ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ₹ 25 ಕೋಟಿ ವಂಚನೆ ಯತ್ನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅರುಣಾಕುಮಾರಿ ಮಾಧ್ಯಮಗಳಿಗೆ ವಿಡಿಯೋ ಒಂದನ್ನ ಹರಿಬಿಟ್ಟಿದ್ದಾರೆ. ನನ್ನ ಪಾಡಿಗೆ ನನಗೆ ಬದುಕಲು ಬಿಡಿ ಈ ಪ್ರಕರಣದಿಂದ ನನಗೆ, ಕುಟುಂಬಕ್ಕೆ ನೋವಾಗಿದೆ. ದಯವಿಟ್ಟು ನನ್ನ ಪಾಡಿಗೆ ನಾನು ಬದುಕಲು ಬಿಡಿ. ಇವೆಲ್ಲಾ ಬೆಳವಣಿಗೆಯಿಂದ ಸಾಯಬೇಕು ಎನಿಸುತ್ತಿದೆ. ನಾನು ಬಹಳ ನೋವಿನಿಂದ ಮಾತನಾಡುತ್ತಿದ್ದೇನೆ. ಮಾರ್ಚ್ 30ರಿಂದ ನನಗೂ ಅವರಿಗೂ ಸಂಪರ್ಕವಿಲ್ಲ. ಪೊಲೀಸರು ತನಿಖೆ …
Read More »ಸೌಭಾಗ್ಯ ಲಕ್ಷ್ಮೀ ಶುಗರ್ಸ ನಿಂದ ಸಕ್ಕರೆ ವಿತರಣೆ ಕಾರ್ಯಕ್ರಮ
ಗೋಕಾಕ: ಸೌಭಾಗ್ಯ ಲಕ್ಷ್ಮೀ ಶುಗರ್ಸ್ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷ ಕೂಡ ನಾವು ರೈತ ಬಾಂಧವರಿಗೆ ತಿಳಿಸುವುದು ಏನೆಂದರೆ ಈ ವರ್ಷ ನಾವು ನಮ್ಮ ಕಾರ್ಖಾನೆಗೆ ಕಬ್ಬು ಕಳುಹಿಸಿದ ಎಲ್ಲಾ ರೈತ ಬಾಂಧವರಿಗೆ ಪ್ರತಿ ಟನ್ ಗೆ ಅರ್ಧ ಕೇಜಿಯಂತೆ ಸಕ್ಕರೆ ವಿತರಿಸುವ ಕಾರ್ಯಕ್ರಮವನ್ನಾ ಯರಗಟ್ಟಿ, ಗೋಕಾಕ, ಹಾಗೂ ಮಮದಾಪೂರ ಈ ರೀತಿ ಮೂರು ವಿಭಾಗಗಳಾಗಿ ವಿಂಗಡಿಸಿ ಈ ಮೂರು ಝೋನ್ ಗಳಲ್ಲಿ ಸಕ್ಕರೆ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ. …
Read More »ನಮ್ಮ ನೀರು ನಾವು ಬಳಸಿಕೊಳ್ಳಲು ತಮಿಳುನಾಡು ಹಸ್ತಕ್ಷೇಪ ಸರಿಯಲ್ಲ: ಎಂ.ಬಿ.ಪಾಟೀಲ
ವಿಜಯಪುರ: ಮೇಕೆದಾಟು ಯೋಜನೆಯಡಿ ನಮ್ಮ ನೀರನ್ನು ನಾವು ಬಳಸಿಕೊಳ್ಳುವುದಕ್ಕೆ ತಮಿಳುನಾಡು ಸರ್ಕಾರ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಮಾಜಿ ನೀರಾವರಿ ಸಚಿವ ಎಂ.ಬಿ.ಪಾಟೀಲ ಹೇಳಿದರು. ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ಈ ಯೋಜನೆಯಿಂದ ಬೆಂಗಳೂರಿಗೆ ಕುಡಿಯುವ ನೀರಿನ ಪೂರೈಕೆ ಸಹಾಯವಾಗಲಿದೆ. ಅದಕ್ಕಾಗಿ ರಾಜ್ಯ ಸರ್ಕಾರ ಸರ್ವಪಕ್ಷ ಸಭೆ ಕರೆದು ಅಭಿಪ್ರಾಯ ಪಡೆದು ನಂತರ ಕೇಂದ್ರದ ಮೇಲೆ ಒತ್ತಡ ಹಾಕಬೇಕು ಎಂದು ಆಗ್ರಹಿಸಿದರು. ನಮ್ಮ ನೀರನ್ನು ನಾವು ಬಳಕೆ ಮಾಡಿಕೊಳ್ಳುತ್ತಿದ್ದೇವೆ. ತಮಿಳುನಾಡು …
Read More »ಕೊರೊನಾ ಪಾಸಿಟಿವ್ ಬಂತೆಂದು ಎಸ್ಕೇಪ್ ಆಗಿದ್ದ 96,000 ಜನರು ಪತ್ತೆ.. 400 ಮಂದಿ ಈಗಲೂ ಮಿಸ್ಸಿಂಗ್
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದ್ರೆ, ಮತ್ತೊಂದೆಡೆ ಸೋಂಕಿತರು ನಾಪತ್ತೆಯಾಗ್ತಿದ್ರು. ಇದು ಪೊಲೀಸರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿತ್ತು. ಮೊದಲನೇ ಅಲೆಗಿಂತ ಎರಡನೇ ಅಲೆಯಲ್ಲೇ ಹೆಚ್ಚು ಮಂದಿ ನಾಪತ್ತೆಯಾಗಿದ್ದರು. ಈ ನಡುವೆ ಪೊಲೀಸ್ರಿಗೆ ಸಿಕ್ಕವರು ಎಷ್ಟು ಮಂದಿ ಗೊತ್ತಾ? ಕೊರೊನಾ.. ಹೆಸ್ರು ಕೇಳಿದ್ರೆನೆ ಒಂದು ಸಮಯದಲ್ಲಿ ಎಲ್ಲರೂ ಬೆಚ್ಚಿ ಬೀಳ್ತಿದ್ರು. ಇನ್ನು ತಮಗೆ ಹೆಮ್ಮಾರಿ ತಗುಲಿದೆ ಅಂದಾಕ್ಷಣ ಅದೆಷ್ಟೋ ಸೋಂಕಿತರು ಹೆದರಿ ಹೇಳದೆ ಕೇಳದೆ ನಾಪತ್ತೆಯಾಗ್ಬಿಟ್ಟಿದ್ರು. ತಪ್ಪಿಸಿಕೊಂಡವರ …
Read More »ಲಕ್ಕಿ ಸ್ಕೀಮ್ ಹೆಸರಿನಲ್ಲಿ ಹಳ್ಳಿ ಜನರಿಗೆ ಪಂಗನಾಮ ಹಾಕಿ ಆರೋಪಿಗಳು ಪರಾರಿ
ಯಾದಗಿರಿ: ಲಕ್ಕಿ ಸ್ಕೀಮ್ ಹೆಸರಿನಲ್ಲಿ ಹಳ್ಳಿ ಜನರಿಗೆ ಪಂಗನಾಮ ಹಾಕಿ ಆರೋಪಿಗಳು ಪರಾರಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಯಾದಗಿರಿಯ ಕೆಎಎಸ್ಎಸ್ ಎಂಟರ್ಪ್ರೈಸಸ್ ಹೆಸರಿನ ಗುಂಪೊಂದು ನಿಮಗೆ ಕಾರು ,ಬೈಕ್ ಸಿಗುತ್ತದೆ ಎಂದು ಹೇಳಿ ಹಳ್ಳಿ ಜನರನ್ನು ನಂಬಿಸಿ ಲಕ್ಕಿ ಸ್ಕೀಮ್ ಹೆಸರಲ್ಲಿ ಲಕ್ಷಾಂತರ ರೂಪಾಯಿ ಹಣ ವಂಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕಳೆದ ಜನವರಿ ತಿಂಗಳಲ್ಲಿ ಯಾದಗಿರಿ ನಗರದಲ್ಲಿ ಕೆಎಸ್‌ಎಸ್ ಎಂಟರ್ಪ್ರೈಸಸ್ ಆರಂಭ ಮಾಡಿಲಾಗಿತ್ತು. 8 ಕಂತುಗಳಲ್ಲಿ ಪ್ರತಿ …
Read More »ಈ ಗ್ರಾಮದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮನೆಯಲ್ಲಿ ರಾಶಿ ರಾಶಿ ಅನ್ನಭಾಗ್ಯ ಅಕ್ಕಿ ಮೂಟೆ!
ಗದಗ: ಬಡ ಜನರಿಗೆ ಅನುಕೂಲವಾಗಲಿ ಎಂದು ಸರ್ಕಾರ ಅನ್ನಭಾಗ್ಯ ಯೋಜನೆ ಮೂಲಕ ಪಡಿತರ ಚೀಟಿಯುಳ್ಳವರಿಗೆ ನೀಡುತ್ತಿದ್ದ ಅಕ್ಕಿ ದಾರಿ ತಪ್ಪಿ ಖದೀಮರ ಪಾಲಾಗುತ್ತಿರೋದು ಬೆಳಕಿಗೆ ಬಂದಿದೆ. ಜಿಲ್ಲೆಯ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದಲ್ಲಿ ಸೈಬರ್ ಠಾಣೆಯ ಇನ್ಸ್‌ಪೆಕ್ಟರ್ ಟಿ.ಮಹಾಂತೇಶ್ ಮತ್ತು ಅವರ ತಂಡ ಕಾರ್ಯಾಚರಣೆ ನಡೆಸಿತ್ತು. ಗ್ರಾಮದ ಬಿಜೆಪಿ ಮುಖಂಡ ಮತ್ತು ಗುತ್ತಿಗೆದಾರ ಆನಂದ್ ನಾಗರಳ್ಳಿ, ಕಾಂಗ್ರೆಸ್ ಮುಖಂಡ ಮಹಬೂಬಸಾಬ್ ಮುಂಡರಗಿ ಹಾಗೂ ಷಣ್ಮುಖಪ್ಪ ಎಂಬುವವರು ಮನೆ …
Read More »1983 ವಿಶ್ವಕಪ್ ಹೀರೋ ಯಶಪಾಲ್ ಶರ್ಮಾ ನಿಧನ
ಹೊಸದಿಲ್ಲಿ: ಟೀಂ ಇಂಡಿಯಾ ಮಾಜಿ ಆಟಗಾರ, 1983 ವಿಶ್ವಕಪ್ ವಿಜೇತ ತಂಡದ ಸದಸ್ಯ ಯಶಪಾಲ್ ಶರ್ಮಾ ಇಂದು ಹೃದಯಾಘಾತದಿಂದ ನಿಧನರಾದರು. 66 ವರ್ಷದ ಯಶಪಾಲ್ ಶರ್ಮಾ ಅವರು ನೋಯ್ಡಾದಲ್ಲಿ ವಾಸವಿದ್ದರು. ಮಂಗಳವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ಮನೆಯಲ್ಲಿಯೇ ಶರ್ಮಾ ನಿಧನರಾದರು ಎಂದು ಮೂಲಗಳು ತಿಳಿಸಿದೆ. ಯಶಪಾಲ್ ಶರ್ಮಾ 1978ರಿಂದ 1983ರವರೆಗೆ ಭಾರತದ ತಂಡದ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿದ್ದರು. 37 ಟೆಸ್ಟ್ ಪಂದ್ಯಗಳನ್ನು ಆಡಿರುವ ಶರ್ಮಾ 1,606 ರನ್‌ಗಳನ್ನು ಗಳಿಸಿದ್ದಾರೆ. …
Read More »ತಿಡಗುಂದಿ ಕಾಲುವೆ, ಕೆರೆ ತುಂಬುವ ನೀರಾವರಿ ನನ್ನ ಕನಸಿನ ಯೋಜನೆ : ಎಂ.ಬಿ.ಪಾಟೀಲ
ವಿಜಯಪುರ : ರಾಜ್ಯದ ಜಲಸಂಪನ್ಮೂಲ ಸಚಿವನಾಗಿ ಸೇವೆ ಸಲ್ಲಿಸಿರುವ ನಾನು ವಿಜಯಪುರ ಜಿಲ್ಲೆ ಮಾತ್ರವಲ್ಲ ರಾಜ್ಯದ ಎಲ್ಲ ನೀರಾವರಿ ಯೋಜನೆ ಬಗ್ಗೆ ಮಾತನಾಡುವ ಅಧಿಕಾರ ಹೊಂದಿದ್ದೇನೆ. ತಿಡಗುಂದಿ ಶಾಖಾ ಕಾಲುವೆ ಹಾಗೂ 16 ಕೆರೆ ತುಂಬುವ ಯೋಜನೆ ನನ್ನ ಕನಸಿನ ಯೋಜನೆ. ಈ ಬಗ್ಗೆ ವಿಪಕ್ಷದಲ್ಲಿದ್ದರೂ ಮಾತನಾಡುವುದಕ್ಕೆ ಯಾರ ಅನುಮತಿ ಬೇಕಿಲ್ಲ ಎಂದು ಜಲಸಂಪನ್ಮೂಲ ಮಾಜಿ ಸಚಿವ ಎಂ.ಬಿ.ಪಾಟೀಲ ಪ್ರತಿಕ್ರಿಯಿಸಿದ್ದಾರೆ. ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮದೇ ಕಾಂಗ್ರೆಸ್ …
Read More »ಮಾಸ್ಕ್ ಧರಿಸದೇ ಜನರು ಗುಂಪುಗೂಡುವುದು ಕಳವಳಕಾರಿ: ಸಿಎಂಗಳ ಸಭೆಯಲ್ಲಿ ಪ್ರಧಾನಿ
ನವದೆಹಲಿ: ಎಂಟು ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ(ಜುಲೈ 13) ಕೋವಿಡ್ 19 ಪರಿಸ್ಥಿತಿ ಪುನರಾವಲೋಕನ ಮಾತುಕತೆ ನಡೆಸಿದ್ದು, ಈ ಸಂದರ್ಭದಲ್ಲಿ ಜನರು ಮುಖಕ್ಕೆ ಮಾಸ್ಕ್ ಧರಿಸದೇ ಗುಂಪುಗೂಡುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ. ಕೆಲವು ಜಿಲ್ಲೆಗಳಲ್ಲಿ ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳ ಆತಂಕಕಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳ ವರ್ಚುವಲ್ ಸಭೆಯಲ್ಲಿ ತಿಳಿಸಿದ್ದು, ಕೋವಿಡ್ ಮತ್ತಷ್ಟು …
Read More »ಕರ್ನಾಟಕದಲ್ಲೂ ಜನಸಂಖ್ಯೆ ನಿಯಂತ್ರಣ ನೀತಿ ಜಾರಿಗೊಳಿಸಲು ಇದು ಸಕಾಲ: ಸಿ.ಟಿ.ರವಿ
ಬೆಂಗಳೂರು: ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕರ್ನಾಟಕವು ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಸೂಕ್ತ ಸಮಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಉತ್ತರ ಪ್ರದೇಶದ ಜನಸಂಖ್ಯಾ ನಿಯಂತ್ರಣ ನೀತಿಯ ಬಗ್ಗೆ ಚರ್ಚೆ ಆಗುತ್ತಿರುವ ಸಮಯದಲ್ಲೇ ಸಿ.ಟಿ.ರವಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸೀಮಿತ ನೈಸರ್ಗಿಕ ಸಂಪನ್ಮೂಲಗಳು ಲಭ್ಯವಿರುವುದರಿಂದ, ಜನಸಂಖ್ಯೆಯ ಸ್ಫೋಟ ಸಂಭವಿಸಿದಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ. …
Read More »