Breaking News

ದೀಪಾವಳಿ ಸಂದರ್ಭದಲ್ಲಿ ಯಾವುದೇ ಬಗೆಯ ಪಟಾಕಿಗಳನ್ನು ಮಾರಾಟ ಮಾಡಬಾರದು:

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೀಪಾವಳಿ ಹಬ್ಬದ ವೇಳೆ ಎಲ್ಲ ಬಗೆಯ ಪಟಾಕಿಗಳನ್ನು ಮಾರಾಟ ಮಾಡಬಾರದು, ಸಿಡಿಸಬಾರದೆಂದು ಇಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣವು ಆದೇಶ ನೀಡಿದೆ. ಈ ಆದೇಶವು ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ. ದೀಪಾವಳಿ ಸಂದರ್ಭದಲ್ಲಿ ಯಾವುದೇ ಬಗೆಯ ಪಟಾಕಿಗಳನ್ನು ಮಾರಾಟ ಮಾಡಬಾರದು. ಈ ಬಗ್ಗೆ ಸ್ಥಳೀಯ ಆಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ನ್ಯಾಯಾಲಯವು ಸೂಚನೆ ಕೊಟ್ಟಿದೆ.

Read More »

ವಿನಯ ಕುಲಕರ್ಣಿ ಅವರನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿ, ಧಾರವಾಡದ 3 ನೇ ಹೆಚ್ಚುವರಿ ಸೇಷನ್ ಕೋರ್ಟ್ ಆದೇಶಿಸಿದೆ.

ಧಾರವಾಡ : ಜಿಪಂ. ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿ, ಧಾರವಾಡದ 3 ನೇ ಹೆಚ್ಚುವರಿ ಸೇಷನ್ ಕೋರ್ಟ್ ಆದೇಶಿಸಿದೆ. ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ನ.9ರ ವರೆಗೆ ಸಿಬಿಐ ವಶಕ್ಕೆ ನೀಡಿದ್ದ ಇಲ್ಲಿನ 3ನೇ ಜಿಲ್ಲಾ ಸತ್ರ ನ್ಯಾಯಾಲಯ ಇಂದು ಬೆಳಿಗ್ಗೆ …

Read More »

ನವ್ಹೆಂಬರ್ 14 ರಂದು ಡಿಸಿಸಿ ಬ್ಯಾಂಕ್ ಅದ್ಯಕ್ಚ ಉಪಾದ್ಯಕ್ಷರ ಚುನಾವಣೆ….

ಬೆಳಗಾವಿ – ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಡಳಿಯ ಚುನಾವಣೆ ಮುಗಿದಿದ್ದು,ನವ್ಹೆಂಬರ್ 14 ರಂದು ಅದ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ನವ್ಹೆಂಬರ್ 14 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯವರೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ನಡೆಯಲಿದ್ದು ಮದ್ಯಾಹ್ನ 3-00 ಗಂಟೆಗೆ ನಿರ್ದೇಶಕ ಮಂಡಳಿಯ ಸಭೆ ಆರಂಭವಾಗಲಿದ್ದು,ನಾಮ ಪತ್ರ ವಾಪಸ್ ಪಡೆಯಲು 30 ನಿಮಿಷ ಕಾಲಾವಕಾಶ ನೀಡಿದ ಬಳಿಕ ಚುನಾವಣೆ ನಡೆಯಲಿದೆ. ಹಾಲಿ ಅದ್ಯಕ್ಷ ರಮೇಶ್ ಕತ್ತಿ …

Read More »

ಮಹಾ ರಾಜಕೀಯ ರಮೇಶ್‌ ಜಾರಕಿಹೊಳಿ!

ಬೆಂಗಳೂರು: ಮಹಾರಾಷ್ಟ್ರದ ಶಿವಸೇನೆ ನೇತೃತ್ವದ ಮಹಾ ವಿಕಾಸ್‌ ಅಘಾಡಿ ಸರಕಾರದಲ್ಲಿ “ಕರ್ನಾಟಕ ಮಾದರಿ ಭೂಕಂಪ’ ಸಂಭವಿಸುವ ದಿನಗಳು ಸಮೀಪಿಸುತ್ತಿವೆಯೇ? ಆಪರೇಷನ್‌ ಕಮಲದ ಬಿರುಗಾಳಿಗೆ ಸಿಲುಕಿ ಉದ್ಧವ್‌ ಸರಕಾರವೂ ಪತನಗೊಳ್ಳಲಿದೆಯೇ? ಪ್ರಸ್ತುತ ವಿದ್ಯಮಾನಗಳನ್ನು ಗಮನಿಸಿದರೆ, ಇಂಥ ಬೆಳವಣಿಗೆ ಹೆಚ್ಚು ದೂರವಿಲ್ಲ ಎಂಬ ಸುಳಿವು ಸಿಗುತ್ತಿದೆ. ವಿಶೇಷವೆಂದರೆ ಮಹಾರಾಷ್ಟ್ರದಲ್ಲಿ ಆಪರೇಷನ್‌ ಕಮಲ ಕಾರ್ಯತಂತ್ರದ ಹಿಂದಿರುವುದು ಬೇರ್ಯಾರೂ ಅಲ್ಲ, ರಮೇಶ್‌ ಜಾರಕಿಹೊಳಿ! ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ ಸರಕಾರದ ವಿರುದ್ಧ ಬಂಡೆದ್ದು,ರಾಜೀನಾಮೆ ನೀಡಿ, …

Read More »

12 ಬಾರಿ ಅರ್ಜಿ ಸಲ್ಲಿಸಿದ್ದಾರೆ. ಬೆರಳಿನ ಮಾದರಿ ಕೊಟ್ಟು, ಫೋಟೋ ತೆಗೆಯಿಸಿಕೊಂಡಿದ್ದರೂ ಪ್ರಯೋಜನವಾಗಿಲ್ಲ.

ಕಲಬುರ್ಗಿ : ಮಹಿಳೆಯೊಬ್ಬರು ಆಧಾರ್ ಕಾರ್ಡ್ ಗಾಗಿ ಅಲೆದಾಡುತ್ತಿರುವ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. 30 ವರ್ಷದ ಈ ಮಹಿಳೆ ಆಧಾರ್ ಕಾರ್ಡ್ ಗಾಗಿ ಇದುವರೆಗೂ ಬರೋಬ್ಬರಿ 12 ಬಾರಿ ಅರ್ಜಿ ಸಲ್ಲಿಸಿದ್ದಾರೆ. ಬೆರಳಿನ ಮಾದರಿ ಕೊಟ್ಟು, ಫೋಟೋ ತೆಗೆಯಿಸಿಕೊಂಡಿದ್ದರೂ ಪ್ರಯೋಜನವಾಗಿಲ್ಲ. ಆಧಾರ್ ಗಾಗಿ ಅಲೆದಾಡುತ್ತಲೇ ಇರುವ ಮಹಿಳೆ, ಸರ್ಕಾರದ ಯಾವುದೇ ಯೋಜನೆಗಳ ಫಲಾನುಭವಿಯಾಗಲು ಪರದಾಡುತ್ತಿದ್ದಾರೆ. ಹೀಗೆ ಪದೇ ಪದೇ ರಿಜೆಕ್ಟ್ ಆಗಲು ಕಾರಣವೇನೆಂದು ಪತ್ತೆ ಹಚ್ಚಿದಾಗ ಅಚ್ಚರಿ …

Read More »

ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಸೋಂಕು

ದೆಹಲಿ: ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ನಟ ಚಿರಂಜೀವಿಗೆ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ.  ‘ಆಚಾರ್ಯ’ ಶೂಟಿಂಗ್​ಗೂ ಮುನ್ನ ಕೊವಿಡ್-19 ಟೆಸ್ಟ್ ಮಾಡಿಸಿದಾಗ ಸೋಂಕು ಇರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ಚಿರಂಜೀವಿ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Read More »

ಸ್ಯಾಂಡಲ್​ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆಯಾಗಿದೆ.

ಬೆಂಗಳೂರು: ಸ್ಯಾಂಡಲ್​ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆಯಾಗಿದೆ. ಡ್ರಗ್ಸ್ ಸಿಗದೇ ನಟಿಯರನ್ನು ಅರೆಸ್ಟ್ ಮಾಡಿದ್ದಾರೆ ಎಂದವರಿಗೆ ಅರಗಿಸಿಕೊಳ್ಳಲಾಗದ ಸತ್ಯ ಬಯಲಾಗಿದೆ. ಅರೋಪಿಗಳು ಒಳಸಂಚು ರೂಪಿಸಿ ದಂಧೆ ನಡೆಸುತ್ತಿದ್ದರು ಜೊತೆಗೆ ಡ್ರಗ್ಸ್ ವ್ಯವಹಾರ ನಡೆಸುತ್ತಿದ್ದರು ಎಂಬುವುದನ್ನು ಸಿಸಿಬಿ ಬಯಲಿಗೆಳೆದಿದೆ. ಹೀಗಾಗಿ ಸಂಜನಾ, ರಾಗಿಣಿ ಮನೆಯಲ್ಲಿ ಅಥವಾ ಅವರ ಬಳಿ ಡ್ರಗ್ಸ್ ಸಿಕ್ಕಿಲ್ಲ. ಆದರೆ ಈ ಇಬ್ಬರು ನಟಿಮಣಿಯರು ಈ ದಂಧೆಯಲ್ಲಿ ಹಣ ಮಾಡಿರುವುದು ಸಾಭೀತಾಗಿದೆ. ಈವರೆಗಿನ ತನಿಖೆಯಲ್ಲಿ ವೀರೇನ್ ಖನ್ನನೇ ಕಿಂಗ್ ಪಿನ್ …

Read More »

ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಮೃತ ಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಮೃತ ಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೇ ಇದ್ದಿದ್ದಕ್ಕೆ ರೋಗಿ ಕೊನೆಯುಸಿರೆಳೆದಿದ್ದಾರೆ ಎಂದು ಶಾಂತಿನಗರದ ನ್ಯೂ ಮೆಡ್ ಡಯಾಗ್ನೊಸ್ಟಿಕ್ ಸೆಂಟರ್ ವಿರುದ್ಧ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. 47 ವರ್ಷದ ರವೀಂದ್ರನಾಥ್ ಎಂಬುವವರು ಕೊರೊನಾ ಸೋಂಕು ನೆಗೆಟಿವ್ ಬಂದ ನಂತರ ಡಿಸ್ಚಾರ್ಜ್ ಆಗಿದ್ದರು. ಆದರೆ ಅವರಿಗೆ ಆಕ್ಸಿಜನ್ ಅವಶ್ಯಕತೆ ಇತ್ತು. ಉಸಿರಾಟದ ಸಮಸ್ಯೆ ಹಿನ್ನೆಲೆ ಮನೆಯಲ್ಲಿ ಆಕ್ಸಿಜನ್ …

Read More »

ಜಿ.ಪಂ. ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣದಲ್ಲಿ ಸದ್ಯ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಕಸ್ಟಡಿ ಅವಧಿ

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣದಲ್ಲಿ ಸದ್ಯ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಅವರನ್ನು ಕೋರ್ಟ್‌ಗೆ ಕರೆದೊಯ್ದರು. ಮಾಜಿ ಸಚಿವರನ್ನು ಹುಬ್ಬಳ್ಳಿಯ ಸಿಎಆರ್ ಮೈದಾನದಿಂದ ಕರೆದೊಯ್ದು ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ಗೆ ಹಾಜರುಪಡಿಸಿದರು.       ಆದರೆ, ಇಂದು ನ್ಯಾಯಾಲಯದಲ್ಲಿ ವಿನಯ್​ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಅಸಾಧ್ಯವೆಂಬ ಮಾಹಿತಿ ಸಿಕ್ಕಿದೆ.   ಮಾಜಿ ಸಚಿವರ ಪರ ಜಾಮೀನು …

Read More »

ಕೊರೊನಾ ವೈರಸ್ ಹೆಸರಲ್ಲಿ ಲೂಟಿ ಮಾಡುವುದು ಇನ್ನೂ ನಿಂತಿಲ್ಲ.

ಬೆಂಗಳೂರು: ಮಾಹಾಮಾರಿ ಕೊರೊನಾ ವೈರಸ್ ಹೆಸರಲ್ಲಿ ಲೂಟಿ ಮಾಡುವುದು ಇನ್ನೂ ನಿಂತಿಲ್ಲ. ಸರ್ಕಾರದಿಂದ ಹಣ ಕಳುಹಿಸಿದರೂ ಖಾಸಗಿ ಆಸ್ಪತ್ರೆಗಳು ಇನ್ನೂ ಹಣ ವಸೂಲಿ ಮಾಡುವುದರಲ್ಲಿಯೇ ನಿರತವಾಗಿವೆ. ಕೊರೊನಾ ಬಂದವರ ಚಿಕಿತ್ಸೆ ವೆಚ್ಚವನ್ನ ಸರ್ಕಾರವೇ ನೀಡುತ್ತಿದೆ. ಸರ್ಕಾರದಿಂದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ವ್ಯಕ್ತಿಗಳ ಬಿಲ್ ಅನ್ನ ಸರ್ಕಾರದ ವತಿಯಿಂದ ನೀಡಲಾಗುತ್ತೆ. ಖಾಸಗಿಯಾಗಿ ಚಿಕಿತ್ಸೆ ಪಡೆಯುವವರನ್ನ ಹೊರತು ಪಡಿಸಿ ಉಳಿದವರ ವೆಚ್ಚವನ್ನ ಸರ್ಕಾರವೇ ಭರಿಸುತ್ತದೆ. ಈಗ ಇದನ್ನೇ ಬಂಡವಾಳ ಮಾಡಿಕೊಂಡಿರೋ ಬೆಂಗಳೂರಿನ …

Read More »