Breaking News

ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಬೆಂಗಳೂರು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ನಗರದ ಬಸವೇಶ್ವರ ನಗರದಲ್ಲಿ ಘಟನೆ ನಡೆದಿದ್ದು, ಆರೋಪಿ ಕಲ್ಲಪ್ಪ ತನ್ನ ಪತ್ನಿ ಸುಮಿತ್ರಾ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಸಿಂಗಲ್ ಬ್ಯಾರೆಲ್ ಗನ್‍ನಿಂದ ಗುಂಡಿಕ್ಕಿ ಕಲ್ಲಪ್ಪ ಪತ್ನಿಯನ್ನು ಹತ್ಯೆಗೈದಿದ್ದಾನೆ. ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಜಿಎಂಎಸ್ ಸೆಕ್ಯೂರಿಟಿ ಏಜೆನ್ಸಿಯಲ್ಲಿ ಎಟಿಎಂಗಳಿಗೆ ಹಣ ತುಂಬುತ್ತಿದ್ದ ವಾಹನಗಳಲ್ಲಿ ಆರೋಪಿ ಕಲ್ಲಪ್ಪ ಸೆಕ್ಯೂರಿಟಿಯಾಗಿ …

Read More »

5 ಸಾವಿರ ಮಾಸ್ಕ್ ಹಂಚಿ ಮಾನವೀಯತೆ ಮೆರೆದ ಯುವ ಡಾಕ್ಟರ್

ಧಾರವಾಡ: ಜಿಲ್ಲೆಯಲ್ಲಿ ಒಬ್ಬರು ಯುವ ವೈದ್ಯರಿದ್ದಾರೆ. ಇವರು ಕೊರೊನಾ ಸಂದರ್ಭದಲ್ಲಿ ಒಂದು ದಿನವೂ ರಜೆಯನ್ನೇ ಪಡೆದಿಲ್ಲ. ಅಷ್ಟೇ ಅಲ್ಲ ಈ ದಿನಗಳಲ್ಲಿ ಕೆಲಸ ಮಾಡಿದ್ದಕ್ಕೆ ಸರ್ಕಾರ ನೀಡಿದ್ದ ಸಂಬಳವನ್ನೆಲ್ಲಾ ನೇರವಾಗಿ ಕೋವಿಡ್ ಕೆಲಸಕ್ಕೇ ನೀಡಿ ಜನರ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಹೌದು ಧಾರವಾಡದ ಕಮಲಾಪೂರ ನಿವಾಸಿಯಾದ 23 ವರ್ಷದ ಡಾ. ಮಯೂರೇಶ್ ಲೋಹಾರ್, ಕಳೆದ ಜುಲೈ ತಿಂಗಳಲ್ಲಿ ಬಿಎಎಂಎಸ್ ಮುಗಿಸಿ ನೇರವಾಗಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕು ಆಸ್ಪತ್ರೆಗೆ ಕೆಲಸಕ್ಕೆ ಹಾಜರಾಗಿದ್ದರು. …

Read More »

ಉದ್ಯಾನ ನಗರಿಯಲ್ಲಿಎರಡು ಗಂಟೆಗೂ ಹೆಚ್ಚು ಕಾಲ ಸುರಿದ ಭಾರೀ ಮಳೆ

ಬೆಂಗಳೂರು: ಉದ್ಯಾನ ನಗರಿಯಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿದಿದ್ದು, ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಸುರಿದ ಭಾರೀ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ನಗರದ ಸದಾಶಿವನಗರ, ಮೇಕ್ರಿ ಸರ್ಕಲ್, ಸಂಜಯನಗರ, ಜೆ.ಸಿ.ನಗರ, ಆರ್.ಟಿ ನಗರ, ಯಶವಂತಪುರ, ನಂದಿನಿ ಲೇಔಟ್ ಸೇರಿದಂತೆ ನಗರದ ಬಹುತೇಕ ಕಡೆಗಳಲ್ಲಿ ಮಳೆಯ ಆರ್ಭಟ ಜೋರಾಗಿತ್ತು. ಒಂದೇ ಸಮನೆ ಸುರಿದ ಮಳೆಗೆ ದ್ವಿಚಕ್ರ ವಾಹನ ಸವಾರರು ಪರದಾಡಿದರೆ. ಹಲವೆಡೆ ಟ್ರಾಫಿಕ್ ಜಾಮ್‍ನಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಇನ್ನೂ …

Read More »

ಏಳನೇ ಬಾರಿಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದನಿತೀಶ್ ಕುಮಾರ್

ಪಾಟ್ನಾ: ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಏಳನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದರು. ಪಾಟ್ನಾ ರಾಜಭವನದೊಳಗೆ ನಡೆದ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು. ನಿತೀಶ್ ಕುಮಾರ್ ನಾಲ್ಕನೇ ಅವಧಿಗೆ ಬಿಹಾರದ ಗದ್ದುಗೆ ಏರಿದ್ದಾರೆ. ಇನ್ನು ಬಿಜೆಪಿಯ ತರ್ಕಿಶೋರ್ ಪ್ರಸಾದ್ ಮತ್ತು ರೇಣು ದೇವಿ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ತರ್ಕಿಶೋರ್ ಪ್ರಸಾದ್ ಕಟಿಹಾರ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಸುಶೀಲ್ ಮೋದಿ ಅವರ ಆಪ್ತರಲ್ಲಿ …

Read More »

ಅತಿಥಿ ಶಿಕ್ಷಕರಿಗೆ ಲಾಕ್ ಡೌನ್ ಅವಧಿಯನ್ನು ಕರ್ತವ್ಯ ನಿರತ ಎಂದು ಪರಿಗಣಿಸಿ ಗೌರವಧನ ನೀಡುವಂತೆ ಯಡಿಯೂರಪ್ಪರವರಿಗೆ ಮನವಿ ಮಾಡಿದ ಸತೀಶ್ ಜಾರಕಿಹೊಳಿ

ಬೆಳಗಾವಿ: ಕೋವಿಡ್ 19ಗೆ ಸಂಬಂಧಿಸಿದಂತೆ ಪ್ರಾಥಮಿಕ, ಪ್ರೌಢ ಶಿಕ್ಷಣ, ಕಾಲೇಜು ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಲಾಕ್ ಡೌನ್ ಅವಧಿಯನ್ನು ಕರ್ತವ್ಯ ನಿರತ ಎಂದು ಪರಿಗಣಿಸಿ ಗೌರವಧನ ನೀಡುವಂತೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಿಎಂ ಯಡಿಯೂರಪ್ಪರವರಿಗೆ ಮನವಿ ಮಾಡಿದ್ದಾರೆ. ಈ ಮನವಿ ಕುರಿತು ಸಿಎಂ ಯಡಿಯೂರಪ್ಪನವರು ಶೀಘ್ರವೇ ಸೂಕ್ತ ನಿರ್ಧಾರ ಕೈಗೊಂಡು ಗೌರವಧನ ಬಿಡುಗಡೆಗೆ ಆದೇಶ ನೀಡಬೇಕೆಂದು ಅವರು …

Read More »

ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಪ್ರವೀಣ್ ಶೆಟ್ಟಿ ಸರಕಾರಕ್ಕೆ ಎಚ್ಚರಿಕೆ

ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಆದೇಶ ವಾಪಾಸ್ ಪಡೆಯದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಅಧ್ಯಕ್ಷ ಪ್ರವೀಣ್ ಶೆಟ್ಟಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಇಂದು ಮರಾಠರು ನಾಳೆ ಮಾರವಾಡಿಗಳು, ತಮಿಳರು ಹೀಗೆ ಸರಕಾರ ಬೇರೆಯವರಿಗೆ ಪ್ರಾಧಿಕಾರ ರಚನೆ ಮಾಡಲು ಮುಂದಾಗಿದೆ. ಇದು ಎಷ್ಟರ ಮಟ್ಟಿಗೆ ಸರಿ, ಸರಕಾರ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು. ಮರಾಠಿಗರು ಕನ್ನಡ ರಾಜ್ಯೋತ್ಸವದ …

Read More »

ಲಿಂಗಾಯತ ಅಭಿವೃದ್ಧಿಲಿಂಗಾಯತ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ನೀಡಬೇಕೆಂಬ ಕೂಗು ಕೇಳಿ ಬರುತ್ತಿದೆ.:ಹೊರಟ್ಟಿ,ಎಂ.ಬಿ.ಪಾಟೀಲ್

ಬೆಂಗಳೂರು, ನ. 15: ರಾಜ್ಯದಲ್ಲಿ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬಂಧಿಸಿದಂತೆ ರಾಜ್ಯಾದ್ಯಾಂತ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಬೆನ್ನೆಲ್ಲೆ ಲಿಂಗಾಯತ ಅಭಿವೃದ್ಧಿ ನಿಗಮ ಸೇರಿದಂತೆ ಲಿಂಗಾಯತ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ನೀಡಬೇಕೆಂಬ ಕೂಗು ಕೇಳಿ ಬರುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶೀಘ್ರವಾಗಿ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹಾಗೂ ವಿಧಾನ ಪರಿಷತ್ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಪತ್ರ ಬರೆಯುವ ಮುಖಾಂತರ …

Read More »

ಬ್ಯಾಂಡ್ ಬಾರಿಸಿ ತಮಟೆ ಬಾರಿಸಿ ಬಾಯಿ ಬಡಿದುಕೊಂಡರೆ ಯಾರಿಗೂ ಸಚಿವ ಸ್ಥಾನ ಸಿಗಲ್ಲ:ರೇಣುಕಾಚಾರ್ಯ

ದಾವಣಗೆರೆ: ಬ್ಯಾಂಡ್ ಬಾರಿಸಿ ತಮಟೆ ಬಾರಿಸಿ ಬಾಯಿ ಬಡಿದುಕೊಂಡರೆ ಯಾರಿಗೂ ಸಚಿವ ಸ್ಥಾನ ಸಿಗಲ್ಲ ಎಂದು ಸಿಎಂ ಅವರ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆಯ ವಿಚಾರವಾಗಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಎಲ್ಲ ಶಾಸಕ ಸಭೆ ಮಾಡಿ ಜಿಲ್ಲೆಗೆ ಒಂದು ಸಚಿವ ಸ್ಥಾನ ನೀಡುವಂತೆ ಸಿಎಂಗೆ ಒತ್ತಾಯ ಮಾಡಿದ್ದೇವೆ. ಪಕ್ಷದ ವರಿಷ್ಠರ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು ದಾವಣಗೆರೆ ಮಧ್ಯ …

Read More »

ಸಾರಿಗೆ ಇಲಾಖೆಗೆ 634 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ.ಸಿಎಂ:ಲಕ್ಷ್ಮಣ್ ಸವದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸಾರಿಗೆ ಇಲಾಖೆಗೆ 634 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ತಕ್ಷಣ ಎರಡು ತಿಂಗಳ ವೇತನ ಕೊಡಲು ಸಿಎಂ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. ಸಿಎಂ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸವದಿ, ಸಾರಿಗೆ ಇಲಾಖೆ ಸಿಬ್ಬಂದಿಯ ಮೂರು ತಿಂಗಳ ವೇತನ ಸಮಸ್ಯೆ ಇದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್ ವೇತನ ಕೊಡಲು ಸಂಕಷ್ಟ …

Read More »

ಏರಿಯಾದಲ್ಲಿ ನಮ್ಮ ಹವಾನೇ ಜಾಸ್ತಿ ಇರಬೇಕು ರಸ್ತೆ ಪಕ್ಕದಲ್ಲೇ ಬರ್ಬರವಾಗಿ ಹತ್ಯೆ ಮಾಡಿ ಎಸ್ಕೇಪ್

ಬೆಂಗಳೂರು: ಏರಿಯಾದಲ್ಲಿ ಹವಾ ಮೆಂಟೈನ್ ಮಾಡಬೇಕೆಂದು ಯುವಕನೋರ್ವ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಗಂಗಮ್ಮನಗುಡಿಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಕಾರ್ತಿಕ್ ಎಂದು ಗುರುತಿಸಲಾಗಿದೆ. ಕಾರ್ತಿಕ್ ಸ್ನೇಹಿತರೇ ಆದ ಅಶೋಕ್ ಮತ್ತು ಅವನ ಸಹಚರರು ಹತ್ಯೆ ಮಾಡಿದ್ದಾರೆ. ಹತ್ಯೆಯಾದ ಕಾರ್ತಿಕ್ ಹಾಗೂ ಹಂತಕ ಅಶೋಕ್ ಒಂದೇ ಗ್ಯಾಂಗ್‍ನ ಸದಸ್ಯರಾಗಿದ್ದು, ಏರಿಯಾದಲ್ಲಿ ನಾನೇ ಜಾಸ್ತಿ ಹವಾ ಮಾಡಬೇಕೆಂದು ಆಶೋಕ್ ಸ್ನೇಹಿತ ಕಾರ್ತಿಕ್ ಅನ್ನೇ ಕೊಲೆ ಮಾಡಿದ್ದಾನೆ.ಕಾರ್ತಿಕ್ ಮತ್ತು ಅಶೋಕ್ …

Read More »