Breaking News

ಪ್ರತಿ ತಿಂಗಳು ಪತಿಗೆ 2 ಸಾವಿರ ಜೀವನಾಂಶ ನೀಡಿ – 58ರ ಪತ್ನಿಗೆ ಕೋರ್ಟ್ ಆದೇಶ

ಲಕ್ನೋ: ಪತಿಗೆ ಪ್ರತಿ ತಿಂಗಳು 2 ಸಾವಿರ ರೂ. ಜೀವನಾಂಶ ನೀಡುವಂತೆ 58 ವರ್ಷದ ಮಹಿಳೆಗೆ ಕೋರ್ಟ್ ಆದೇಶಿಸಿದೆ.ಮುಜಾಫರ್ ನಗರ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದ್ದು, 62 ವರ್ಷದ ಕಿಶೋರಿ ಲಾಲ್ ಸೊಹಂಕರ್ ಟೀ ಅಂಗಡಿ ನಡೆಸುತ್ತಿದ್ದು, ಇವರಿಗೆ ಬೇರೆ ಯಾವುದೇ ಆದಾಯ ಮೂಲವಿಲ್ಲ. ಆದರೆ 58 ವರ್ಷದ ಇವರ ಪತ್ನಿ ಮುನ್ನಿ ದೇವಿ ಸೇನೆಯಿಂದ ನಿವೃತ್ತಿ ಹೊಂದಿದವರಾಗಿದ್ದಾರೆ. ಹೀಗಾಗಿ ಇವರಿಗೆ 12 ಸಾವಿರ ರೂ. ಪೆನ್ಷನ್ ಬರುತ್ತದೆ. ಇದರಲ್ಲಿ …

Read More »

ರ‍್ಯಾಶ್ ಡ್ರೈವಿಂಗ್ ಮಾಡುವವರಿಗೆ ಭಾರೀ ದಂಡದ ಜೊತೆ ಜೈಲು ಶಿಕ್ಷೆ

ಬೆಂಗಳೂರು: 4 ವರ್ಷ ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ. ಇಲ್ಲದಿದ್ರೆ ದಂಡದ ಜೊತೆ ಡಿಎಲ್ ಸಸ್ಪೆಂಡ್ ಮಾಡುವ ಆದೇಶ ಹೊರಡಿಸಿದ್ದ ಸಾರಿಗೆ ಇಲಾಖೆ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದೆ. ರ‍್ಯಾಶ್ ಡ್ರೈವಿಂಗ್ ಮಾಡುವವರಿಗೆ ಭಾರೀ ದಂಡದ ಜೊತೆ ಜೈಲು ಶಿಕ್ಷೆ ವಿಧಿಸುವ ಸಂಬಂಧ ಆದೇಶ ಹೊರಡಿಸಿದೆ. ವೀಲಿಂಗ್, ಸೈಲೆನ್ಸರ್ ಅಲ್ಟ್ರೇಷನ್, ಅಡ್ಡಾದಿಡ್ಡಿ ಚಾಲನೆ, ಅಪಾಯಕಾರಿ ಚಾಲನೆ ಮಾಡಿದರೆ ಅಪರಾಧ ದಂಡ ಸಂಹಿತೆ(ಸಿಆರ್‌ಪಿಸಿ) ಸೆಕ್ಷನ್ 107ರ ಆಡಿ ಕೇಸ್ …

Read More »

ಕೊರೊನಾ ವೈರಸ್‍ಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಲಸಿಕೆ ಸಿಗುವ ಸಾಧ್ಯತೆಯಿದೆ.

ನವದೆಹಲಿ: ಕೊರೊನಾ ವೈರಸ್‍ಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಲಸಿಕೆ ಸಿಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಈಗಲೇ ಕೇಂದ್ರ ಸರ್ಕಾರ ಲಸಿಕೆಗೆ ಹಂಚಿಕೆ ಮಾಡಲು ಸಿದ್ಧತೆ ನಡೆಸುತ್ತಿದೆ. ಯಾವೆಲ್ಲ ಲಸಿಕೆ? ಇಂಗ್ಲೆಂಡಿನ ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯದ ಲಸಿಕೆ ದೇಶದಲ್ಲಿ ಮೊದಲು ಲಭ್ಯವಾಗಬಹುದು. ಈಗಾಗಲೇ ಪುಣೆಯ ಸೀರಂ ಸಂಸ್ಥೆ ಮೂರನೇ ಹಂತದ ಲಸಿಕೆ ಪ್ರಯೋಗ ನಡೆಸಿದೆ. ಇದರ ಜೊತೆ ಜೊತೆಗೆ 30 ಕೋಟಿ ಡೋಸ್ ಉತ್ಪಾದಿಸಲು ತಯಾರಿ ನಡೆಸಿದೆ. ರಷ್ಯಾದ ಸ್ಟುಟ್ನಿಕ್ ವಿ ಲಸಿಕೆ …

Read More »

ವಿಜಯದಶಮಿ ಬಳಿಕ ಸಿಎಂ ಯಡಿಯೂರಪ್ಪ ಅಖಾಡಕ್ಕೆ!

ಬೆಂಗಳೂರು: ವಿಜಯದಶಮಿಯ ಬಳಿಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಚುನಾವಣಾ ಅಖಾಡಕ್ಕೆ ಇಳಿಯಲಿದ್ದಾರೆ. ಹೌದು. ಸೋಮವಾರದ ಬಳಿಕ ಬೈ ಎಲೆಕ್ಷನ್ ಕುರಿತು ಸಿಎಂ ಕ್ಯಾಂಪೇನ್ ಮಾಡಲಿದ್ದಾರೆ. ಆರ್ ಆರ್ ನಗರವೇ ಯಡಿಯೂರಪ್ಪ ಅವರ ಮೊದಲ ಟಾರ್ಗೆಟ್ ಆಗಿದೆ. ಎರಡು ಕ್ಷೇತ್ರಗಳನ್ನು ಕೂಡ ಬಿಜೆಪಿ ಹೈಕಮಾಂಡ್ ಟಾರ್ಗೆಟ್ ಮಾಡಿದ್ದು, ಹೀಗಾಗಿ ರಾಜ್ಯ ಬಿಜೆಪಿ ನಾಯಕರಿಂದ ಮೆಗಾ ಗೇಮ್ ಪ್ಲಾನ್ ನಡೀತಿದೆ. ಎರಡು ಕ್ಷೇತ್ರಗಳ ಮೇಲೆ ಕಣ್ಗಾವಲಿನ ಮೇಲೆ ಕಣ್ಗಾವಲು ಇಡಲಾಗಿದೆ. ಕಡೆಯ …

Read More »

ಆರ್.ಎಂ.ಪಿ ವೈದ್ಯ ಮಾಡಿದ ನಿರ್ಲಕ್ಷತೆ ಹಾಗೂ ಎಡವಟ್ಟಿನಿಂದ ಬಾಲಕ ತನ್ನ ಎರಡು ಕಣ್ಣನ್ನು ಕಳೆದುಕೊಳ್ಳುವಂತಾಗಿದೆ.

ಶಿವಮೊಗ್ಗ: ನಗುನಗುತ್ತಾ ಎಲ್ಲ ಮಕ್ಕಳಂತೆ ಆಡಿ, ಕುಣಿದು ಬೆಳೆಯಬೇಕಿದ್ದ ಮಗು ಇದೀಗ ತಂದೆಯನ್ನು ಬಿಟ್ಟು ಇರದಂತಹ ಸ್ಥಿತಿಗೆ ಬಂದಿದೆ. ಆರ್.ಎಂ.ಪಿ ವೈದ್ಯ ಮಾಡಿದ ನಿರ್ಲಕ್ಷತೆ ಹಾಗೂ ಎಡವಟ್ಟಿನಿಂದ ಬಾಲಕ ತನ್ನ ಎರಡು ಕಣ್ಣನ್ನು ಕಳೆದುಕೊಳ್ಳುವಂತಾಗಿದೆ. ಸೊರಬ ತಾಲೂಕಿನ ಚಿಟ್ಟೂರು ಗ್ರಾಮದ ನಿವಾಸಿ ಗಿರೀಶ್ ಅವರ ಪುತ್ರ ಶರತ್ ಹುಟ್ಟಿದಾಗ ಎಲ್ಲರಂತೆ ಕಣ್ಣು ಚೆನ್ನಾಗಿಯೇ ಇತ್ತು. ಎಲ್ಲರ ಜೊತೆ ಆಡಿ ಕುಣಿದು ನಲಿಯುತ್ತಿದ್ದ. ಆದರೆ ಇದೀಗ ತಂದೆಯ ಆಶ್ರಯ ಇದ್ದರೆ ಮಾತ್ರ …

Read More »

ಉತ್ತರ ಕರ್ನಾಟಕದ ಬಳಿಕ ರಣ ಮಳೆ ಈಗ ಬೆಂಗಳೂರನ್ನು ಅಟಕಾಯಿಸಿಕೊಂಡಿದೆ.

ಬೆಂಗಳೂರು: ಉತ್ತರ ಕರ್ನಾಟಕದ ಬಳಿಕ ರಣ ಮಳೆ ಈಗ ಬೆಂಗಳೂರನ್ನು ಅಟಕಾಯಿಸಿಕೊಂಡಿದೆ. ಸಿಲಿಕಾನ್ ಸಿಟಿಯಲ್ಲಿ ಚಿತ್ತಾ ಮಳೆ ತನ್ನ ಕುರುಡಾಟ ಪ್ರದರ್ಶಿಸುತ್ತಿದೆ. ಯಾವಾಗಂದ್ರೆ ಆಗ ಮಳೆ ಸುರಿದು ನಾನಾ ಅವಾಂತರ ಸೃಷ್ಟಿ ಮಾಡುತ್ತಿದೆ. ಕುರುಡ ಚಿತ್ತನ ಆಟಕ್ಕೆ ಬೆಂಗಳೂರು ಮಂದಿ ತತ್ತರಿಸಿ ಹೋಗಿದ್ದಾರೆ. ಬೆಂಗಳೂರಲ್ಲಿ ಬೆಳಗ್ಗೆಯಿಂದ ಸೂರ್ಯ ದರ್ಶನ ಆಗಿರಲಿಲ್ಲ. ಮಧ್ಯಾಹ್ನದವರೆಗೂ ನಗರದಲ್ಲಿ ಮೋಡಗಳ ಆಟ ಜೋರಿತ್ತು. ಆದರೆ ಆ ಬಳಿಕ ನಗರದಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯಿತು. ಅದ್ರಲ್ಲೂ ಸಂಜೆ …

Read More »

.ಗೂಂಡಾಗಿರಿಗೆ ಮತ್ತೊಂದು ಹೆಸರೇ ಡಿಕೆಶಿ ಮತ್ತು ಡಿಕೆ ಸುರೇಶ್. ಅವರ ಬಗ್ಗೆ ಇಡೀ ರಾಜ್ಯದ ಜನರಿಗೆ ಗೊತ್ತು ಎಂದ ಸಚಿವ ಕೆ.ಎಸ್ ಈಶ್ವರಪ್ಪ

ದಾವಣಗೆರೆ: ಗೂಂಡಾಗಿರಿಗೆ ಮತ್ತೊಂದು ಹೆಸರೇ ಡಿಕೆಶಿ ಮತ್ತು ಡಿಕೆ ಸುರೇಶ್. ಅವರ ಬಗ್ಗೆ ಇಡೀ ರಾಜ್ಯದ ಜನರಿಗೆ ಗೊತ್ತು ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹಿರೇಕಲ್ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಆರ್ ಆರ್ ನಗರದಲ್ಲಿ ಬಿಜೆಪಿಯು ಕಾಂಗ್ರೆಸ್ ಅಭ್ಯರ್ಥಿ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿ, ನಾವು ದೌರ್ಜನ್ಯ ಮಾಡ್ತಾ ಇದ್ದೀವಿ. ಅವರು ತಪಸ್ಸು ಮಾಡ್ತಾ ಇದ್ದಾರೆ ಪಾಪಾ. ಗೂಂಡಾಗಿರಿಗೆ ಮತ್ತೊಂದು ಹೆಸರೇ …

Read More »

ಮೂಡಲಗಿ ಪುರಸಭೆ ನೂತನ ಅಧ್ಯಕ್ಷರಾಗಿ ಹಣಮಂತ ಗುಡ್ಲಮನಿ ಹಾಗೂ ಉಪಾಧ್ಯಕ್ಷರಾಗಿ ರೇಣುಕಾ ಹಾದಿಮನಿ ಅವಿರೋಧ ಆಯ್ಕೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ.

ಮೂಡಲಗಿ: ಬಹುನಿರಕ್ಷಿತ ಕುತುಹಲಕ್ಕೆ ಕಾರಣವಾಗಿದ ಸ್ಥಳೀಯ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ, ಹಣಮಂತ ಗುಡ್ಲಮನಿ ಹಾಗೂ ರೇಣುಖಾ ಹಾದಿಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಡಿ.ಜೆ. ಮಹಾತ್ ಪ್ರಕಟಣೆಯಲ್ಲಿ ತಿಳಿಸಿದರು. ಶುಕ್ರವಾರ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಕುರಿತು ಚುನಾವಣಾ ಪ್ರಕೀಯೇಗಳು ಜರುಗಿದವು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದರಂತೆ ಚುನಾವಣಾ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧವಾಗಿ ಎರಡು ಸ್ಥಾನಗಳಿಗೆ ಚುನಾವಣಾ ಆಯ್ಕೆ ಪ್ರಕೀಯೇ ಜರುಗಿತು.   ನೂತನ …

Read More »

ನಾನೇನು ಬಂಡೆ, ಕನಕಪುರ ಬಂಡೆ ಅಂತ ಹೆಸರು ಇಟ್ಕೊಂಡಿಲ್ಲ. ಬಂಡೆ ಎಂಬುದು ಪ್ರಕೃತಿ. ಅದನ್ನು ಕಡೆದರೆ ಆಕೃತಿ, ಪೂಜಿಸುವುದು ಸಂಸ್ಕೃತಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು

ಬೆಂಗಳೂರು: ಬಿಜೆಪಿ ಅಧ್ಯಕ್ಷರು ಯಾರೋ ಬಂಡೆಯನ್ನ ಡೈನಾಮಿಟ್​ ಇಟ್ಟು ಪುಡಿ ಪುಡಿ ಮಾಡುತ್ತೇನೆ ಎಂದಿದ್ದಾರೆ. ನಾನೇನು ಬಂಡೆ, ಕನಕಪುರ ಬಂಡೆ ಅಂತ ಹೆಸರು ಇಟ್ಕೊಂಡಿಲ್ಲ. ಬಂಡೆ ಎಂಬುದು ಪ್ರಕೃತಿ. ಅದನ್ನು ಕಡೆದರೆ ಆಕೃತಿ, ಪೂಜಿಸುವುದು ಸಂಸ್ಕೃತಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಬಗ್ಗೆ ಮಾತನಾಡಿದರೆ, ಬಿಜೆಪಿ ನಾಕರುಗೆ ಪ್ರಮೋಷನ್​ ಸಿಗುತ್ತದೆ ಎನ್ನಿಸುತ್ತದೆ. ಅದಕ್ಕಾಗಿ ಚುನಾವಣಾ ಸಮಯದಲ್ಲಿ ಅಶ್ವತ್ಥ ನಾರಾಯಣ್​ ಸಾಹೇಬ್ರು, ಅಶೋಕಣ್ಣ ಮತ್ತು …

Read More »

ಫೇಸ್ಬುಕ್ Friend Request ಅಕ್ಸೆಪ್ಟ್ ಮಾಡೋ ಮುನ್ನ ಹುಷಾರ್..!

ಬೆಂಗಳೂರು,ಅ.23- ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಂಪರ್ಕದಲ್ಲಿರುವ ಗಣ್ಯರು ಮತ್ತು ಸರ್ಕಾರಿ ಅಧಿಕಾರಿಗಳ ಮತ್ತೊಂದು ಸಾಮಾಜಿಕ ಜಾಲತಾಣ ಖಾತೆಯಿಂದ ಮಿತೃತ್ವ ಮನವಿ(ಫ್ರೆಂಡ್ ರಿಕ್ವೆಸ್ಟ್) ಬಂದಲ್ಲಿ ಅವುಗಳನ್ನು ಸ್ವೀಕರಿಸುವ ಮುಂಚೆ ಜಾಗೃತಿ ವಹಿಸಿ ವಂಚನೆಗಳಿಗೆ ಬಲಿಯಾಗದಂತೆ ಸಾರ್ವಜನಿಕರು ಎಚ್ಚರವಹಿಸಬೇಕೆಂದು ಪೊಲೀಸರು ಸೂಚಿಸಿದ್ದಾರೆ. ನಿಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿನ ಮಾಹಿತಿಗಳು ದುರುಪಯೋಗವಾಗದಂತೆ ನಿಯಂತ್ರಿಸಲು ಅಂತಹ ಜಾಲತಾಣಗಳಲ್ಲಿ ಒದಗಿಸಿರುವ ಖಾಸಗಿ ಸುರಕ್ಷತಾ ಆಯ್ಕೆಗಳನ್ನ ಸಕ್ರಿಯಗೊಳಿಸಬೇಕು ಎಂದು ಸೂಚಿಸಲಾಗಿದೆ. ಒಂದು ವೇಳೆ ಇಂತಹ ಪ್ರಕರಣಗಳು ಕಂಡುಬಂದಲ್ಲಿ ಹಾಗೂ …

Read More »