Breaking News

ಪತ್ನಿಗೆ ವಿಚ್ಚೇದನ ನೀಡಬಹುದು ಮಕ್ಕಳಿಗಲ್ಲ ಎಂದ ಸುಪ್ರೀಂ ಕೋರ್ಟ್‌

ನವದೆಹಲಿ, ;ಪತ್ನಿಗೆ ವಿಚ್ಛೇದನ ನೀಡಬಹುದು. ಆದರೆ, ಮಕ್ಕಳಿಗೆ ವಿಚ್ಛೇದನ ನೀಡುವುದು ಸಾಧ್ಯವಿಲ್ಲ ಎಂದು ವಿಚ್ಛೇದನ ಪ್ರಕರಣವೊಂದರ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ತಿಳಿಸಿದೆ. ಸಂವಿಧಾನ ವಿಧಿ-142ರಡಿ ದಂಪತಿಗೆ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ನೀಡಿದ ಸುಪ್ರೀಂಕೋರ್ಟ್ ನ್ಯಾಯಾಧೀಶರಾದ ಬಿ.ವೈ.ಚಂದ್ರಚೂಡ್ ಮತ್ತು ಎಂ.ಆರ್.ಶಾ ಅವರನ್ನೊಳಗೊಂಡ ನ್ಯಾಯಪೀಠ ಒಪ್ಪಂದದ ದಂಪತಿಗಳು ಪರಿಹಾರದ ಷರತ್ತುಗಳಿಗೆ ಬದ್ಧರಾಗಿರಬೇಕು. ಮಕ್ಕಳ ಉಸ್ತುವಾರಿ, ಆರೈಕೆಗೆ ಆರು ವಾರಗಳೊಳಗಾಗಿ 4 ಕೋಟಿ ಪರಿಹಾರವನ್ನು ಪತಿ ಪತ್ನಿಗೆ ನೀಡಬೇಕು ಎಂದು ಹೇಳಿದೆ. …

Read More »

ಪ್ರವಾಹ ಸಂತ್ರಸ್ತ ಕುಟುಂಬಗಳಿಗೆ ಆಹಾರ ಕಿಟ್ ರವಾನೆ

ನಾಯಕನಹಟ್ಟಿ: ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಸಂತ್ರಸ್ತ ಕುಟುಂಬಗಳಿಗೆ ಆಹಾರದ ಕಿಟ್ ನೀಡಲು ಮುಂದಾಗಿರುವ ಮುಸ್ಲಿಂ ಸಮುದಾಯದ ಕಾರ್ಯ ಶ್ಲಾಘನೀಯ ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ಹೇಳಿದರು. ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಸಂತ್ರಸ್ತ ಕುಟುಂಬಗಳಿಗೆ ಆಹಾರದ ಕಿಟ್ ರವಾನಿಸುವ ಕಾರ್ಯಕ್ಕೆ ಪಟ್ಟಣದ ಜಾಮಿಯಾ ಮಸೀದಿಯಲ್ಲಿ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು. ಜಾಮಿಯಾ ಮಸೀದಿ ಅಧ್ಯಕ್ಷ ಸೈಯದ್‌ ಅನ್ವರ್ ಮಾತನಾಡಿ, ‘ಜಮೀಯತ್ ಉಲಮಾ-ಎ-ಹಿಂದ್ ಮತ್ತು ಜಾಮಿಯ ಮಸೀದಿ ಸಹಯೋಗದಲ್ಲಿ …

Read More »

ಅಫ್ಘಾನಿಸ್ಥಾನದಲ್ಲಿ ಸಿಲುಕಿರುವ ಕನ್ನಡಿಗರ ಕರೆತರಲು ಎಡಿಜಿಪಿ ನೇಮಕ

ಬೆಂಗಳೂರು ; ತಾಲಿಬಾನ್ ಕಪಿಮುಷ್ಠಿಯಲ್ಲಿರುವ ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಹಿರಿಯ ಐಪಿಎಸ್ ಅಧಿಕಾರಿಯನ್ನ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಉಮೇಶ್ ಕುಮಾರ್ ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ‌. ಈಗಾಗಲೇ ಕೇಂದ್ರ ಸರ್ಕಾರದಿಂದ ಹೆಲ್ಪ್ ಲೈನ್ ಆರಂಭಿಸಲಾಗಿದೆ.ಇದರ ಬೆನ್ನಲ್ಲೇ ಅಫ್ಘನ್​ನಲ್ಲಿರುವ ಕನ್ನಡಿಗರನ್ನ ಕರೆತರುವ ಜವಾಬ್ದಾರಿ ಉಮೇಶ್ ಕುಮಾರ್ ಹೆಗಲಿಗೆ ಏರಿದೆ. ಅಫ್ಘಾನಿಸ್ತಾನದಲ್ಲಿ ಸಿಲುಕಿದ ಭಾರತೀಯರನ್ನು ಈಗಾಗಲೇ ಸುರಕ್ಷಿತವಾಗಿ ಕರೆತರುವ …

Read More »

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಮಾರ್ಗಸೂಚಿ ಬಿಡುಗಡೆ

ಬೆಳಗಾವಿ : ಜಿಲ್ಲೆಯಲ್ಲಿ ೨೦೨೧ ನೇ ಸಾಲಿನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ವಿವಿಧ ಕಾರಣಗಳಿಂದ ಖಾಲಿ ಇರುವ ನಗರ ಸ್ಥಳೀಯ ಸಂಸ್ಥೆಗಳ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ. ಕೋವಿಡ್ -೧೯ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಬಹಿರಂಗ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು ನಿರ್ದೇಶನಗಳನ್ನು ನೀಡಿದೆ. ಅಭ್ಯರ್ಥಿಯೂ ಸೇರಿ ಗರಿಷ್ಟ ೫ ಜನ ಬೆಂಬಲಿಗರೊಂದಿಗೆ ಫೇಸ್ ಮಾಸ್ಕ್ (ಈಚಿಛಿe ಒಚಿsಞ) ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು …

Read More »

ಜೋಗ ವೀಕ್ಷಣೆಗೆ ಷರತ್ತು; ಪ್ರವಾಸಿಗರ ಸಂಖ್ಯೆ ಭಾರಿ ಕುಸಿತ!

ಶಿವಮೊಗ್ಗ, ಆಗಸ್ಟ್ 18; ವಿಶ್ವವಿಖ್ಯಾತ ಜೋಗ ಜಲಪಾತ ಮೈದುಂಬಿ ಹರಿಯುತ್ತಿದ್ದರೂ, ಪ್ರವಾಸಿಗರ ಸಂಖ್ಯೆ ಕ್ಷೀಣಿಸಿದೆ. ವಾರಾಂತ್ಯದಲ್ಲೂ ಸೀಮಿತ ಪ್ರವಾಸಿಗರಿಗೆ ಮಾತ್ರ ಜಲಧಾರೆ ಕಣ್ತುಂಬಿಕೊಳ್ಳುವ, ಅದರ ಮುಂದೆ ಫೋಟೊ ಕ್ಲಿಕ್ಕಿಸಿಕೊಳ್ಳುವ ಅವಕಾಶ ಸಿಗುತ್ತಿದೆ. ಈ ಬಾರಿಯೂ ಶಿವಮೊಗ್ಗದ ಪ್ರವಾಸೋದ್ಯಮಕ್ಕೆ ಕೋವಿಡ್ ಭಾರೀ ಪೆಟ್ಟು ಕೊಟ್ಟಿದೆ. ಮಳೆಗಾಲ ಆರಂಭವಾಗುತ್ತಿದ್ದಂತೆ ಜೋಗ ಜಲಾಪಾತ ಮೈದುಂಬಿಕೊಂಡಿದೆ. ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳು ಭೋರ್ಗರೆಯುತ್ತ ಧುಮ್ಮಿಕ್ಕುತ್ತಿವೆ. ಪ್ರತಿ ವರ್ಷ ಜೋಗವನ್ನು ಕಣ್ತುಂಬಿಕೊಳ್ಳಲು ದೂರದ ಊರುಗಳು, ಹೊರ …

Read More »

ತಜ್ಞರ ವರದಿಯ ಆದರದ ಮೇಲೆ 9 ರಿಂದ 12 ನೇ ತರಗತಿ ನಡೆಸಲು ತೀರ್ಮಾನ : ಶಿಕ್ಷಣ ಸಚಿವ

ಚಿತ್ರದುರ್ಗ: ತಾಂತ್ರಿಕ ಸಮಿತಿ, ಟಾಸ್ಕ್ ಫೋರ್ಸ್ ಹಾಗೂ‌ ಮಕ್ಕಳ ತಜ್ಞರ ವರದಿಯ ಆಧಾರದ ಮೇಲೆ 9 ರಿಂದ 12 ನೇ ತರಗತಿಗಳನ್ನು ನಡೆಸಲು ಸರ್ಕಾರ ಮುಂದಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು. ಚಿತ್ರದುರ್ಗ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಒಂದೂವರೆ ವರ್ಷದಿಂದ ಕೊರೊನಾ ನಡುವೆಯೂ ಮಕ್ಕಳಿಗೆ ಕಲಿಕಾ ವಾತಾವರಣ ನಿರ್ಮಿಸಲು ಆನ್ಲೈನ್ ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಆದರೂ, ಶೇ.30 ರಿಂದ 40 ರಷ್ಟು …

Read More »

ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಿದ್ರೆ ಕಠಿಣ ಕ್ರಮ : ಕೇಂದ್ರ ಸಚಿವ ಭಗವಂತ ಖೂಬಾ

  ಕಲಬುರಗಿ : ನಿಗದಿತ ಬೆಲೆಗಿಂತ ರೈತರಿಗೆ ಹೆಚ್ಚಿನ ಬೆಲೆಗೆ ಗೊಬ್ಬರ ಮಾರಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಎಚ್ಚರಿಕೆ ನೀಡಿದ್ದಾರೆ.   ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಭಗವಂತ ಖೂಬಾ, 2022 ರಲ್ಲಿ ಭಾರತ ರಸಗೊಬ್ಬರ ಉತ್ಪಾದನೆಯಲ್ಲಿ ಸ್ವಾವಲಂಬನೆಯಾಗಲಿದೆ. ಡೀಲರ್ ಗಳು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಿದ್ರೆ ಕಠಿಣ ಕ್ರಮ ಕೈಗೊಳ್ಳುವಂತೆ ಕೃಷಿ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. …

Read More »

ಮಿನಿ ರಣ ರಂಗ ವಾಗಲಿದೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ

ಬೆಳಗಾವಿ-ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆಯ ಮೇಲೆ ಚುನಾವಣೆ ಎದುರಿಸಲು ಹಿಂದೇಟು ಹಾಕುವ ಲಕ್ಷಣಗಳು ಕಾಣಿಸುತ್ತಿದ್ದು ಜಾತ್ಯಾತೀತ ಸಿದ್ಧಾಂತ ಎಂದು ಹೇಳಿಕೊಳ್ಳುವ ಆಮ್ ಆದ್ಮೀ‌..ದೆಹಲಿ ಬದಲಾ ಹೈ ಬೆಲಗಾಮ್ ಬದಲೇಗಾ ಎನ್ನುವ ಘೋಷಣೆಯೊಂದಿಗೆ ಪಾಲಿಕೆ ಚುನಾವಣೆಯಲ್ಲಿ ಎಂಟ್ರಿ ಹೊಡೆದಿದೆ. ಜೊತೆಗೆ ಅಕ್ಬರ್ ಓವೈಸಿಯ ಎಂಐಎಂ ಪಾರ್ಟಿಯೂ ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ 58 ವಾರ್ಡುಗಳಲ್ಲಿ ಸ್ಪರ್ದಿಸುವ ನಿರ್ಧಾರ ಕೈಗೊಂಡಿದೆ. ಎಂಐಎಂ,ಆಮ್ ಆದ್ಮಿ ಪಾರ್ಟಿಯ ಬೆನ್ನಲ್ಲಿಯೇ ಜೆಡಿಎಸ್ ಪಕ್ಷವೂ ಬೆಳಗಾವಿ ಪಾಲಿಕೆ …

Read More »

ಅಗತ್ಯಬಿದ್ದರೆ ರಾಜ್ಯಸಭೆಯಲ್ಲಿ ನಡೆದ ಘಟನೆಗೆ ಸೂಕ್ತ ಕ್ರಮ : ಉಪ ರಾಷ್ಟಪತಿ ವೆಂಕಯ್ಯ ನಾಯ್ಡು

ಬೆಂಗಳೂರು: ರಾಜ್ಯಸಭೆ ಈಚೆಗೆ ನಡೆದ ಘಟನೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಉಪ ರಾಷ್ಟಪತಿ ವೆಂಕಯ್ಯ ನಾಯ್ಡು, ಘಟನೆಗೆ ಸಂಬಂಧಿಸಿದಂತೆ ಅಗತ್ಯಬಿದ್ದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ವಿಧಾನಸೌಧದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟಿಸಲು ಅವಕಾಶ ಇದೆ. ಆದರೆ, ಅದು ದೈಹಿಕ ಶಕ್ತಿ ಬಳಸಿಕೊಂಡು ಮಾಡುವಂತಹದ್ದಲ್ಲ. ಜನಪ್ರತಿನಿಧಿಗಳು ಇತರರಿಗೆ ಮಾದರಿ ಆಗಿರಬೇಕು. ನಮ್ಮ ನಡವಳಿಕೆಗಳು …

Read More »

ಸಂಸತ್​​ ಕಲಾಪ ಹಾಳು ಮಾಡಿದ ಕಾಂಗ್ರೆಸ್​, ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದೆ: ಸಚಿವ ಗೋವಿಂದ ಕಾರಜೋಳ

ಬೆಂಗಳೂರು: ದೇಶದ ಜ್ವಲಂತ ವಿಷಯಗಳ ಚರ್ಚೆ ಮಾಡುವ ಬದಲು ಸಂಸತ್ತಿನ ಕಲಾಪವನ್ನು ಬಲಿ ಕೊಟ್ಟು ಪ್ರಜಾಪ್ರಭುತ್ವಕ್ಕೆ ಕಾಂಗ್ರೆಸ್ ದ್ರೋಹ ಮಾಡಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 22 ರಿಂದ ಆಗಸ್ಟ್ 13 ರವರೆಗೂ ಸಂಸದ ಕಲಾಪ ನಡೆದರೂ, ಅಲ್ಲಿ ವಿರೋಧ ಪಕ್ಷದವರು ಸರಿಯಾದ ಚರ್ಚೆ ಮಾಡಲು ಅವಕಾಶ ಕೊಡಲಿಲ್ಲ. ಕರೊನಾ, ದೇಶದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಬೇಕಿತ್ತು. …

Read More »