ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ 2021 ರ ಕುರಿತು 58 ವಾರ್ಡಗಳಿಗೆ ಚುನಾವಣೆ ವೇಳಾ ಪಟ್ಟಿ ಪ್ರಕಟಿಸಲಾಗಿದ್ದು, ಅದರಂತೆ ಸೆಪ್ಟೆಂಬರ್ 3 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ವೀಕ್ಷಕರನ್ನು ನಿಯೋಜಿಸಿಲಾಗಿದೆ. ಭೂ ಸ್ವಾಧೀನ (ಪು.ವ.ಮತ್ತು ಪುನಿ) ಬೃಹತ್ ನೀರಾವರಿ ಯೋಜನೆಗಳ ವಿಶೇಷ ಜಿಲ್ಲಾಧಿಕಾರಿಗಳಾದ ಗೀತಾ ಕೌಲಗಿ (ಮೊ. ಸಂಖ್ಯೆ-9448933533) ಅವರನ್ನು ವಾರ್ಡ ಸಂಖ್ಯೆ 1 ರಿಂದ 29 ರವರೆಗೆ ಚುನಾವಣಾ ವೀಕ್ಷಕರನ್ನಾಗಿ ನಿಯೋಜಿಸಿಲಾಗಿದೆ. ಅದೇ ರೀತಿ, ಕೃಷಿ ಇಲಾಖೆಯ …
Read More »ಇನ್ಮುಂದೆ ವಾಟ್ಸ್ಯಾಪ್ ಮೂಲಕವೂ ಲಸಿಕೆಯ ಸ್ಲಾಟ್ ಬುಕ್ ಮಾಡಬಹುದು : ಕೇಂದ್ರ
ನವ ದೆಹಲಿ : ದೇಶದಾದಯಂತ ನಡೆಯುತ್ತಿರುವ ಲಸಿಕಾ ಅಭಿಯಾನಕ್ಕೆ ವೇಗ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿತ್ಯ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಹಾಗೂ ಮೈ ಗವರ್ನಮೆಂಟ್ ನೊಂದಿಗೆ ಸಾಮಾಜಿಕ ಜಾಲತಾಣಗಳ ದೈತ್ಯ ಸಂಸ್ಥೆಗಳಲ್ಲಿ ಒಂದಾದ ವಾಟ್ಸ್ಯಾಪ್ ಲಸಿಕಾ ಅಭಿಯಾನಕ್ಕೆ ಕೈ ಜೋಡಿಸಿದೆ. ಇನ್ಮುಂದೆ ಯಾವುದೇ ವಾಟ್ಸ್ಯಾಪ್ ಬಳಕೆದಾರರು ಲಸಿಕೆ ಪಡೆಯಲು ತಮ್ಮ ಸ್ಲಾಟ್ ಗಳನ್ನು ವಾಟ್ಸ್ಯಾಪ್ ನಲ್ಲಿಯೇ ಬುಕ್ ಮಾಡಬಹುದಾಗದೆ. ಈ ಬಗ್ಗೆ ತಮ್ಮ ಅಧಿಕೃತ …
Read More »ಕಾಂಗ್ರೆಸ್ನಲ್ಲಿ ಪ್ರಮೋಷನ್ ಸಿಗಬೇಕೆಂದರೆ ಜೈಲಿಗೆ ಹೋಗಬೇಕು: ಸಿ.ಟಿ.ರವಿ ವ್ಯಂಗ್ಯ
ಚಿಕ್ಕಮಗಳೂರು: ಕಾಂಗ್ರೆಸ್ನ ಲ್ಲಿ ಪ್ರಮೋಷನ್ ಸಿಗಬೇಕೆಂದರೆ ಭ್ರಷ್ಟಾಚಾರ ಮಾಡಬೇಕು, ಜೈಲಿಗೆ ಹೋಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಈಗ ನಿರಪರಾಧಿಯೂ ಅಲ್ಲ, ಅಪರಾಧಿಯೂ ಅಲ್ಲ, ಅವರು ಆಪಾದಿತ. ಭ್ರಷ್ಟಾಚಾರದ ಕಾಂಗ್ರೆಸ್ನ ರಾಜಕೀಯ ವ್ಯವಸ್ಥೆಯ ಒಂದು ಭಾಗ. ಅಲ್ಲಿ ಗುಂಡಾಗಿರಿ ಪ್ರಮೋಷನ್ಗೆ ಇರುವ ಒಂದು ಮಾದರಿ ಎಂದರು. ಡಿಕೆ ಶಿವಕುಮಾರ್ ಅವರು ಬೆಳೆದ ಬಂದ …
Read More »ಆಕ್ಷನ್ ಪ್ರಿನ್ಸ್’ಗೆ ಜೋಗಿ `ಪ್ರೇಮ್ ಆಕ್ಷನ್ ಕಟ್’..!
ಸ್ಯಾಂಡಲ್ ವುಡ್ ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ನಿರ್ದೇಶಕ ಜೋಗಿ ಪ್ರೇಮ್ ಆಕ್ಷನ್ ಕಟ್ ಹೇಳೋದು ಪಕ್ಕಾ ಆಗಿದೆ. ಧ್ರುವ ಸರ್ಜಾ ಜೊತೆ ಪ್ರೇಮ್ ಸಿನಿಮಾ ಮಾಡಲಿದ್ದಾರೆ ಎಂದು ಗಾಂಧಿನಗರದ ಗಲ್ಲಿಗಳಲ್ಲಿ ಹರಿದಾಡುತ್ತಿದ್ದ ಗಾಳಿ ಸುದ್ದಿ ಇದೀಗ ಅಧಿಕೃತವಾಗಿದೆ. ಹೌದು..! ನಿನ್ನೆ ಮೊನ್ನೆಯಷ್ಟೆ ಪ್ಯಾನ್ ಇಂಡಿಯಾ ಸಿನಿಮಾ ಮಾರ್ಟಿನ್ ಘೋಷಣೆ ಮಾಡಿದ ಧ್ರುವ ಇದೀಗ, ಪ್ರೇಮ್ ಜೊತೆ ಸಿನಿಮಾ ಮಾಡುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಮ್ ನಲ್ಲಿ ಮಾಹಿತಿ …
Read More »ಅಕ್ಟೋಬರ್ನಲ್ಲಿ ತೆರೆಗೆ ಬರಲಿದ್ದಾನೆ ‘ಕೋಟಿಗೊಬ್ಬ-3’
ಅಭಿನಯ ಚಕ್ರವರ್ತಿ ಸುದೀಪ್ ನಟನೆಯ ಕೋಟಿಗೊಬ್ಬ-3 ಸಿನಿಮಾ ಬಿಡುಗಡೆಯ ದಿನಾಂಕ ಕೊನೆಗೂ ಫಿಕ್ಸ್ ಆಗಿದೆ. ಶಿವ ಕಾರ್ತಿಕ್ ನಿರ್ದೇಶಿಸಿ, ಸೂರಪ್ಪ ಬಾಬು ನಿರ್ಮಿಸಿರುವ ಈ ಚಿತ್ರ ಅಕ್ಟೋಬರ್ 14 ರಂದು ಸಿನಿಮಾ ರಿಲೀಸ್ ಆಗಲಿದೆ ಎಂದು ತಿಳಿದುಬಂದಿದೆ. ಸೆಪ್ಟಂಬರ್ 2 ರಂದು ಸುದೀಪ್ ಹುಟ್ಟುಹಬ್ಬವಿದ್ದು, ಅಂದು ಚಿತ್ರತಂಡ ಅಧಿಕೃತ ಮಾಹಿತಿ ನೀಡಲಿದೆ. ಮಾರ್ಚ್ನಲ್ಲಿ ಆಡಿಯೋ ಬಿಡುಗಡೆ ಮಾಡಲು ನಿರ್ಧರಿಸಿದ್ದ ಚಿತ್ರತಂಡ ಏಪ್ರಿಲ್ ಕೊನೆಯ ವಾರದಲ್ಲಿ ಸಿನಿಮಾ ರಿಲೀಸ್ ಮಾಡಲು ಪ್ಲಾನ್ …
Read More »‘ಮಾದಕ’ ನಟಿಯರಿಗೆ ಮತ್ತೆ ಸಂಕಷ್ಟ , ಡ್ರಗ್ಸ್ ಸೇವನೆ ದೃಢ
ಬೆಂಗಳೂರು, ಆ.24- ಸ್ಯಾಂಡಲ್ವುಡ್ ನಟಿಯರಾದ ಸಂಜನಾ ಮತ್ತು ರಾಗಿಣಿ ಅವರುಗಳು ಡ್ರಗ್ಸ್ ಸೇವನೆ ಮಾಡಿರುವುದು ಎಫ್ಎಸ್ಎಲ್ ವರದಿಯಿಂದ ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಈ ಇಬ್ಬರು ನಟಿಯರು ಡ್ರಗ್ಸ್ ಸೇವಿಸಿದ್ದಾರೆಯೇ ಎಂಬ ಬಗ್ಗೆ ತಿಳಿಯಲು ಇವರಿಬ್ಬರ ತಲೆ ಕೂದಲನ್ನು ಹೈದರಾಬಾದ್ನ ಎಫ್ಎಸ್ಎಲ್ಗೆ ಸಿಸಿಬಿ ಪೊಲೀಸರು ಕಳುಹಿಸಿದ್ದರು. ಇದೀಗ ಅದರ ವರದಿ ಸಿಸಿಬಿ ಕೈ ಸೇರಿದ್ದು, ವರದಿಯಲ್ಲಿ ಈ ಇಬ್ಬರು ನಟಿಯರಲ್ಲದೆ ಇನ್ನೂ ಹಲವರು ಡ್ರಗ್ಸ್ ಸೇವನೆ ಮಾಡಿರುವುದು ಉಲ್ಲೇಖಿಸಲಾಗಿದೆ ಎಂದು ಗೊತ್ತಾಗಿದೆ. …
Read More »ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು : ಓರ್ವನ ಶವಪತ್ತೆ, ಮತ್ತೋರ್ವನ ಮೃತದೇಹಕ್ಕೆ ಹುಡುಕಾಟ
ಗೋಕಾಕ : ಘಟಪ್ರಭಾ ಎಡದಂಡೆ ಕಾಲುವೆಗೆ ಕಾಲು ಜಾರಿ ಬಿದ್ದ ಇಬ್ಬರು ವ್ಯಕ್ತಿಗಳು ಸಾವಿಗೀಡಾದ ಘಟನೆ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ಹುಬ್ಬರವಾಡಿ ಗ್ರಾಮದ ವಾಹನ ಚಾಲಕ ಅಶೋಕ ಶ್ರೀಶೈಲ ಡಬ್ಬನ್ನವರ (26), ಪಾಮಲದಿನ್ನಿ ಗ್ರಾಮದ ಕ್ಲೀನರ್ ನಾಗಪ್ಪ ಕಾಡಪ್ಪ ಅಂಗಡಿ (38) ಮೃತರು. ಕಾಲುವೆಯ ಪಕ್ಕದಲ್ಲಿ ಖಾಸಗಿ ಹಾಲಿನ ಡೈರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳು. ಹಾಲಿನ ವಾಹನ ಚಾಲಕ ನೀರು ತರಲು …
Read More »ಬೆಂಗಳೂರಿನಲ್ಲಿ ನಟ ‘ಅಮಿತಾಬ್ ಬಚ್ಚನ್’ ಕಾರ್ ಸೀಜ್!
ಬೆಂಗಳೂರು : ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಹೆಸರಿನಲ್ಲಿ ನೊಂದಣಿಯಾಗಿದ್ದ ಕಾರನ್ನು ಬೆಂಗಳೂರಿನಲ್ಲಿ ಸೀಜ್ ಮಾಡಲಾಗಿದೆ. ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಹೆಸರಲ್ಲಿ ನೋಂದಣಿಯಾಗಿದ್ದ ಸೂಕ್ತ ದಾಖಲೆ ಇಲ್ಲದ ರೋಲ್ಸ್ ರಾಯ್ಸ್ ಕಾರನ್ನು ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ ಅಮಿತಾಬ್ ಬಚ್ಚನ್ ಹೆಸರಲ್ಲಿ ನೋಂದಣಿ ಆಗಿದ್ದ ಕಾರನ್ನು ಬೆಂಗಳೂರಿನ ಯುಬಿ ಸಿಟಿಯಲ್ಲಿ ಸೀಜ್ ಮಾಡಲಾಗಿದೆ. MH 02, BB 2 ಸಂಖ್ಯೆಯ ರೋಲ್ಸ್ ರಾಯ್ಸ್ ಕಾರು …
Read More »ಸರ್ಕಾರೀ ನೌಕರಿಗಾಗಿ ಐಐಟಿ ನಕಲಿ ಅಂಕಪಟ್ಟಿ ; ಎಂಜಿನಿಯರ್ ಬಂಧನ
ಬೆಂಗಳೂರು: ಅಸ್ಸಾಂನ ಗೌಹಾಟಿ ಐಐಟಿಯ ಹೆಸರಿನಲ್ಲಿ ನಕಲಿ ಅಂಕಪಟ್ಟಿ ಸಲ್ಲಿಸಿ ಕೇಂದ್ರ ವಿದ್ಯುತ್ ಸಂಶೋಧನ ಸಂಸ್ಥೆ(ಸಿಪಿಆರ್ಐ)ಯಲ್ಲಿ ನೌಕರಿ ಗಿಟ್ಟಿಸಿಕೊಂಡಿದ್ದ ಇಂಜಿನಿಯರ್ ಒಬ್ಬರು ಸಿಂಧುತ್ವ ಪರೀಕ್ಷೆ ವೇಳೆ ಸಿಕ್ಕುಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯೂ ಬಿಇಎಲ್ ರಸ್ತೆಯ ನಿವಾಸಿಯಾದ ಮನೀಶ್ ಸಿಂಗ್ (26) ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ. 2018ನೇ ಸಾಲಿನಲ್ಲಿ ಸಿಪಿಆರ್ಐ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗಕ್ಕೆ ಕರೆದಿದ್ದ ಇಂಜಿನೀಯರಿಂಗ್ ಅಧಿಕಾರಿ ಹುದ್ದೆಗೆ ಮನೀಶ್ ಸಿಂಗ್ ನೇಮಕಗೊಂಡಿದ್ದರು. ನೇಮಕಾತಿ ವೇಳೆ ಮನೀಶ್ ಸಲ್ಲಿಸಿದ್ದ …
Read More »ಪ್ರಥಮ ವರ್ಷ ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ.!
ಬೆಂಗಳೂರು: ಪ್ರಥಮ ವರ್ಷಕ್ಕೆ ಪ್ರವೇಶ ಪಡೆದವರಿಗೆ ಉಚಿತವಾಗಿ ಟ್ಯಾಬ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆಗಸ್ಟ್ 1 ರಿಂದ ಪ್ರಥಮ ವರ್ಷದ ಪದವಿ ತರಗತಿಗಳು ಶುರುವಾಗಿವೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಟ್ಯಾಬ್ ಅಗತ್ಯವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತವಾಗಿ ಟ್ಯಾಬ್ ವಿತರಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. 2021 -22 ನೇ ಸಾಲಿನಲ್ಲಿ ಪ್ರಥಮ ವರ್ಷದ ಪದವಿ ಕೋರ್ಸ್ ಗೆ …
Read More »