Breaking News

ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಸೋಮವಾರದಂದು ನಡೆಸಿದ ಸಿನಿಮೀಯ ಶೈಲಿ ಕಾರ್ಯಾಚರಣೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಸೋಮವಾರದಂದು ನಡೆಸಿದ ಸಿನಿಮೀಯ ಶೈಲಿ ಕಾರ್ಯಾಚರಣೆಯೊಂದರಲ್ಲಿ ಕಾಶ್ಮೀರದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದ ಅಬ್ಬಾಸ್ ಶೇಖ್ ಹಾಗೂ ಅವನ ಸಹರನೊಬ್ಬನನ್ನು ಕೊಂದಿದ್ದಾರೆ. ಲಷ್ಕರ್-ಎ-ತೊಯ್ಬಾದ ಟಾಪ್ ಕಮಾಂಡರ್ ಅಗಿದ್ದ ಶೇಖ್ ಮತ್ತು ಅವನೊಂದಿಗಿದ್ದ ಮತ್ತೊಬ್ಬನನ್ನು ಮಫ್ತಿಯಲ್ಲಿದ್ದ ಪೊಲೀಸರು ಗುಂಡಿಟ್ಟು ಕೊಂದರು. ಕೇಂದ್ರಾಡಳಿತ ಪ್ರದೇಶ ರಾಜಧಾನಿಯ ಅಲೂಚಿ ಬಾಗ್ ಪ್ರದೇಶದಲ್ಲಿ ಸಾದಾ ಉಡುಪಿನಲ್ಲಿದ್ದ 10 ಜನ ಪೊಲೀಸರು ಉಗ್ರರನ್ನು ಸುತ್ತುವರಿದು ಕೊಂದು ಹಾಕಿದರು. ಕಾಶ್ಮೀರ ಪೊಲೀಸ್ …

Read More »

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಇಂಧನ ದರ ಇಳಿಸಲು GST ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್, ವಿದ್ಯುತ್..?

ನವದೆಹಲಿ: ಜನಸಾಮಾನ್ಯರಿಗೆ ಪೆಟ್ರೋಲ್, ಡೀಸೆಲ್ ಹಾಗೂ ವಿದ್ಯುತ್ ಹೊರೆ ಇಳಿಸಲು ಇವುಗಳನ್ನು GST ವ್ಯಾಪ್ತಿಗೆ ತರಲು ಚಿಂತನೆ ನಡೆದಿದೆ. ನೀತಿ ಆಯೋಗ ಶತಕದ ಗಡಿದಾಟಿದ ಇಂಧನ ದರ ಕಡಿಮೆ ಮಾಡಲು ಸರಕು ಮತ್ತು ಸೇವಾ ತೆರಿಗೆ(GST) ವ್ಯಾಪ್ತಿಗೆ ತರಲು ಚಿಂತನೆ ನಡೆಸಿದೆ. ಈಗಾಗಲೇ ಶತಕದ ಗಡಿ ದಾಟಿರುವ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕಡಿಮೆ ಮಾಡಲು ಜಿಎಸ್ಟಿ ವ್ಯಾಪ್ತಿಗೆ ತರಲು ಪ್ರಸ್ತಾವನೆ ಸಲ್ಲಿಸಲಾಗಿದೆ. ವಿದ್ಯುತ್ ಕೂಡ ಜಿಎಸ್ಟಿ ವ್ಯಾಪ್ತಿಗೆ ತರಲು …

Read More »

ಸಾಲಮನ್ನಾ ಮಾಡಿದ್ದಕ್ಕೆ ನನಗೇನು ಫಲ ಕೊಟ್ಟಿದ್ದೀರಿ?: ಎಚ್‌.ಡಿ.ಕುಮಾರಸ್ವಾಮಿ

ಹಿರೇಕೆರೂರು: ‘ನಾನು ₹25 ಸಾವಿರ ಕೋಟಿ ಸಾಲಮನ್ನಾ ಮಾಡಿದ್ದಕ್ಕೆ, ನನಗೇನು ಫಲ ಕೊಟ್ಟಿದ್ದೀರಿ? ಜನತೆ ಜೊತೆ ಚೆಲ್ಲಾಟ ಆಡುವ ಸರ್ಕಾರ ‌ತರಬೇಡಿ, ಒಮ್ಮೆ ನನಗೆ ಸಂಪೂರ್ಣ ಬಹುಮತ ನೀಡಿ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.‌ಡಿ.ಕುಮಾರಸ್ವಾಮಿ ಮನವಿ ಮಾಡಿದರು. ಪಟ್ಟಣದ ಸರ್ವಜ್ಞ ವೃತ್ತದ ಸಮೀಪ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಉದ್ಯಮಿ ಜಯಾನಂದ ಜಾವಣ್ಣನವರ ಅವರನ್ನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅವರು ಮಾತನಾಡಿದರು. ಯೋಜನೆಗಳ ಹೆಸರಿನಲ್ಲಿ ಗುತ್ತಿಗೆದಾರರ ಬಳಿ …

Read More »

ಮಾಲ್ಡೀವ್ಸ್ ಪ್ರವಾಸದಿಂದ ಹಿಂದಿರುಗಿದ ಬಿಎಸ್ ಯಡಿಯೂರಪ್ಪ; 20 ದಿನಗಳ ನಂತರ ರಾಜ್ಯಾದ್ಯಂತ ಪ್ರವಾಸ

20 ದಿನಗಳ ನಂತರ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಪ್ರತಿ ಜಿಲ್ಲೆಗೂ ಒಂದೊಂದು ದಿನ ಭೇಟಿ ಕೊಡುತ್ತೇನೆ. ಜಿಲ್ಲಾವಾರು ಬಿಜೆಪಿ ಕಾರ್ಯಕರ್ತರ ಸಭೆ ನಡೆಸುತ್ತೇನೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಸವರಾಜ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ತೆಗೆದುಕೊಂಡ ಬಳಿಕ ಬಿ.ಎಸ್. ಯಡಿಯೂರಪ್ಪ ನಿರಾಳರಾಗಿದ್ದರು. ಕುಟುಂಬದೊಂದಿಗೆ ಸಮಯ ಕಳೆಯುವ ಯೋಚನೆಯಲ್ಲಿದ್ದರು. ಐದಾರು ದಿನಗಳ ಹಿಂದೆ …

Read More »

ಹೊಸ ಮೈಲಿಗಲ್ಲಿನತ್ತ ವಿರಾಟ್ ಕೊಹ್ಲಿ, ತನ್ನದೇ ದಾಖಲೆ ಅಳಿಸಿ ಹಾಕಲಿರುವ ರಿಷಭ್ ಪಂತ್

ಈ ವರ್ಷ 15 ಸಿಕ್ಸರ್ ಬಾರಿಸಿರುವ ಪಂತ್ ಇನ್ನೆರಡು ಸಿಕ್ಸರ್ ಬಾರಿಸಿದರೆ 2018ರಲ್ಲಿ ತಾನು ನಿರ್ಮಿಸಿದ ತನ್ನದೇ ದಾಖಲೆಯನ್ನು ಮುರಿದು ಹಾಕಲಿದ್ದಾರೆ. ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ಮೂರನೇ ಟೆಸ್ಟ್ ಪಂದ್ಯ ನಾಳೆ ಆಗಸ್ಟ್ 15 ರಿಂದ ಲೀಡ್ಸ್​ನ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯಕಂಡಿದ್ದರೆ, ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ 151 ರನ್​ಗಳ ಭರ್ಜರಿ ಜಯ ಸಾಧಿಸಿ ಐದು ಪಂದ್ಯಗಳ ಟೆಸ್ಟ್ …

Read More »

ಲಂಚ ಸ್ವೀಕರಿಸಿದ ಪ್ರಕರಣವೊಂದರಲ್ಲಿ ಶಾಲಾ ವಾರ್ಡನ್‌ಗೆ ಜೈಲು ಶಿಕ್ಷೆ

ಮೈಸೂರು: ಲಂಚ ಸ್ವೀಕರಿಸಿದ ಪ್ರಕರಣವೊಂದರಲ್ಲಿ ಶಾಲಾ ವಾರ್ಡನ್‌ಗೆ ಜೈಲು ಶಿಕ್ಷೆಯಾಗಿದೆ. ಗಣಪತಿ ಜಕಾತಿ ಎಂಬ ಶಾಲಾ ವಾರ್ಡನ್‌ಗೆ 3 ವರ್ಷ ಸಾದಾ ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಮೈಸೂರಿನ 3ನೇ ಹೆಚ್ಚುವರಿ ಸತ್ರ ಮತ್ತು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜೆರಾಲ್ಡ್ ಆರ್ ಮೆಂಡೋನ್ಸ್ ತೀರ್ಪು ನೀಡಿದ್ದಾರೆ. ಸರ್ಕಾರಿ ವಿಶೇಷ ಅಭಿಯೋಜಕಿ ಕಲಿಯಂಡ ಮುತ್ತಮ್ಮ ಪೂಣಚ್ಚ ಅವರು ಗೋಳೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಾರ್ಡನ್ ವಿರುದ್ಧ …

Read More »

ಹುಚ್ಚತಾನು ಪ್ರಚಾರದಲ್ಲಿರೋಕೆ ಏನು ಬೇಕಾದ್ರೂ ಮಾಡ್ತಾನೆ. ಯತ್ನಾಳ್ ಗೆಟಾಂಗ್ ಕೊಟ್ಟ ಡಿ.ಕೆ ಶಿ

ಬೆಂಗಳೂರು: ಹುಚ್ಚನೊಬ್ಬ ತಾನು ಪ್ರಚಾರದಲ್ಲಿರೋಕೆ ಏನು ಬೇಕಾದ್ರೂ ಮಾಡ್ತಾನೆ. ಏನಾದ್ರೂ ಮಾತಾಡ್ತಾನೆ. ಆತ ಒಬ್ಬ ಹುಚ್ಚ ಅಷ್ಟೇ. ಕೋವಿಡ್ ಕಾಲದಲ್ಲಿನ ಸರ್ಕಾರದ ವೈಫಲ್ಯ ಹಾಗೂ ಬೆಲೆ ಏರಿಕೆಯಂತಹ ಸಮಸ್ಯೆಗಳನ್ನು ಮರೆಮಾಚಲು ಇಂತದ್ದೆಲ್ಲ ಮಾತಾಡ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪರೋಕ್ಷವಾಗಿ ಯತ್ನಾಳ್ ಗೆಟಾಂಗ್ ಕೊಟ್ಟಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಅಘ್ಘಾನ್ ವಿಧ್ಯಾರ್ಥಿಗಳು ನನ್ನ ಭೇಟಿಗೆ ಬಂದಿದ್ದರು. ಅವರು ಮಾನಸಿಕವಾಗಿ ಕುಗ್ಗಿದ್ದಾರೆ. ಅವರಿಗೆ ಧೈರ್ಯ ತುಂಬುವ …

Read More »

ರಾಜ್ಯ ಸರ್ಕಾರದವರು ಕೇವಲ ಘೋಷಣೆ ಮಾಡ್ತಿದ್ದಾರೆ ಅಷ್ಟೇ.ಅದ್ಕೆ ಕೇಂದ್ರ ಒಪ್ಪಿಗೆ ಕೊಡಲ್ಲ -h.d.k.

ಹಾವೇರಿ: ಹಲವಾರು ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ಕೊಡ್ತಿಲ್ಲ ಅಂತ ಹಿರೇಕೆರೂರಿನ ಜೆಡಿಎಸ್ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದವರು ಕೇವಲ ಘೋಷಣೆ ಮಾಡ್ತಿದ್ದಾರೆ ಅಷ್ಟೇ. ಮಳೆ ಅನಾಹುತಗಳಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ಕೊಡ್ತೀವಿ ಅಂತ ಹೇಳಿದ್ರು. ಆದರೆ ಒಂದು ಕಂತು ಹಣ ನೀಡಿ ಮುಂದೆ ಹಣವನ್ನೇ ನೀಡಿಲ್ಲ. ಬೆಳೆ ಹಾನಿಗೆ ಪರಿಹಾರವೂ ಸಿಕ್ಕಿಲ್ಲ. ಸಾಲ ಮನ್ನಾ ಆಗಿಯೇ ಇಲ್ಲ …

Read More »

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಒಟ್ಟೂ 519 ನಾಮಪತ್ರಗಳು ಸಲ್ಲಿಕೆ

ಬೆಳಗಾವಿ :ಪಾಲಿಕೆ‌ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಕೊನೆಯ‌ ದಿನವಾದ ಇಂದು(ಆ.23) ಒಟ್ಟು 434 ನಾಮಪತ್ರಗಳು ಸ್ವೀಕೃತವಾಗಿವೆ. ಸೆಪ್ಟಂಬರ್ 3ರಂದು ನಡೆಯಲಿರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಒಟ್ಟೂ 519 ನಾಮಪತ್ರಗಳು ಸಲ್ಲಿಕೆಯಾಗಿವೆ. ಕೊನೆಯ ದಿನ 434 ನಾಮಪತ್ರ ಸಲ್ಲಿಸಲಾಗಿದೆ. ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಗುರುವಾರ ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನ.    

Read More »

ಕೇವಲ 10 ರೂಪಾಯಿಗಳಿಗೆ ಎಲ್ಲಾ ರೀತಿಯ ಪಠ್ಯಪುಸ್ತಕಗಳ ಪಿಡಿಎಫ್

ಬೆಂಗಳೂರು: ಮಾರಕ ಕೊರೋನಾ ಲಾಕ್ಡೌನ್​​ನಿಂದ ಶಾಲಾ ಕಾಲೇಜುಗಳನ್ನು ಸುಮಾರು ಎರಡು ವರ್ಷಗಳಿಂದ ಬಂದ್​​ ಮಾಡಿದ ಪರಿಣಾಮ ವಿದ್ಯಾರ್ಥಿಗಳ ಭವಿಷ್ಯ ಅದೋಗತಿಗೆ ತಲುಪಿದೆ. ಪೋಷಕರು ಯಾವುದೇ ಕೆಲಸ ಇಲ್ಲದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಿರುವಾಗಲೇ ಡಿಜಿಟಲ್​​ ವೆಬ್​ಸೈಟ್​​ ಒಂದು ವಿದ್ಯಾರ್ಥಿಗಳಿಗೆ ಸಹಾಯವಾಗಲಿ ಎಂದು ಕೇವಲ 10 ರೂಪಾಯಿಗಳಿಗೆ ಎಲ್ಲಾ ರೀತಿಯ ಪಠ್ಯಪುಸ್ತಕಗಳ ಪಿಡಿಎಫ್​ ಡೌನ್ಲೋಡ್​ ಮಾಡಿಕೊಳ್ಳುವ ಅವಕಾಶ ಮಾಡಿಕೊಟ್ಟಿದೆ. ಹೌದು, ಇಂಗ್ಲೀಷ್​​ ಮತ್ತು ಮ್ಯಾಥ್ಸ್​​ ವರ್ಕ ಬುಕ್ಸ್ ಸೇರಿದಂತೆ ಎಲ್ಲಾ ರೀತಿಯ …

Read More »