Breaking News

ರಾಜ್ಯದಲ್ಲಿ ಮಕ್ಕಳಿಗೆ ಕೊಡಬೇಕಿದ್ದ ಹಾಸಿಗೆ, ಬೆಡ್‌ಶೀಟ್‌ ಅಧಿಕಾರಿ ಮನೆಯಲ್ಲಿ!

ಗದಗ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಶಿರಹಟ್ಟಿ ತಾಲ್ಲೂಕು ಬಿಸಿಎಂ ಅಧಿಕಾರಿ ಎಂ.ಕೆ.ಸುರಕೋಡ ಅವರಿಗೆ ಸಂಬಂಧಿಸಿದ ಆರು ಕಡೆಗಳಲ್ಲಿ ಗುರುವಾರ ಬೆಳಿಗ್ಗೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಶೇ 227 ಅಧಿಕ ಆಸ್ತಿ ಹೊಂದಿರುವುದನ್ನು ಪತ್ತೆ ಮಾಡಿದ್ದಾರೆ. ಲೋಕಾಯುಕ್ತ ಪೊಲೀಸರ ಶೋಧನೆ ವೇಳೆ ಅಧಿಕಾರಿಯ ಮನೆಯಲ್ಲಿ ಬಿಸಿಎಂ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸರಬರಾಜು ಮಾಡಲಾಗಿದ್ದ ಹಾಸಿಗೆ– ಬೆಡ್‌ಶೀಟ್‌ಗಳು, ಹಾಸ್ಟೆಲ್‌ನಲ್ಲಿ ಅಡುಗೆ ಮಾಡಲು ಬಳಸುವ ದೊಡ್ಡ ದೊಡ್ಡ ಪಾತ್ರೆಗಳು, ನೋಟ್‌ಪುಸ್ತಕಗಳು …

Read More »

ಬಜೆಟ್ ನಲ್ಲಿ ಸ್ಪಷ್ಟ ಯೋಜನೆಗಳಿಲ್ಲ- ಡಾ.ಸೋನಾಲಿ ಸರ್ನೋಬತ್

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಕರ್ನಾಟಕ ರಾಜ್ಯ ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂಬುದು ಸ್ಪಷ್ಟವಾಗಿದೆ. ಮಹಿಳೆಯರು, ಯುವಕರು ಮತ್ತು ಮಧ್ಯಮ ವರ್ಗದ ಕುಟುಂಬಗಳ ಅಭಿವೃದ್ಧಿಗೆ ಸ್ಪಷ್ಟ ಹಾಗೂ ಶಾಶ್ವತ ಯೋಜನೆಗಳು ಈ ಬಜೆಟ್‌ನಲ್ಲಿ ಕಾಣಿಸುತ್ತಿಲ್ಲ. ಕೇವಲ ಭರವಸೆಗಳು ಮತ್ತು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಆರ್ಥಿಕತೆಯ ಮೇಲೆ ಹೆಚ್ಚಿನ ಸಾಲದ ಹೊರೆ ಹಾಕುವ ಪ್ರಯತ್ನ ಈ ಬಜೆಟ್‌ನಲ್ಲಿ ಕಾಣಿಸುತ್ತದೆ. ಅಭಿವೃದ್ಧಿ, ಉದ್ಯೋಗ ಸೃಷ್ಟಿ, ಕೈಗಾರಿಕಾ ಹೂಡಿಕೆ ಮತ್ತು ಮೂಲಸೌಕರ್ಯಗಳ …

Read More »

ಸಮೃದ್ಧ ಕರ್ನಾಟಕಕ್ಕೆ ಪೂರಕ ಬಜೆಟ್‌: ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು: ಸಮಸ್ತ ಕನ್ನಡಿಗರ ಸರ್ವಾಂಗೀಣ ಪ್ರಗತಿಯ ದೃಷ್ಟಿಯಲ್ಲಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ದಾಖಲೆಯ 17ನೇ ಬಜೆಟ್ ಅನ್ನು ಇಂದು ಮಂಡಿಸಿದ್ದಾರೆ. 4.48 ಲಕ್ಷ ಕೋಟಿ ರೂ. ಮೊತ್ತದ ಈ ಬೃಹತ್ ಆಯವ್ಯಯವು “ಸಮೃದ್ಧ ಕರ್ನಾಟಕ” ನಿರ್ಮಾಣದತ್ತ ಮಹತ್ವದ ಹೆಜ್ಜೆಯಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದ್ದಾರೆ. 2026-27 ಸಾಲಿನ ಬಜೆಟ್‌ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, …

Read More »

ನಿರಾಶದಾಯಕ ಬಜೆಟ್: ಡಾ. ಪ್ರಭಾಕರ್ ಕೋರೆ

ಗ್ಯಾರೆಂಟಿಗಳ ಭರಾಟೆಯಲ್ಲಿ ಸಿದ್ದರಾಮಯ್ಯನವರ ಸರಕಾರ ರಾಜ್ಯದ ಜನತೆಗೆ ಕೇವಲ ಆಶ್ವಾಸನೆಗಳನ್ನು ನೀಡಿದೆ. ಕೃಷಿ, ಆರೋಗ್ಯ,ಸಹಕಾರ ಹಾಗೂ ನೀರಾವರಿ ಕ್ಷೇತ್ರಗಳಿಗೆ ಕೊಡ ಬೇಕಾದಂತಹ ಪ್ರಮುಖ ಆದ್ಯತೆಗಳನ್ನು ನೀಡಿಲ್ಲ. ಜನತೆಯ ಮೂಗಿಗೆ ತುಪ್ಪವನ್ನು ಸವರಿದೆ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಇದೊಂದು ನಿರಾಶದಾಯಕವಾದ ಬಜೆಟ್. ಪ್ರಗತಿಯ ನಾಗಾಲೋಟದಲ್ಲಿ ಸಾಗಬೇಕಾದಂತಹ ರಾಜ್ಯ ಹಲವಾರು ಗ್ಯಾರಂಟಿಗಳ ಭರದಲ್ಲಿ ರಾಜ್ಯವನ್ನು ಸಾಲದ ಸುಲಿಗಿ ಸಿಲುಕಿಸಿದೆ. ಪ್ರಗತಿದಾಯಕ ಇದಲ್ಲ.

Read More »

ಜೆಸಿಬಿ ಕಾರ್ಯಾಚರಣೆ ವೇಳೆ ಮೇಘಾ ಗ್ಯಾಸ್ ಪೈಪ್‌ಲೈನ್ ಸೋರಿಕೆ: ಸ್ಥಳಕ್ಕೆ ಧಾವಿಸಿ ಅನಾಹುತ ತಪ್ಪಿಸಿದ ನಗರಸೇವಕ ನಿತೀನ್ ಜಾಧವ್

ಬೆಳಗಾವಿಯ ಹಿಂದವಾಡಿ ಭಾಗದಲ್ಲಿ ಇಂದು ಜೆಸಿಬಿ ಕಾರ್ಯಾಚರಣೆಯ ವೇಳೆ ಅನಿಲ ಪೈಪ್‌ಲೈನ್ ಸೋರಿಕೆಯಾಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿತ್ತು. ಸ್ಥಳೀಯ ನಗರಸೇವಕರ ಸಮಯಪ್ರಜ್ಞೆಯಿಂದಾಗಿ ಸಂಭವನೀಯ ಭಾರೀ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದಂತಾಗಿದೆ. ಬೆಳಗಾವಿಯ ಹಿಂದವಾಡಿ ಜೈನ್ ಕಾಲೇಜ್ ಪಕ್ಕದಲ್ಲಿರುವ ವಸತಿ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಮನೆ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಮನೆಯ ಕಾಂಪೌಂಡ್ ಗೋಡೆ ಕಟ್ಟುವ ಉದ್ದೇಶದಿಂದ ಜೆಸಿಬಿ ಮೂಲಕ ಮಣ್ಣು ಅಗೆಯುವಾಗ, ಅಕಸ್ಮಾತ್ತಾಗಿ ಭೂಮಿಯ ಅಡಿಯಲ್ಲಿದ್ದ ಮೇಘಾ ಗ್ಯಾಸ್ ಕಂಪನಿಯ …

Read More »

ಸಹಕಾರ ಸಂಘಗಳ ಬಲವರ್ಧನೆಗೆ ವಿಮೆ ಅನಿವಾರ್ಯ: ಆಣ್ಣಾಸಾಹೇಬ್ ಜೊಲ್ಲೆ

ಬೆಳಗಾವಿಯಲ್ಲಿ ಶೈಕ್ಷಣಿಕ ಕಾರ್ಯಾಗಾರ ಭಾರತದಲ್ಲಿ ಜೀವ ವಿಮೆಯ ಬಗ್ಗೆ ಜಾಗೃತಿ ಮೂಡುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಅಣ್ಣಾಸಾಹೇಬ್ ಜೊಲ್ಲೆ ಅವರು ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಮತ್ತು ಮುಂಬೈನ ಪಾಲಿಸಿ ಗ್ರೇಸ್ ಇನ್ಶೂರೆನ್ಸ್ ಬ್ರೋಕರ್ಸ್ ಪ್ರೈವೆಟ್ ಲಿಮಿಟೆಡ್’ನ ಸಂಯುಕ್ತಾಶ್ರಯದಲ್ಲಿ ಬೆಳಗಾವಿ ವಿಭಾಗದ ಬೆಳಗಾವಿ, ಧಾರವಾಡ, ಕಾರವಾರ, ಗದಗ ಹಾಗೂ ಹಾವೇರಿ ವ್ಯಾಪ್ತಿಗೊಳಪಡುವ ಪತ್ತಿನ ಸಹಕಾರ ಸಂಘಗಳ …

Read More »

ಬೆಳಗಾವಿ ಮಹಾಪಾಲಿಕೆಯಿಂದ ‘ಆಪರೇಷನ್ ಲೈಸೆನ್ಸ್’: ನಿಯಮ ಉಲ್ಲಂಘಿಸಿದ ಖ್ಯಾತ ಮಳಿಗೆಗಳಿಗೆ ಭಾರಿ ದಂಡ!

ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಆದೇಶದ ಬೆನ್ನಲ್ಲೇ ಈಗ ನಗರದಾದ್ಯಂತ ಹೆಲ್ತ್ ಇನ್ಸ್‌ಪೆಕ್ಟರ್‌ಗಳ ತಂಡ ಅಖಾಡಕ್ಕಿಳಿದಿದೆ. ವ್ಯಾಪಾರ ಪರವಾನಗಿ ಪಡೆಯದೆ ವಹಿವಾಟು ನಡೆಸುತ್ತಿರುವ ದೊಡ್ಡ ದೊಡ್ಡ ಮಳಿಗೆಗಳಿಗೆ ಪಾಲಿಕೆ ಅಧಿಕಾರಿಗಳು ಶಾಕ್ ನೀಡುತ್ತಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಕಟ್ಟುನಿಟ್ಟಿನ ನಿರ್ದೇಶನದ ಮೇರೆಗೆ ನಗರದ ಉತ್ತರ ಮತ್ತು ದಕ್ಷಿಣ ವಲಯದ ಆರೋಗ್ಯ ನಿರೀಕ್ಷಕರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇಂದು ಸಮಾದೇವಿ ಗಲ್ಲಿಯಲ್ಲಿರುವ ಪ್ರಸಿದ್ಧ ‘ಕಲ್ಯಾಣಿ ಸ್ವೀಟ್ ಮಾರ್ಟ್’ ಮೇಲೆ ದಾಳಿ …

Read More »

ಮಾ.7 ರಂದು ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ : 100ಕ್ಕೂ ಹೆಚ್ಚು ಕಂಪನಿ ಭಾಗಿ

ಬೆಳಗಾವಿ : ಉದ್ಯೋಗದ ನಿರೀಕ್ಷೆಯಲ್ಲಿ ಇರುವವರಿಗೆ ಇದೀಗ ಸಿಹಿ ಸುದ್ದಿ ಇದ್ದು, ಶಿವಬಸವ ನಗರದಲ್ಲಿರುವ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಾ.7 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್​ ಸಿಇಒ ರಾಹುಲ್ ಶಿಂಧೆ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​, ಸಂಜೀವಿನಿ KSLRPS, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್, …

Read More »

ಗ್ಯಾರಂಟಿ’ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

ಬೆಳಗಾವಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಕೂಡ ಅದೇ ಧಾಟಿಯಲ್ಲಿ ಮಾತನಾಡಿದ್ದು, ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 50-60 ಸಾವಿರ ಕೋಟಿ ರೂ. ವೆಚ್ಚವಾಗುತ್ತಿರುವುದು ಸರ್ಕಾರದ ಮೇಲೆ ಆರ್ಥಿಕ ಹೊರೆಯಾಗಿದೆ. ಆದರೂ ಅಭಿವೃದ್ಧಿ ಕೆಲಸಗಳು ನಿಂತಿಲ್ಲ ಎಂದಿದ್ದಾರೆ. ಕಳೆದ 2-3 ವರ್ಷಗಳಲ್ಲಿ ಸರ್ಕಾರ ಏನೂ ಮಾಡಿಲ್ಲ ಎಂಬ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರೋಪ ನಿರಾಧಾರ. ನಾವು …

Read More »

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ವಿಶೇಷ ಒತ್ತು ನೀಡಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ, ಕುಡಿಯುವ ನೀರು, ರಸ್ತೆ ಸಂಪರ್ಕ ಮತ್ತು ಸ್ವಚ್ಛತೆಗೆ ದೊಡ್ಡ ಹಂಚಿಕೆ ಮಾಡಲಾಗಿದ್ದು, ರೈತರು ಮತ್ತು ಗ್ರಾಮೀಣ ಜನರ ಜೀವನಮಟ್ಟ ಸುಧಾರಣೆಗೆ ಈ ಬಜೆಟ್ ಹೊಸ ಆಶಾಕಿರಣವಾಗಿದೆ. ಪ್ರಮುಖ ಘೋಷಣೆಗಳು ಮತ್ತು ಹಂಚಿಕೆಗಳು ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ …

Read More »