರುವಾರ ನಡೆದಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಸಭೆ ಅಂತ್ಯಗೊಂಡಿದೆ. ಸಭೆಯಲ್ಲಿ 4 ನಿಗಮಗಳಿಗೆ ಹೆಚ್ಚುವರಿಯಾಗಿ ಹಣ ನೀಡುವಂತೆ ಮನವಿ ಮಾಡಲಾಗಿದೆ. ಕೆಎಸ್ಆರ್‌ಟಿಸಿ ನಿಗಮದಿಂದ ಸಿಎಂ ಬೊಮ್ಮಾಯಿಗೆ ಹೀಗೆ ಮನವಿ ಮಾಡಲಾಗಿರುವ ಬಗ್ಗೆ ತಿಳಿದುಬಂದಿದೆ. ವಾರ್ಷಿಕ 2,500 ಕೋಟಿ ರೂಪಾಯಿ ಅನುದಾನ ನೀಡಲಾಗುತ್ತಿತ್ತು. 3 ಸಾವಿರ ಕೋಟಿ ರೂಪಾಯಿ ಅನುದಾನಕ್ಕೆ ಕೆಎಸ್​ಆರ್​ಟಿಸಿ ನಿಗಮ ಬೇಡಿಕೆ ಇಟ್ಟಿದೆ. ಆರ್ಥಿಕ ಪರಿಸ್ಥಿತಿ …

Read More »

ಓಂ ಬಿರ್ಲಾರಿಂದ ಜಂಟಿ ಅಧಿವೇಶನ: ಬಿಜೆಪಿಯಿಂದ ಕೆಟ್ಟ ಸಂಪ್ರದಾಯ; ಕಾರ್ಯಕ್ರಮ ಬಹಿಷ್ಕಾರಕ್ಕೆ ಕಾಂಗ್ರೆಸ್ ನಿರ್ಧಾರ

ಬೆಂಗಳೂರು: ಓಂ ಬಿರ್ಲಾ ಕಾರ್ಯಕ್ರಮಕ್ಕೆ ಕಾಂಗ್ರೆಸ್​ನಿಂದ ಬಹಿಷ್ಕಾರ ಹಾಕಲಾಗಿದೆ. ವಿಧಾನಸಭೆಯಲ್ಲಿ ಜಂಟಿ ಅಧಿವೇಶನಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಲೋಕಸಭೆ ಸ್ಪೀಕರ್​ ಓಂ ಬಿರ್ಲಾರಿಂದ ಜಂಟಿ ಅಧಿವೇಶನ ನಡೆಸುವ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದೆ. ಆಡಳಿತಾರೂಢ ಬಿಜೆಪಿಯಿಂದ ಕೆಟ್ಟ ಸಂಪ್ರದಾಯ ಆರೋಪ ಆರಂಭವಾಗಲಿದೆ. ಸರ್ಕಾರ ವಿಧಾನಸೌಧದಲ್ಲಿ ಇತಿಹಾಸ ಸೃಷ್ಟಿಸಲು ಹೊರಟಿದೆ ಎಂದು ಈ ಕ್ರಮದ ಬಗ್ಗೆ ವಿಧಾನಸೌಧದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಹೇಳಿಕೆ ನೀಡಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕಾರ್ಯಕ್ರಮ …

Read More »

ವಿಶ್ಲೇಷಣೆ: ಸದನದ ಕಲಾಪ ಮತ್ತು ಹಳೆಯ ವರಸೆ

ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ರಾಜ್ಯ ಸರ್ಕಾರದ ಗಮನ ಸೆಳೆಯುವ ಉದ್ದೇಶ ಹೊತ್ತು ಕಾಂಗ್ರೆಸ್ ಪಕ್ಷದ ನಾಯಕರು ಇತ್ತೀಚೆಗೆ ವಿಧಾನಸೌಧ ತಲುಪಲು ಚಕ್ಕಡಿ ಏರಿದರು, ಸೈಕಲ್ ತುಳಿದರು. ಬೆಲೆ ಏರಿಕೆ ಸಂಕಟವನ್ನು ಸರ್ಕಾರಕ್ಕೆ ತಲುಪಿಸುವುದರ ಜೊತೆಗೆ ತಮ್ಮ ಜನಪರ ಕಾಳಜಿಯನ್ನು ಮತದಾರರಿಗೆ ಮುಟ್ಟಿಸುವ ಆಶಯ ಅವರ ಕಾರ್ಯಕ್ರಮದಲ್ಲಿ ಅಡಕವಾಗಿದ್ದು ರಹಸ್ಯವೇನಲ್ಲ. ಆದರೆ, ಮುಂದಿನ ಮುಖ್ಯಮಂತ್ರಿ ಹುದ್ದೆಗೆ ಸ್ಪರ್ಧೆಗಿಳಿದಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್‌ …

Read More »

ಅತ್ಯಾಚಾರ ಪ್ರಕರಣ: ವಿಧಾನಸಭೆಯಲ್ಲಿ ಸ್ಪೀಕರ್ ಕಾಗೇರಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಡುವೆ ಮಾತಿನ ಸಮರ

ಬೆಂಗಳೂರು: ಮೈಸೂರು ಅತ್ಯಾಚಾರ ಪ್ರಕರಣ ಸಂಬಂಧ ವಿಧಾನಸಭೆ ಕಲಾಪ ಚರ್ಚೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನಡುವೆ ಮಾತಿನ ಸಮರ ನಡೆಯಿತು. ಸ್ಪೀಕರ್ ಕಾಗೇರಿ, ನೀವು ಪ್ರತಿಯೊಂದಕ್ಕೂ ಹೀಗೆ ಗದ್ದಲ ಮಾಡಿಕೊಂಡು ಇರಿ. ನಾನು ನಿಮ್ಮ ಗದ್ದಲ ಕೇಳಿಕೊಂಡು ಇರ್ತೀನಿ. ಉಳಿದ ಸದಸ್ಯರು ಮಾಡುವಂತಿಲ್ಲ. ಬಿಲ್ ಬರುವಂಗಿಲ್ಲ. ಬರಿ ನಿಮ್ಮ ಮಾತು ಕೇಳಿಕೊಂಡು ಇರ್ಬೇಕಾ ಅಂತ ಸದಸ್ಯರು ಬಂದು ನನಗೆ ಕೇಳುತ್ತಿದ್ದಾರೆ. ನೀವು ಈ ರೀತಿ …

Read More »

ಗೋಕಾಕ : ಗ್ರಾಮ ಪಂಚಾಯತಗಳಲ್ಲಿ ಕಡ್ಡಾಯವಾಗಿ ಸಿ ಸಿ ಟಿವಿ ಕ್ಯಾಮೆರಾ ಅಳವಡಿಸಿಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿಕೆ.

ಗೋಕಾಕ : ‘ ಸುರಕ್ಷತೆಯ ದೃಷ್ಟಿಯಿಂದ ಯಮಕನಮರಡಿ ಕ್ಷೇತ್ರದ ಪ್ರತಿ ಗ್ರಾಮ ಪಂಚಾಯ್ತಿಗಳಿಗೆ ಸಿಸಿ ಕ್ಯಾಮರ್ ಅಳವಡಿಸಲು ಸೂಚನೆ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ್ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಯಮಕನಮರಡಿ ಗ್ರಾಮದ ಪ್ರಮುಖ ರಸ್ತೆ ಹಾಗೂ ಗ್ರಾಮ ಪಂಚಾಯ್ತಿಗೆ ಈಗಾಗಲೇ ಸಿಸಿ ಕ್ಯಾಮರ್ ಅಳವಡಿಸಲಾಗಿದೆ. ಅದೇ ರೀತಿ ಕ್ಷೇತ್ರದ 33 ಗ್ರಾಮ ಪಂಚಾಯ್ತಿಗೆ ಅಳವಡಿಸಲು ಸೂಚನೆ ನೀಡಲಾಗುತ್ತಿದೆ ಎಂದರು.   …

Read More »

ಅರ್ಚಕರಿಗೆ, ದೇಗುಲ ನೌಕಕರಿಗೆ ಆರೋಗ್ಯ ವಿಮೆ ಜಾರಿಗೆ ಶೀಘ್ರ ಕ್ರಮ: ಶಶಿಕಲಾ ಜೊಲ್ಲೆ

ಬೆಂಗಳೂರು: ಮುಜರಾಯಿ ಇಲಾಖೆಯ ಆಡಳಿತ ಯಂತ್ರ ಚುರುಕುಗೊಳಿಸಲು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆಯವರು ಮುಂದಾಗಿದ್ದಾರೆ. ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಇಲಾಖೆಯ ಕಾರ್ಯ ಚಟುವಟಿಕೆಗಳಿಗೆ ವೇಗ ಹೆಚ್ಚಿಸಿ, ತ್ವರಿತಗತಿಯಲ್ಲಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವ ಅರ್ಚಕರು ಹಾಗೂ ದೇವಾಲಯ ನೌಕರರು ಆರೋಗ್ಯ ಸಮಸ್ಯೆಗೆ ಒಳಗಾದರೆ ಅವರಿಗೆ ರಕ್ಷಣೆ ಒದಗಿಸಲು …

Read More »

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬ್ಯಾನರ್ ಅಂಟಿಸಿ ಆಕ್ರೋಶ..!

ಬೆಳಗಾವಿ: ಕಾಂಗ್ರೆಸ್​ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಹಾಳಾದ ರಸ್ತೆಯಿಂದ ಬೇಸತ್ತ ಕೆಲ ಅಪರಿಚಿತರು ವ್ಯಂಗ್ಯ ಭಾಷೆಯ ಮೂಲಕ ಅಲ್ಲಲ್ಲಿ ಶಾಸಕಿ ವಿರುದ್ಧ ಬ್ಯಾನರ್​ ಹಾಕಿ ಪ್ರತಿಭಟಿಸಿದ್ದಾರೆ. ಗ್ರಾಮೀಣ ಮತಕ್ಷೇತ್ರದಲ್ಲಿ ಶಾಸಕಿಯ ವಿರುದ್ಧ ಬ್ಯಾನರ್ ವಾರ್ ಶುರುವಾಗಿದ್ದು ಅಪರಿಚಿತರು ಉಚ್ಚಗಾಂವ್, ತಾರಿಹಾಳ ಬೆಳಗಾವಿ ರಸ್ತೆಯಲ್ಲಿ ಬ್ಯಾನರ್ ಹಾಕಿ ಲೇವಡಿ ಮಾಡಿದ್ದಾರೆ. ಬ್ಯಾನರ್​ನಲ್ಲಿ ಒಂದು ಭಾಗದಲ್ಲಿ ಹಾಳಾದ ರಸ್ತೆಯ ಫೋಟೋ ಇನ್ನೊಂದೆಡೆ ವ್ಯಕ್ತಿಯೊರ್ವ ತಲೆ ಮೇಲೆ ಕೈಹೊತ್ತು ಕುಳಿತಿರುವ ಚಿತ್ರ ಹಾಕಲಾಗಿದೆ.   …

Read More »

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 4.29 ಕೋಟಿಗೂ ಹೆಚ್ಚು ಬಳಕೆಯಾಗದ ಕೋವಿಡ್ -19 ಲಸಿಕೆ ಡೋಸ್‌ಗಳು ಇನ್ನೂ ಲಭ್ಯವಿವೆ

ಹೊಸದಿಲ್ಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 4.29 ಕೋಟಿಗೂ ಹೆಚ್ಚು ಬಳಕೆಯಾಗದ ಕೋವಿಡ್ -19 ಲಸಿಕೆ ಡೋಸ್‌ಗಳು ಇನ್ನೂ ಲಭ್ಯವಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ತಿಳಿಸಿದೆ.”80.67 ಕೋಟಿ (80,67,26,335) ಕ್ಕಿಂತ ಹೆಚ್ಚು ಲಸಿಕೆ ಡೋಸ್‌ಗಳನ್ನು ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಿಗೆ ಭಾರತ ಸರ್ಕಾರದ ಮೂಲಕ (ಉಚಿತ ಚಾನೆಲ್) ಮತ್ತು ನೇರ ರಾಜ್ಯ ಸಂಗ್ರಹಣೆ ವರ್ಗದ ಮೂಲಕ ಒದಗಿಸಲಾಗಿದೆ,” ಸರ್ಕಾರವು ವೇಗವನ್ನು ಹೆಚ್ಚಿಸಲು ಮತ್ತು ದೇಶಾದ್ಯಂತ ಕೋವಿಡ್ -19 …

Read More »

ಕಾಂಗ್ರೆಸ್ ನ 20 ಶಾಸಕರು ಬಿಜೆಪಿಗೆ ಸೇರಲು ಸಿದ್ಧ : ನಳಿನ್ ಕುಮಾರ್ ಕಟೀಲ್ ಹೊಸ ಬಾಂಬ್

ಬೆಂಗಳೂರು : ಕಾಂಗ್ರೆಸ್ ನ 20 ಶಾಸಕರು ಬಿಜೆಪಿಗೆ ಸೇರಲು ಸಿದ್ದರಾಗಿದ್ದಾರೆ. ಅದರ ಜವಾಬ್ದಾರಿಯನ್ನು ಸಚಿವ ಮುನಿರತ್ನ ಅವರಿಗೆ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.   ಚೌಡಯ್ಯ ಮೆಮೊರಿಯಲ್ ಹಾಲ್ ನಲ್ಲಿ ಏರ್ಪಡಿಸಿದ್ದ ಒಬಿಸಿ ಮೋರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಹಿಂದುಳಿದ ವರ್ಗದವರು ದೂರ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಹಿಂದುಳಿದ ವರ್ಗಗಳ ಅನೇಕ ನಾಯಕರು ಬಿಜೆಪಿ ಸೇರಲಿದ್ದಾರೆ. ಹಿಂದುಳಿದ ವರ್ಗದವರು …

Read More »

ಮೈಶುಗರ್ ಕಾರ್ಖಾನೆ ಖಾಸಗೀಕರಣ ಮಾಡಿದರೆ ರಕ್ತಪಾತ: ಜೆಡಿಎಸ್ ಶಾಸಕ

ಬೆಂಗಳೂರು, ಸೆಪ್ಟೆಂಬರ್ 22: ಮಂಡ್ಯ ಮೈಶುಗರ್ ಕಾರ್ಖಾನೆ ಖಾಸಗೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕ ಸುರೇಶ್‌ ಗೌಡ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, “ಕಾರ್ಖಾನೆ ಖಾಸಗೀಕರಣ ಮಾಡಿದರೆ ರಕ್ತಪಾತವಾಗುತ್ತದೆ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಮೈಶುಗರ್ ಕಾರ್ಖಾನೆ ಖಾಸಗೀಕರಣದ ಬಗ್ಗೆ ಮಾತನಾಡಿದ ಅವರು, “ಮಂಡ್ಯ ಮೈಶುಗರ್ ಕಾರ್ಖಾನೆ ವಿಚಾರದಲ್ಲಿ ಸರ್ಕಾರ ತಮಾಷೆ ಮಾಡಬಾರದು. ಸರ್ಕಾರಕ್ಕೆ ನಿರ್ವಹಣೆ ಮಾಡಲು ಏಕೆ ಸಾಧ್ಯವಾಗುತ್ತಿಲ್ಲ? ನಿಮಗೆ ಮಾಡಲು ಸಾಧ್ಯವಾಗದಿದ್ದರೆ ನಮಗೆ ಬಿಟ್ಟುಕೊಡಿ. …

Read More »