Breaking News

ಅಕ್ರಮ ವಿದ್ಯುತ್​ ಸಂಪರ್ಕ ಪಡೆದಿದ್ದ ವ್ಯಕ್ತಿ ಅಧಿಕಾರಿಗಳ ಕಣ್ತಪ್ಪಿಸಲು ಮಾಡಿದ್ದೇನು ಗೊತ್ತಾ…?

ಮನೆಗೆ ಹಾಕಲಾಗಿದ್ದ ಅಕ್ರಮ ವಿದ್ಯುತ್​ ಸಂಪರ್ಕವನ್ನ ಕಡಿತಗೊಳಿಸಲು ವ್ಯಕ್ತಿಯೊಬ್ಬ ಹಾವಿನಂತೆ ತೆವಳುತ್ತಾ ಮನೆಯ ಛಾವಣಿ ತಲುಪಿದ್ದು ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಉತ್ತರ ಪ್ರದೇಶದ ಮುರಾದ್​​ನಗರದಲ್ಲಿ ಅಕ್ರಮ ವಿದ್ಯುತ್​ ಸಂಪರ್ಕ ಹೊಂದಿದ್ದ ಮನೆಯ ಮೇಲೆ ದಾಳಿ ನಡೆಸಿದ ವೇಳೆ ವಿದ್ಯುತ್​ ಇಲಾಖೆ ಸಿಬ್ಬಂದಿ ಈ ವಿಡಿಯೋವನ್ನ ಚಿತ್ರೀಕರಿಸಿದ್ದಾರೆ. ತಮ್ಮ ಮನೆಗೆ ವಿದ್ಯುತ್​ ಇಲಾಖೆ ಅಧಿಕಾರಿಗಳು ದಾಳಿ ಮಾಡ್ತಿದ್ದಾರೆ ಎಂಬ ಸುದ್ದಿ ಕಿವಿಗೆ ಬೀಳುತ್ತಿದ್ದಂತೆಯೇ ವ್ಯಕ್ತಿ ಹಾವಿನಂತೆ ತೆವಳುತ್ತಾ …

Read More »

ಪುಡ್​ಕಿಟ್​ ವಿತರಣೆಯಲ್ಲಿ ನೂಕಾಟ ಉಂಟಾಗಿ ಗಲಾಟೆ ಆರಂಭ

ಚಿಕ್ಕಬಳ್ಳಾಪುರ: ಫುಡ್​ಕಿಟ್​ ವಿತರಣೆ ಸಂದರ್ಭದಲ್ಲಿ ಜನ ಕಿತ್ತಾಟ ನಡೆಸಿ ಕಿಟ್​ಗಳನ್ನು ಹೊತ್ತೊಯ್ದ ಘಟನೆ ಜಿಲ್ಲೆಯ ಬಾಗೇಪಲ್ಲಿಯಲ್ಲಿ ನಡೆದಿದೆ. ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಇಂದು ಪಟ್ಟಣದ ಶಾದಿ ಮಹಲ್​ನಲ್ಲಿ ಪುಡ್​ಕಿಟ್​ ವಿತರಣೆ ಕಾರ್ಯಕ್ರಮ ಆಯೋಜಿಸಿದ್ದರು. ಫುಡ್​ ಕಿಟ್​ ವಿತರಣಾ ಕಾರ್ಯಕ್ರಮಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಆಗಮಿಸಿದ್ದರು. ಸಾಂಕೇತಿಕವಾಗಿ ಪುಡ್​ಕಿಟ್​ಗೆ ಚಾಲನೆ ನೀಡಿ ನಾಯಕರು ತೆರಳಿದ ಬಳಿಕ ಶಾಸಕರು ಪುಡ್​ಕಿಟ್​ ವಿತರಿಸಲು ಆರಂಭಿಸಿದ್ದಾರೆ. ಈ …

Read More »

ಮಾಟ ಮಂತ್ರ ವಿಚಾರ -ಪಕ್ಕದ ಮನೆ ಮಹಿಳೆಗೆ ನಡು ರಸ್ತೆಯಲ್ಲೇ ಥಳಿತ

ಬೆಂಗಳೂರು: ಮಾಟ ಮಂತ್ರದ ಆರೋಪವೊಡ್ಡಿ ಪಕ್ಕದ ಮನೆಯವರಿಗೆ ಕಿರುಕುಳ ನೀಡಿ ಜುಟ್ಟು ಹಿಡಿದು ಹಲ್ಲೆ ಮಾಡಿದ ಘಟನೆ ಕೆಂಗೇರಿಯಲ್ಲಿ ನಡೆದಿದೆ. ರೇಣುಕಾ ಅನ್ನೋ ಮಹಿಳೆಗೆ ಪಕ್ಕದ ಮನೆಯವರು ಕಿರುಕುಳ ನೀಡ್ತಿದ್ದಾರೆ ಎನ್ನಲಾಗಿದೆ. ಹಲ್ಲೆಗೊಳಗಾದ ರೇಣುಕಾ ಪಕ್ಕದ ಮನೆಯಲ್ಲಿ ಅಲಮೇಲಮ್ಮ ಎಂಬುವವರ ಕುಟುಂಬ ವಾಸಿಸುತ್ತಿದ್ದು ಅವರ ಮನೆಯಲ್ಲಿ ಇತ್ತೀಚೆಗೆ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಳು. ಆ ಸಾವಿಗೆ ಪಕ್ಕದ ಮನೆಯ ರೇಣುಕಾ ಕಾರಣವೆಂದು ದಿನಪ್ರತಿ ಅಲಮೇಲಮ್ಮ ಕುಟುಂಬದವರು ಹಲ್ಲೆ ಮಾಡ್ತಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ. …

Read More »

ಕಲ್ಯಾಣ ಕರ್ನಾಟಕಕ್ಕೆ ಎಲ್ಲಾ ವಿಚಾರದಲ್ಲೂ ಅನ್ಯಾಯ

ಯಾದಗಿರಿ: ಕಲ್ಯಾಣ ಕರ್ನಾಟಕಕ್ಕೆ ರಾಜಕೀಯ ಸ್ಥಾನಮಾನ ಸೇರಿ ಎಲ್ಲಾ ವಿಚಾರಗಳಲ್ಲೂ ಅನ್ಯಾಯವಾಗಿದೆ ಎಂದು ಶಾಸಕ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ರಾಜುಗೌಡ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲೆಯ ಸುರಪುರ ನಗರದ ತಮ್ಮ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಆರ್ ಸ್ ಡ್ಯಾಮ್ ಬಿರುಕು ವಿಷಯದಲ್ಲಿ ನಡೆಯುತ್ತಿರುವ ರಾಜಕೀಯ ವಾಕ್ಸಮರದ ಕುರಿತು ಪ್ರತಿಕ್ರಿಯಿಸಿದ ಅವರು ವೈಯಕ್ತಿಕ ಹೇಳಿಕೆಗಳು ಸರಿಯಲ್ಲ. ಸುಮಲತಾ ಅವರು ಗಣಿಗಾರಿಕೆಯಿಂದ ಮುಂದೆ ಅನಾಹುತ ಆಗಬಹುದು ಎಂದು …

Read More »

ಮಳೆ ಪ್ರಾರ್ಥಿಸಿ ಕತ್ತೆ ಮದುವೆ ಮಾಡಿದ ಗ್ರಾಮಸ್ಥರು

ಚಿತ್ರದುರ್ಗ: ಕತ್ತೆ ಮದುವೆ ಮಾಡಿದರೆ ಮಳೆ ಬರುತ್ತದೆ ಎಂಬ ನಂಬಿಕೆಯಿಂದ ಕೋಟೆ ನಾಡಿನಲ್ಲಿ ಕತ್ತೆ ಮದುವೆಯನ್ನು ಮಾಡಿ ಮಳೆಗಾಗಿ ಗ್ರಾಮಸ್ಥರು ಪ್ರಾರ್ಥಿಸಿದ್ದಾರೆ. ಜಿಲ್ಲೆಯ ಈಚಲನಾಗೇನಹಳ್ಳಿಯಲ್ಲಿ ಸಮೃದ್ಧ ಮಳೆ‌ ಬೆಳೆಗಾಗಿ ಕತ್ತೆ ಮದುವೆ ಮಾಡಿ ವರುಣನಿಗೆ ಪ್ರಾರ್ಥನೆ ಸಲ್ಲಿಸಲಾಗಿದೆ.       ತುಂತುರು ಮಳೆಯ ಸಂದರ್ಭದಲ್ಲಿ ಮಳೆಯಾಗದಿದ್ದರೆ ಮಳೆಗಾಗಿ ಮೊರೆಯಿಟ್ಟು ಸಾಂಪ್ರದಾಯಿಕವಾಗಿ ಕತ್ತೆಗಳ ಮದುವೆ ಮಾಡಿಸಿ, ಊರಿನ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಮಾಡಿ ದೇವರಲ್ಲಿ ಮಳೆಯಾಗುವಂತೆ ಬೇಡಿಕೊಳ್ಳುವ ಈ ವಿಶೇಷ …

Read More »

ಭ್ರಷ್ಟಾಚಾರ ಆರೋಪ: ಸಿಎಂ ಯಡಿಯೂರಪ್ಪ, ಇತರರ ವಿರುದ್ಧ ದೂರು ದಾಖಲು

ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷ ಹುದ್ದೆ ನೀಡಲು ತಮ್ಮ ಬಳಿ ರೂ.16 ಕೋಟಿ ಲಂಚಕ್ಕೆ ಬೇಡಿಕೆ ಇರಿಸಿ, ರೂ.9.75 ಕೋಟಿ ಪಡೆದಿದ್ದರು ಎಂದು ಮಂಡಳಿಯ ಮಾಜಿ ಅಧ್ಯಕ್ಷ ಡಾ.ಎಂ. ಸುಧೀಂದ್ರ ರಾವ್‌ ಮಾಡಿರುವ ಆರೋಪದ ಕುರಿತು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಇತರರ ವಿರುದ್ಧ ತನಿಖೆ ನಡೆಸುವಂತೆ ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ಸಲ್ಲಿಸಿದ್ದಾರೆ. ಸುದ್ದಿ ವಾಹಿನಿಯೊಂದಕ್ಕೆ ನೀಡಿದ್ದ …

Read More »

ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ 9 ಅಧಿಕಾರಿಗಳಿಗೆ ಬ್ರಷ್ಟಾಚಾರ ನಿಗ್ರಹ ದಳ ಬೆಳ್ಳಂಬೆಳಗ್ಗೆಯೇ ಶಾಕ್

ಬೆಂಗಳೂರು: ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ 9 ಅಧಿಕಾರಿಗಳಿಗೆ ಬ್ರಷ್ಟಾಚಾರ ನಿಗ್ರಹ ದಳ ಬೆಳ್ಳಂಬೆಳಗ್ಗೆಯೇ ಶಾಕ್ ನೀಡಿದೆ. ಬರೋಬ್ಬರಿ 300ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು 40ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಯಾವೆಲ್ಲಾ ಜಿಲ್ಲೆಯಲ್ಲಿ ದಾಳಿ? ಬೆಂಗಳೂರು ಮೈಸೂರು ಮಂಡ್ಯ ವಿಜಯಪುರ ಮಂಗಳೂರು ಉಡುಪಿ ಕೋಲಾರ ಚಿತ್ರದುರ್ಗ ಬಳ್ಳಾರಿ ಯಾರೆಲ್ಲಾ ನಿವಾಸ ಹಾಗೂ ಮನೆಗಳ ಮೇಲೆ ದಾಳಿ? ಜಿ. ಶ್ರೀಧರ್ -ಮಂಗಳೂರು ನಗರಾಭಿವೃದ್ಧಿ ಘಟಕ -ಡಿಸಿ ಕಚೇರಿ ಕೃಷ್ಣ.ಎಸ್ …

Read More »

ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಯುವಮೋರ್ಚಾ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ನವದೆಹಲಿ – ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಯುವಮೋರ್ಚಾ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಈ ಆದೇಶ ಹೊರಡಿಸಿದ್ದಾರೆ. 7 ಜನ ಉಪಾಧ್ಯಕ್ಷರು, 3 ಪ್ರಧಾನ ಕಾರ್ಯದರ್ಶಿ, 7 ಕಾರ್ಯದರ್ಶಿ ಸೇರಿದಂತೆ ಒಟ್ಟೂ 22 ಜನರು ಪಟ್ಟಿಯಲ್ಲಿದ್ದಾರೆ.  

Read More »

ಮುಂದಿನ ವಾರದಲ್ಲಿ ದ್ವಿತೀಯ ಪಿಯುಸಿ ಫ‌ಲಿತಾಂಶ : ಶೈಕ್ಷಣಿಕ ಚಟುವಟಿಕೆ ಇನ್ನಷ್ಟು ಚುರುಕು

ಬೆಂಗಳೂರು : ಮುಂದಿನ ವಾರದಲ್ಲಿ ದ್ವಿತೀಯ ಪಿಯುಸಿ ಫ‌ಲಿತಾಂಶ ಪ್ರಕಟವಾಗಲಿರುವುದರಿಂದ ಪದವಿ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಸೇರಿದಂತೆ ಶೈಕ್ಷಣಿಕ ಚಟುವಟಿಕೆ ಇನ್ನಷ್ಟು ಚುರುಕುಗೊಳ್ಳಲಿದೆ. ಜುಲೈ 20ರಂದು ದ್ವಿತೀಯ ಪಿಯುಸಿ ಫ‌ಲತಾಂಶ ಪ್ರಕಟಿಸುವ ಸಾಧ್ಯತೆಯಿದೆ. ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳ ಎಸ್ಸೆಸ್ಸೆಲ್ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳ ಆಧಾರದಲ್ಲಿ ಫ‌ಲಿತಾಂಶಗಳನ್ನು ಸಿದ್ಧಪಡಿಸುವ ಕಾರ್ಯವೂ ಅಂತಿಮ ಹಂತಕ್ಕೆ ತಲುಪಿದೆ. ಈಗಾಗಲೇ ವಿದ್ಯಾರ್ಥಿಗಳಿಗೆ ತಮ್ಮ ಎಸ್ಸೆಸ್ಸೆಲ್ಸಿ ಹಾಗೂ ಪ್ರಥಮ ಪಿಯುಸಿ ಅಂಕ ಪರಿಶೀಲಿಸಿ, ತಿದ್ದುಪಡಿಯಿದ್ದಲ್ಲಿ, ಇಲಾಖೆಗೆ …

Read More »

ನಾಡ ಪಿಸ್ತೂಲು ಮಾರಾಟ ಮಾಡುತ್ತಿದ್ದ ಮೂವರು ರೌಡಿ ಶೀಟರ್ ಸೆರೆ

ಬೆಂಗಳೂರು, ಜು. 14: ಮಹಾರಾಷ್ಟ್ರದ ಶಿರಡಿಯಿಂದ ನಾಡ ಪಿಸ್ತೂಲು ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಮೂವರು ರೌಡಿ ಶೀಟರ್‌ಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಮೂರು ನಾಡ ಪಿಸ್ತೂಲು ಹಾಗೂ 24 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಹೆಗ್ಗಡೆ ನಗರದ ನಿವಾಸಿಗಳಾದ ಫಯಾಜ್ ಉಲ್ಲಾ, ಮಹಮದ್ ಆಲಿ, ಸಯ್ಯದ್ ಸಿರಾಜ್ ಅಹಮದ್ ಬಂಧಿತ ಆರೋಪಿಗಳು. ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಫಯಾಜ್ ವುಲ್ಲಾ ವಿರುದ್ಧ ಈಗಾಗಲೇ ಆರು ಪ್ರಕರಣ ದಾಖಲಾಗಿವೆ. …

Read More »