ಬೆಂಗಳೂರು: ಮೇಕೆದಾಟು ಯೋಜನೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತನ್ನ ನಿಲುವನ್ನು ಸ್ಪಷ್ಟವಾಗಿ ತಿಳಿಸಲು ಮನವಿ ಮಾಡಿದ್ದೇವೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ನಿನ್ನೆ ಕೇಂದ್ರ ಸಚಿವರನ್ನು ಭೇಟಿ ಮಾಡಿ ಬೆಂಗಳೂರಿಗೆ ವಾಪಸ್ ಆದ ಅವರು, ಇಂದು ಸುದ್ದಿಗೋಷ್ಠಿ ಕರೆದು ಈ ಬಗ್ಗೆ ಮಾಹಿತಿ ಹಂಚಿಕೊಂಡರು. ರಾಜಕೀಯ ವಿಚಾರವಾಗಿ ಏನೇ ಇರಲಿ, ಕೇಂದ್ರ ನೀರಾವರಿ ಸಚಿವರು ನ್ಯಾಯದ ಸ್ಥಾನದಲ್ಲಿದ್ದುಕೊಂಡು ನಿರ್ಧಾರ ತಿಳಿಸಬೇಕಿದೆ ಎಂದರು. ಮಹಾದಾಯಿ, …
Read More »ಪರೀಕ್ಷಾ ಕೇಂದ್ರಗಳಲ್ಲಿ ಹಿಜಾಬ್ ನಿಷೇಧಿಸಿದರೆ ನ್ಯಾಯಾಂಗ ನಿಂದನೆ ಕೇಸ್: ಸರ್ಕಾರಕ್ಕೆ ಮುಸ್ಲಿಂ ಒಕ್ಕೂಟ ಎಚ್ಚರಿಕೆ
ಬೆಂಗಳೂರು: ಹಿಜಾಬ್ ಧರಿಸಿದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ನಿರಾಕರಿಸಿದರೆ ರಾಜ್ಯ ಸರ್ಕಾರದ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಕರ್ನಾಟಕದ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ನಿರ್ವಹಣಾ ಒಕ್ಕೂಟ ಬುಧವಾರ ಎಚ್ಚರಿಸಿತು. ಪರೀಕ್ಷೆಯ ವೇಳೆ ಹಿಜಾಬ್ ನಿಷೇಧ ಮುಂದುವರಿಯಲಿದೆ ಎಂಬ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೇಳಿಕೆಯನ್ನು ಟೀಕಿಸಿರುವ ಒಕ್ಕೂಟದ ಅಧ್ಯಕ್ಷ ಸಿ.ಆರ್.ಮುಹಮ್ಮದ್ ಇಮ್ತಿಯಾಜ್, “ಪರೀಕ್ಷಾ ಕೇಂದ್ರಗಳಲ್ಲಿ ಹಿಜಾಬ್ ನಿಷೇಧಿಸುವ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ …
Read More »ಮಹಿಳೆಯ ಕತ್ತು ಕೊಯ್ದು ಕೊಲೆ ಮಾಡಿ ಬಂಗಾರ ದೋಚಿದ ಮೂವರಿಗೆ ಜೀವಾವಧಿ ಶಿಕ್ಷೆ
ಶಿವಮೊಗ್ಗ: ಮಹಿಳೆಯ ಕತ್ತು ಕೊಯ್ದು ಕೊಲೆ ಮಾಡಿ, ಬಂಗಾರ ದೋಚಿದ್ದ ಮೂವರಿಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. 2020ರಲ್ಲಿ ಸಾಗರ ತಾಲೂಕು ಸಿರಿವಂತೆ ಗ್ರಾಮದ 44 ವರ್ಷದ ಮಹಿಳೆಯ ಕತ್ತು ಕೊಯ್ದ ದುಷ್ಕರ್ಮಿಗಳು, ಆಕೆಯ ಬಳಿ ಇದ್ದ ಚಿನ್ನಾಭರಣ ದೋಚಿದ್ದರು. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ …
Read More »ರೈತರ ನಿದ್ದೆಗೆಡಿಸಿದ್ದ ಜಾನುವಾರು ಕಳ್ಳರ ಬಂಧನ
ಹಾವೇರಿ: ಜಿಲ್ಲೆಯ ಅನ್ನದಾತರ ನಿದ್ದೆಗೆಡಿಸಿದ್ದ ಜಾನುವಾರು ಕಳ್ಳರನ್ನು ಪೊಲೀಸರು ಬಂಧಿಸುವಲ್ಲಿ ಶಿಗ್ಗಾಂವ್ ತಾಲೂಕಿನ ಬಂಕಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ದಾದಾಪೀರ್ ಕಡೇಮನಿ (35), ಜುಬೇರ್ (25), ಅಬ್ದುಲ್ ಸತ್ತರ್(38), ಪಾರೂಕ್ (23) ಮತ್ತು ಅಕ್ರಂ ಅಲಿ (25) ಎಂದು ಗುರುತಿಸಲಾಗಿದೆ. ಬಂಧಿತರಿಂದ 7 ಲಕ್ಷ 50 ಸಾವಿರ ರೂ ಮೌಲ್ಯದ ಮೂರು ಎತ್ತುಗಳು ಮತ್ತು ಬೊಲೆರೋ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಬಂಧಿತ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಫೆ.22 ರಂದು …
Read More »ಪತ್ನಿಗೆ ಚಾಕು ಇರಿದು ಪರಾರಿಯಾದ ಪತಿ
ಬೆಳಗಾವಿ: ಕುಡಿತದ ಚಟಕ್ಕೆ ದಾಸನಾಗಿದ್ದ ಪತಿಯಿಂದ ಬೇಸತ್ತು ಹಿರಿಯರ ಸಮ್ಮುಖದಲ್ಲಿ ದೂರವಾಗಿದ್ದ ಪತ್ನಿಗೆ ಚೂರಿ ಇರಿದು ಪತಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಪಾಶ್ಚಾಪುರ ಗ್ರಾಮದಲ್ಲಿ ನಡೆದಿದೆ. ಕುಡುಕ ಗಂಡನ ಕಾಟಕ್ಕೆ ಬೇಸತ್ತು ಪತ್ನಿ ದೂರವಾಗಿ ತವರು ಮನೆಯಲ್ಲಿ ವಾಸವಾಗಿದ್ದರು. ತವರು ಮನೆಯವರ ಜೊತೆಗೆ ಸಂತೆಗೆಂದು ಪಾಶ್ಚಾಪುರಕ್ಕೆ ಬಂದಿದ್ದ ವೇಳೆ ಮತ್ತೊಂದು ವಾಹನದಲ್ಲಿ ಬಂದ ಪತಿ ಹಾಲಪ್ಪ, ಪತ್ನಿ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಅಲ್ಲದೇ ಪತ್ನಿಗೆ ಹಿಂದಿನಿಂದ ಬಂದು …
Read More »ಹುಬ್ಬಳ್ಳಿಯಲ್ಲಿ ಇಂದು ಸಿದ್ಧಾರೂಢ ಸ್ವಾಮೀಜಿ ರಥೋತ್ಸವ,
ಹುಬ್ಬಳ್ಳಿ: ಮಹಾಶಿವರಾತ್ರಿ ಪ್ರಯಕ್ತ ಇಂದು ಸಂಜೆ 5 ಗಂಟೆಗೆ ನೆರವೇರಲಿರುವ ಸಿದ್ಧಾರೂಢ ಸ್ವಾಮೀಜಿಗಳ ಅದ್ಧೂರಿ ರಥೋತ್ಸಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಥೋತ್ಸವಕ್ಕೆ ಸಾಕ್ಷಿಯಾಗಲು ಸಹಸ್ರಾರು ಭಕ್ತರು ವಿವಿಧೆಡೆಯಿಂದ ಹುಬ್ಬಳ್ಳಿಯತ್ತ ಆಗಮಿಸುತ್ತಿದ್ದಾರೆ. ರಥೋತ್ಸವಕ್ಕೆ ಆಗಮಿಸುವ ಭಕ್ತರಿಗಾಗಿ ವಿಶೇಷ ಬಸ್: ಸಿದ್ಧಾರೂಢ ಸ್ವಾಮೀಜಿಯ ರಥೋತ್ಸವ ಸಂಜೆ ವೇಳೆ ನಡೆಯಲಿದೆ. ಆದ್ದರಿಂದ ರಥೋತ್ಸವದಲ್ಲಿ ಭಾಗವಹಿಸಿ ಹಿಂದಿರುಗುವ ಭಕ್ತರು ಹಾಗೂ ಇತರ ಪ್ರಯಾಣಿಕರ ಅನುಕೂಲಕ್ಕಾಗಿ ಇಂದು ರಾತ್ರಿ ಹುಬ್ಬಳ್ಳಿಯಿಂದ ಪ್ರಮುಖ ಸ್ಥಳಗಳಿಗೆ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ …
Read More »೭೫ ರ ವಜ್ರ ಮಹೋತ್ಸವಕ್ಕೇ ಸಾಕ್ಷಿಕರಿಸಿದ ಗಣೇಶವಾಡಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ
೭೫ ರ ವಜ್ರ ಮಹೋತ್ಸವಕ್ಕೇ ಸಾಕ್ಷಿಕರಿಸಿದ ಗಣೇಶವಾಡಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ಘಟಪ್ರಭಾ- ೧೯೪೯ ರಲ್ಲಿ ಆರಂಭಗೊಂಡ ಗಣೇಶವಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಈ ಭಾಗದಲ್ಲಿ ಶಿಕ್ಷಣದ ಅರಿವು ಮೂಡಿಸಿ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ರೂಪಿಸಿದ್ದಲ್ಲದೇ ಸಮಾಜದಲ್ಲಿ ಬದಲಾವಣೆಗೆ ಸಾಕ್ಷಿಯಾಗಿದ್ದು, ಈ ಶಾಲೆಗೆ ಈಗ ೭೫ ರ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸುತ್ತಿರುವುದು ಶೈಕ್ಷಣಿಕ ಕ್ರಾಂತಿಗೆ ನಾಂದಿ ಹಾಡಿದೆ ಎಂದು ಅರಭಾವಿ …
Read More »ಎಸ್ ಬಿಐ ಎಟಿಎಂ ಕಳ್ಳತನ ಸಿಸಿ ಟಿವಿಯಲ್ಲಿ ಕಳ್ಳರ ಕೈಚಳಕ ಸೆರೆ
ಬೆಳಗಾವಿ ಸಾಂಬ್ರಾ ಗ್ರಾಮದಲ್ಲಿ ಎಸ್ ಬಿಐ ಎಟಿಎಂ ಕಳ್ಳತನವಾಗಿದೆ. ಇದರಲ್ಲಿ 75,600 ರೂ. ಕಳ್ಳತನವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಹೇಳಿದರು. ಬುಧವಾರ ಸಾಂಬ್ರಾ ಗ್ರಾಮದಲ್ಲಿ ಎಟಿಎಂ ಕಳ್ಳತನವಾದ ಜಾಗವನ್ನು ಪರಿಶೀಲನೆ ನಡೆಸಿ, ಸಿಸಿ ಕ್ಯಾಮರಾ ತಪಾಸಣೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಸಿಸಿ ಟಿವಿಯಲ್ಲಿ ಕಳ್ಳರ ಕೈಚಳಕ ಸೆರೆಯಾಗಿದೆ. ಮುಖಕ್ಕೆ ಮಾಸ್ಕ್ ಧರಿಸಿ ಮೂವರು ಕಳ್ಳತನ ಮಾಡಿರುವ ದೃಶ್ಯ ಸೆರೆಯಾಗಿದೆ. ಇದೇ ರೀತಿ ಕೆಲ …
Read More »ರೌಡಿಗಳಿಗೆ ಬಿಸಿ ಮುಟ್ಟಿಸಿದ ಪೊಲೀಸರು
ಮಂಡ್ಯ : ಪುಡಿ ರೌಡಿಗಳ ಅಟ್ಟಹಾಸ ನಿಯಂತ್ರಣಕ್ಕೆ ಮುಂದಾಗಿರುವ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ, ಮೂರು ಪ್ರಕರಣಗಳಲ್ಲಿ 17 ಮಂದಿಯನ್ನು ಬಂಧಿಸಿದ್ದಾರೆ. ಈ ವೇಳೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ ಗುಂಡೇಟು ನೀಡಿದ್ದಾರೆ. ಐದಕ್ಕೂ ಅಧಿಕ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸುಭಾಷ್ ಅಲಿಯಾಸ್ ಸುಬ್ಬು ಎಂಬಾತನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಮಂಡ್ಯ ತಾಲೂಕಿನ ಬಿ.ಹೊಸೂರು ಸಮೀಪ ಕಾಲಿಗೆ ಗುಂಡು ಹೊಡೆದು ಆರೋಪಿಯನ್ನು ಬಂಧಿಸಲಾಗಿದೆ. ಈತ ಬಿ.ಹೊಸೂರು ಸಮೀಪ …
Read More »ಬೆಳಗಾವಿಯಲ್ಲಿ ಕಟರ್ ಬಳಸಿ ಎಟಿಎಂ ಹಣ ಕಳ್ಳತನ
ಬೆಳಗಾವಿ : ಗ್ಯಾಸ್ ಕಟರ್ ಮಷಿನ್ ಬಳಸಿ ದುಷ್ಕರ್ಮಿಗಳು ಎಟಿಎಂ ಹಣ ಕಳ್ಳತನ ಮಾಡಿರುವ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ. ಸಾಂಬ್ರಾ ಗ್ರಾಮದ ಮುಖ್ಯ ರಸ್ತೆಯಲ್ಲಿ ಇರುವ ಎಸ್ಬಿಐ ಬ್ಯಾಂಕ್ ಎಟಿಎಂ ಇದಾಗಿದ್ದು, ಕೇವಲ 7 ನಿಮಿಷದಲ್ಲಿ ಕಳ್ಳರು ಗ್ಯಾಸ್ ಕಟರ್ ಬಳಸಿ ಎಟಿಎಂ ಕಳ್ಳತನ ಮಾಡಿದ್ದಾರೆ. ಎಟಿಎಂನಲ್ಲಿದ್ದ 75,600 ರೂಪಾಯಿ ಹಣ ಕದ್ದೊಯ್ದಿದ್ದಾರೆ. ಸ್ಥಳಕ್ಕೆ ಮಾರಿಹಾಳ ಠಾಣೆ ಪೊಲೀಸರು ಭೇಟಿ …
Read More »