Breaking News

800ಗ್ರಾಂ ಚಿನ್ನ, ದಾಖಲೆ ಕಳವು ಮಾಡಿರುವ ಆರೋಪದ ಮೇಲೆ ಹಲಸೂರು ಗೇಟ್‌ ಪೊಲೀಸರು

ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದು 800ಗ್ರಾಂ ಚಿನ್ನ, ದಾಖಲೆ ಕಳವು ಮಾಡಿರುವ ಆರೋಪದ ಮೇಲೆ ಹಲಸೂರು ಗೇಟ್‌ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನ ಹಲಸೂರು ಗೇಟ್‌ನ ನಗರ್ತಪೇಟೆಯಲ್ಲಿ ನಡೆದಿದೆ. ಚಿನ್ನಭಾರಣ ಪಾಲಿಶ್ ಮಾಡುವ ಗೀತಾ ಜುವೆಲ್ಲರ್ಸ್​ಗೆ ನುಗ್ಗಿದ ಆರು ಜನ ಪೊಲೀಸ ವೇಷಧರಿಸಿದ್ದ ಕಳ್ಳರು ದೀಪಾವಳಿ ಹಬ್ಬಕ್ಕೆ ನಕಲಿ‌ ಚಿನ್ನ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿರುವುದರಿಂದ ನಿಮ್ಮ ಅಂಗಡಿಯನ್ನು ರೇಡ್ ಮಾಡುತ್ತಿದ್ದೇವೆ ಎಂದು ಹೇಳಿ ವಂಚನೆ ಮಾಡಿದ್ದಾರೆ. …

Read More »

ನಾಳೆಯಿಂದ ಶಬರಿಮಲೆ ಅಯ್ಯಪ್ಪ ದೇವಾಲಯ ಓಪನ್; ಭಕ್ತರಿಗಾಗಿ ಇಲ್ಲಿದೆ ಮಾಹಿತಿ

  ಕೋವಿಡ್ ನಿಯಮ ಪಾಲನೆ ಕಡ್ಡಾಯ : ಪ್ರಸಿದ್ಧ ಯಾತ್ರಾಸ್ಥಳ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಬಾಗಿಲು ನಾಳೆಯಿಂದ ತೆರೆಯಲಿದ್ದು, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಕಟ್ಟುನಿಟ್ಟಿನ ತಪಾಸಣೆ ಮೂಲಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಮಂಡಲಂ ಮಕರವಿಲಕ್ಕು ಅವಧಿಕಾಗಿ ನಾಳೆಯಿಂದ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು ತೆರೆಯಲಾಗುತ್ತಿದ್ದು, ಕೋವಿಡ್ ನೆಗೆಟಿವ್ ಬಂದವರನ್ನು ಮಾತ್ರ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಇದೇ ಮೊದಲ ಬಾರಿಗೆ ಯಾತ್ರಾಸ್ಥಳ ವರ್ಚುವಲ್ ಸರದಿ ವ್ಯವಸ್ಥೆಗೆ …

Read More »

ಬಿಹಾರ ಎಫೆಕ್ಟ್ – ದೊಡ್ಡ ಪಕ್ಷಗಳ ಜೊತೆಗಿನ ಮೈತ್ರಿಗೆ ನೋ ಎಂದ ಅಖಿಲೇಶ್ ಯಾದವ್

ಲಕ್ನೋ: ರಾಷ್ಟ್ರೀಯ ಪಕ್ಷಗಳು ಸೇರಿದಂತೆ ದೊಡ್ಡವರ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ. ಪ್ರಾದೇಶಿಕ ಪಕ್ಷವಾಗಿರುವ ಬಿಎಸ್‍ಪಿ ಜೊತೆಗೂ ತಾವು ಹೋಗಲ್ಲ ಎಂಬುದನ್ನ ಅಖಿಲೇಶ್ ಯಾದವ್ ಸ್ಪಷ್ಟಪಡಿಸಿದ್ದಾರೆ. 2022ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ನೇತೃತ್ವದ ಪ್ರಗತಿಶೀಲ ಸಮಾಜವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಉತ್ಸಾಹ ತೋರಿಸಿದ್ದಾರೆ. ಚುನಾವಣೆಯಲ್ಲಿ ಜಸ್ವಂತ್ ನಗರದ ವಿಧಾನಸಭಾ ಕ್ಷೇತ್ರಗಳನ್ನ ಬಿಟ್ಟುಕೊಡಲು …

Read More »

ಹೆಚ್‍ಡಿಕೆ -C.M. ಭೇಟಿಯಾದ್ರೆ ಏನು ತಪ್ಪು?- ಮಾಧುಸ್ವಾಮಿ

ಹಾಸನ: ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಸಿಎಂ ಯಡಿಯೂರಪ್ಪ ಭೇಟಿ ಮಾಡಿದರೆ ಏನು ತಪ್ಪು, ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಇಬ್ಬರೂ ಲೀಡರ್ಸ್. ರಾಜ್ಯದ ಹಿತಾಸಕ್ತಿಗಾಗಿ ಭೇಟಿ ಮಾಡಿದರೆ ಬೇರೆ ತಿಳಿಯಬಾರದು ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲೆಯ ಹಳೇಬೀಡು ಕೆರೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಸಿಎಂ ಮತ್ತು ಮಾಜಿ ಸಿಎಂ ಭೇಟಿ ವಿಷಯ ಕೇಳಿದ್ದಕ್ಕೆ ಕೈಮುಗಿದರು. ಬಳಿಕ ಮಾತನಾಡಿ ಶಿರಾ ಮತ್ತು ಆರ್.ಆರ್ ನಗರ ಉಪ …

Read More »

ಕೆಲಸ ಮಾಡಿದ ಕೂಲಿಯನ್ನೂ ಉದ್ಯಾನ ಅಭಿವೃದ್ಧಿಗೆ ವಿನಿಯೋಗ ನೀಡಿದ ಯುವಕರು

ಮಡಿಕೇರಿ: ಉದ್ಯೋಗ ಖಾತ್ರಿ ಯೋಜನೆಯಡಿ ಜನರಿಂದ ಕೆಲಸಗಳನ್ನು ಮಾಡಿಸುವುದಕ್ಕಿಂತ ಯಂತ್ರೋಪಕರಣಗಳ ಬಳಸಿ ಕಾಮಗಾರಿ ಮಾಡಿಸುವವರೇ ಹೆಚ್ಚು. ಆದರೆ ಇಲ್ಲೊಂದು ಪಂಚಾಯಿತಿಯಲ್ಲಿ ಉದ್ಯೋಗ ಖಾತ್ರಿ ಅನುದಾನವನ್ನು ಬಳಸಿ ಶಾಲೆ, ಅಂಗನವಾಡಿಗಳ ಉದ್ಯಾನವನ್ನು ಅಭಿವೃದ್ಧಿ ಮಾಡಲಾಗಿದೆ. ಈ ಶಾಲೆಗಳು ಇದೀಗ ಖಾಸಗಿ ಶಾಲೆಗಳಿಗಿಂತಲೂ ಅಚ್ಚುಕಟ್ಟಾಗಿವೆ.ಕೊರೊನಾ ಲಾಕ್‍ಡೌನ್‍ನಿಂದ ಜನರು ದುಡಿಮೆ ಇಲ್ಲದೆ ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮೇಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿ ಜನರಿಗೆ …

Read More »

ಸುಖ ಸಂಸಾರಕ್ಕೆ ಹುಳಿ ಹಿಂಡಿದ ಜ್ಯೋತಿಷಿ ,ಪತಿಯ ಕಾಟಕ್ಕೆ ಹೆಂಡತಿ ಆತ್ಮಹತ್ಯೆ…

ಬೆಂಗಳೂರು: ಜ್ಯೋತಿಷಿ ಮಾತು ಕೇಳಿ ಪಾಪಿ ಪತಿ ನವವಿವಾಹಿತೆಗೆ ಕಿರುಕುಳ ನೀಡಿದ್ದು, ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ನಡೆದಿದೆ. ಅಶ್ವಿನಿ(25) ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ, ನಗರದ ಹೆಣ್ಣೂರಿನಲ್ಲಿ ಘಟನೆ ನಡೆದಿದ್ದು, ಪತಿ ಯುವರಾಜ್ ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಪತಿ ಜೊತೆಗೆ ಮನೆಯವರೆಲ್ಲ ಕಿರುಕುಳ ನೀಡಲು ಆರಂಭಿಸಿದ್ದು, ಇದರಿಂದ ಬೇಸತ್ತ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಶ್ವಿನಿ ಕಳೆದ ಫೆಬ್ರವರಿಯಲ್ಲಿ ಯುವರಾಜ್‍ನನ್ನು ವಿವಾಹವಾಗಿದ್ದರು. ಆರಂಭದಲ್ಲಿ ಸಂಸಾರ …

Read More »

ನವೆಂಬರ್ 16ರಿಂದ ಮಹಾರಾಷ್ಟ್ರದಲ್ಲಿ ದೇವಸ್ಥಾನಗಳು ದರ್ಶನ

ಮುಂಬೈ: ಕಳೆದ ಎಂಟು ತಿಂಗಳಿಂದ ದೇವಸ್ಥಾನಗಳಿಗೆ ಸಾರ್ವಜನಿಕರ ದರ್ಶನಕ್ಕೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸುವ ಕುರಿತು ಮಹಾರಾಷ್ಟ್ರ ಸರ್ಕಾರ ಕಡೆಗೂ ಆದೇಶ ಹೊರಡಿಸಿದ್ದು, ನವೆಂಬರ್ 16ರಿಂದ ತೆರೆಯುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಫೇಸ್ ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿ ದೇವರ ದರ್ಶನ ಪಡೆಯಬಹುದಾಗಿದೆ. ಈ ಮೂಲಕ ಬರೋಬ್ಬರಿ ಎಂಟು ತಿಂಗಳ ಬಳಿಕ ಮಹಾರಾಷ್ಟ್ರದಲ್ಲಿ ದೇವಸ್ಥಾನಗಳನ್ನು ತೆರೆಯಲಾಗುತ್ತಿದೆ. ಮಾರ್ಚ್ 22ರಂದು ಪ್ರಧಾನಿ ನರೇಂದ್ರ ಮೋದಿ ಜನತಾ ಕರ್ಫ್ಯೂ ಘೋಷಿಸಿದ ಬಳಿಕ …

Read More »

ಹೋಂಡಾ ಶೋರೂಮ್ ನಲ್ಲಿ ಅಗ್ನಿ ಅವಘಡ ಲಕ್ಷಾಂತರ ಮೌಲ್ಯದ ಬೈಕ್ ಗಳು ಸುಟ್ಟು ಭಸ್ಮ

ತುಮಕೂರು: ಹೋಂಡಾ ಶೋರೂಮ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ತುಮಕೂರಿನ ಬಿಹೆಚ್ ರಸ್ತೆಯಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಶೋರೂಮ್ ನಲ್ಲಿದ್ದ ಬೈಕ್ ಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಲಕ್ಷಾಂತರ ಮೌಲ್ಯದ ಬೈಕ್ ಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಶೋರೂಮ್ ನಲ್ಲಿದ್ದ …

Read More »

ಕಡಲತೀರದುದ್ದಕ್ಕೂ ತಳಿರು ತುಂಬಿದ ಮಾವಿನ ತೋರಣ, ಗಒಟೆ, ಪಾಂಗ್ ಗಳ ಸದ್ದು,

ಕಾರವಾರ: ಕಡಲತೀರದುದ್ದಕ್ಕೂ ತಳಿರು ತುಂಬಿದ ಮಾವಿನ ತೋರಣ, ಗಒಟೆ, ಪಾಂಗ್ ಗಳ ಸದ್ದು, ಹಾಲಕ್ಕಿ ಜನಾಂಗದ ಜನಪದ ಹಾಡುಗಳ ನಡುವೆ ವೈದಿಕರ ಮಂತ್ರಘೋಷ. ಶೃಂಗಾರಗೊಂಡ ಗಂಗಾಮಾತೆ ಮೆರವಣಿಗೆಯಲ್ಲಿ ಸಾಗಿ ಶಿವನನ್ನು ವರಿಸಿದಳು. ಹೌದು. ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರನ ವಿವಾಹವು ಕೋವಿಡ್ ನಡುವೆಯೂ ವಿಜ್ರಂಭಣೆಯಿಂದ ನೆರವೇರಿತು. ಕೋವಿಡ್ -19 ಪರಿಣಾಮ ಅಂತ್ಯತ ಸರಳವಾಗಿದ್ದರೂ, ಸಾಂಪ್ರದಾಯಕತೆ ಸೊಗಡು ಜಾನಪದೀಯ ಮೆರಗಿನೊಂದಿಗೆ ನಡೆದಿದ್ದು, ವಿಶೇಷವಾಗಿತ್ತು. ಗಂಗಾಷ್ಟಮಿಯ ಮುಂಜಾವಿನಲ್ಲಿ ವಿವಾಹ ನಿಶ್ಚಯವಾದಂತೆ ಇಲ್ಲಿನ ಗೋಕರ್ಣ -ಗಂಗಾವಳಿ …

Read More »

ಬೈಕ್ ಕಳವು ಮಾಡ್ತಿದ್ದಾತನ ಮರಕ್ಕೆ ಕಟ್ಟಿ ಥಳಿಸಿದ ಸಾರ್ವಜನಿಕರು!

ಗದಗ: ಬೈಕ್ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಘಟನೆ ಗದಗ ನಗರದ ಟ್ಯಾಗೋರ್ ರಸ್ತೆಯಲ್ಲಿ ನಡೆದಿದೆ. ಕಳ್ಳನನ್ನು ಕುಮಾರ ನರ್ತಿ ಎಂದು ಗುರುತಿಸಲಾಗಿದ್ದು, ಈತ ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ. ಇದೀಗ ಸ್ಥಳೀಯರು ಕಳ್ಳನ ಹಿಡಿದು ಮರಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಶರಣು ಪಾಟೀಲ್ ಎಂಬವರ ಸ್ಕೂಟಿ ಕಳ್ಳತನ ಮಾಡಿಕೊಂಡು ಪರಾರಿಯಾಗುವ ವೇಳೆ ಕುಮಾರ ಸಿಕ್ಕಿ ಬಿದ್ದಿದ್ದಾನೆ. ಈತ ಮನೆ ಮುಂದೆ ನಿಲ್ಲಿಸಿದ್ದ …

Read More »