Breaking News

ತಂದೆ ಮನೆಯಲ್ಲೇ ಕಳವು ಮಾಡಿದ್ದ ಸುಪುತ್ರನೊಬ್ಬ ಜೈಲುಪಾಲಾಗಿರುವ ಘಟನೆ

ಕೊಡಗು: ತಂದೆ ಮನೆಯಲ್ಲೇ ಕಳವು ಮಾಡಿದ್ದ ಸುಪುತ್ರನೊಬ್ಬ ಜೈಲುಪಾಲಾಗಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪೊನ್ನಂಪೇಟೆಯ ಗಣಪತಿ ನಗರದಲ್ಲಿ ನಡೆದಿದೆ. ತನ್ನ ತಂದೆ ತಮಿಳರ ಆರ್ಮುಗಂ ಮನೆಯಲ್ಲಿ ಕಳ್ಳತನ ಮಾಡಿದ್ದ ಮಗ ಸತ್ಯ ಜೈಲು ಸೇರಿದ್ದಾನೆ. ಅಂದ ಹಾಗೆ, ಸತ್ಯ ತನ್ನ ತಂದೆಯ ಮನೆಯಿಂದ ಮಿಕ್ಸಿ, DVD ಪ್ಲೇಯರ್​ ಸೇರಿದಂತೆ ಮತ್ತಿತ್ತರ ವಸ್ತುಗಳನ್ನು ಕದ್ದೊಯ್ದಿದ್ದನು. ಆರ್ಮುಗಂ ದೂರು ನೀಡಿದ ಹಿನ್ನೆಲೆಯಲ್ಲಿ ಮಗ ಸತ್ಯನನ್ನ ಗೋಣಿಕೊಪ್ಪ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಮಿಕ್ಸಿ ಹಾಗೂ …

Read More »

‘ಕೈ’ ಅಭ್ಯರ್ಥಿ ಕುಸುಮಾ ಪರ ಬೈಕ್ ರಾಲಿ ನಡೆಸಿ ಶಾಸಕ ಜಮೀರ್ ಅಹ್ಮದ್ ಖಾನ್​

ಬೆಂಗಳೂರು: ನವೆಂಬರ್​ 3ರಂದು ಆರ್.ಆರ್.ನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ‘ಕೈ’ ಅಭ್ಯರ್ಥಿ ಕುಸುಮಾ ಪರ ಬೈಕ್ ಱಲಿ ನಡೆಸಿ ಶಾಸಕ ಜಮೀರ್ ಅಹ್ಮದ್ ಖಾನ್​ ಮತಯಾಚನೆ ಮಾಡಿದರು. ಬುಲೆಟ್​ ಬೈಕ್​ ಮೇಲೆ ಬಿಂದಾಸ್​ ಆಗಿ ಏರಿಯಾದಲ್ಲೆಲ್ಲಾ ಱಲಿ ಹೊರಟ ಶಾಸಕ ಬಳಿಕ ಕಾರ್ಯಕರ್ತರಿಗೆ ಹಾಲು ಸಹ ವಿತರಿಸಿದರು. ಕ್ಯಾಂಟೀನ್​ ಒಂದರಲ್ಲಿ ಖುದ್ದು ತಾವೇ ಕಾರ್ಯಕರ್ತರಿಗೆ ಬಾದಾಮಿ ಹಾಲು ವಿತರಿಸಿದರು.

Read More »

24 ಗಂಟೆಗಳಲ್ಲಿಯೇ 195 ಕೋಟಿ ರೂ ಅನುದಾನ ಬಿಡುಗಡೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರ: ‘ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಅನೇಕ ಬಾರಿ ಭೇಟಿಯಾಗಿದ್ದೆ. ವಿಜಯಪುರಕ್ಕೆ ಅನುದಾನ ಬಿಡುಗಡೆ ಮಾಡುವ ಸಂಬಂಧ ಮನವಿ ಮಾಡಿದ್ದಾಗ ಅನುದಾನದ ಭರವಸೆ ನೀಡಿದ್ದರು. ಆದರೆ ಬಿಡುಗಡೆ ಮಾಡಿರಲಿಲ್ಲ. ಆದರೆ ಮೊನ್ನೆ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡಿದ್ದರ ಫಲವಾಗಿ ಕೇವಲ 24 ಗಂಟೆಗಳಲ್ಲಿಯೇ 195 ಕೋಟಿ ರೂ ಅನುದಾನ ಬಿಡುಗಡೆ ಮಾಡಿದ್ದಾರೆ’ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲಿದ್ದಾರೆ, ಉತ್ತರ ಕರ್ನಾಟಕದವರೊಬ್ಬರು …

Read More »

ಬೆಳಗಾವಿ: ಮಹರ್ಷಿ ವಾಲ್ಮೀಕಿ ಜಯಂತಿ ಮೆರವಣಿಗೆಗೆ ಡಿಸಿ ಚಾಲನೆ

ಬೆಳಗಾವಿ : ಮಹರ್ಷಿ ವಾಲ್ಮೀಕಿ ಜಯಂತಿಯ ಮೆರವಣಿಗೆಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಶನಿವಾರ ನಗರದ ಕಿಲ್ಲಾ ಕೋಟೆ ಯ ಮುಂಭಾಗದಿಂದ ಚಾಲನೆ ನೀಡಿದರು. ಕರೋನಾ ಮಹಾಮಾರಿಯಿಂದಾಗಿ ಅತ್ಯಂತ ಸರಳ ರೀತಿಯಲ್ಲಿ ವಾಲ್ಮೀಕಿ ಜಯಂತಿಗೆ ಚಾಲನೆ ನೀಡಲಾಯಿತು. ಕಿಲ್ಲಾ ಕೋಟೆಯ ಮುಂಭಾಗದಿಂದ ಆರಂಭವಾದ ಮೆರವಣಿಗೆ ಸಂಗೊಳ್ಳಿ ರಾಯಣ್ಣನ ವೃತ್ತ, ಕೋಟ್೯ ಮಾರ್ಗವಾಗಿ ಚನ್ನಮ್ಮ ವೃತ್ತದಿಂದ ಜಿಪಂ ಸಭಾಂಗಣದ ವರೆಗೆ ಸಾಗಿತು. ಈ‌ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಶಾಸಕ ಅನಿಲ್ …

Read More »

ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿ ಶುಭಕೋರಿದ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ

ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು, ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಆಚರಿಸಿದರು.     ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬಳಿಕ ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ವಿವೇಕ ಜತ್ತಿ, ಪಾಂಡು ಮನ್ನಿಕೆರಿ, ಶಿವನಗೌಡ ಪಾಟೀಲ, ಪ್ರಕಾಶ‌ ಬಸ್ಸಾಪುರೆ, ಪಾಂಡು ರಂಗಸುಬೆ, …

Read More »

ಟಿಪ್ಪರ್ ಲಾರಿ ಹರಿದು ಪಾದಚಾರಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ

ಹೊಸಕೋಟೆ: ಟಿಪ್ಪರ್ ಲಾರಿ ಹರಿದು ಪಾದಚಾರಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣದ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ನಡೆದಿದೆ. ಮೇಡಹಳ್ಳಿ ನಿವಾಸಿ ಸಂಜು(24) ಮೃತ ದುರ್ದೈವಿ.           ಅಪಘಾತದ ಬಳಿಕ ಸ್ಥಳದಲ್ಲೇ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ಕೊಟ್ಟು, ಪರಿಶೀಲನೆ ನಡೆಸಿದರು.

Read More »

ಗ್ರಾಮದಲ್ಲಿ ರಸ್ತೆ ಡಾಂಬರೀಕರಣ ಚಾಲನೆ ನೀಡಲಾಯಿತು.

ಬೆಳಗಾವಿ: ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗ ಶುಕ್ರವಾರ ಚಾಲನೆ ನೀಡಲಾಯಿತು. ಹಲಗಾ ಗ್ರಾಮದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಚಾಲನೆ ನೀಡಿದರು. ಮಣ್ಣೂರು ಗ್ರಾಮದಲ್ಲಿ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಯುವ ಕಾಂಗ್ರೆಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮೃಣಾಲ ಹೆಬ್ಬಾಳಕರ ಮತ್ತು ಮುಖಂಡರು ಭೂಮಿಪೂಜೆ ಸಲ್ಲಿಸಿದರು. ಮುಖಂಡರಾದ ಅಶೋಕ ಜಕ್ಕಣ್ಣವರ, ಅಪ್ಪಣ್ಣ ಜಿ. ಭಾಗಣ್ಣವರ, ರಾಜು ಬಡವನ್ನವರ, ಅರ್ಜುನ ಪಾಟೀಲ, …

Read More »

ಇಲ್ಲಿ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಮರು ಕೋವಿಡ್ ಕಾರಣದಿಂದಾಗಿ ಸರಳವಾಗಿ ಶನಿವಾರ ಆಚರಿಸಿದರು.

ಕುಡಚಿ: ಇಲ್ಲಿ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಮರು ಕೋವಿಡ್ ಕಾರಣದಿಂದಾಗಿ ಸರಳವಾಗಿ ಶನಿವಾರ ಆಚರಿಸಿದರು. ಪಟ್ಟಣ ಹಾಗೂ ಗ್ರಾಮೀಣ ಭಾಗದಿಂದ ಬಂದಿದ್ದ ಅವರು ಮಾಸಾಹೇಬಾ ದರ್ಗಾದಿಂದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಮೆರವಣಿಗೆಯುದ್ದಕ್ಕೂ ದೇವರ ನಾಮಸ್ಮರಣೆ ಮಾಡಿದರು. ಅವರಿಗೆ ಮುಖಂಡರು ಸಿಹಿ, ಶರಬತ್, ಚಹಾ ವಿತರಿಸಿದರು. ಮುಖಂಡರಾದ ಮಹಮ್ಮದ ಹುಸೇನ ಓಮಿನಿ, ಸುಲ್ತಾನ ವಾಟೆ, ರಾಜು ನಿಡಗುಂದಿ, ಆಶಿಫ ಚಮನಶೇಖ, ಆತೀಫ ಪಟಾಯಿತ, ಅಮೀನ ವಾಟೆ ಇದ್ದರು. ಮಸೀದಿಗಳನ್ನು ಸಿಂಗರಿಸಲಾಗಿತ್ತು. ಪಿಎಸ್‌ಐ …

Read More »

ಬಿಜೆಪಿ ನಾಯಕರ ನಡುವೆ ‘ಸಮನ್ವಯ’ ಮೂಡಿಸುವ ಕಾರ್ಯಕ್ಕೆ ಹೈಕಮಾಂಡ್ ತಂತ್ರ ರೂಪಿಸಿದೆ.

ಬೆಳಗಾವಿ: ಅನಿರೀಕ್ಷಿತವಾಗಿ ಎದುರಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಬಿಜೆಪಿ ನಾಯಕರ ನಡುವೆ ‘ಸಮನ್ವಯ’ ಮೂಡಿಸುವ ಕಾರ್ಯಕ್ಕೆ ಹೈಕಮಾಂಡ್ ತಂತ್ರ ರೂಪಿಸಿದೆ. ಇದರ ಮೊದಲ ಭಾಗವಾಗಿ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಅವಿರೋಧ ಆಯ್ಕೆ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಆದೇಶಿಸಿದೆ. ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಒಂದು ಬಣ, ಹುಕ್ಕೇರಿ ಶಾಸಕ ಉಮೇಶ ಕತ್ತಿ ಹಾಗೂ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ …

Read More »

ಉಪಚುನಾವಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ದೆಹಲಿಗೆ ಪ್ರಯಾಣ ಬೆಳೆಸಿ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ ಕುರಿತು ನಿರ್ಣಯ ಕೈಗೊಳ್ಳಲಿದ್ದಾರೆ.

ಬೆಂಗಳೂರು: ವಿಧಾನಪರಿಷತ್‌ ಚುನಾವಣೆ ಮತ್ತು ಉಪಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಸಚಿವ ಸಂಪುಟ ವಿಸ್ತರಣೆ ಮತ್ತೆ ಚರ್ಚೆಯ ಮುನ್ನೆಲೆಗೆ ಬಂದಿದ್ದು, ಉಪಚುನಾವಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ದೆಹಲಿಗೆ ಪ್ರಯಾಣ ಬೆಳೆಸಿ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ ಕುರಿತು ನಿರ್ಣಯ ಕೈಗೊಳ್ಳಲಿದ್ದಾರೆ. ಉಪಚುನಾವಣೆ ತರುವಾಯ ದೆಹಲಿಗೆ ತೆರಳುತ್ತೇನೆ. ಅಲ್ಲಿಗೆ ಹೋಗಿ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ …

Read More »