ಕಾರವಾರ: ಹೊನ್ನಾವರ ತಾಲೂಕಿನ ಕಾಸರಕೋಡ ಸಮುದ್ರ ದಂಡೆಯ ಟೊಂಕಾ ಭಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಾಣಿಜ್ಯ ಬಂದರು ನಿರ್ಮಾಣಕ್ಕೆ ಮಂಗಳವಾರ ಪೊಲೀಸ್ ಸರ್ಪಗಾವಲಿನಲ್ಲಿ ಮೋಜಣಿ (ಸರ್ವೆ) ಕಾರ್ಯ ನಡೆಸಲಾಗಿದೆ. ಪ್ರದೇಶದ ಸುತ್ತಮುತ್ತ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಫೆಬ್ರವರಿ 26ರ ರಾತ್ರಿ 10 ಗಂಟೆವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಮತ್ತೊಂದು ಆದೇಶ ಹೊರಡಿಸಿದ್ದಾರೆ. ಮಂಗಳವಾರ ಮೀನುಗಾರ ಮಹಿಳೆಯರು ಮತ್ತು ಮೀನುಗಾರರು ಸಮುದ್ರಕ್ಕೆ ಇಳಿದು ಎದೆಮಟ್ಟದ ನೀರಿನಲ್ಲಿ ಮುಳುಗಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸಮುದ್ರದ ಅಲೆಗಳು …
Read More »ಅಧಿಕಾರಿಗಳ ದಾಳಿ ವೇಳೆ ಗೋಡೌನ್ನಲ್ಲಿ ಪತ್ತೆಯಾದ ಪೌಷ್ಟಿಕ ಆಹಾರದ ಚೀಲಗಳು
ಹುಬ್ಬಳ್ಳಿ, ಫೆಬ್ರವರಿ 26: ಹುಬ್ಬಳ್ಳಿಯ ಗಬ್ಬೂರಿನಲ್ಲಿರುವ ಗೋದಾಮಿನೊಂದರ ಮೇಲೆ ಫೆ. 15ರಂದು ಅಧಿಕಾರಿಗಳು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ, ಬಡ ಮಕ್ಕಳಿಗೆ, ಬಾಣಂತಿಯರಿಗೆ ಮತ್ತು ಗರ್ಭಿಣಿಯರಿಗೆ ವಿತರಣೆ ಮಾಡಬೇಕಾದ ಲಕ್ಷಾಂತರ ರೂ. ಮೌಲ್ಯದ ಪೌಷ್ಟಿಕ ಆಹಾರದ ಪಾಕೇಟ್‌ಗಳು ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿತ್ತು. ಇದೇ ಪ್ರಕರಣದಲ್ಲಿ ಹುಬ್ಬಳ್ಳಿಯ ಕಸಬಾಪೇಟ್ ಪೊಲೀಸರು 18 ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ 26 ಜನರನ್ನು ಬಂಧಿಸಿದ್ದರು. ಆದರೆ, ಪ್ರಕರಣದ ಮುಖ್ಯ ಕಿಂಗ್‌ಪಿನ್‌ಗಳು ದಾಳಿ ನಡೆದು 13 ದಿನವಾದರೂ …
Read More »ಬೆಳಗಾವಿ-ಮಿರಜ್ ರೈಲು ಸಂಚಾರ ಭಾಗಶಃ ರದ್ದು
ಹುಬ್ಬಳ್ಳಿ, ಫೆಬ್ರವರಿ 26: ವಿವಿಧ ಕಾರ್ಯಾಚರಣೆಯ ಕಾರಣಗಳಿಂದಾಗಿ, ಈಗಾಗಲೇ ತಾತ್ಕಾಲಿಕವಾಗಿ ರದ್ದುಗೊಂಡಿರುವ ಕೆಲವು ರೈಲು (Train) ಸೇವೆಗಳ ರದ್ದತಿಯನ್ನು ಮತ್ತು ಭಾಗಶಃ ರದ್ದತಿಯನ್ನು ವಿಸ್ತರಲಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ (South Western Railway zone) ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ. ಮಿರಜ್-ಕ್ಯಾಸಲ್ ರಾಕ್ ರೈಲುಗಳ ಭಾಗಶಃ ರದ್ದತಿ ವಿಸ್ತರಣೆ ಹುಬ್ಬಳ್ಳಿ ರೈಲ್ವೆ ವಿಭಾಗದ ಕ್ಯಾಸಲ್ ರಾಕ್-ಲೋಂಡಾ ಭಾಗದಲ್ಲಿ ನಡೆಯ ತಿರುವ ರೈಲ್ವೆ ವಿದ್ಯುದೀಕರಣ ಮತ್ತು ಎಂಜಿನಿಯರಿಂಗ್ ಕಾಮಗಾರಿಗಳಿಂದಾಗಿ, ಈ ಕೆಳಗಿನ …
Read More »ಕರಾಳ ದಿನ ಅನಿಸಿದ್ದಂತು ಸತ್ಯ.
ಪ್ರಾಯಾಗರಾಜ ಯಾತ್ರೆ ಮುಗಿಸಿ ತಿರುಗಿ ಬರುವಾಗ ಜಬಲ್ಪುರ ನಗರಕ್ಕೆ ಬಂದು ನಿನ್ನೆ ರಾತ್ರಿ ವಾಸ್ತವ್ಯ ಮಾಡಿದ್ವಿ ಇವತ್ತು ಬೆಳಗ್ಗೆ 7 ಕೆ ಜಳಕ ಪೂಜಾ ಮುಗಿಸಿ ಹೊರಡಬೇಕು ಅನ್ನೋ ಹೊತ್ತಿಗೆ ನಮ್ಮ ಬೆಳಗಾವಿ ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಶ್ರೀ Sandeep Deshpande ಅವರು ಪೋನ್ ಮಾಡಿ ಎಲ್ಲಿದ್ದೀರಿ ನಿನ್ನೆ ನೀವು ಜನಲ್ಪುರ ದಲ್ಲಿ ವಸತಿ ಇದ್ರಿ ಅಲ್ವಾ ಅಂದ್ರು ಹೌದು ಎಂದ ನಂತರ ಅರ್ಜೆಂಟಾಗಿ ಜಿಲ್ಲಾಧ್ಯಕ್ಷರಿಗೆ ಕಾಲ್ ಮಾಡಿ …
Read More »ಗ್ರಾಮೀಣ ಪ್ರದೇಶದ ಜನರು ತಾಲೂಕಾ ಕೇಂದ್ರವಾಗಿರುವ ಮೂಡಲಗಿ ಮತ್ತು ಗೋಕಾಕ್ ನಗರಕ್ಕೆ ಹೋಗಲು ಬಸ್ ಪ್ರಯಾಣಿಕರ ತಂಗುದಾನ
ಮೂಡಲಗಿ: ಗ್ರಾಮೀಣ ಪ್ರದೇಶದ ಜನರು ತಾಲೂಕಾ ಕೇಂದ್ರವಾಗಿರುವ ಮೂಡಲಗಿ ಮತ್ತು ಗೋಕಾಕ್ ನಗರಕ್ಕೆ ಹೋಗಲು ಬಸ್ ಪ್ರಯಾಣಿಕರ ತಂಗುದಾನಗಳ ಅವಶ್ಯಕತೆ ಬಹಳಷ್ಟು ಇತ್ತು ಅದನ್ನು ಮನಗಂಡು ಸಾರ್ವಜನಿಕರ ಅನುಕೂಲಕ್ಕಾಗಿ ವಿವಿಧ ಗ್ರಾಮಗಳಲ್ಲಿ ಬಸ್ ತಂಗುದಾನ ನಿರ್ಮಾಣ ಮಾಡಲಾಗಿದೆ ಅದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕರೆ ನೀಡಿದರು. ಮೂಡಲಗಿ ತಾಲೂಕಿನ ಶಿವಾಪೂರ (ಹ), ಮುನ್ಯಾಳ ಮತ್ತು ಕಮಲದಿನ್ನಿ ಗ್ರಾಮಗಳಲ್ಲಿ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ನಿರ್ಮಿಸಲಾದ …
Read More »2024 – 25ರಲ್ಲಿ ಪಂಚ ಗ್ಯಾರಂಟಿಗೆ ಬಿಡುಗಡೆಯಾದ SCSPTSP ಹಣವೆಷ್ಟು? –
ಬೆಂಗಳೂರು: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ಗಣನೀಯವಾಗಿ ಪರಿಶಿಷ್ಠರಿಗೆ ಮೀಸಲಿಟ್ಟ ಅನುದಾನ ಬಳಕೆ ಮಾಡಲಾಗುತ್ತಿದೆ. ಗ್ಯಾರಂಟಿಗಳಿಗೆ ಬಹುಪಾಲು ಹಣ ಬಳಕೆಯಾಗುತ್ತಿರುವುದು ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಹಣ. ಈ ಸಂಬಂಧ ವಿಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಅಷ್ಟಕ್ಕೂ ಈವರೆಗೆ ರಾಜ್ಯ ಸರ್ಕಾರ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನದಿಂದ ಪಂಚ ಗ್ಯಾರಂಟಿಗಳಿಗಾಗಿ ಹಣ ಬಿಡುಗಡೆ ಮಾಡಿದ್ದೆಷ್ಟು ಎಂಬ ಸಮಗ್ರ ವರದಿ ಇಲ್ಲಿದೆ. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟ ಜಾತಿ …
Read More »ಎಂಇಎಸ್ ಕಾರ್ಯಕರ್ತರು ಕನ್ನಡದ ತಂಟೆಗೆ ಬಂದರೆ ಸರಿ ಇರಲ್ಲ : ಸಚಿವ ತಂಗಡಗಿ
ಬೆಂಗಳೂರು : ಎಂಇಎಸ್ ಕಾರ್ಯಕರ್ತರು ಕನ್ನಡದ ತಂಟೆಗೆ ಬಂದರೆ ಸರಿ ಇರುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಇಂದು ತಮ್ಮ ಗೃಹ ಕಚೇರಿ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಕರ್ನಾಟಕದ ನೀರು, ಗಾಳಿ, ಅನ್ನ ತಿಂದು ಮತ್ತೊಂದು ಭಾಷೆಯ ಬಗ್ಗೆ ಬಹಳ ಪ್ರೀತಿ ವ್ಯಾಮೋಹ ತೋರಿಸಿದರೆ ಮುಂದೆ ಪರಿಣಾಮ ನೆಟ್ಟಗಿರಲ್ಲ ಎಂದು ಕಿಡಿಕಾರಿದರುಎಂಇಎಸ್ ಕಾರ್ಯಕರ್ತರ …
Read More »ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಎಂಇಎಸ್ ಮತ್ತು ಶಿವಸೇನೆ ಸಂಘಟನೆಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಪ್ರತಿಭಟನೆ
ಬೆಳಗಾವಿ: ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ಗಳಿಗೆ ಮಸಿ ಬಳಿದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿಯಲ್ಲಿ ಇಂದು ಪ್ರತಿಭಟನೆ ನಡೆಸಿದರು. ಬೆಳಗ್ಗೆ ಬೆಳಗಾವಿಗೆ ಆಗಮಿಸಿದ ಕ.ರ.ವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಂಡಕ್ಟರ್ ಮಹಾದೇವ ಹುಕ್ಕೇರಿ ಅವರನ್ನು ಭೇಟಿಯಾಗಿ, ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಬಳಿಕ ಬಾಳೇಕುಂದ್ರಿ ಚಲೋ ಹಮ್ಮಿಕೊಳ್ಳಲಾಗಿತ್ತು. ರಾಣಿ ಚನ್ನಮ್ಮ ವೃತ್ತದಲ್ಲಿ ಕ.ರ.ವೇ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ …
Read More »20 ದೈಹಿಕ ವಿಕಲಚೇತನರಿಗೆ ದ್ವಿಚಕ್ರ ವಾಹನಗಳನ್ನು ವಿತರಿಸಲಾಯಿತು.
ಗೋಕಾಕ ನಗರದ ಗೃಹಕಚೇರಿಯಲ್ಲಿ ಇಂದು ಸಚಿವರಾದ ಶ್ರೀ ಸತೀಶ ಜಾರಕಿಹೊಳಿಯವರ ಅವರ ಜೊತೆಗೆ ಸಾರ್ವಜನಿಕರ ಹಾಗೂ ಕಾರ್ಯಕರ್ತರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದೆ. ಈ ಸಂದರ್ಭದಲ್ಲಿ ಶಾಸಕರ ಅನುದಾನದಡಿ ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 20 ದೈಹಿಕ ವಿಕಲಚೇತನರಿಗೆ ದ್ವಿಚಕ್ರ ವಾಹನಗಳನ್ನು ವಿತರಿಸಲಾಯಿತು. ಈ ವೇಳೆ ಕೆಪಿವೈಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ನನ್ನನ್ನು ಹಲವರು ಸನ್ಮಾನಿಸಿ, ಅಭಿನಂದಿಸಿದರು. #rahuljarkiholi #satishjarkiholi #ಜನತಾದರ್ಶನ
Read More »ಉಭಯ ರಾಜ್ಯಗಳ ಬಸ್ ಸಂಚಾರ ಪುನರಾರಂಭ ಕುರಿತು ಚರ್ಚೆ
ಉಭಯ ರಾಜ್ಯಗಳ ಬಸ್ ಸಂಚಾರ ಪುನರಾರಂಭ ಕುರಿತು ಚರ್ಚೆ ಬೆಳಗಾವಿ-ಕೋಲ್ಹಾಪುರ ಜಿಲ್ಲಾಧಿಕಾರಿಗಳ ಸಮನ್ವಯ ಸಭೆ ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳ ನಡುವಿನ ಬಸ್ ಸಂಚಾರ ಪುನರಾರಂಭ ಕುರಿತು ಬೆಳಗಾವಿ-ಕೋಲ್ಹಾಪುರ ಜಿಲ್ಲಾಧಿಕಾರಿಗಳ ಹಾಗೂ ಪೋಲಿಸ್ ವರಿಷ್ಠಾಧಿಕಾರಿಗಳ ವೀಡಿಯೋ ಸಂವಾದ ಸಭೆ ಜರುಗಿತು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನಿರ್ದೇಶನದ ಮೇರೆಗೆ ಸೋಮವಾರ (ಫೆ.25) ಜರುಗಿದ ವೀಡಿಯೊ ಸಂವಾದ ಸಮನ್ವಯ ಸಭೆಯಲ್ಲಿ ಮಾತನಾಡಿದ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು, ಸಾರಿಗೆ …
Read More »