ನವದೆಹಲಿ: ಮರಾಠಿ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ಪ್ರಸ್ತಾವ ಪರಿಗಣನೆಯಲ್ಲಿದೆ ಎಂದು ಸಂಸ್ಕೃತಿ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್‌ಮೇಘ್ವಾಲ್ ಲೋಕಸಭೆಗೆ ತಿಳಿಸಿದರು. ಲೋಕಸಭೆಯಲ್ಲಿ ಸೋಮವಾರ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿಯವರ ಪೂರಕ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮರಾಠಿ ಭಾಷೆಗೆ ಶಾಸ್ತ್ರೀಯ ಸ್ಥಾನ ನೀಡುವ ಕುರಿತು ಚರ್ಚಿಸಲು 8 ಸದಸ್ಯರ ಸಮಿತಿಯನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದರು. ‘ಇಲ್ಲಿಯವರೆಗೆ ತಮಿಳು, ತೆಲುಗು, ಸಂಸ್ಕೃತ, ಕನ್ನಡ, ಮಲಯಾಳ ಮತ್ತು ಒಡಿಯಾ ಭಾಷೆಗಳಿಗೆ …
Read More »ಕಾಂಗ್ರೆಸ್‌ನಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ
ಶಿವಮೊಗ್ಗ: ಟೋಕಿಯೋ ಒಲಿಂಪಿಕ್‌ನ ಜಾವಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಅವರು ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಭಾನುವಾರ ಶಿವಪ್ಪ ನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಶೂಟರ್ ಅಭಿನವ್ ಬಿಂದ್ರಾ ನಂತರ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಹಿರಿಮೆಗೆ ನೀರಜ್ ಚೋಪ್ರಾ ಭಾಜನರಾಗಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. 140 ಕೋಟಿ ಭಾರತೀಯರ ಹಿರಿಮೆ ಎತ್ತಿಹಿಡಿದ ಸಾಧನೆ ಮಾಡಿದ್ದಾರೆ ಎಂದು ಸಂತಸ …
Read More »ದೇವರ ದಯೆಯಿಂದ ಕೋವಿಡ್ ಮೂರನೇ ಅಲೆ ಬರಬಾರದು: ಸಿಎಂ ಬಸವರಾಜ ಬೊಮ್ಮಾಯಿ
ಮೈಸೂರು: ಕೋವಿಡ್ ಮೂರನೇ ಅಲೆ ದೇವರ ದಯೆಯಿಂದ ಬರಬಾರದು. ಬಂದರೆ ಏನೆಲ್ಲ ಕ್ರಮ ಕೈಗೊಳ್ಳಬೇಕು ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕೋವಿಡ್ ಕುರಿತ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ಸಚಿವರು, ಶಾಸಕರು, ಅಧಿಕಾರಿಗಳ ಸಭೆ ಮಾಡಿದ್ದೇನೆ. ಮೈಸೂರು ಜಿಲ್ಲೆ ಸ್ಥಿತಿಗತಿ, ಮೂರನೇ ಹಂತದ ಮುಂಜಾಗ್ರತೆ ಬಗ್ಗೆ ಪರಿಶೀಲನೆ ಮಾಡಿ ಸಭೆ ಮಾಡಿದ್ದೇನೆ. ಮೈಸೂರಿನ ಪಾಸಿಟಿವಿಟಿ ರೇಟ್ 1.19 ಇದೆ. ಕಳೆದ ಒಂದು ವಾರದಿಂದ …
Read More »ಎಸ್‌ಎಸ್‌ಎಲ್ ಸಿ ಫಲಿತಾಂಶ ಪ್ರಕಟ: ಶೇಕಡಾ 99.9 ವಿದ್ಯಾರ್ಥಿಗಳು ಪಾಸ್, ಓರ್ವ ಮಾತ್ರ ಫೇಲ್
ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ ಸಿ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದರು. ಜುಲೈ 19 ಮತ್ತು 22ರಂದು ನಡೆದಿದ್ದ ಎಸ್ ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದ 8,71,443 ವಿದ್ಯಾರ್ಥಿಗಳಲ್ಲಿ ಒಂದು ವಿದ್ಯಾರ್ಥಿ ಹೊರತುಪಡಿಸಿ ಉಳಿದೆಲ್ಲರೂ ತೇರ್ಗಡೆಯಾಗಿದ್ದಾರೆ. ಆತ ತನ್ನ ಬದಲು ಬೇರೆಯವರಿಂದ ಪರೀಕ್ಷೆ ಬರೆಸಿದ್ದ. ಹೀಗಾಗಿ ಆತನನ್ನು ಅನುತ್ತೀರ್ಣ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು. ಕೋವಿಡ್ ಕಾರಣದಿಂದ …
Read More »ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರೆ ತಪ್ಪೇನು? ಅವರನ್ನು ತಳ್ಳಲು ಆಗುತ್ತಾ? ಬಿ.ಸಿ.ಪಾಟೀಲ್
ಬೆಂಗಳೂರು: ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರೆ ತಪ್ಪೇನು? ಅವರು ಖುಷಿಯಿಂದ ಬಂದರೆ ನಾವೇನು ತಳ್ಳುವುದಕ್ಕೆ ಆಗುತ್ತಾ ಎಂದು ಸಚಿವ ಬಿ.ಸಿ ಪಾಟೀಲ್ ಸಂಭ್ರಮಾಚರಣೆಯನ್ನು ಸಮರ್ಥಿಸಿಕೊಂಡರು. ಸಚಿವರು ಸಂಭ್ರಮದಲ್ಲಿ ತೊಡಗಿದ್ದಾರೆಂಬ ಹೆಚ್‌ಡಿಕೆ ಆಕ್ರೋಶ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೋವಿಡ್ ಹೆಚ್ಚಳ ಆತಂಕದ ಕಾರಣ ಸರ್ಕಾರ ವೀಕೆಂಡ್, ನೈಟ್ ಕರ್ಪೂ ಮಾಡಿದೆ. ಗುಂಪು ಸೇರಬೇಡಿ, ಮಾಸ್ಕ್ ಧರಿಸಿ ಎಂದು ಹೇಳುತ್ತಿದ್ದೇವೆ. ಆದರೂ ಜನ ಗುಂಪು ಸೇರುತ್ತಾರೆ. ನಾವೇನು ಮಾಡಲು ಸಾಧ್ಯ ಎಂದರು. ಬಿಜೆಪಿಯಲ್ಲಿ …
Read More »ರೈಲ್ವೆ ಇಲಾಖೆ ಹೊಸ ನಿಯಮ: ಟಿಕೆಟ್ ಬುಕ್ ಮಾಡುವಾಗ ಈ ಕೋಡ್ ಬಗ್ಗೆ ಇರಲಿ ಗಮನ
ರೈಲು ಪ್ರಯಾಣಿಕರಿಗೆ ಮಹತ್ವದ ಸುದ್ದಿಯೊಂದಿದೆ. ರೈಲು ಟಿಕೆಟ್ ಕಾಯ್ದಿರಿಸುವಾಗ ಕೆಲವು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಾಗುತ್ತದೆ. ಭಾರತೀಯ ರೈಲ್ವೆ ಟಿಕೆಟ್ ಬುಕಿಂಗ್ ಕೋಡ್ ಮತ್ತು ಕೋಚ್ ಕೋಡ್ ನಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ರೈಲ್ವೆ ಇಲಾಖೆ, ರೈಲುಗಳಲ್ಲಿ ಹೊಸ ರೀತಿಯ ಕೋಚ್ ಪರಿಚಯಿಸಿದೆ. ಈ ಕೋಡ್ ಮೂಲಕ, ಪ್ರಯಾಣಿಕರು ಟಿಕೆಟ್ ಕಾಯ್ದಿರಿಸುವಾಗ, ಆದ್ಯತೆಯ ಆಸನವನ್ನು ಆಯ್ಕೆ ಮಾಡಬಹುದು. ದೇಶದ ಹಲವು ಮಾರ್ಗಗಳಲ್ಲಿ ರೈಲ್ವೆ ಇಲಾಖೆ ವಿಸ್ಟಾಡೋಮ್ ಕೋಚ್‌ಗಳನ್ನು ಆರಂಭಿಸಿದೆ. …
Read More »7.5 ಲಕ್ಷ ಮಂದಿಗೆ 2ನೇ ಡೋಸ್ ಬಾಕಿ
ಬೆಂಗಳೂರು: ರಾಜ್ಯದಲ್ಲಿ ಏಳೂವರೆ ಲಕ್ಷ ಜನರ ಕೊವ್ಯಾಕ್ಸಿನ್ ಲಸಿಕೆಯ ಎರಡನೇ ಡೋಸ್ ಬಾಕಿ ಉಳಿದಿದ್ದು, ಸಿಗದೆ ಪರದಾಡುತ್ತಿದ್ದಾರೆ. ಆಗಸ್ಟ್‌ನಲ್ಲಿಯೂ ಇದು ಎಲ್ಲರಿಗೆ ಸಿಗುವುದು ಕಷ್ಟ! ಮಾಸಾಂತ್ಯದೊಳಗೆ ಹೆಚ್ಚುಕಡಿಮೆ 15 ಲಕ್ಷ ಜನರಿಗೆ ಎರಡನೇ ಡೋಸ್ ನೀಡಬೇಕಿದೆ. ಆದರೆ 6.5 ಲಕ್ಷ ಡೋಸ್ ಮಾತ್ರ ಲಭ್ಯವಾಗಲಿದೆ. ಕೊವ್ಯಾಕ್ಸಿನ್‌ನ ಮೊದಲ ಡೋಸ್ ಪಡೆದು 4ರಿಂದ 6 ವಾರಗಳೊಳಗೆ 2ನೇ ಡೋಸ್ ಪಡೆಯಬೇಕು. ಸದ್ಯ ಮೊದಲ ಡೋಸ್ ಪಡೆದು 5 ವಾರ ಆದವರು 7.52 …
Read More »ಅಂಚೆ ಅಣ್ಣನ ಆನ್ ಲೈನ್‌ನಲ್ಲಿ ಬಣ್ಣ ಬಣ್ಣದ ರಾಖೀಗಳು: ರಾಖೀಪೋಸ್ಟ್ ಆನ್‌ಲೈನ್ ಸೇವೆ ಆರಂಭ
ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ರಾಖೀ ಪ್ರಿಯರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದಾಗಿ ಭಾರತೀಯ ಅಂಚೆ ಇಲಾಖೆ ರಾಖೀ ಪೋಸ್ಟ್ ಆನ್‌ಲೈನ್ ಸೇವೆ ಆರಂಭಿಸಿದ್ದು ಜನರಿಂದ ಮೆಚ್ಚುಗೆ ಪಾತ್ರವಾಗಿದೆ. ಕಳೆದ ವರ್ಷ ಆರಂಭಿಸಲಾಗಿರುವ ಈ ಸೇವೆಗೆ ಈ ವರ್ಷ ಮತ್ತಷ್ಟು ಬಣ್ಣ ಬಣ್ಣದ ಆಕರ್ಷಕ ವಿನ್ಯಾಸದ ರಾಖೀ ಸೇರ್ಪಡೆಗೊಂಡಿವೆ. ಜತೆಗೆ ಭಿನ್ನ ಭಿನ್ನ ವಾಕ್ಯಗಳ ಸಂದೇಶಗಳು ಕೂಡ ಸಹೋದರ-ಸಹೋದರಿಯರಿಗೆ ಶುಭ ಹಾರೈಸಲಿವೆ. ಈ ಮೂಲಕ ಸಹೋದರತ್ವ ಸಂಬಂಧವನ್ನು ಮತ್ತಷ್ಟು ಹಸಿರಾಗಿಡಲಿವೆ. ಆ.22 ರಂದು …
Read More »ಎಟಿಎಂ ನಲ್ಲಿ ಹಣ ಕದಿಯಲು ಹೋಗಿ ಯಂತ್ರ ಮತ್ತು ಗೋಡೆಯ ನಡುವೆ ಲಾಕ್ ಆದ ಕಳ್ಳ
ಚೆನೈ:ಎಟಿಎಂನಿಂದ ಹಣ ಕದಿಯಲು ಮಾಡಿದ ಯತ್ನ ವಿಫಲವಾಗಿದ್ದರಿಂದ ಯಂತ್ರ ಮತ್ತು ಗೋಡೆಯ ನಡುವೆ ಸಿಲುಕಿಕೊಂಡಿದ್ದ ಚೆನ್ನೈನ ವ್ಯಕ್ತಿಯನ್ನು ಇತ್ತೀಚೆಗೆ ಬಂಧಿಸಲಾಯಿತು. ಎಮ್ ಉಪೇಂದ್ರ ರಾಯ್ ಎಂದು ಗುರುತಿಸಲಾದ 28 ವರ್ಷದ ವ್ಯಕ್ತಿ ಎಟಿಎಂ ಯಂತ್ರವನ್ನು ಮುರಿದು ಹಣವನ್ನು ಕದಿಯಲು ಪ್ರಯತ್ನಿಸಿದನು . ಆದರೆ ಯಂತ್ರದ ಹಿಂದೆ ಸಿಲುಕಿಕೊಂಡನು. ಅವನು ಪರಿಸ್ಥಿತಿಯಿಂದ ಹೊರಬರಲು ಪ್ರಯತ್ನಿಸುತ್ತಿರುವ ಫೋಟೋಗಳು ಮತ್ತು ವಿಡಿಯೋಗಳು ಈಗ ಅಂತರ್ಜಾಲದಲ್ಲಿ ಹರಿದಾಡುತ್ತಿವೆ. ರಾಯ್ ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ನಿವಾಸಿಯಾಗಿದ್ದು, …
Read More »ಎಟಿಎಂ ಒಡೆದು ಹಣ ಕದ್ದ ಕಳ್ಳರು
ಬೀದರ್: ನಗರದ ಗುಂಪಾದಲ್ಲಿ ಭಾನುವಾರ ಬೆಳಗಿನ ಜಾವ ಕಳ್ಳರು ಎಕ್ಸಿಸ್ ಬ್ಯಾಂಕ್ ಎಟಿಎಂ ಒಡೆದು ಅಂದಾಜು ಮೂರೂವರೆ ಲಕ್ಷ ರೂಪಾಯಿ ಕದ್ದೊಯ್ದಿದ್ದಾರೆ. ಎಟಿಎಂ ಒಳಗಡೆ ಸಿಸಿಟಿವಿ ಕ್ಯಾಮೆರಾ ಇಲ್ಲ. ಹೀಗಾಗಿ ಪಕ್ಕದ ಕಟ್ಟಡದಲ್ಲಿರುವ ಸಿಸಿಕ್ಯಾಮೆರಾಗಳ ಮೂಲಕ ಪೊಲೀಸರು ತಪಾಸಣೆ ನಡೆಸಿದ್ದಾರೆ. ಸಾಮಾನ್ಯವಾಗಿ ಶನಿವಾರ ಎಟಿಎಂಗಳಲ್ಲಿ ಹಣ ತುಂಬಲಾಗುತ್ತದೆ. ಆದರೆ, ಈ ವಾರ ಹಣ ಹಾಕಿರಲಿಲ್ಲ ಎನ್ನಲಾಗಿದೆ. ಬ್ಯಾಂಕಿನ ಅಧಿಕಾರಿ ಗಾಂಧಿ ಗಂಜ್ ಪೊಲೀಸರಿಗೆ ದೂರು ನೀಡಿದ್ದಾರೆ.
Read More »