Breaking News

ರೈತರ ಆದಾಯ ದ್ವಿಗುಣಕ್ಕೆ ಎರಡನೇ ಕೃಷಿ ನಿರ್ದೇಶನಾಲಯ ಆರಂಭ : ಸಿಎಂ

ಬೆಂಗಳೂರು ;ರಾಜ್ಯದ ರೈತರ ಆದಾಯ ದ್ವಿಗುಣಗೊಳಿಸಲು ರಾಜ್ಯಸರ್ಕಾರ ಹಲವಾರು ಕ್ರಮಗಳನ್ನು ಜಾರಿಗೊಳಿಸಲಿದ್ದು, ರೈತರ ಉತ್ಪನ್ನಗಳ ಮೌಲ್ಯ ಹೆಚ್ಚಿಸಲು 2ನೇ ಕೃಷಿ ನಿರ್ದೇಶನಾಲಯವನ್ನು ಅಸ್ಥಿತ್ವಕ್ಕೆ ತರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ತೋಟಗಾರಿಕೆ, ಹೈನುಗಾರಿಕೆ, ರೇಷ್ಮೆ, ಪಶುಸಂಗೋಪನೆ, ಡೈರಿ, ಮೀನುಗಾರಿಕೆ ಒಳಗೊಂಡಂತೆ ಆಗ್ರೋ ಉತ್ಪನ್ನಗಳ ಸಂಸ್ಕರಣೆಗೆ ಒತ್ತು ನೀಡಿ ಉತ್ಪನ್ನಗಳ ಮೌಲ್ಯ ಹೆಚ್ಚಿಸಲು ವಿಶೇಷ ಕಾರ್ಯಪಡೆಯನ್ನು ರಚಿಸಲಾಗುವುದು. ಇದಕ್ಕೆ ಸೆಕೆಂಡರಿ ಅಗ್ರಿಕಲ್ಚರ್ ಡೈರೆಕ್ಟರೇಟ್ ಎಂದು ಹೆಸರಿಟ್ಟು ಕೃಷಿಯಲ್ಲಿ ದೊಡ್ಡ ಬದಲಾವಣೆ ಮಾಡುವ ಮೂಲಕ …

Read More »

2021-22ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನ

ಬೆಳಗಾವಿ: ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿಯ ಮಾದಿಗ ಮತ್ತು ಸಂಬಂಧಿತ ಸಮುದಾಯದವರ ಆರ್ಥಿಕ ಸಬಲೀಕರಣಕ್ಕಾಗಿ 2021-22ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್ ಸಹಯೋಗದೊಂದಿಗೆ), ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ (ಮಹಿಳಾ ಸ್ವ-ಸಹಾಯ ಗುಂಪುಗಳಿಗೆ), ಗಂಗಾ ಕಲ್ಯಾಣ ಯೋಜನೆ (ವೈಯಕ್ತಿಕ) ಮತ್ತು ಭೂ …

Read More »

ಇಂಡಿಯನ್ ಐಡಲ್ 12: ಪ್ರಶಸ್ತಿ ವಿಜೇತ ಪವನ್ ದೀಪ್ ಉತ್ತರಾಖಂಡ್ ನ ಬ್ರ್ಯಾಂಡ್ ಅಂಬಾಸಿಡರ್

ನವದೆಹಲಿ: ಇಂಡಿಯನ್ ಐಡಲ್ ನ 12ನೇ ಆವೃತ್ತಿಯ ರಿಯಾಲಿಟಿ ಶೋನ ವಿನ್ನರ್ ಪವನ್ ದೀಪ್ ರಾಜನ್ ಅವರನ್ನು ಉತ್ತರಾಖಂಡ್ ನ ಕಲೆ, ಪ್ರವಾಸೋದ್ಯಮ ಮತ್ತು ಸಂಸ್ಕೃತಿಯ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಬುಧವಾರ(ಆಗಸ್ಟ್ 25) ಘೋಷಿಸಿದ್ದಾರೆ. ಪವನ್ ದೀಪ್ ರಾಜನ್ ಇಂದು ಮುಖ್ಯಮಂತ್ರಿ ಪುಷ್ಕರ್ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಈ ಘೋಷಣೆ ಹೊರಬಿದ್ದಿರುವುದಾಗಿ ವರದಿ ತಿಳಿಸಿದೆ. ತಮ್ಮ …

Read More »

ಯತ್ನಾಳ್ ವಿರುದ್ಧ ಕಾನೂನು ಕ್ರಮಕ್ಕೆ ಸಲೀಂ ಅಹ್ಮದ್ ಆಗ್ರಹ

ಬೆಂಗಳೂರು: ‘ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಮಾತನಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆಗ್ರಹಿಸಿದ್ದಾರೆ. ಯತ್ನಾಳ್ ಅವರ ವಿರುದ್ಧ ಪ್ರತಿಭಟನೆಗೆ ಮಾಡಿದ್ದ ಕಾರ್ಯಕರ್ತರು ಪೊಲೀಸರ ವಶದಲ್ಲಿದ್ದ ಕಾರಣ ವಿಧಾನಸೌಧ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಯತ್ನಾಳ್ ಅವರ ಮಾತುಗಳು, ಅವರ ವ್ಯಕ್ತಿತ್ವ ಹಾಗೂ ಬಿಜೆಪಿಯ ಮನಸ್ಥಿತಿಯನ್ನು ತೋರುತ್ತದೆ’ ಎಂದು ಆಕ್ರೋಶ …

Read More »

ಹಾಸ್ಟೆಲ್​ ಕೋಣೆಯಲ್ಲೇ ನೇಣಿಗೆ ಶರಣಾದ ಎಂಟೆಕ್​ ವಿದ್ಯಾರ್ಥಿನಿ: ಡೆತ್​ನೋಟ್​ನಲ್ಲಿತ್ತು ನೋವಿನ ಮಾತು

ಹೈದರಾಬಾದ್​: ಇಲ್ಲಿನ ಕೇಂದ್ರೀಯ ವಿಶ್ವವಿದ್ಯಾಲಯದ ಎಂಟೆಕ್ ವಿದ್ಯಾರ್ಥಿನಿ ಆರ್​. ಮೌನಿಕಾ ಆತ್ಮಹತ್ಯೆ​ಯು ಇಡೀ ಕಾಲೇಜನ್ನು ಆಘಾತಕ್ಕೆ ದೂಡಿದೆ. ಮೌನಿಕಾ ನ್ಯಾನೊತಂತ್ರಜ್ಞಾನದ ವಿದ್ಯಾರ್ಥಿನಿಯಾಗಿದ್ದಳು. ಈಕೆ ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಪರುಪಲ್ಲಿ ಗ್ರಾಮದ ನಿವಾಸಿ. ಸೋಮವಾರ ಸಂಜೆ ಹಾಸ್ಟೆಲ್​ನ ಆಕೆಯ ರೂಮಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಇದಕ್ಕೂ ಮುನ್ನ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದಾದರೂ ಅಷ್ಟರಲ್ಲಾಗಲೇ ಆಕೆ ಮೃತಪಟ್ಟಿದ್ದಳು. ವಿಶ್ವವಿದ್ಯಾಲಯವು ಗಾಚಿಬೌಲಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಬರುತ್ತದೆ. ಪ್ರಕರಣ ದಾಖಲಿಸಿಕೊಂಡಿರುವ …

Read More »

ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಜನ ಅಸ್ವಸ್ಥ

ದಾವಣಗೆರೆ, ಆ.25- ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ದಾವಣಗೆರೆ ಜಿಲ್ಲಾಯ ಜಗಳೂರು ತಾಲೂಕಿನ ಬೆಣ್ಣೆಹಳ್ಳಿ ಗ್ರಾಮದಲ್ಲಿ ಜರುಗಿದೆ. ಅದೃಷ್ಟವಷಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಬೆಣ್ಣೆಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಮನೆಯಲ್ಲಿ ಸೀಮಂತ ಕಾರ್ಯಕ್ರಮ ಜರುಗಿದ್ದು, ಈ ವೇಳೆ ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಹೋಳಿಗೆ-ಸೀಕರಣೆ ಸಿಹಿ ಅಡುಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ನೂರಾರು ಜನರು ಸಿಹಿಯೂಟ ಸೇವಿಸಿದ್ದರು. ಆಹಾರ ಸೇವಿಸಿದ ಬೆನ್ನಲ್ಲೇ 100ಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿ …

Read More »

ಸಿಲಿಕಾನ್ ಸಿಟಿಯಲ್ಲಿ ಸುರಿದ ಧಾರಾಕಾರ ಮಳೆಗೆ ಹೆಗಡೆ ನಗರದ ಬ್ರಿಡ್ಜ್ ಬಳಿ ರಸ್ತೆ ಕುಸಿತ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಂಜೆ ಸುರಿದ ಧಾರಾಕಾರ ಮಳೆಗೆ ಹೆಗಡೆ ನಗರದ ಬ್ರಿಡ್ಜ್ ಬಳಿ ರಸ್ತೆ ಕುಸಿತಗೊಂಡಿದೆ. ಹೆಗಡೆನಗರದ ಬ್ರಿಡ್ಜ್ ಬಳಿಯ ಎರಡ್ಮೂರು ಕಡೆ ಸುಮಾರು ಎಂಟು ಅಡಿ ಆಳಕ್ಕೆ ರಸ್ತೆ ಕುಸಿದಿದೆ. ಪರಿಣಾಮ ಸ್ಟೀಲ್ ಕಂಬಿ ಸಾಗಿಸುತ್ತಿದ್ದ ಟ್ರಕ್ವೊಂದು ರಸ್ತೆ ಮಧ್ಯದಲ್ಲೇ ಪಲ್ಟಿಯಾಗಿದೆ. ರಸ್ತೆಯಲ್ಲಿ ಒಳಚರಂಡಿ ಹಾಗೂ ಕಾವೇರಿ ಪೈಪ್ ಲೈನ್ ಅಳವಡಿಕೆ ಕಾಮಗಾರಿ ನಡೆಯುತ್ತಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಕಳಪೆ ಕಾಮಗಾರಿಯಿಂದ ರಸ್ತೆ ಕುಸಿದಿರುವ ಶಂಕೆ ವ್ಯಕ್ತವಾಗಿದೆ.

Read More »

ಸೀಮಂತ ಕಾರ್ಯಕ್ರಮದಲ್ಲಿ ವಿಷ ಆಹಾರ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ದಾವಣಗೆರೆ: ವಿಷ ಆಹಾರ ಸೇವಿಸಿ 100ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ದುರ್ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಬೆಣ್ಣೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಣ್ಣೆಹಳ್ಳಿ ಗ್ರಾಮದ ಮನೆ ಒಂದರಲ್ಲಿ ಸೀಮಂತ ಕಾರ್ಯ ನಡೆದಿತ್ತು. ಈ ವೇಳೆ ನೂರಾರು ಜನರಿಗೆ ಸಿಹಿಯೂಟ ಹಾಕಲಾಗಿತ್ತು. ಊಟ ಸೇವಿಸಿದ 100ಕ್ಕೂ ಹೆಚ್ಚು ಮಂದಿಯಲ್ಲಿ ವಾಂತಿ-ಭೇದಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅಸ್ವಸ್ಥರೆಲ್ಲರನ್ನೂ ಬೆಣ್ಣೆಹಳ್ಳಿ ಪಿಎಚ್‌ಸಿ‌ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಲವರು …

Read More »

ಮೈಸೂರು: ವಿದ್ಯಾರ್ಥಿನಿ ಮೇಲೆ ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರ

ಮೈಸೂರು: ನಗರದ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮೈಸೂರಿನ ಹೆಲಿಪ್ಯಾಡ್ ಬಳಿಯ ವಾಟರ್ ಟ್ಯಾಂಕ್ ನ ಗುಡ್ಡದ ಬಳಿ ಗ್ಯಾಂಗ್ ರೇಪ್ ನಡೆದಿದೆ. ವಿದ್ಯಾರ್ಥಿನಿಯು ಸ್ನೇಹಿತನ ಜೊತೆ ಬೆಟ್ಟಕ್ಕೆ ತೆರಳಿದ್ದ ವೇಳೆ ಯುವಕರ ತಂಡ ಸಾಮೂಹಿಕ ಅತ್ಯಾಚಾರ ಎಸಗಿದೆ. ಸದ್ಯ ವಿದ್ಯಾರ್ಥಿನಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಘಟನೆ ಕುರಿತು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, …

Read More »

ಆರ್ಥಿಕತೆಯ ಗಂಧಗಾಳಿ ತಿಳಿಯದ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದಾದರೂ ಹೇಗೆ: ಬಿಜೆಪಿ

ಬೆಂಗಳೂರು: ‘ಆರ್ಥಿಕತೆಯ ಗಂಧಗಾಳಿ ಗೊತ್ತಿಲ್ಲದಂತೆ ವರ್ತಿಸುವ ಸಿದ್ದರಾಮಯ್ಯ ಅವರು ಅತಿ ಹೆಚ್ಚು ಅವಧಿಗೆ ಬಜೆಟ್ ಮಂಡಿಸಿದ್ದಾದರೂ ಹೇಗೆ ಎನ್ನುವ ಪ್ರಶ್ನೆ ಮೂಡುತ್ತಿದೆ’ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ‘ಸಿದ್ದರಾಮಯ್ಯ ಅವರೇ, ಕೈಗಾರಿಕೆ ಹಾಗೂ ಉತ್ಪಾದನಾ ಕ್ಷೇತ್ರದ ವೃದ್ಧಿಗೆ ಸಹಕಾರ ನೀಡದೆ ಇದ್ದರೆ ದೇಶದ ಪ್ರಗತಿ ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದೆ. ‘ಸಿದ್ದರಾಮಯ್ಯ ಅವರೇ, ಕೃಷಿ ಭೂಮಿ‌ ಖರೀದಿ‌ ಮಿತಿಗೆ ವಿನಾಯಿತಿ ನೀಡುವಾಗ ನೀವು ಯಾವ …

Read More »