Breaking News

ಸಂಗ್ಯಾ-ಬಾಳ್ಯಾ ಸಣ್ಣಾಟದ ಕಲಾವಿದೆ ಅರಭಾವಿಯ ಕೆಂಪವ್ವಾ ಹರಿಜನ ಅವರಿಗೆ ಈ ಬಾರಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ

ಮೂಡಲಗಿ : ಸಂಗ್ಯಾ-ಬಾಳ್ಯಾ ಸಣ್ಣಾಟದ ಕಲಾವಿದೆ ಅರಭಾವಿಯ ಕೆಂಪವ್ವಾ ಹರಿಜನ ಅವರಿಗೆ ಈ ಬಾರಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿರುವುದು ನಮ್ಮ ನೆಲದ ಹೆಮ್ಮೆಯಾಗಿದೆ ಎಂದು ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕೆಂಪವ್ವಾ ಅವರು ಬಡ ಕುಟುಂಬದಲ್ಲಿ ಹುಟ್ಟಿ ಬಾಲ್ಯದಿಂದಲೂ ಬಯಲಾಟಗಳ ಪ್ರದರ್ಶನ ಮಾಡುತ್ತ ತಮ್ಮ ಕಲೆಯನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ಸುಮಾರು 4 ದಶಕಗಳಿಂದ ಸಣ್ಣಾಟದ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿರುವ ಕಲಾವಿದೆಯಾಗಿದ್ದಾರೆ. …

Read More »

ಔಷಧಿ ಅಂಗಡಿಯಕಳ್ಳತನ ಮಾಡಿರುವ ಘಟನೆ

ಬೆಳಗಾವಿ: ಔಷಧಿ ಅಂಗಡಿಯ ಮೇಲ್ಛಾವಣಿ ಕೊರೆದ ಕಳ್ಳರು ಮಾಸ್ಕ್ ಸೇರಿದಂತೆ ಇತರೆ ಔಷಧಿಗಳನ್ನು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಇನಾಮಹೊಂಗಲದಲ್ಲಿ ತಡರಾತ್ರಿ ನಡೆದಿದೆ. ಕಳ್ಳರು 1 ಚೀಲ ಮಾಸ್ಕ್ ಕಳವು ಮಾಡಿದ್ದಾರೆ.         ಚಂದ್ರಶೇಖರ ಹುಚ್ಚನ್ನವರ್‌ಗೆ ಸೇರಿದ ಅಂಗಡಿಯಲ್ಲಿ ಕಳ್ಳತನ ನಡೆದಿದೆ. ಒಂದು ಚೀಲ ಮಾಸ್ಕ್ ಜೊತೆಗೆ 50ಕ್ಕೂ ಹೆಚ್ಚು ಮೂವ್ ಸ್ಪ್ರೇ ಮತ್ತು 6 ಸಾವಿರ ನಗದು ಕದ್ದು ಪರಾರಿಯಾಗಿದ್ದಾರೆ.

Read More »

ಶಿರಾ ಉಪಚುನಾವಣಾ ಕಣದಲ್ಲಿ ಮದಲೂರು ಕೆರೆಗೆ ನೀರು ಹರಿಸುವ ವಿಚಾರದಲ್ಲಿ ಮೂರು ಪಕ್ಷಗಳಿಂದ ಆರೋಪ, ಪ್ರತ್ಯಾರೋಪಗಳ ಸುರಿಮಳೆಯೇ ಬರುತ್ತಿದೆ.

ತುಮಕೂರು: ಶಿರಾ ಉಪಚುನಾವಣಾ ಕಣದಲ್ಲಿ ಮದಲೂರು ಕೆರೆಗೆ ನೀರು ಹರಿಸುವ ವಿಚಾರದಲ್ಲಿ ಮೂರು ಪಕ್ಷಗಳಿಂದ ಆರೋಪ, ಪ್ರತ್ಯಾರೋಪಗಳ ಸುರಿಮಳೆಯೇ ಬರುತ್ತಿದೆ. ಸುಮಾರು 520 ಎಕರೆ ಪ್ರದೇಶದಲ್ಲಿರುವ ಮದಲೂರು ಕೆರೆಗೆ ಹೇಮಾವತಿ ನದಿಯಿಂದ ಈ ಹಿಂದೆ ನೀರು ಹರಿಸಲಾಗಿತ್ತು. ಆದರೆ, ಹೇಮಾವತಿ ನದಿ ನೀರು ಕಾವೇರಿ ಕೊಳ್ಳದ ವ್ಯಾಪ್ತಿ ಎಂಬ ಕಾರಣಕ್ಕೆ ಅದನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿತ್ತು. ಇದೀಗ, ಭದ್ರಾ ಮೇಲ್ದಂಡೆಯಿಂದ ನೀರು ಹರಿಸಲು ಯೋಜನೆ ರೂಪಿಸಲಾಗ್ತಿದೆ. ಈ ಹೆಗ್ಗಳಿಕೆಯನ್ನು ಕಾಂಗ್ರೆಸ್, ಜೆಡಿಎಸ್ ಹಾಗೂ …

Read More »

ತಂದೆ ಬೈಯ್ದು ಬುದ್ಧಿ ಹೇಳಿದ್ದಕ್ಕೆ ತಂದೆಯನ್ನು ಸಾಯಿಸಿರುವ ಮಗ

ತಂದೆ ಬೈಯ್ದು ಬುದ್ಧಿ ಹೇಳಿದ್ದಕ್ಕೆ ತಂದೆಯನ್ನು 19 ವರ್ಷದ ಮಗ ಕೊಲೆ ಮಾಡಿರುವ ಘಟನೆ ಮಥುರಾದಲ್ಲಿ ನಡೆದಿದೆ. ಮನೋಜ್ ಮಿಶ್ರಾ ಎಂಬುವವರೇ ಮಗನಿಂದಲೇ ಕೊಲೆಯಾದ ದುರ್ದೈವಿ. 12ನೇ ತರಗತಿ ಓದುತ್ತಿದ್ದ ಮಗನೇ ಕೊಲೆ ಮಾಡಿದವನು. ತಂದೆ ಗದರಿದ ಎಂಬ ಕಾರಣಕ್ಕೆ ಕೋಪಗೊಂಡು, ಕಬ್ಬಿಣದ ರಾಡ್‍ ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಆ ನಂತರ ಬಟ್ಟೆಯಿಂದ ಕತ್ತು ಹಿಸುಕಿದ್ದಾನೆ. ಕೊಲೆಯಾದ ನಂತರ ತಾಯಿಯ ನೆರವನಿಂದ ಸಾಕ್ಷ್ಯ ನಾಶ ಮಾಡಲು ಪ್ರಯತ್ನಿಸಿದ್ದಾನೆ. …

Read More »

ಎರಡು ವರ್ಷದ ಮಗು ಆಟವಾಡುತ್ತಲೇ ದುರ್ಮರಣಕ್ಕೀಡಾದ ಘಟನೆ

ಬೆಂಗಳೂರು: ಏನೂ ಅರಿಯದ ಎರಡು ವರ್ಷದ ಮಗು ಆಟವಾಡುತ್ತಲೇ ದುರ್ಮರಣಕ್ಕೀಡಾದ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಪಾಳ್ಯದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ಗುಂಡಿಗೆ ಬಿದ್ದ ವಿನೋದ್​ ಕುಮಾರ್ (2) ಮೃತ ದುರ್ದೈವಿ. ಉಮೇಶ್​ ಎಂಬುವವರು ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿಸುತ್ತಿದ್ದರು. ಕೊಪ್ಪಳ ಮೂಲದ ಅಂಬರೀಷ್​ ದಂಪತಿ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಕೆಂಗೇರಿ ಸಮೀಪದ ಕೋಡಿಪಾಳ್ಯದಲ್ಲಿ ಶೆಡ್​ನಲ್ಲಿ ನೆಲೆಸಿದ್ದರು. ಅಂಬರೀಷ್​ ದಂಪತಿಗೆ ಒಬ್ಬನೇ …

Read More »

ಮಟ್ಟನವಿಲೆ ಗ್ರಾಮದ ಕಗ್ಗೆರೆ ರಸ್ತೆಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಪತ್ತೆ : 3 ಜನರ ಆರೋಪಿಗಳು ಅರೆಸ್ಟ್

ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಮಟ್ಟನವಿಲೆ ಗ್ರಾಮದ ಕಗ್ಗೆರೆ ರಸ್ತೆಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಪತ್ತೆಯಾದ ಪ್ರಕರಣವನ್ನು 24 ಗಂಟೆಯೊಳಗೆ ಬೇಧಿಸಿರುವ ಪೊಲೀಸರು, ಕೊಲೆಯಾದ ಯುವಕನ ಪತ್ನಿ ಸೇರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಚನ್ನರಾಯಪಟ್ಟಣ ತಾಲ್ಲೂಕಿನ ಲಕ್ಷ್ಮೀಪುರದ ಗ್ರಾಮದ ದಿನೇಶ್‌ ಕೊಲೆಯಾದ ಯುವಕ. ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಸಾಣೇನಹಳ್ಳಿಯ ದಿನೇಶನ ಪತ್ನಿ ಅಭಿಲಾಷ (22), ಆಕೆಯ ತಂದೆ ಮಂಜುನಾಥ (55), ಸಹೋದರ ಬಸವರಾಜು (21) ಎಂಬುವವರನ್ನು ಬಂಧಿಸಲಾಗಿದೆ. ಸುಟ್ಟ ಕಾರಿನ …

Read More »

ಬೇರೆಯವರಿಂದ ಎಕ್ಸಾಂ ಬರೆಸಿ ಅಸ್ಸಾಂ ಟಾಪರ್ ಎನಿಸಿಕೊಂಡಿದ್ದ ವಿದ್ಯಾರ್ಥಿ ಅರೆಸ್ಟ್

ಗುವಾಹಟಿ : ಇಂಜಿನಿಯರಿಂಗ್ ಪ್ರವೇಶಾತಿ ಪರೀಕ್ಷೆ ಜೆಇಇನಲ್ಲಿ ಉತ್ತಮ ಅಂಕ ಪಡೆದು ಅಸ್ಸಾಂಗೆ ಪ್ರಥಮ ಸ್ಥಾನ ಬಂದಿದ್ದ ಯುವಕನ ಬಣ್ಣ ಬಯಲಾಗಿದೆ. ಆತ ತನ್ನ ಬದಲು ಬೇರೆಯವರಿಂದ ಎಕ್ಸಾಂ ಬರೆಸಿದ್ದ ಎಂಬ ವಿಷಯ ಬಹಿರಂಗವಾಗಿದೆ. ಈ ಹಿನ್ನೆಲೆ ಅಸ್ಸಾಂ ಟಾಪರ್ ಎನಿಸಿಕೊಂಡಿದ್ದ ವಿದ್ಯಾರ್ಥಿ ನೀಲ್​ ನಕ್ಷತ್ರ ದಾಸ್​​, ಆತನ ತಂದೆ ಹಾಗೂ ಇತರೆ ಮೂವರನ್ನು ಗುವಾಹಟಿ ಪೊಲೀಸರು ಬಂಧಿಸಿದ್ದಾರೆ. ಜೆಇಇ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ: 24 ಮಂದಿಗೆ ಶೇ.100 …

Read More »

ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರ ರಾಜಾಹುಲಿ ಅಖಾಡಕ್ಕಿಳಿದಿದ್ದಾರೆ

ಬೆಂಗಳೂರು : ಶಿರಾ ಶಿಕಾರಿಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರ ರಾಜಾಹುಲಿ ಅಖಾಡಕ್ಕಿಳಿದಿದ್ದಾರೆ. ಇಂದು ಇಡೀ ದಿನ ಶಿರಾದಲ್ಲಿ ಪ್ರಚಾರ ಮಾಡಲಿದ್ದಾರೆ. ಈಗಾಗಲೇ ವಿಜಯೇಂದ್ರ ಅಲ್ಲಿಯೇ ವಾಸ್ತವ್ಯ ಹೂಡಿದ್ದು ಪ್ರಚಾರದಲ್ಲಿ ತೊಡಗಿದ್ದಾರೆ. ರಾರಾ ಕ್ಷೇತ್ರ ರಂಗೇರುತ್ತಲೇ ಇದೆ. ಕಾಂಗ್ರೆಸ್ ಮುಖಂಡರಾಗಿದ್ದ ವೆಂಕಟರಾಮ್ ರೆಡ್ಡಿ, ಚಿತ್ರನಟ ವಿ ಬಾಲರಾಜ್ ಇಂದು ಬಿಜೆಪಿ ಸೇರಿದ್ದಾರೆ. ಈ ವೇಳೆ ಡಿಂಗ್ರಿ ನಾಗರಾಜ್ ಸೇರಿದಂತೆ ಕೆಲ ತಾರೆಯರು ಉಪಸ್ಥಿತರಿದ್ದರು. ಇನ್ನು ಮುನಿರತ್ನ ಪರ ದರ್ಶನ್ …

Read More »

ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ

ಬಾಗಲಕೋಟೆ: ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಾದಾಮಿ ತಾಲೂಕಿನ ಪಟ್ಟದಕಲ್ಲಿನಲ್ಲಿ ನಡೆದಿದೆ. ಬಸವರಾಜ ಮಹಾಂತಯ್ಯ ಹಿರೇಮಠ (12), ಪ್ರವೀಣ ರೋಣದ ಮೃತ ಬಾಲಕರು. ಇವರು ಬಾಚಿನಗುಡ್ಡ ಗ್ರಾಮದವರು. ಗುರುವಾರ ಸಂಜೆ ನದಿಯಲ್ಲಿ ಈಜಲು ಹೋದವರು ಮನೆಗೆ ಹಿಂದಿರುಗಿರಲಿಲ್ಲ. ಶುಕ್ರವಾರ ಬೆಳಗ್ಗೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕರ ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ. ಬಾದಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ …

Read More »

ಭತ್ತ ಕಟಾವು ಯಂತ್ರದ ಬಾಡಿಗೆ ದರ ಗಂಟೆಗೆ ರೂ.1,800 ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಿಬೇಕು.

ದಾವಣಗೆರೆ : ಜಿಲ್ಲೆಯಲ್ಲಿ 2020-21ನೇ ಸಾಲಿನ ಮುಂಗಾರಿನ ಹಂಗಾಮಿನಲ್ಲಿ 66046 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದ್ದು, ಸದ್ಯ ಭತ್ತದ ಬೆಳೆಯು ಬಹುತೇಕ ಕಾಳು ಬೆಳೆಯುವ ಹಂತದಲ್ಲಿರುವುದರಿಂದ ಇನ್ನು 2 ರಿಂದ 3 ವಾರಗಳಲ್ಲಿ ಕಟಾವು ಪ್ರಾರಂಭವಾಗಲಿದೆ. ಜಿಲ್ಲೆಯಲ್ಲಿ ಶೇ.95% ರಷ್ಟು ರೈತರು ಭತ್ತದ ಬೆಳೆಯನ್ನು ಭತ್ತ ಕಟಾವು ಯಂತ್ರಗಳ ಮೂಲಕ ಕಟಾವು ಮಾಡುತ್ತಿದ್ದು, ತಮ್ಮ ಸಮೀಪದ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯಯವಿರುವ ಭತ್ತ ಕಟಾವು ಯಂತ್ರಗಳ ಪ್ರಯೋಜನವನ್ನು ಪಡೆಯಬಹುದಾಗಿರುತ್ತದೆ. ಖಾಸಗಿ ಭತ್ತ …

Read More »