Breaking News

ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತ: ಗುಡುಗಿದ ಸಿದ್ದರಾಮಯ್ಯ

ಬೆಂಗಳೂರು :‌ ಲಸಿಕೆ ಕೊರತೆಯಿಂದಾಗಿ ರಾಜ್ಯದ ಶೇಕಡಾ 50ರಷ್ಟು ಲಸಿಕೆ ಕೇಂದ್ರಗಳು ಸ್ಥಗಿತಗೊಂಡಿವೆ ಕಳೆದ 14 ದಿನಗಳಲ್ಲಿ ಸರಾಸರಿ 2.56 ಲಕ್ಷ ಲಸಿಕೆಗಳನ್ನು ಮಾತ್ರ ನೀಡಲಾಗುತ್ತಿದೆ ಎಂಬ ವರದಿ ಕಳವಳಕಾರಿಯಾದುದು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ಪ್ರಧಾನಿ ನರೇಂದ್ರಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ? ಎಂದು ಅವರು ಪ್ರಶ್ನಿಸಿದ್ದಾರೆ. ರಾಜ್ಯದ ಲಸಿಕಾ ಕೇಂದ್ರಕ್ಕೆ ಬರುತ್ತಿರುವ ನೂರು ಮಂದಿಯಲ್ಲಿ20 ಮಂದಿಗೆ …

Read More »

ಕೋವಿಡ್ ನಿಂದ ಮೃತಪಟ್ಟ ರೈತರ ಸಾಲ ಮನ್ನಾ.!

ಬೆಂಗಳೂರು: ಕೊರೊನಾ ಸೋಂಕಿನಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ನೆರವು ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಕೋವಿಡ್ ಗೆ ಬಲಿಯಾದ ರೈತರ ಸಾಲ ಮನ್ನಾ ಮಾಡಲು ಚಿಂತನೆ ನಡೆಸಿದೆ. ಈ ಕುರಿತು ಸಚಿವ ಎಸ್.ಟಿ.ಸೋಮಶೇಖರ ಮಾಹಿತಿ ನೀಡಿದ್ದು, ಕೊರೋನಾದಿಂದ ಮೃತಪಟ್ಟ 10187 ರೈತರ 79.47 ಕೋಟಿ ರೂ. ಸಾಲ ಮನ್ನಾ ಮಾಡುವ ಬಗ್ಗೆ ಸಿಎಂ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ 3-4 ದಿನಗಳಲ್ಲಿ ಅಪೆಕ್ಸ್, ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಸಭೆ …

Read More »

ಪುಟಾಣಿ ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಂದೆ

ಬೆಳಗಾವಿ; ಇಬ್ಬರು ಹೆಣ್ಣುಮಕ್ಕಳಿಗೆ ವಿಷ ಉಣಿಸಿ ಕೊಂದ ತಂದೆಯೊಬ್ಬ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆ ಕಂಗ್ರಾಳಿ ಕೆ.ಹೆಚ್. ಗ್ರಾಮದಲ್ಲಿ ನಡೆದಿದೆ. 45 ವರ್ಷದ ಅನಿಲ್ ಚಂದ್ರಕಾಂತ್ ತನ್ನ ಇಬ್ಬರು ಮಕ್ಕಳಿಗೆ ವಿಷ ನೀಡಿ, ಬಳಿಕ ತಾನೂ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಕ್ಕಳಾದ 8 ವರ್ಷದ ಅಂಜಲಿ ಹಾಗೂ 4 ವರ್ಷದ ಅನನ್ಯಾ ಮೃತಪಟ್ಟಿದ್ದು, ತಂದೆ ಅನಿಲ್ ಸ್ಥಿತಿ ಗಂಭೀರವಾಗಿದೆ. ಕೃತ್ಯಕ್ಕೆ ನಿಖರ ಕಾರಣ ತಿಳಿದು …

Read More »

ಖಾಲಿ ಜಾಗದಲ್ಲಿ ಗುಡಿಸಲು ಹಾಕಿ, ಕೈಯಲ್ಲಿ ದೊಣ್ಣೆ ಹಿಡಿದು ಡಿ.ಸಿ ಕಚೇರಿ ಮುಂದೆ ಈ ಬಡವರು ಪ್ರತಿಭಟನೆ ನಡೆಸುತ್ತಿರುವುದು ಏಕೆ?

ದಾವಣಗೆರೆ: ಬಡವರಿಗಾಗಿ ಮೀಸಲಿಟ್ಟ ಸೈಟ್​ಗಳನ್ನು ಬೇರೆಯವರಿಗೆ ನೀಡಲು ಮುಂದಾದ ಮಹಾನಗರ ಪಾಲಿಕೆ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಖಾಲಿ ಜಾಗದಲ್ಲಿ ತಮ್ಮ ಗುಡಿಸಲು ಹಾಕಿ ಪ್ರತಿಭಟನೆ ನಡೆಸಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಬಸಾಪುರ ಹಳ್ಳದ ಬಳಿ ಇರುವ ಜಾಗದಲ್ಲಿ ಬಡವರಿಗೆ ಉಚಿತ ಸೈಟ್​ ನೀಡುವುದಾಗಿ ಹಲವು ವರ್ಷಗಳ ಹಿಂದೆಯೇ ತಿಳಿಸಲಾಗಿತ್ತು. ಹೀಗಾಗಿ ಈ ಭಾಗದ ಜನರು ಮಹಾನಗರ ಪಾಲಿಕೆಗೆ ಅರ್ಜಿ ಸಹ ಸಲ್ಲಿಸಿದ್ದರು. ಆದರೆ ಇವರೆಗೂ ಯಾವುದೇ ಸೈಟ್​ …

Read More »

ಶಾಲೆಯಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ, ಇಲ್ಲವಾದಲ್ಲಿ ಕಾಯ್ದೆ ಉಲ್ಲಂಘಿಸುವ ಶಾಲೆಗಳ ವಿರುದ್ಧ ಕಠಿಣ ಕ್ರಮ: ಸಚಿವ ಸುರೇಶ್ ಕುಮಾರ್ ಎಚ್ಚರಿಕೆ

ಬೆಂಗಳೂರು: ಹೊರನಾಡು ಕನ್ನಡಿಗರ ಒಂದು ವರ್ಗ ರಾಜ್ಯದಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವುದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಭಾಷೆಯಾಗಿ ಕನ್ನಡ ಕಲಿಸುವ ವಿಷಯದಲ್ಲಿ ಯಾವುದೇ ರಾಜಿಗೂ ಅವಕಾಶವಿಲ್ಲ. ಕನ್ನಡ ನೆಲದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸುವ ಸಂಬಂಧ ಕನ್ನಡ ಕಲಿಕಾ ಅಧಿನಿಯಮ-2015ರ ಕಾಯ್ದೆ ಅನುಷ್ಠಾನದಲ್ಲಿ ಯಾವುದೇ ರಾಜಿ …

Read More »

ನೆಗೆಟಿವ್ ರಿಪೋರ್ಟ್ ಇಲ್ಲದಿದ್ದಲ್ಲಿ ಬಸ್ ವಾಪಸ್

ಮಹಾರಾಷ್ಟ್ರದಲ್ಲಿ ಕೊರೋನಾ, ಡೆಲ್ಟಾ ಪ್ಲಸ್ ವೈರಸ್ ಆತಂಕ ಹೆಚ್ಚುತ್ತಿದ್ದಂತೆ ಬೆಳಗಾವಿ ಗಡಿಯಲ್ಲಿ ತಪಾಸಣೆ ಹೆಚ್ಚಿಸಲಾಗಿದೆ. ಮಹಾರಾಷ್ಟ್ರದಿಂದ ಬರುವ ಪ್ರತಿಯೊಂದು ವಾಹನವನ್ನೂ ತಪಾಸಿಸಲಾಗುತ್ತಿದೆ. ವಾಹನದಲ್ಲಿದ್ದವರು ನೆಗೆಟಿವ್ ರಿಪೋರ್ಟ್ ಹೊಂದಿದ್ದಾರಾ ಎನ್ನುವುದನ್ನು ಚೆಕ್ ಮಾಡಲಾಗುತ್ತಿದೆ. ನೆಗೆಟಿವ್ ರಿಪೋರ್ಟ್ ಇಲ್ಲದಿದ್ದಲ್ಲಿ ಅವರನ್ನು ಕೆಳಗಿಳಿಸಲಾಗುತ್ತಿದೆ. ಮಿರಜ್ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ಬಸ್ ನಲ್ಲಿ ಸಾಮಾಜಿಕ ಅಂತರ ಪಾಲಿಸದಿರುವ ಮತ್ತು ಕೆಲವರಲ್ಲಿ ನೆಗೆಟಿವ್ ರಿಪೋರ್ಟ್ ಇಲ್ಲದ ಹಾಗೂ ವ್ಯಾಕ್ಸಿನೇಶನ್ ಮಾಡಿಸದ ಕಾರಣಕ್ಕಾಗಿ ಬಸ್ ವಾಪಸ್ …

Read More »

ಲಸಿಕೆ ದೊರೆಯದೆ ವಾಪಸಾದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ

ಸಾಗರ: ಎರಡನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಇಲ್ಲಿನ ದೇವರಾಜ ಅರಸು ಸಭಾಭವನಕ್ಕೆ ಮಂಗಳವಾರ ಬಂದಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಲಸಿಕಾ ಕೇಂದ್ರದಲ್ಲಿ ಲಸಿಕೆ ಸಂಗ್ರಹವಿಲ್ಲದ ಕಾರಣ ಮನೆಗೆ ಮರಳಬೇಕಾಯಿತು. ಕಾಗೋಡು ತಿಮ್ಮಪ್ಪ ಅವರಿಗೆ ಎರಡನೇ ಡೋಸ್ ಲಸಿಕೆ ಪಡೆಯಲು ಲಸಿಕಾ ಕೇಂದ್ರಕ್ಕೆ ಮಂಗಳವಾರ ಬರುವಂತೆ ಅವರ ಮೊಬೈಲ್‌ಗೆ ಸಂದೇಶ ಕಳುಹಿಸಲಾಗಿತ್ತು. ಆ ಪ್ರಕಾರ ಅವರು ಲಸಿಕಾ ಕೇಂದ್ರಕ್ಕೆ ಬಂದರೆ ‘ಲಸಿಕೆ ಸಂಗ್ರಹವಿಲ್ಲ’ ಎಂಬ ಫಲಕ ನೋಡಿ …

Read More »

3 ತಿಂಗಳ ಲಸಿಕೆ ಬದಲಾಗಿ ಕೊರೊನಾ ವ್ಯಾಕ್ಸಿನ್ ಕೊಟ್ಟ ಆರೋಪ; ಕೋಲಾರದಲ್ಲಿ ಮಗು ಸಾವು

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೇವಹಳ್ಳಿ ಗ್ರಾಮದಲ್ಲಿ ಆರೋಗ್ಯದಿಂದ ಇದ್ದ ಮೂರು ತಿಂಗಳ ಮಗು ಸಾವನ್ನಪ್ಪಿದ್ದು, ಆರೋಗ್ಯ ಇಲಾಖೆ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಅಂಜಲಿ ಹಾಗೂ ನಾಗರಾಜ್ ಎಂಬುವರ ಮೂರು ತಿಂಗಳ ಮಗು ಸಾವನ್ನಪ್ಪಿದೆ. ಗ್ರಾಮಸ್ಥರು ಹಾಗೂ ಮಗುವಿನ ಪೋಷಕರು ಮಾಡಿರುವ ಆರೋಪದ ಪ್ರಕಾರ.. ಆರೋಗ್ಯ ಸಿಬ್ಬಂದಿ ಮಕ್ಕಳಿಗೆ ನೀಡುವ ಮೂರು ತಿಂಗಳದ ಲಸಿಕೆ ಬದಲಾಗಿ, ಕೊರೊನಾ ವ್ಯಾಕ್ಸಿನ್ ನೀಡಲಾಗಿದೆ ಎಂದಿದ್ದಾರೆ. ನಿನ್ನೆ ಗ್ರಾಮದಲ್ಲಿ ಕೊರೊನಾ ವ್ಯಾಕ್ಸಿನ್ ಜೊತೆಗೆ …

Read More »

ಮನಸ್ಫೂರ್ತಿ ಹಾಗೂ ಶ್ರದ್ಧೆಯಿಂದ ಮಾಡಿದ್ರೆ ಯಾವುದು ಅಸಾಧ್ಯವಲ್ಲ ಎನ್ನುವುದು ಸಾಧಕರ ಮಾತು.

ಕೊಪ್ಪಳ: ಮನಸ್ಫೂರ್ತಿ ಹಾಗೂ ಶ್ರದ್ಧೆಯಿಂದ ಮಾಡಿದ್ರೆ ಯಾವುದು ಅಸಾಧ್ಯವಲ್ಲ ಎನ್ನುವುದು ಸಾಧಕರ ಮಾತು. ನಿಜ! ಸಾಧಿಸುವ ಛಲ ಇದ್ರೆ ಪಡೆಯುವ ಹುಚ್ಚು ಇರಬೇಕು ಅಂತಾರೆ. ಅದರಂತೆ ಇಲ್ಲೊಬ್ಬ ಪದವಿ ವಿದ್ಯಾರ್ಥಿ ತಾನು ಕಲಿತ ಚಿತ್ರಕಲೆಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ.   ಹೌದು! ಕಲೆಯೆನ್ನುವುದೇ ಹಾಗೆ ಒಂದು ಸಲ ಅದರ ಹುಚ್ಚು ಹಿಡಿದ್ರೆ, ಬರಿ ಬಣ್ಣ ಹಾಗೂ ಪೆನ್ಸಿಲ್​, ಪೇಂಟಿಂಗ್ ಬ್ರಷ್​ಗಳ ಮಧ್ಯೆ ಕಲಾವಿದರು ತಮ್ಮ ಕಾಲವನ್ನು ಕಳೆಯುತ್ತಾರೆ. ಕೊಪ್ಪಳದ …

Read More »

‘ಒಂದಾಗಿದ್ವಿ, ಒಂದಾಗಿರೋಣ’: ಒಟ್ಟಿಗೆ ಕಾಣಿಸಿಕೊಂಡ ದರ್ಶನ್-ಉಮಾಪತಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ಹೆಸರಿನಲ್ಲಿ 25 ಕೋಟಿ ರೂ. ವಂಚನೆ ಯತ್ನ ಪ್ರಕರಣಕ್ಕೆ ತೆರೆಬೀಳುವ ಸಾಧ್ಯತೆ ಇದೆ. ನಿನ್ನೆಯಿಂದ ಭಾರಿ ಸದ್ದು ಮಾಡಿದ್ದ ವಂಚನೆ ಪ್ರಕರಣಕ್ಕೆ ದರ್ಶನ್ ಮತ್ತು ಉಮಾಪತಿ ಇಬ್ಬರು ಫುಲ್‌ಸ್ಟಾಪ್ ಇಟ್ಟಿದ್ದಾರೆ. ಈ ಪ್ರಕರಣದಿಂದ ದರ್ಶನ್ ಮತ್ತು ಉಮಾಪತಿ ನಡುವಿನ ಸ್ನೇಹ ಸಂಬಂಧ ಮುರಿದು ಬಿತ್ತು ಎನ್ನುವ ಅನುಮಾನ ಎಲ್ಲರಲ್ಲೂ ಕಾಡಿತ್ತು. ಆದರೀಗ ಇಬ್ಬರು ಒಟ್ಟಿಗೆ ಕಾಣಿಸಿಕೊಳ್ಳುವ ಒಂದಾಗಿದ್ವಿ, ಒಂದಾಗಿರೋಣ ಎಂಡಿದ್ದಾರೆ. ಮೈಸೂರಿನಿಂದ …

Read More »