ಮಡಿಕೇರಿ: ಮಣಜೂರಿನಲ್ಲಿ ಕೊಳೆತ ಸ್ಥಿತಿಯಲ್ಲಿ ವೃದ್ಧೆ ಶವ ಪತ್ತೆಯಾದ ಕೇಸ್ಗೆ ಸಂಬಂಧಿಸಿ ವೃದ್ಧೆ ನಿಗೂಢ ಸಾವಿನ ಕಾರಣ ಬಯಲಾಗಿದೆ. ಮೊಮ್ಮಗನೇ ಅಜ್ಜಿಯನ್ನು ಕೊಂದಿದ್ದು ವೃದ್ಧೆ ಹತ್ಯೆಗೈದಿದ್ದ ಮೊಮ್ಮಗ ಮಂಜುನಾಥ್(40) ಅರೆಸ್ಟ್ ಆಗಿದ್ದಾರೆ. ಕೊಡಗಿನ ಕುಶಾಲನಗರ ತಾಲ್ಲೂಕಿನ ಮಣಜೂರಿನಲ್ಲಿ ಈ ಘಟನೆ ನಡೆದಿದೆ. ಹಣಕಾಸು ವಿಚಾರವಾಗಿ ವೃದ್ಧೆ ಗೌರಮ್ಮ ಜತೆ ಮೊಮ್ಮಗ ಮಂಜುನಾಥ್ನಿಗೆ ಭಿನ್ನಾಭಿಪ್ರಾಯವಾಗಿತ್ತು. ಮಂಜುನಾಥ್ ಕತ್ತು ಹಿಸುಕಿ ಗೌರಮ್ಮ(77) ಕೊಲೆ ಮಾಡಿದ್ದಾನೆ. ಮಣಜೂರಿನಲ್ಲಿ ಜು.3ರಂದು ಗೌರಮ್ಮ ಶವ ಪತ್ತೆಯಾಗಿತ್ತು. ಕುಶಾಲನಗರ …
Read More »ದೆಹಲಿ ರಾಜಕೀಯ ಪಡಸಾಲೆಯಲ್ಲೂ ಸೈ ಎನಿಸಿಕೊಂಡ ಬಿ.ಎಲ್. ಸಂತೋಷ್; ಮುಂದಿನ ನಡೆ ಏನು?
ಬೆಂಗಳೂರು: ಕಳೆದ ವಾರ ಕೇಂದ್ರ ಸಚಿವ ಸಂಪುಟ ಪುನರ್ರಚನೆಯ ನಂತರ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಸಂಘಟನೆಯ ಉಸ್ತುವಾರಿಯಲ್ಲಿ ಮತ್ತಷ್ಟು ಪ್ರಭಾವಿಯಾಗಿ ಬೆಳೆಯುತ್ತಿದ್ದಾರೆ ಎಂದು ಬಿಜೆಪಿ ಮತ್ತು ಆರ್‌ಎಸ್‌ಎಸ್ ಒಳಗಿನವರು ನಂಬಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಗತಗೊಳಿಸಿದ ಕೇಂದ್ರ ಸಂಪುಟ ಪುನರ್ರಚನೆಗೆ ಅಂತಿಮವಾಗಿ ಅನುಮೋದನೆ ನೀಡಿದ್ದು ಆರ್‌ಎಸ್‌ಎಸ್ ಹಿರಿಯ ನಾಯಕ ಬಿ.ಎಲ್. ಸಂತೋಷ್ ಎಂಬುದು ಈಗ ಖಚಿತವಾಗಿದೆ. ಮೂರು ವರ್ಷಗಳ ಹಿಂದೆ, ಸಂತೋಷ್ ನವದೆಹಲಿ ರಾಜಕೀಯ …
Read More »ಶಾಸಕ ಅರವಿಂದ ಬೆಲ್ಲದ್ ಪರ ಬ್ಯಾಟ್ ಮಾಡಿದ ಸಚಿವ ಉಮೇಶ್ ಕತ್ತಿ, “ಮುಂದಿನ ಮುಖ್ಯಮಂತ್ರಿ ಬೆಲ್ಲದ್, ನಿರಾಣಿ ಅಥವಾ ನಾನೇ
ಧಾರವಾಡ, ಜುಲೈ 12: “ಕರ್ನಾಟಕ ರಾಜ್ಯಕ್ಕೆ ಒಬ್ಬರೇ ಮುಖ್ಯಮಂತ್ರಿ, ಮುಂದೆ ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ ಆಗಬಹುದು,” ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಉಮೇಶ್ ಕತ್ತಿ ಭವಿಷ್ಯ ನುಡಿದರು. ಸೋಮವಾರ ಧಾರವಾಡದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಉಮೇಶ್ ಕತ್ತಿ, “ಉತ್ತರ ಕರ್ನಾಟಕಕ್ಕೆ ಅನ್ಯಾಯವಾದರೆ, ಸುಮ್ಮನಿರಲ್ಲ. ಈ ಭಾಗದ ಜನರ ಸಹಕಾರದಿಂದ ಉತ್ತರ ಕರ್ನಾಟಕ ಪ್ರತ್ಯೇಕ ಕಟ್ಟುವುದು ಶತ ಸಿದ್ಧ,” ಎಂದು ಮತ್ತೊಮ್ಮೆ ರಾಜ್ಯ ವಿಭಜನೆಯ ಮಾತುಗಳನ್ನಾಡಿದರು. …
Read More »ಕೆಆರ್ ಎಸ್ ಡ್ಯಾಮ್ ವಿಚಾರ: ಸುಮಲತಾ ಪರವಾಗಿ ಬ್ಯಾಟ್ ಬೀಸಿದ ಸಿದ್ದರಾಮಯ್ಯ
ಹುಬ್ಬಳ್ಳಿ: ಕೆಆರ್ ಎಸ್ ಡ್ಯಾಮ್ ಬಿರುಕು ಬಿಟ್ಟಿದೆ ಎಂದು ಸಂಸದೆ ಸುಮಲತಾ ಆರೋಪ ಮಾಡಿದ್ದಾರೆ. ಅವರು ಆರೋಪ ಮಾಡಿದ ನಂತರ ಸರ್ಕಾರವಾಗಲಿ, ಗಣಿ ಇಲಾಖೆಯಾದರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಬೇಕಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಸುಮಲತಾ ಅವರು ತಮ್ಮ ಪುತ್ರನನ್ನು ಸೋಲಿಸಿದ್ದಕ್ಕೆ ಕುಮಾರಸ್ವಾಮಿಯವರು ಆರೋಪಕ್ಕೆ ಮುಂದಾಗಿರಬಹುದು. ಕೆಆರ್ ಎಸ್ ಸುತ್ತಮುತ್ತಲಿನ 20 ಕಿಲೋ ಮೀಟರ್ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಅಲ್ಲಿ ಜೆಡಿಎಸ್ ನಾಯಕರ ಗಣಿ ಕಂಪನಿಗಳು …
Read More »ಎಸ್‌ಎಸ್ ಎಲ್ ಸಿ ಪರೀಕ್ಷೆ ನಡೆಸಲು ಸಮ್ಮತಿಸಿದ ಹೈಕೋರ್ಟ್
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿಸಿದೆ. ಕೋವಿಡ್ ಹಿನ್ನೆಲೆಯಲ್ಲಿ ದ್ವೀತಿಯ ಪಿಯು ಪರೀಕ್ಷೆ ರದ್ದುಪಡಿಸಿರುವಂತೆ ಹತ್ತನೇ ತರಗತಿ ಪರೀಕ್ಷೆಗಳನ್ನೂ ಸಹ ರದ್ದುಪಡಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದು ಒಳ್ಳೆಯದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಕೋವಿಡ್ ಸುರಕ್ಷಿತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಪರೀಕ್ಷೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಈ ಬಾರಿ ಎಸ್‌ಎಸ್‌ಎಲ್ …
Read More »ಮಾಟ-ಮಂತ್ರ ಎಂದು ಜನರಿಗೆ ಮೋಸ ಮಾಡುತ್ತಿದ್ದ ಡೋಂಗಿ ಬಾಬಾನಿಗೆ ಸ್ಥಳೀಯರಿಂದ ಹಿಗ್ಗಾಮುಗ್ಗಾ ಥಳಿತ
ಗದಗ: ಕಷ್ಟಪಟ್ಟು ಮೈ ಬಗ್ಗಿಸಿ ದುಡಿಯದೇ ಆರಾಮಾಗಿ ಹಣ ಮಾಡಲು ಮುಂದಾಗಿದ್ದ, ಜನರನ್ನು ನಂಬಿಸಿ ಹಣ ಮಾಡುತ್ತಿದ್ದ ಡೋಂಗಿ ಬಾಬಾನಿಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಗದಗ ನಗರದ ಗಂಗಿಮಡಿ ಆಶ್ರಯ ಕಾಲೋನಿಯಲ್ಲಿ ಡೋಂಗಿ ಬಾಬಾ ಅಲಿಯಾಸ್ ಆಸೀಫ್ ಜಾಗಿರದಾರ್ ಎಂಬುವ ವ್ಯಕ್ತಿ ಜನರನ್ನು ನಂಬಿಸಿ ಮೋಸ ಮಾಡುತ್ತಿದ್ದ. ಸದ್ಯ ಈತನ ಕೃತ್ಯ ಬಯಲಾಗಿದ್ದು ಸ್ಥಳೀಯರು ಡೋಂಗಿ ಬಾಬಾನಿಗೆ ತಕ್ಕ ಪಾಠ ಕಲಿಸಿದ್ದಾರೆ. ಮೂಲತಃ ವಿಜಯಪುರ ಜಿಲ್ಲೆಯವನಾಗಿದ್ದ ಡೋಂಗಿ ಬಾಬಾ ಅನೇಕ …
Read More »ಹಾಳಾದ ರಸ್ತೆ, ಸೇತುವೆ ದುರಸ್ತಿಪಡಿಸಿ: ಅಧಿಕಾರಿಗಳಿಗೆ ಸಚಿವ ಸೂಚನೆ
ಬೀದರ್: ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ರಸ್ತೆ ಹಾಗೂ ಸೇತುವೆಗಳು ಹಾಳಾಗಿವೆ. ತಕ್ಷಣ ದುರಸ್ತಿ ಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೆಲವು ಕಡೆಗಳಲ್ಲಿ ರಸ್ತೆ ಮೇಲೆ ಮಳೆ ನೀರು ನಿಂತು ರಸ್ತೆಯೇ ಕಾಣದಂತಹ ಸ್ಥಿತಿಯಿದೆ. ರಸ್ತೆಗಳ ಮೇಲೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ರಸ್ತೆಗಳಲ್ಲಿ ಉರುಳಿ ಬಿದ್ದ ಮರಗಳನ್ನು ತೆರವುಗೊಳಿಸಿ, ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ಅಲ್ಲಲ್ಲಿ …
Read More »ಹುಬ್ಬಳ್ಳಿ: ನೆಲೆ ನಿಂತರೂ ಅಲೆಮಾರಿಗಳಿಗಿಲ್ಲ ಸೌಲಭ್ಯ
ಕಲಬುರ್ಗಿ: ಡಾಂಬರ್ ಕಾಣದ, ತಗ್ಗು ಗುಂಡಿಗಳಿಂದ ಕೂಡಿದ ದೂಳುಮಯ ರಸ್ತೆ, ಮಳೆ ಬಂದರೆ ಸೋರುವ ಜೋಪಡಿಗಳು, ಚರಂಡಿ ಇಲ್ಲದೆ ಎಲ್ಲೆಂದರಲ್ಲಿ ನಿಂತಿರುವ ತ್ಯಾಜ್ಯ ನೀರು… ನಗರ ಹೊರವಲಯದ ಶಹಾಬಾದ್ ರಸ್ತೆಯಲ್ಲಿನ ಅಲೆಮಾರಿ ಬುಡ್ಗ ಜಂಗಮ ಕಾಲೊನಿಯ ದುಸ್ಥಿತಿ ಇದು. ರಾಜ್ಯದ ವಿವಿಧ ಭಾಗಗಳಿಂದ ಬಂದು ಕಳೆದ 8 ವರ್ಷಗಳಿಂದ ಇಲ್ಲಿಯೇ ನೆಲೆ ಕಂಡುಕೊಂಡಿರುವ ಬುಡ್ಗ ಜಂಗಮ ಸಮುದಾಯದ 200ಕ್ಕೂ ಹೆಚ್ಚು ಕುಟುಂಬಗಳು ಮೂಲಸೌಲಭ್ಯದಿಂದ ವಂಚಿತವಾಗಿವೆ. ಯಾದಗಿರಿ ಜಿಲ್ಲೆ ಯರಗೋಳ ಗ್ರಾಮದ …
Read More »ಮುಳ್ಳೂರು ಘಾಟ್ ಮಾರ್ಗದಲ್ಲೆ ಪ್ರಯಾಣ: ಆತಂಕ
ರಾಮದುರ್ಗ (ಬೆಳಗಾವಿ ಜಿಲ್ಲೆ): ಕೆಎಸ್‌ಆರ್‌ಟಿಸಿ ಬಸ್‌ಗಳು ಸೇರಿದಂತೆ ವಾಹನಗಳು ಅಪಾಯಕಾರಿಯಾದ ರಸ್ತೆಯಲ್ಲೇ ಸಂಚರಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ‘ಮೃತ್ಯುಕೂಪ’ ಎಂದೇ ಅಪಖ್ಯಾತಿ ಹೊಂದಿದ್ದ ಇಲ್ಲಿನ ಮುಳ್ಳೂರು ಘಾಟ್‌ನಲ್ಲಿ ವಾಹನಗಳಲ್ಲಿ ಹೋಗುವವರು ಕೈಯಲ್ಲಿ ಜೀವ ಹಿಡಿದುಕೊಂಡೆ ಪ್ರಯಾಣಿಸಬೇಕಿತ್ತು. ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಪಘಾತಗಳಾಗಿ ಸಾವು-ನೋವು ಸಂಭವಿಸಿರುವ ಘಾಟ್ ಸುಧಾರಣೆಗೆ ಸಾಕಷ್ಟು ಹೋರಾಟಗಳು ನಡೆದಿದ್ದವು. ಹೊಸ ಮಾರ್ಗ ನಿರ್ಮಿಸುವಂತೆ ಬೇಡಿಕೆ ಇತ್ತು. ಹಿಂದಿನ ಶಾಸಕ ಅಶೋಕ ಪಟ್ಟಣ ಅವರ ಪ್ರಯತ್ನದಿಂದ ರಾಜ್ಯ ಸರ್ಕಾರದಿಂದ ವಿಶೇಷ …
Read More »3300 ಕ್ಕೂ ಹೆಚ್ಚು ಬ್ಯಾಂಕ್ ಹುದ್ದೆಗಳ ನೇಮಕಾತಿ, ಕನ್ನಡದಲ್ಲಿ ನಡೆಯಲ್ಲ ಎಕ್ಸಾಮ್
ಬೆಂಗಳೂರು: ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ನಡೆವುದಾಗಿ ಹೇಳಲಾಗಿತ್ತು. ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ -ಐಬಿಪಿಎಸ್ ಈ ಬಗ್ಗೆ ಭರವಸೆ ನೀಡಿತ್ತಾದರೂ, 11 ರಾಷ್ಟ್ರೀಕೃತ ಬ್ಯಾಂಕುಗಳ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಹೇಳಲಾಗಿದೆ. ಕೆನರಾ ಬ್ಯಾಂಕ್ 682 ಹುದ್ದೆಗಳು, ಬ್ಯಾಂಕ್ ಆಫ್ ಇಂಡಿಯಾ 209 ಹುದ್ದೆಗಳು ಸೇರಿದಂತೆ 3300 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, …
Read More »