Breaking News

ರಾಹುಲ್ ಗಾಂಧಿ ಆರೋಪಕ್ಕೆ ಸ್ಮೃತಿ ಇರಾನಿ ಸೇಡು ತೀರಿಸಿಕೊಂಡರು, ಈ ದೊಡ್ಡ ವಿಷಯವನ್ನು ಹೇಳಿದರು

ಕೇಂದ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಆರೋಪಗಳಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಹಣಕಾಸು ಸಚಿವರು ಮಂಗಳವಾರ ರಾಷ್ಟ್ರೀಯ ನೋಟು ರದ್ದುಗೊಳಿಸುವಿಕೆಯ ಪೈಪ್‌ಲೈನ್ ಘೋಷಣೆಯು ಸರ್ಕಾರವು ತನ್ನ ಮಾಲೀಕತ್ವವನ್ನು ನಗದೀಕರಣ ಪ್ರಕ್ರಿಯೆಯಲ್ಲಿ ಉಳಿಸಿಕೊಳ್ಳಲಿದೆ ಎಂದು ಸ್ಪಷ್ಟವಾಗಿ ಹೇಳಿದೆ. ರಾಜ್ಯದ ಮಾಲೀಕತ್ವವನ್ನು ಬದಲಿಸದೆ, ಎಲ್ಲಾ ರಾಜ್ಯಗಳು ಈ ಪ್ರಕ್ರಿಯೆಗೆ ತಮ್ಮ ನೋಡಲ್ ಅಧಿಕಾರಿಗಳನ್ನು ಘೋಷಿಸುತ್ತವೆ ಎಂದು ಗುರುತಿಸಲಾಗಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಈ ರೀತಿಯ ಹಣಗಳಿಕೆಯನ್ನು ಮಾಡುತ್ತಿರುವ ರಾಜ್ಯ ಸರ್ಕಾರಗಳು ಕೂಡ …

Read More »

ಮಾರ್ಕೆಟ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪಥಸಂಚಲನ

ಸೆಪ್ಟೆಂಬರ್ 3ರಂದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸುವ ಮೂಲಕ ಚುನಾವಣೆ ವೇಳೆ ಶಾಂತತೆ ಕಾಪಾಡುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.     ಹೌದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಅಲ್ಲದೇ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಂಬಂಧ ಮಂಗಳವಾರ ಸಂಜೆ ಆರು ಗಂಟೆ …

Read More »

ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್ ವಿತರಿಸಿದ ಸಂಸದ ಈರಣ್ಣ ಕಡಾಡಿ

ಮೂಡಲಗಿ: ಕೋವಿಡ್ ಎರಡನೇ ಅಲೆ ಕಾರಣ ಸಂಕಷ್ಠದಲ್ಲಿರುವ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯಿಂದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್‌ಗಳನ್ನು ಭಾರತ ಸರ್ಕಾರ ಕಾರ್ಮಿಕ ಮತ್ತು ಉದ್ಯೋಗ ಸಲಹಾ ಸಮಿತಿ ಸದಸ್ಯ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿತರಿಸಿದರು. ಮಂಗಳವಾರದಂದು ಅರಭಾಂವಿ ವಿಧಾನಸಭಾ ಮತಕ್ಷೇತ್ರದ ಲೋಳಸೂರ, ನಲ್ಲಾನಟ್ಟಿ, ಬಳೋಬಾಳ, ಹುಣಶ್ಯಾಳ ಪಿ.ಜಿ, ಮಸಗುಪ್ಪಿ …

Read More »

ಉಗ್ರರ ಉಪಟಳಕ್ಕೆ ಲಗಾಮು ಹಾಕುವುದು ಅನಿವಾರ್ಯ

ಅಫ್ಘಾನಿಸ್ತಾನವನ್ನು ತಾಲಿಬಾನಿ ಗುಂಪು ವಶಕ್ಕೆ ಪಡೆದ ಬಳಿಕ, ಕೆಲ ಗಂಟೆಗಳ ಕಾಲ ಶಾಂತಿ ಪ್ರಿಯವಾಗಿದ್ದೇವೆ ಎನ್ನುವ ಮಾತನ್ನು ಹೇಳಿಕೊಂಡಿತ್ತು. ಈ ಮಾತು ತಾಲಿಬಾನ್ ಉಗ್ರರು ಹೇಳಿದಾಗ ಬಹುತೇಕ ರಾಷ್ಟ್ರಗಳು ಒಪ್ಪದಿದ್ದರೂ, ಬಹುತೇಕ ರಾಷ್ಟ್ರಗಳು ತಟಸ್ಥ ನೀತಿಯನ್ನು ಅನುಸರಿಸಿದ್ದವು.   ಆದರೆ ಅಧಿಕಾರ ಹಿಡಿದ ಮರುದಿನವೇ ತಮ್ಮ ಉಪಟಳವನ್ನು ತೋರಿಸಲು ಶುರುಮಾಡಿರುವ ತಾಲಿಬಾನ್ ಇದೀಗ ವಿಶ್ವದ ದೊಡ್ಡಣ್ಣ ಅಮೆರಿಕಗೆ ಗುಡುವು ನೀಡಿದೆ. ಇದಿಷ್ಟೇ ಅಲ್ಲದ್ದೇ, ಅಫ್ಘಾನಿಸ್ತಾನ ದಲ್ಲಿ ಅರಾಜಕತೆ ಸೃಷ್ಟಿಸಿ, ನೂರಾರು …

Read More »

ದುರಹಂಕಾರದಿಂದ ಸಿಎಂ ಸ್ಥಾನ ಕಳೆದುಕೊಂಡ ಎಚ್‌ಡಿಕೆ: ಕೃಷಿ ಸಚಿವ ಬಿ.ಸಿ.ಪಾಟೀಲ

ಹಾವೇರಿ: ‘ಎಚ್‌.ಡಿ.ಕುಮಾರಸ್ವಾಮಿ ತಮ್ಮ ದುರಹಂಕಾರ ಮತ್ತು ಸ್ವೇಚ್ಛಾಚಾರದಿಂದ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದಾರೆಯೇ ಹೊರತು ಬೇರೆ ಯಾರೂ ಕಳೆದಿಲ್ಲ. ಸಿ.ಎಂ ಸ್ಥಾನ ಕಳೆದುಕೊಂಡ ನಂತರ ನೀರಿನಿಂದ ಹೊರಬಿದ್ದ ಮೀನಿನಂತಾಗಿದ್ದಾರೆ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿರುಗೇಟು ನೀಡಿದರು. ರಟ್ಟೀಹಳ್ಳಿ ತಾಲ್ಲೂಕಿನ ಮದಗ ಮಾಸೂರು ಕೆರೆಗೆ ಮಂಗಳವಾರ ಬಾಗಿನ ಅರ್ಪಿಸಿದ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿ, ಕುಮಾರಸ್ವಾಮಿ ಸ್ವಾರ್ಥ ಭಾವನೆಯಿಂದ ಎರಡು ಮೂರು ಜಿಲ್ಲೆಗಳಿಗೆ ಸೀಮಿತವಾದ ಆಡಳಿತ ನೀಡಿ, ಇಡೀ ಕರ್ನಾಟಕಕ್ಕೆ ಅನ್ಯಾಯ ಮಾಡಿದರು. …

Read More »

ಲಿಂಗಾಯತ ಧರ್ಮ ಹೋರಾಟದಿಂದ ಕಾಂಗ್ರೆಸ್ ಸೋತಿಲ್ಲ: ಎಂ.ಬಿ.ಪಾಟೀಲ್

ವಿಜಯಪುರ: ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಿಂದ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿಲ್ಲ. ಈ ಹೋರಾಟವೂ ನನ್ನಿಂದ ಆರಂಭಗೊಂಡಿಲ್ಲ.‌ ವೀರಶೈವ ಮಹಾಸಭೆ ಆರಂಭಿಸಿದ್ದ ಹೋರಾಟವನ್ನು ನಾವು ಮುಂದುವರೆಸಿದ್ದು ಎಂದು ಮಾಜಿ ಸಚಿವ, ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ನಮ್ಮದೇ ಪಕ್ಷದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ನಾನು ಮಾಡಿದ ನೀರಾವರಿ ಯೋಜನೆ ಸಾಧನೆ ಸಹಿಸಲು ಆಗುತ್ತಿಲ್ಲ. ಹೀಗಾಗಿ ಹೊಟ್ಟೆಕಿಚ್ಚಿನಿಂದ ಅನಗತ್ಯವಾಗಿ ನನ್ನ …

Read More »

ಎಫ್​ಎಸ್​ಎಲ್​ ವರದಿ ನೋಡಿ ಸಮಾಧಾನವಾಗಿದೆ: ಇಂದ್ರಜಿತ್ ಲಂಕೇಶ್

ಬೆಂಗಳೂರು: ಎಫ್​ಎಸ್​ಎಲ್ ಪರೀಕ್ಷೆಯಲ್ಲಿ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಸೇರಿದಂತೆ ಹಲವರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟ ಬೆನ್ನಲ್ಲೇ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿ ನಡೆಸಿ, ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಇವತ್ತಿನ ಎಫ್​ಎಸ್​ಎಲ್​ ವರದಿ ನೋಡಿ ಸಮಾಧಾನವಾಗಿದೆ. ನನಗೆ ಯಾರ ಮೇಲೂ ವೈಯಕ್ತಿಕ ದ್ವೇಷವಿಲ್ಲ. ಈ ಪ್ರಕರಣದಲ್ಲಿ ಇನ್ನೂ ದೊಡ್ಡದೊಡ್ಡ ತಿಮಿಂಗಿಲಗಳಿವೆ. ಅವರನ್ನು ಹಿಡಿಯುವುದು ಇನ್ನೂ ಬಾಕಿ ಇದೆ. ಈ ಬಗ್ಗೆ ಕೋರ್ಟ್​ನಲ್ಲಿ ತನಿಖೆ ನಡೆಯುತ್ತಿದೆ. ಹಾಗಾಗಿ, ನಾನು …

Read More »

ವಿಜಯಪುರ ಜನರಿಗೆ ಸಿಹಿಸುದ್ದಿ ಕೊಟ್ಟ ರೈಲ್ವೆ ಇಲಾಖೆ

ವಿಜಯಪುರ, ಆಗಸ್ಟ್ 24; ನೈಋತ್ಯ ರೈಲ್ವೆ ವಿಜಯಪುರ ಮತ್ತು ಮಂಗಳೂರಿನ ಜನರಿಗೆ ಸಿಹಿಸುದ್ದಿ ಕೊಟ್ಟಿದೆ. ಕೋವಿಡ್ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಮಂಗಳೂರು-ವಿಜಯಪುರ ರೈಲು ಸಂಚಾರ ಪುನಃ ಆರಂಭವಾಗಲಿದೆ. ಶೀಘ್ರದಲ್ಲೇ ರೈಲಿನ ವೇಳಾಪಟ್ಟಿ ಅಂತಿಮಗೊಳ್ಳಲಿದೆ. ರೈಲು ಪುನಃ ಆರಂಭಿಸಲು ನೈಋತ್ಯ ರೈಲ್ವೆ ಈಗಾಗಲೇ ಸಿದ್ಧತೆ ಆರಂಭಿಸಿದೆ. ಆದರೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರೈಲು ವೇಳಾಪಟ್ಟಿ ಪರಿಷ್ಕರಣೆ ಮಾಡುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವಗೆ ಮನವಿ ಮಾಡಿದ್ದಾರೆ.   …

Read More »

ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ; 577 ನಾಮಪತ್ರ ಸಲ್ಲಿಕೆ

ಧಾರವಾಡ, ಆಗಸ್ಟ್ 24; ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಒಟ್ಟು 577 ನಾಮಪತ್ರಗಳು ಸಲ್ಲಿಕೆಯಾಗಿವೆ. 82 ವಾರ್ಡ್‌ಗಳಿಂದ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದ್ದು, ಸೆಪ್ಟೆಂಬರ್ 6ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಸೋಮವಾರ ಕೊನೆಯ ದಿನವಾಗಿತ್ತು. ಸೋಮವಾರ 478 ನಾಮಪತ್ರಗಳು ಸಲ್ಲಿಕೆಯಾಗಿದ್ದು, 82 ವಾರ್ಡ್‌ಗಳಿಗೆ ಒಟ್ಟು 577 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಪ್ರಕಟಣೆಯಲ್ಲಿ ಹೇಳಿದ್ದಾರೆ.   …

Read More »

ಅಂತರರಾಜ್ಯ ಜಲವಿವಾದ: ದೆಹಲಿಯಲ್ಲಿ ಕಾನೂನು ತಜ್ಞರೊಂದಿಗೆ ಸಭೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಅಂತರರಾಜ್ಯ ಜಲ ವಿವಾದಗಳ ಬಗ್ಗೆ ನವದೆಹಲಿಯಲ್ಲಿ ಕಾನೂನು ತಜ್ಞರ ಜತೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಬೆಂಗಳೂರಿನ ತಮ್ಮ ನಿವಾಸದ ಬಳಿ ಅವರು ಮಾದ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್, ರಾಜ್ಯದ ಹಿರಿಯ ವಕೀಲರು, ಕಾನೂನು ತಜ್ಞರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ನೀರಾವರಿ ವಿವಾದದ ಬಗ್ಗೆ ರಾಜ್ಯದ ಮುಂದಿನ ನಡೆಯ ಬಗ್ಗೆ ಈ ಸಭೆಯಲ್ಲಿ ತೀರ್ಮಾನಿಸಲಾಗುವುದು. …

Read More »