ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಕೊರೊನಾ ಭೀತಿಯಿಂದಾಗಿ ಕಂಗೆಟ್ಟಿರುವ ಜನರನ್ನು ಡೆಂಗಿ, ಚಿಕೂನ್ಗುನ್ಯಾ, ಮಲೇರಿಯಾ ಮೊದಲಾದ ಕಾಯಿಲೆಗಳು ಬಾಧಿಸುತ್ತಿವೆ. ಒಬ್ಬರು ಶಂಕಿತ ಡೆಂಗಿಯಿಂದ ಸಾವಿಗೀಡಾದುದು ವರದಿಯಾಗಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇರುವುದರಿಂದಾಗಿ, ಇತರ ಕಾಯಿಲೆಗಳಿಗೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯವಾಗುತ್ತಿದೆ. ಈ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿದೆ. ಸ್ಥಳೀಯ ಸಂಸ್ಥೆಗಳು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ಕೊಡಬೇಕಾಗಿದೆ ಮತ್ತು ಸೊಳ್ಳೆಗಳ ಉತ್ಪಾದನೆಗೆ ಕಡಿವಾಣ …
Read More »ಕೇಂದ್ರ ಸರ್ಕಾರಕ್ಕೆ ಬಿಗ್ ಶಾಕ್: ರೈತ ಹೋರಾಟಕ್ಕೆ ಬಿಜೆಪಿ ಸಂಸದ ಬೆಂಬಲ
ದೆಹಲಿ: ʼಅವರು ನಮ್ಮದೇ ಮಾಂಸ ಮತ್ತು ರಕ್ತ’ ಎಂದು ರೈತರ ಪ್ರತಿಭಟನೆಗೆ ಪಿಲಿಭಿತ್ ನ ಬಿಜೆಪಿ ಸಂಸದ ವರುಣ್ ಗಾಂಧಿ ಬೆಂಬಲ ನೀಡಿದ್ದಾರೆ. ಬಿಜೆಪಿ ಸಂಸದರಾಗಿದ್ದರೂ ಕೇಂದ್ರ ಸರಕಾರವನ್ನು ಗುರಿಯಾಗಿಸಿಕೊಂಡು ವರುಣ್ ಗಾಂಧಿ ಕಿಸಾನ್ ಮಹಾ ಪಂಚಾಯತ್ ಅನ್ನು ಸಮರ್ಥಿಸಿಕೊಂಡಿದ್ದಾರೆ ಮತ್ತು ರೈತರೊಂದಿಗೆ ಮಾತುಕತೆಗೆ ಮರುಪ್ರವೇಶಿಸಲು ಕೇಂದ್ರಕ್ಕೆ ಮನವಿ ಮಾಡಿದ್ದಾರೆ. “ಮುಜಾಫರ್ ನಗರದಲ್ಲಿ ಇಂದು ಲಕ್ಷಾಂತರ ರೈತರು ಪ್ರತಿಭಟನೆಯಲ್ಲಿ ಜಮಾಯಿಸಿದ್ದಾರೆ. ಅವರು ನಮ್ಮದೇ ಮಾಂಸ ಮತ್ತು ರಕ್ತ. ನಾವು ಅವರೊಂದಿಗೆ …
Read More »ಸಾಲದಿಂದ ಸಂಕಷ್ಟದಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಸಾಲದ ಹೊರೆ ಇಳಿಸಲಿದೆ ಸರ್ಕಾರ -ಹೊಲದಲ್ಲೇ ಸಾಲ ವಿತರಣೆ
ಬೆಂಗಳೂರು: ರೈತರ ಸಾಲದ ಹೊರೆ ಇಳಿಸಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮದುವೆ, ಕಾಯಿಲೆ ಮೊದಲಾದ ಕಾರಣಗಳಿಂದ ರೈತರಲ್ಲಿ ಸಾಲದ ಹೊರೆ ಹೆಚ್ಚಾಗುತ್ತಿದ್ದು, ಇದನ್ನು ಇಳಿಸಲು ಗಂಭೀರ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ವಿದ್ಯಾನಿಧಿ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಹೇಳಿದ್ದಾರೆ. ದೇಶದಲ್ಲಿಯೇ ಮೊದಲ ಬಾರಿಗೆ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯನ್ನು ಲೋಕಾರ್ಪಣೆ ಮಾಡಲಾಗಿದೆ. ರೈತರ ಮಕ್ಕಳ ಶಿಕ್ಷಣ, ಮದುವೆ, ಕುಟುಂಬದ ಆರೋಗ್ಯ ಮೊದಲಾದವುಗಳಿಗೆ ಹೆಚ್ಚಿನ ಖರ್ಚು …
Read More »ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡ ಕಳ್ಳ
ಹುಬ್ಬಳ್ಳಿ: ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ವ್ಯಕ್ತಿ ತನ್ನ ಮನೆತನದ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಘಟಗಿ ಪಟ್ಟಣದ ಮಂಗೇಶ ಕೆರೆ ದಂಡೆಯ ಬಳಿ ನಡೆದಿದೆ. ಹನುಮಂತ ಈಶ್ವರಪ್ಪ ಧಾರವಾಡ ಮೃತನಾಗಿದ್ದಾನೆ. ಈತ ಕಲಘಟಗಿ ಪಟ್ಟಣದ ನಿವಾಸಿಯಾಗಿದ್ದಾನೆ. ಹನುಮಂತ ಹಾಗೂ ಆತನ ಗೆಳೆಯ ಮಲ್ಲಯ್ಯ ಹೆಬ್ಬಳ್ಳಿಮಠ ಜೊತೆಗೆ ಸೇರಿ ಅಂದಾಜು 2500 ಖಾಲಿ ಗೋಣಿ ಚೀಲಗಳನ್ನು ಆಗಸ್ಟ್ 28 ರಂದು ಕಳ್ಳತನ ಮಾಡಿ ಹುಬ್ಬಳ್ಳಿ ಎಪಿಎಂಸಿಯಲ್ಲಿ ಮಾರಿದ್ದರು. ಈ ಕುರಿತು …
Read More »ಈ ರಾಷ್ಟ್ರದ ಶಿಲ್ಪಿಗಳು ಶಿಕ್ಷಕರು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ
ಮೂಡಲಗಿ : ಶಿಕ್ಷಕರು ಈ ರಾಷ್ಟ್ರದ ಶಿಲ್ಪಿಗಳು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ನಿಮಿತ್ಯ ಇಲ್ಲಿಯ ಈರಣ್ಣ ದೇವಸ್ಥಾನದ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪದಲ್ಲಿ ರವಿವಾರದಂದು ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಂದೇಶ ನೀಡಿರುವ ಅವರು, ಶಿಕ್ಷಕರಿಂದ ಮಾತ್ರ ಈ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವೆಂದು ಹೇಳಿದರು. ಕಳೆದ ಒಂದೂವರೆ ದಶಕದಿಂದ ಅರಭಾವಿ ಮತಕ್ಷೇತ್ರದಲ್ಲಿ ಶಿಕ್ಷಣದ …
Read More »5 ದಿನಗಳ ಕಾಲ ಸರಳವಾಗಿ ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ
ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಿರುವ ರಾಜ್ಯ ಸರ್ಕಾರ ಸರಳವಾಗಿ ಗಣೇಶ ಹಬ್ಬ ಆಚರಿಸುವಂತೆ ಸೂಚನೆ ನೀಡಿದೆ. ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಸಚಿವ ಆರ್.ಅಶೋಕ್, ಈಬಾರಿ 5 ದಿನಗಳ ಕಾಲ ಸರಳವಾಗಿ ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ ನೀಡಿದೆ. ಆದರೆ ಕೆಲ ಷತ್ತುಗಳನ್ನು ವಿಧಿಸಲಾಗಿದೆ ಎಂದರು. ಹೊಸ ಗೈಡ್ ಲೈನ್: * ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಜಿಲ್ಲಾಡಳಿತದ ಅನುಮತಿ ಕಡ್ಡಾಯ …
Read More »ಶಾಸಕ ಮಹಾಂತೇಶ ದೊಡ್ದಗೌಡರ ದಂಪತಿಗೆ ಹೂ ಮಳೆ: ಪೊಲೀಸರಿಗೆ ಶೋಕಾಸ್ ನೋಟಿಸ್ ಜಾರಿ
ಬೆಳಗಾವಿ: ಜಿಲ್ಲೆಯ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಹಾಗೂ ಪತ್ನಿಗೆ ಹೂಮಳೆಗೈದ ಪೋಲಿಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ನಿನ್ನೆ ಶಾಸಕ ಮಹಾಂತೇಶ ದೊಡ್ಡಗೌಡರ ಅವರ ಹುಟ್ಟುಹಬ್ಬದ ಹಿನ್ನೆಲೆ ಪೊಲೀಸರು ದಂಪತಿಗೆ ಹೂಮಳೆ ಸುರಿಸಿ ಮಹಾರಾಜನಂತೆ ಮೆರೆಸಿದ್ದರು. ಈ ಕುರಿತು ನ್ಯೂಸ್ಫಸ್ಟ್ ವರದಿ ಬಿತ್ತರಿಸಿತ್ತು. ಘಟನೆ ಕುರಿತು ಶಾಸಕ ಮಹಾಂತೇಶ ದೊಡ್ಡಗೌಡರ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗುವದರ ಜೊತೆಗೆ ಪೋಲಿಸ್ ಅಧಿಕಾರಿಗಳ ವಿರುದ್ಧ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ …
Read More »ಅಂಗನವಾಡಿ ಸಹಾಯಕಿ ಪತಿಯಿಂದ ಆಹಾರ ಧಾನ್ಯ ಕಳ್ಳಸಾಗಾಟ
ತುಮಕೂರು: ಅಂಗನವಾಡಿ ಆಹಾರ ಸಾಮಾಗ್ರಿಗಳ ಕಳ್ಳಸಾಗಾಟ ಮಾಡುತ್ತಿದ್ದ ಅಂಗನವಾಡಿ ಸಹಾಯಕಿ ಪತಿ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ. ತಿಪಟೂರು ತಾಲ್ಲೂಕಿನ ಹುಚ್ಚನಹಳ್ಳಿ ಗ್ರಾಮ ಅಂಗನವಾಡಿ ಸಹಾಯಕಿ ಚೈತ್ರಾ ಪತಿ ಅಶೋಕ್ ಆಹಾರ ಧಾನ್ಯಗಳ ಕಳವು ಮಾಡುತ್ತಿದ್ದ. ಇಂದು ಆಹಾರ ಧಾನ್ಯಗಳನ್ನು ಕಳವು ಮಾಡುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಮಕ್ಕಳಿಗಾಗಿ ನೀಡಿದ್ದ ತೊಗರಿಬೇಳೆ, ಕಡ್ಲೆಬೀಜ, ಕಡ್ಲೆಬೇಳೆ, ಹಾಲಿನ ಪಾಕೇಟ್, ಸಕ್ಕರೆಯನ್ನು ಬೈಕ್ ನಲ್ಲಿ ಸಾಗಿಸುವಾಗ ಗ್ರಾಮಸ್ಥರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ.
Read More »ಮೈಸೂರು ಆಯ್ತು, ಇದೀಗ ಕಲಬುರಗಿಯಲ್ಲಿ ಪೈಶಾಚಿಕ ಕೃತ್ಯ -ಡ್ರಾಪ್ ಕೊಡೋ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ
ಮೊನ್ನೆ ಮೊನ್ನೆಯಷ್ಟೇ ಮೈಸೂರು ಆಯ್ತು. ಇದೀಗ ಕಲಬುರಗಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಒಂಟಿ ಮಹಿಳೆಯ ಮೇಲೆ ಕಾಮ ಪಿಶಾಚಿ ಒಬ್ಬ ಅತ್ಯಾಚಾರವೆಸಗಿರೋ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಡ್ರಾಪ್ ಕೊಡೋ ನೆಪದಲ್ಲಿ ಒಂಟಿ ಮಹಿಳೆ ಮೇಲೆ ಪೈಶಾಚಿಕ ಕೃತ್ಯ ಎಸಗಿದ ಆರೋಪಿ ನಾಗರಾಜ್ನನ್ನು ಪೊಲೀಸರು ಬಂಧಿಸಿದ್ದಾರೆ. ಏನಿದು ಪ್ರಕರಣ..? ಕಳೆದ ಮೇ 24ರಂದು ಸರ್ಕಾರ ಲಾಕ್ಡೌನ್ ಘೋಷಿಸಿತ್ತು. ಈ ಹಿನ್ನೆಲೆ ಸಾರಿಗೆ ಸಂಚಾರ ಸ್ಥಗಿತಗೊಂಡಿತ್ತು. ಸರ್ಕಾರಿ ಕಚೇರಿಯಲ್ಲಿ ಕಂಪ್ಯೂಟರ್ …
Read More »ಸ್ಯಾಂಡಲ್ವುಡ್ಗೆ ಬಿಗ್ ಶಾಕ್: ರೌಡಿಸಂ ಪ್ರೇರಕ ದೃಶ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಚಿಂತನೆ
ಬೆಂಗಳೂರು : ಇನ್ಮುಂದೆ ‘ಮಚ್ಚು ಹಿಡಿದೊವ್ನು ನಾನು,ಲಾಂಗ್ ಕೊಟ್ಟವ್ನು ನಾನು, ಮಚ್ಚು ಹಿಡಿಯೊಕೆ ಹೇಳ್ಕೊಟ್ಟಿದ್ದೇ ನಾನು’ ಅಂತ ಖಡಕ್ ಡೈಲಾಗ್ ಹೊಡ್ದು, ಸಿನಿ ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಿಕೊಳ್ಳೊ ರೌಡಿಸಂ ಪ್ರೇರಕ ದೃಶ್ಯಾವಳಿಗಳಿರುವ ಸಿನಿಮಾಗಳಿಗೆ ಪೊಲೀಸ್ ಇಲಾಖೆ ಶಾಕ್ ನೀಡಲು ಸಜ್ಜಾಗಿದೆ. ಹೌದು, ಇತ್ತೀಚಿಗೆ ರೌಡಿಸಂ ಆಧಾರಿತ ಸಿನಿಮಾಗಳು, ಆರೋಪಿಗಳಿಗೆ ಪ್ರೇರಣೆಯಾಗುತ್ತಿವೆ ಎಂಬ ಹಿನ್ನೆಲೆಯಲ್ಲಿ ಕೆಲ ರೌಡಿಸಂ ಎಳೆ ಹೊಂದಿರುವ, ಮತ್ತು ರೌಡಿಸಂ ಪ್ರೇರೆಪಿಸುವ ಸಿನಿಮಾಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ …
Read More »
Laxmi News 24×7